Connect with us

Mangaluru

ಮಂಗಳೂರು: ಸುಗಮ ಸಂಚಾರಕ್ಕೆ ಕಮಿಷನರೇಟ್‌ನಿಂದ ಚಾಟಿ; ಸಂಚಾರ ನಿಯಮ ಉಲ್ಲಂಘಕರ ವಿರುದ್ಧ ಬೃಹತ್ ಕಾರ್ಯಾಚರಣೆ!

Published

on

ಮಂಗಳೂರು: ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು, ಪಾದಚಾರಿಗಳ ಸುರಕ್ಷತೆ ಕಾಯ್ದುಕೊಳ್ಳಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿದ ಸಾವಿರಾರು ವಾಹನ ಸವಾರರಿಗೆ ಬಿಸಿ ಮುಟ್ಟಿಸಲಾಗಿದ್ದು, ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಅನಧಿಕೃತ ಪಾರ್ಕಿಂಗ್ ವಿರುದ್ಧ ಸಮರ: 7,490 ಪ್ರಕರಣ ದಾಖಲು

ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವಂತೆ ವಾಹನ ನಿಲ್ಲಿಸುವವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಜೂನ್ 2026 ರಿಂದ ಇದುವರೆಗೆ ನಡೆಸಲಾದ ಕಾರ್ಯಾಚರಣೆಯಲ್ಲಿ:

  • ನೋ ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್, ರಾಂಗ್ ಪಾರ್ಕಿಂಗ್ ಹಾಗೂ ಡಬಲ್ ಪಾರ್ಕಿಂಗ್ ಸೇರಿದಂತೆ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಲಾಗಿದೆ.
  • ನಿಯಮ ಉಲ್ಲಂಘಟಿಸಿದವರಿಂದ ಒಟ್ಟು ರೂ. 3,07,600/- ದಂಡ ವಸೂಲಿ ಮಾಡಲಾಗಿದೆ.
  • ಇದರಲ್ಲಿ ಪಾದಚಾರಿಗಳ ಹಕ್ಕನ್ನು ಕಸಿದು ಫುಟ್‌ಪಾತ್‌ನಲ್ಲಿ ವಾಹನ ನಿಲ್ಲಿಸಿದ್ದ 1,080 ಪ್ರಕರಣಗಳು ಸೇರಿವೆ.

ದೋಷಪೂರಿತ ನಂಬರ್ ಪ್ಲೇಟ್: 8 ದಿನಗಳಲ್ಲಿ 332 ಕೇಸ್!

ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟ್‌ಗಳನ್ನು ಬಳಸಿಕೊಂಡು ನಗರದಲ್ಲಿ ಸಂಚರಿಸುವುದು ಮತ್ತು ಅವುಗಳ ಮೂಲಕ ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಲು ಆಗಸ್ಟ್ 4 ರಿಂದ ಆಗಸ್ಟ್ 12 ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.

  • ದೋಷಪೂರಿತ ನಂಬರ್ ಪ್ಲೇಟ್: 258 ವಾಹನಗಳ ವಿರುದ್ಧ ಪ್ರಕರಣ.
  • ನಂಬರ್ ಪ್ಲೇಟ್ ಇಲ್ಲದೆ ಸಂಚಾರ: 74 ವಾಹನಗಳ ವಿರುದ್ಧ ಪ್ರಕರಣ.
  • ಒಟ್ಟು ದಂಡ: 332 ಪ್ರಕರಣಗಳಿಂದ ಒಟ್ಟು ರೂ. 3,01,000/- ದಂಡ ವಿಧಿಸಲಾಗಿದೆ.

HSRP ನಂಬರ್ ಪ್ಲೇಟ್ ಕಡ್ಡಾಯ – ಪೊಲೀಸರ ಎಚ್ಚರಿಕೆ”ನಂಬರ್ ಪ್ಲೇಟ್‌ಗಳನ್ನು ಸ್ಪಷ್ಟವಾಗಿ, ಕಾನೂನು ನಿಯಮಾನುಸಾರ ಹಾಗೂ ವಾಹನಕ್ಕೆ ನಿಗದಿಪಡಿಸಿದ ರೀತಿಯಲ್ಲಿಯೇ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ವಾಹನ ಮಾಲೀಕರ ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್‌ಗಳನ್ನೇ ಅಳವಡಿಸಿಕೊಳ್ಳಬೇಕು.”– ಪೊಲೀಸ್ ಆಯುಕ್ತರು, ಮಂಗಳೂರು ನಗರ

ವಿಶೇಷ ಕಾರ್ಯಾಚರಣೆ ಮುಂದುವರಿಕೆ

ಮಂಗಳೂರು ನಗರದಲ್ಲಿ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಬಿಗಿಗೊಳಿಸಲು ಹಾಗೂ ಸುರಕ್ಷಿತ ವಾತಾವರಣ ನಿರ್ಮಿಸಲು ಈ ವಿಶೇಷ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿವೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತ ಸಂಚಾರಕ್ಕೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ನಗರ ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

award

ತುಳು ಭಾಷೆಗೆ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ: ಸಮಸ್ತ ತುಳುವರಿಂದ ಹರ್ಷ; ನುಡಿದಂತೆ ನಡೆದ ಸರಕಾರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹರ್ಷ

Published

on

ಮಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸರ್ಕಾರವು ನುಡಿದಂತೆ ನಡೆದುಕೊಂಡಿದ್ದು, ಜಗತ್ತಿನಾದ್ಯಂತ ನೆಲೆಸಿರುವ ತುಳು ಭಾಷಿಗರಲ್ಲಿ ಇದು ಹೊಸ ಆತ್ಮವಿಶ್ವಾಸವನ್ನು ಮೂಡಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸುಮಾರು 3 ಸಾವಿರ ವರ್ಷಗಳ ಇತಿಹಾಸವಿರುವ ತುಳು ಭಾಷೆಗೆ ಸಿಕ್ಕಿರುವ ಈ ಮಾನ್ಯತೆ ಭಾಷೆಯ ಸಮಗ್ರ ಬೆಳವಣಿಗೆಗೆ ಮೈಲಿಗಲ್ಲಾಗಿದೆ ಎಂದಿದ್ದಾರೆ.

ಪ್ರಮುಖ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳಿಗೆ ಅಭಿನಂದನೆ

  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು: ಶಿವರಾಜ್ ಎಸ್. ತಂಗಡಗಿ
  • ಜಿಲ್ಲಾ ಉಸ್ತುವಾರಿ ಸಚಿವರು: ಯು.ಟಿ. ಖಾದರ್
  • ಶಾಸಕರು: ಅಶೋಕ್ ರೈ ಹಾಗೂ ಕರಾವಳಿಯ ಎಲ್ಲಾ ಜನಪ್ರತಿನಿಧಿಗಳು
  • ಇತರರು: ಸರ್ಕಾರಕ್ಕೆ ನಿರಂತರ ಒತ್ತಡ ತಂದ ದೇಶ-ವಿದೇಶದ ಎಲ್ಲಾ ತುಳು ಸಂಘ-ಸಂಸ್ಥೆಗಳು

ಐತಿಹಾಸಿಕ ನಿರ್ಧಾರದ ಹಿನ್ನೆಲೆ

ಈ ಹಿಂದೆ ಡಾ. ಎಂ. ಮೋಹನ್ ಆಳ್ವ ಅವರು ಸಲ್ಲಿಸಿದ ವರದಿ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ್ದ ‘ಆಂಧ್ರಪ್ರದೇಶ ಅಧ್ಯಯನ ವರದಿ’ಯ ಆಧಾರದ ಮೇಲೆ ಈ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಗೆ ಅಧಿಕೃತ ಮಾನ್ಯತೆ ನೀಡಿದ ಕಾನೂನು ಪ್ರಕ್ರಿಯೆಗಳ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ತಮಗೆ ಅವಕಾಶ ಸಿಕ್ಕಿFತು ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ನೆನಪಿಸಿಕೊಂಡಿದ್ದಾರೆ. ಈ ವರದಿಯು ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸಿಕೊಡುವಲ್ಲಿ ಪ್ರಮುಖ ದಾಖಲೆಯಾಗಿ ಸಹಕಾರಿಯಾಗಿದೆ ಎಂದರು.

ಮುಂದಿನ ಗುರಿ: ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ

ಕರ್ನಾಟಕ ಸರ್ಕಾರದ ಈ ಚಾರಿತ್ರಿಕ ನಿರ್ಧಾರವು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ತುಳುವರ ದೀರ್ಘಕಾಲದ ಮಹತ್ವದ ಬೇಡಿಕೆ ಈಡೇರುವ ನಿಟ್ಟಿನಲ್ಲಿ ದೊಡ್ಡ ಶಕ್ತಿಯಾಗಲಿದೆ ಎಂದು ಅಕಾಡೆಮಿ ಅಧ್ಯಕ್ಷರು ಆಶಾವಾಹಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Continue Reading

accident

ಸುರತ್ಕಲ್ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಎಕ್ಸ್‌ಪ್ರೆಸ್ ಬಸ್ – ಓರ್ವನಿಗೆ ಗಾಯ

Published

on

ಪಣಂಬೂರು: ಕಾರ್ಕಳದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ (ಸೆ.04) ಬೆಳಿಗ್ಗೆ ಪಣಂಬೂರು ಬಳಿ ಸಂಭವಿಸಿದೆ.

ಇಂದು ಬೆಳಿಗ್ಗೆ ಸುಮಾರು 6:30ಕ್ಕೆ ಕಾರ್ಕಳದಿಂದ ಮಂಗಳೂರಿಗೆ ಹೊರಟಿದ್ದ ‘ವಿಶಾಲ್ ಮೋಟಾರ್ಸ್ ಎಕ್ಸ್‌ಪ್ರೆಸ್’ ಬಸ್, ಬೆಳಿಗ್ಗೆ ಸುಮಾರು 8:10ಕ್ಕೆ ಪಣಂಬೂರಿನ ಎಂ.ಸಿ.ಎಫ್ (MCF) ಸಂಸ್ಥೆಯ ಸಮೀಪದ ರೈಲ್ವೆ ಗೇಟ್ ಬಳಿ ತಲುಪುತ್ತಿದ್ದಂತೆ ಈ ಅವಘಡ ಸಂಭವಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್ಸಿನ ಚಕ್ರ ರಸ್ತೆ ಬದಿಯ ಚರಂಡಿಗೆ ಇಳಿದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಸರ್ವಿಸ್ ಭಾಗಕ್ಕೆ ಮಗುಚಿ ಬಿದ್ದಿದೆ.

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಆದಿತ್ಯ ಎಂಬ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಉಳಿದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು.

Continue Reading

Trending

Copyright © 2025 Deevatige