ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ

ಪುತ್ತೂರು: ಮಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರ ಮುಖ್ಯಮಂತ್ರಿಯವರನ್ನು ಖುದ್ದಾಗಿ ಭೇಟಿಯಾದ ಶಾಸಕರು, ತುಳುನಾಡಿನ ಬಹುದಿನಗಳ ಬೇಡಿಕೆಯ ಕುರಿತು ಸುದೀರ್ಘ ಚರ್ಚೆ ನಡೆಸಿ ಈ ಮನವಿ ಪತ್ರವನ್ನು ಹಸ್ತಾಂತರಿಸಿದರು. ಆಂಧ್ರ ಪ್ರದೇಶ ಮಾದರಿ ಅಧ್ಯಯನ ವರದಿ ಸಲ್ಲಿಕೆ: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯನ್ನಾಗಿ … Continue reading ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ