arrest
ಪುತ್ತೂರು ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಷನ್ ರಾದ್ಧಾಂತ: ಮೂರು ಎಫ್ಐಆರ್, ಲಾಠಿ ಚಾರ್ಜ್, ಬಂಧಿತ ಸುದರ್ಶನ್ ಪೈ ಕ್ರಿಮಿನಲ್ ಹಿಸ್ಟರಿ ಬಯಲು!
ಜನಸೇವಾ ಕೇಂದ್ರದ ಸುದರ್ಶನ್ ಪೈ ಬಂಧನ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್
ಪುತ್ತೂರು: ನಗರದ ದರ್ಬೆಯಲ್ಲಿರುವ “ಡ್ರೀಮ್ ಡೆಸ್ಟಿನೇಷನ್” ಜನಸೇವಾ ಕೇಂದ್ರದಲ್ಲಿ ದಾಖಲೆ ಲ್ಯಾಮಿನೇಷನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಅಂಗಡಿಯ ಸುದರ್ಶನ್ ಪೈ ಎಂಬುವವರನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಘಟನೆಯ ವಿವರ: ಸುಳ್ಯ ತಾಲೂಕಿನ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಎಂಬುವವರು ದಿನಾಂಕ 21.08.2026ರಂದು ತಮ್ಮ ಸಹೋದರ ಮತ್ತು ತಂಗಿಯೊಂದಿಗೆ ಪುತ್ತೂರಿಗೆ ಆಗಮಿಸಿದ್ದರು. ಮಧ್ಯಾಹ್ನದ ವೇಳೆ ಕೆಲವು ದಾಖಲೆಗಳ ಪ್ರಿಂಟ್ ಹಾಗೂ ಲ್ಯಾಮಿನೇಷನ್ ಮಾಡಿಸಲು ದರ್ಬೆಯಲ್ಲಿರುವ ಡ್ರೀಮ್ ಡೆಸ್ಟಿನೇಷನ್ ಜನಸೇವಾ ಕೇಂದ್ರಕ್ಕೆ ನೀಡಿದ್ದರು. ಕೆಲ ಸಮಯದ ಬಳಿಕ ದಾಖಲೆಗಳನ್ನು ವಾಪಸ್ ಪಡೆಯುವಾಗ ಅವುಗಳಲ್ಲಿ ಒಂದು ದಾಖಲೆ ಪತ್ರ ಹುಡಿಯಾಗಿತ್ತು (ಹಾನಿಗೊಳಗಾಗಿತ್ತು).
ಈ ಬಗ್ಗೆ ಆಕ್ಷೇಪಿಸಿದ ಫಾತಿಮತ್ ಮಿಸ್ವಾನ ಅವರು, ಹಾನಿಯಾದ ದಾಖಲೆಯನ್ನು ಸರಿಪಡಿಸಿಕೊಡುವಂತೆ ಅಥವಾ ಹೊಸ ದಾಖಲೆ ಪಡೆಯಲು ಬೇಕಾಗುವ ₹300 ನೀಡುವಂತೆ ಕೇಳಿದ್ದಾರೆ. ಇದರಿಂದ ಕೆರಳಿದ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ ಪೈ ಎಂಬುವವರು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಅಲ್ಲದೆ, ಸುದರ್ಶನ ಪೈ ಅವರು ಫಾತಿಮತ್ ಮಿಸ್ವಾನ, ಅವರ ತಂಗಿ ಹಾಗೂ ತಮ್ಮನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ದಾಖಲು – ಆರೋಪಿ ಬಂಧನ: ಘಟನೆ ನಡೆದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಿ, ಗಾಯಗೊಂಡ ಫಾತಿಮತ್ ಮಿಸ್ವಾನ ಹಾಗೂ ಅವರ ಸಹೋದರ, ಸಹೋದರಿಯನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನನ್ವಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 97/2026, ಕಲಂ: 352, 115(2), 109 ಹಾಗೂ 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಸುದರ್ಶನ ಪೈ ಅವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ದಿನಾಂಕ 02.09.2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆರೋಪಿ ಸುದರ್ಶನ್ ಪೈ ಹಳೆಯ ಅಪರಾಧ ಹಿನ್ನೆಲೆ: ಈ ಪ್ರಕರಣದಲ್ಲಿ ಈಗಾಗಲೇ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ, ಪಿ (29) ಹಳೇ ಅಪರಾಧ ಹಿನ್ನೆಲೆ ಹೊಂದಿರುವುದು ಕಂಡುಬಂದಿದೆ. ಈತನ ವಿರುದ್ಧ ಈ ಹಿಂದೆ:
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್ ಪ್ರಕರಣ (ಅ.ಕ್ರ: 182/2025, ಕಲಂ: 8(C) NDPS ಕಾಯ್ದೆ).
ರಾಮನಗರ ಜಿಲ್ಲೆಯ ಕುದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ (ಅ.ಕ್ರ: 87/2021, ಕಲಂ: 307, 504, 34 ಐಪಿಸಿ) ದಾಖಲಾಗಿವೆ.
ಪುತ್ತೂರು: ಜನಸೇವಾ ಕೇಂದ್ರದಲ್ಲಿ ಗಲಾಟೆ – ನಾಲ್ವರ ವಿರುದ್ಧ ಕೌಂಟರ್ ದೂರು ದಾಖಲು
ನಗರದ ದರ್ಬೆಯಲ್ಲಿರುವ “ಡ್ರೀಮ್ ಡೆಸ್ಟಿನೇಷನ್” ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ನಡೆಸಿ, ಅಂಗಡಿ ಮಾಲೀಕರ ಮೇಲೆ ಹಲ್ಲೆ ಹಾಗೂ ಜೀವಬೆದರಿಕೆ ಒಡ್ಡಿದ ಆರೋಪದ ಮೇಲೆ ನಾಲ್ವರು ವ್ಯಕ್ತಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಜನಸೇವಾ ಕೇಂದ್ರದ ಮಾಲೀಕಿ, ಪುತ್ತೂರು ಕಸಬಾ ನಿವಾಸಿ ಅಂಜನಾ ಎಸ್. ಪೈ (50) ನೀಡಿದ ದೂರಿನ ಪ್ರಕಾರ, ದಿನಾಂಕ 21-08-2026ರಂದು ಮಧ್ಯಾಹ್ನ ಮಹಿಳೆಯೊಬ್ಬರು ಲ್ಯಾಮಿನೇಷನ್ಗಾಗಿ ನೀಡಿದ್ದ ದಾಖಲಾತಿಯೊಂದು ತಾಂತ್ರಿಕ ದೋಷದಿಂದಾಗಿ ಹಾನಿಗೊಳಗಾಗಿತ್ತು. ಈ ವಿಚಾರವಾಗಿ ಸದ್ರಿ ಮಹಿಳೆ ಅಂಗಡಿಯಲ್ಲಿ ಗಲಾಟೆ ಮಾಡುತ್ತಿರುವ ಬಗ್ಗೆ ಸಂಜೆ ವೇಳೆಗೆ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ಅಂಜನಾ ಪೈ ತಕ್ಷಣ ಅಂಗಡಿಗೆ ಆಗಮಿಸಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ತೀವ್ರ ಗಲಾಟೆ ನಡೆಸುತ್ತಾ, ತಮ್ಮ ದಾಖಲಾತಿಗಳನ್ನು ನೀಡಬೇಕು ಇಲ್ಲವೇ ₹10,000 ಪರಿಹಾರ ಹಣ ಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ. ಮಾಲೀಕರು ಪರಿಸ್ಥಿತಿಯನ್ನು ಸಮಾಧಾನಪಡಿಸಲು ಯತ್ನಿಸಿದಾಗ, ಆರೋಪಿಗಳು ವೀಡಿಯೋ ಮಾಡಲು ಯತ್ನಿಸಿ, ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಇನ್ನೊಬ್ಬ ಆರೋಪಿ ಅವರಿಗೆ ಜೀವಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.
ನಾಲ್ವರ ವಿರುದ್ಧ ಎಫ್ಐಆರ್: ಅಂಜನಾ ಪೈ ಅವರು ನೀಡಿದ ದೂರಿನನ್ವಯ ಫಾತಿಮಾತ್ ಮಿಸ್ವಾನ, ಮುಬಾಶಿರಾ, ಮುಬಾರಿಶ್ ಹಾಗೂ ನೌಶಾದ್ ಎಂಬ ನಾಲ್ವರು ಆರೋಪಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 98/2026, ಕಲಂ: 115(2), 352, 351(2), 79 ಹಾಗೂ 3(5) BNS 2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪುತ್ತೂರು: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ – ನಿಯಾಝ್, ನೌಶಾದ್ ಸೇರಿ ಹಲವರ ವಿರುದ್ಧ ಕೇಸ್ ದಾಖಲು
ನಗರದ ದರ್ಬೆ ಜಂಕ್ಷನ್ ಬಳಿ ಜನಸೇವಾ ಕೇಂದ್ರದ ಎದುರು ನಡೆದ ಗಲಾಟೆ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರ ಕರ್ತವ್ಯಕ್ಕೆ ತಡೆಯೊಡ್ಡಿ, ಅಡ್ಡಿಪಡಿಸಿದ ಆರೋಪದ ಮೇಲೆ ನಿಯಾಝ್, ನೌಶಾದ್ ಸೇರಿದಂತೆ ಹಲವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ದಿನಾಂಕ 21.08.2026ರಂದು ಸಂಜೆ ವೇಳೆ ದರ್ಬೆ ಜಂಕ್ಷನ್ ಬಳಿಯ “ಡ್ರೀಮ್ ಡೆಸ್ಟಿನೇಷನ್” ಜನಸೇವಾ ಕೇಂದ್ರದ ಎದುರು ಸಾರ್ವಜನಿಕರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಾನ್ಸನ್ ಡಿಸೋಜಾ ಅವರಿಗೆ ಮಾಹಿತಿ ದೊರೆತಿದೆ. ತಕ್ಷಣವೇ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ಜನರು ಅಕ್ರಮವಾಗಿ ಗುಂಪು ಸೇರಿರುವುದು ಕಂಡುಬಂದಿದೆ.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದ್ದ ಜನರನ್ನು ಚದುರಿಸಲು ಯತ್ನಿಸಿದಾಗ, ಸ್ಥಳದಲ್ಲಿದ್ದ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಗಲಾಟೆಗೆ ಸಂಬಂಧಿಸಿದಂತೆ ಕೆಲವರನ್ನು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾಗ ನಿಯಾಝ್, ನೌಶಾದ್ ಹಾಗೂ ಇತರರು ಪೊಲೀಸರನ್ನು ತಡೆದು ಉದ್ಧಟತನ ತೋರಿದ್ದಾರೆ ಎನ್ನಲಾಗಿದೆ.
ಪೊಲೀಸರಿಂದ ಸ್ವಯಂಪ್ರೇರಿತ ಎಫ್ಐಆರ್: ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟುಮಾಡಿ, ಕಾನೂನು ಸುವ್ಯವಸ್ಥೆ ಪಾಲನೆ ಮಾಡುತ್ತಿದ್ದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 99/2026, ಕಲಂ: 132, 121(1) ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪುತ್ತೂರು ಜನ್-ಸೇವಾ ಕೇಂದ್ರ ಗಲಾಟೆ: ಆರೋಪಿ ಸುದರ್ಶನ್ ಪೈ ಕ್ರಿಮಿನಲ್ ಹಿನ್ನೆಲೆ ಬಯಲು, ಪೊಲೀಸ್ ಲಾಠಿ ಪ್ರಹಾರ
ಪುತ್ತೂರು: ನಗರದ ದರ್ಬೆಯ “ಡ್ರೀಮ್ ಡೆಸ್ಟಿನೇಷನ್” ಜನಸೇವಾ ಕೇಂದ್ರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಪ್ರಮುಖ ಹಾಗೂ ಹೆಚ್ಚುವರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ತಂದೆ ಸದಾಶಿವ ಪೈ ಪಾತ್ರಕ್ಕೆ ಸ್ಪಷ್ಟನೆ: ಘಟನೆ ನಡೆದ ಸಂದರ್ಭದಲ್ಲಿ ಆರೋಪಿ ಸುದರ್ಶನ ಪೈ ರವರ ತಂದೆ ಸದಾಶಿವ ಪೈ ಅವರು ಸ್ಥಳದಲ್ಲಿ ಇರಲಿಲ್ಲ. ಗಲಾಟೆ ಸಂಪೂರ್ಣವಾಗಿ ನಡೆದ ಬಳಿಕವಷ್ಟೇ ಸ್ಥಳಕ್ಕೆ ಆಗಮಿಸಿದ ಅವರು, ಕೇವಲ ಜಗಳವನ್ನು ಬಿಡಿಸಲು ಯತ್ನಿಸಿದ್ದಾರೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಸ್ಥಳದಲ್ಲಿ ಸಾರ್ವಜನಿಕರ ಹಂಗಾಮ – ಲಘು ಲಾಠಿ ಪ್ರಹಾರ: ಜನಸೇವಾ ಕೇಂದ್ರದ ಬಳಿ ಗಲಾಟೆ ಜೋರಾದಾಗ ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದರು. ಇದರಿಂದ ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನೆರೆದಿದ್ದ ಜನರನ್ನು ತಕ್ಷಣವೇ ಸ್ಥಳದಿಂದ ತೆರಳುವಂತೆ ಪೊಲೀಸರು ಸೂಚನೆ ನೀಡಿದರೂ, ಸಾರ್ವಜನಿಕರು ಜಾಗ ಖಾಲಿ ಮಾಡಲಿಲ್ಲ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ್ದಾರೆ ಎಂದು ತಿಳಿಸಿದ್ದಾರೆ.
arrest
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್ಪೆಕ್ಟರ್ ಬಾಲಕೃಷ್ಣ!
ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಾರ್ಯಾಚರಣೆಯ ವಿವರ:
ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ದೂರುದಾರರಿಗೆ ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಒಟ್ಟು ₹25,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಪೈಕಿ ಈಗಾಗಲೇ ₹15,000 ಹಣವನ್ನು ಮುಂಗಡವಾಗಿ ಪಡೆದುಕೊಂಡಿದ್ದ ಇನ್ಸ್ಪೆಕ್ಟರ್, ಬಳಿಕ ಹೆಚ್ಚುವರಿಯಾಗಿ ಮತ್ತೊಮ್ಮೆ ₹5,000 ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಇದರಿಂದ ಬೇಸತ್ತ ಫಿರ್ಯಾದುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಅನ್ವಯ ಸೆಪ್ಟೆಂಬರ್ 21ರ ಸಂಜೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ದೂರುದಾರರಿಂದ ₹5,000 ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.
ಹಿನ್ನೆಲೆ ಮತ್ತು ಹಳೆಯ ಆರೋಪಗಳು:
ಈ ಹಿಂದೆ ಉಳ್ಳಾಲ ಠಾಣೆಯಲ್ಲಿದ್ದಾಗಲೂ ಬಾಲಕೃಷ್ಣ ಅವರ ಮೇಲೆ ಭ್ರಷ್ಟಾಚಾರದ ಸಾಲು ಸಾಲು ಆರೋಪಗಳು ಕೇಳಿಬಂದಿದ್ದವು:
ಕಳ್ಳತನ ಪ್ರಕರಣದಲ್ಲಿ ಲಂಚ: ಉಳ್ಳಾಲದ ಮನೆಯೊಂದರಲ್ಲಿ ₹15 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಪ್ರಕರಣದಲ್ಲಿ ಮಾರಾಟ ಮಾಡಿದ್ದ ಚಿನ್ನಾಭರಣ ವಶಪಡಿಸಿಕೊಳ್ಳುವಾಗಲೂ ಲಂಚ ಪಡೆದ ಆರೋಪವಿತ್ತು.
ಪ್ರಕರಣ ಮುಚ್ಚಿಹಾಕಲು ದಂಧೆ:
ಬೆಳ್ತಂಗಡಿ ಮೂಲದ ಯುವಕನೊಬ್ಬನ ತಾಯಿಯಿಂದ ಪ್ರಕರಣ ಮುಚ್ಚಿಹಾಕಲು ₹3 ಲಕ್ಷ ರೂಪಾಯಿ ಪೀಕಿಸಿದ್ದಲ್ಲದೆ, ಮಗನ ಚಿನ್ನಾಭರಣ ಎಗರಿಸಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಂದಿನ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾಗ, ಇಲಾಖಾ ವಿಚಾರಣೆ ವೇಳೆ ದೂರುದಾರ ಮಹಿಳೆಗೆ ₹4.5 ಲಕ್ಷ ರೂಪಾಯಿ ನೀಡಿ ಕೇಸ್ ಹಿಂಪಡೆಯುವಂತೆ ಮಾಡಿದ್ದರೆನ್ನಲಾಗಿದೆ.
ವರ್ಗಾವಣೆ ನಾಟಕ: ಉಳ್ಳಾಲದ ಮರಳು ದಂಧೆಕೋರರ ಸಾಲಿಗೆ ಸಿಲುಕಿ ವರ್ಗಾವಣೆಯಾಗಿದ್ದ ಇವರು, ಬಳಿಕ ಪಾಂಡೇಶ್ವರ ಮಹಿಳಾ ಠಾಣೆಗೆ ಸೇರಿ, ಪ್ರಸ್ತುತ ಬಜ್ಜೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮುಖ್ಯಮಂತ್ರಿ ಪದಕದ ವಿವಾದ.! ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇತರೆ ತಂಡಗಳು ಶ್ರಮವಹಿಸಿ ಆರೋಪಿಗಳನ್ನು ಬಂಧಿಸಿದ್ದರೂ, ಅದರ ನೆಪದಲ್ಲಿ ಅಂದಿನ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ಹೆಸರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಭಾರೀ ಸುದ್ದಿಯಾಗಿತ್ತು.
arrest
ಕಾಸರಗೋಡು: ವಿವಾಹಿತ ಮಹಿಳೆಯ ಗೆಳೆಯನ ಜೊತೆ ನಿಲ್ಲಿಸಿ ಗೂಂಡಾಗಿರಿ, ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ – ಐವರ ಬಂಧನ
ಕಾಸರಗೋಡು: ವಿವಾಹಿತ ಮಹಿಳೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಗೂಂಡಾಗಿರಿ ನಡೆಸಿ, ಆಕೆ ಮತ್ತು ಆಕೆಯ ಪುರುಷ ಸ್ನೇಹಿತನನ್ನು ಬೆದರಿಸಿ ಹಣ ಮತ್ತು ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮುಳಿಯಾರು ಪೊವ್ವಲ್ ನ ಬಿ. ಶರೀಫ್ (42), ಚೆಂಗಳ ಸಂತೋಷ್ ನಗರದ ಮೊಹಮ್ಮದ್ ಸಾಲಿಹ್ (22), ನಾಲ್ಕನೇ ಮೈಲ್ ನಿವಾಸಿಗಳಾದ ಉಮರ್ ಮುಖ್ತಾರ್ (18), ಮೊಹಮ್ಮದ್ ಶಿಹಾನ್ (20) ಹಾಗೂ ಆಲಂಪಾಡಿಯ ಅಬ್ದುಲ್ ರಶೀದ್ (36) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆ ಏನು?
ಮಹಿಳೆಯ ಮನೆಗೆ ಆಕೆಯ ಪುರುಷ ಸ್ನೇಹಿತ ಬಂದಿದ್ದ ವೇಳೆ ಆರೋಪಿಗಳ ಗುಂಪು ಅಕ್ರಮವಾಗಿ ಮನೆ ಪ್ರವೇಶ ಮಾಡಿದೆ. ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ಫೋಟೋ ತೆಗೆದಿರುವ ಆರೋಪಿಗಳು, ಆ ಫೋಟೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಮೊದಲಿಗೆ ಮಹಿಳೆಯಿಂದ 2 ಪವನ್ ತೂಕದ ಚಿನ್ನದ ಸರ, ಉಂಗುರ ಹಾಗೂ 15,000 ರೂ. ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ ಆಕೆಯ ಪುರುಷ ಸ್ನೇಹಿತನಿಂದ 40,000 ರೂ. ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ನಂತರವೂ ಹೆಚ್ಚಿನ ಹಣ ಮತ್ತು ಚಿನ್ನಾಭರಣ ನೀಡುವಂತೆ ನಿರಂತರ ಬೆದರಿಕೆ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್ಪೆಕ್ಟರ್ ಪಿ. ಪ್ರಮೋದ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐವರನ್ನೂ ಬಂಧಿಸಿದ್ದಾರೆ
arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
