Connect with us

crime

ಸುಳ್ಯದಲ್ಲಿ ಅಕ್ರಮ ಮರ ಸಾಗಾಟ ಜಾಲ ಭೇದಿಸಿದ ಅರಣ್ಯ ಇಲಾಖೆ: ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ: ₹8.40 ಲಕ್ಷ ಮೌಲ್ಯದ ಕಿರಾಲ್‌ಬೋಗಿ ದಿಮ್ಮಿಗಳು, ಲಾರಿ ವಶ!

Published

on

ಸುಳ್ಯ: ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು, ಯಾವುದೇ ರಹದಾರಿ ಇಲ್ಲದೆ ಲಾರಿಯಲ್ಲಿ ದಿಮ್ಮಿಗಳನ್ನು ಸಾಗಿಸುತ್ತಿದ್ದ ಪ್ರಕರಣ ಒಂದನ್ನು ಸುಳ್ಯ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದೆ.

ಘಟನೆಯ ವಿವರ: ಸುಳ್ಯ ವಲಯದ ಅರಂತೋಡು ಶಾಖಾ ವ್ಯಾಪ್ತಿಯ ಅರಂತೋಡು ಗ್ರಾಮದ ‘ಮಲ್ಲಡ್ಕ’ ಎಂಬಲ್ಲಿನ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ 01 ಕಿರಾಲ್‌ಬೋಗಿ ಜಾತಿಯ ಮರವನ್ನು ಕಡಿದು, ದಿಮ್ಮಿಗಳನ್ನು ಸಾಗಾಟ ಮಾಡಿರುವ ಬಗ್ಗೆ ಅರಣ್ಯ ತಕ್ಷೀರು ನಂಬ್ರ: 02/2026-27, ದಿನಾಂಕ: 26-08-2026 ರಂತೆ ಪ್ರಕರಣ ದಾಖಲಾಗಿತ್ತು.

ದಿನಾಂಕ 26-08-2026 ರಂದು ರಾತ್ರಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ದೊಡ್ಡತೋಟದಿಂದ ಮರ್ಕಂಜ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯ ‘ಹೈದಂಗೂರು’ ಎಂಬಲ್ಲಿ ಸುಳ್ಯ ವಲಯದ ರಾತ್ರಿ ಗಸ್ತು ಸಿಬ್ಬಂದಿಗಳು ಇಲಾಖಾ ವಾಹನದಲ್ಲಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಲಾರಿ (ನೋಂದಣಿ ಸಂಖ್ಯೆ: KA 44 A 2650) ಯನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ, ಅದರಲ್ಲಿ ಅಕ್ರಮವಾಗಿ ತುಂಬಿಸಿಕೊಂಡು ಹೋಗುತ್ತಿದ್ದ 14 ಕಿರಾಲ್‌ಬೋಗಿ ಜಾತಿಯ ಮರದ ದಿಮ್ಮಿಗಳು ಪತ್ತೆಯಾಗಿವೆ.

ಸದ್ರಿ ಮರದ ದಿಮ್ಮಿಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಸೂಕ್ತ ರಹದಾರಿ ಮತ್ತು ಅನುಮತಿ ಪತ್ರ ಇಲ್ಲದಿರುವುದು ವಿಚಾರಣೆ ವೇಳೆ ತಿಳಿದುಬಂದಿದ್ದು, ಇದನ್ನು ಅಕ್ರಮ ಮರ ಕಡಿತಲೆ ಮತ್ತು ಸಾಗಾಟವೆಂದು ಖಚಿತಪಡಿಸಿಕೊಂಡ ಅರಣ್ಯ ಸಿಬ್ಬಂದಿಗಳು ಲಾರಿ ಹಾಗೂ ಮರದ ದಿಮ್ಮಿಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಗಳು: ಈ ಅಕ್ರಮ ಕೃತ್ಯಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ:

  1. ಎ1: ಯಶವಂತ ಯು.ಜಿ (ಬಿನ್ ಗಿರಿಯಪ್ಪ ಗೌಡ, ಉಳುವಾರು-ಮಲ್ಲಡ್ಕ ಮನೆ, ಅರಂತೋಡು ಗ್ರಾಮ)
  2. ಎ2: ತರುಣ್ ಯು.ವೈ (ಬಿನ್ ಯಶವಂತ, ಉಳುವಾರು-ಮಲ್ಲಡ್ಕ ಮನೆ, ಅರಂತೋಡು ಗ್ರಾಮ)
  3. ಎ3 (ಲಾರಿ ಚಾಲಕ): ದೀಕ್ಷಿತ್ ಡಿ (ಬಿನ್ ಸುಂದರ ಗೌಡ, ಬಾಲಾಜೆ ಮನೆ, ಜಾಲ್ಸೂರು ಗ್ರಾಮ)
  4. ಎ4 (ಲಾರಿ ಮಾಲೀಕ): ಗಗನ್ ಕೆ. (ಬಿನ್ ಗೋಪಾಲಕೃಷ್ಣ ಕೆ., ಕುಕ್ಕುಜಡ್ಕ ಮನೆ, ಅಮರಮುಡ್ನೂರು ಗ್ರಾಮ)

ಬಂಧಿತ ಆರೋಪಿಗಳ ವಿರುದ್ಧ ತಕ್ಷೀರು ದಾಖಲಿಸಿಕೊಂಡು, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಜಪ್ತಿ ಮಾಡಲಾದ 14 ಮರದ ದಿಮ್ಮಿಗಳು ಹಾಗೂ ಲಾರಿಯ ಒಟ್ಟು ಮೌಲ್ಯ ರೂ. 8,40,144/- ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆ ನಡೆಸಿದ ತಂಡ: ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಂತೆ ಹಾಗೂ ಸುಬ್ರಹ್ಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸುಳ್ಯ ವಲಯ ಅರಣ್ಯಾಧಿಕಾರಿ ಶ್ರೀ ನಿರಂಜನ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ತಂಡದಲ್ಲಿ ಅರಂತೋಡು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀ ವಿನಾಯಕ ದುರದುಂಡಿ, ಕಾಲಬೈರವ ಗಸ್ತು ಪಡೆಯ ಸಿಬ್ಬಂದಿಗಳಾದ ಉಪ ವಲಯ ಅರಣ್ಯಾಧಿಕಾರಿ ಶ್ರೀ ನವೀನ್ ಕುಮಾರ್, ಗಸ್ತು ಅರಣ್ಯ ಪಾಲಕರಾದ ಶ್ರೀ ದೀಪಕ್ ಕೆ.ಎಸ್, ಶ್ರೀ ಶಿವಾನಂದ ಬಳಗಾನೂರ, ಅರಣ್ಯ ವೀಕ್ಷಕರಾದ ಶ್ರೀ ಅಭಿಲಾಷ್ ಹಾಗೂ ವಾಹನ ಚಾಲಕರಾದ ಶ್ರೀ ಪುರುಷೋತ್ತಮ ಕೆ.ಎಸ್ ಭಾಗವಹಿಸಿದ್ದರು.

ಪ್ರಕರಣದ ಮುಂದಿನ ತನಿಖೆಯನ್ನು ಸುಳ್ಯ ವಲಯ ಅರಣ್ಯಾಧಿಕಾರಿ ಶ್ರೀ ನಿರಂಜನ ಅವರು ಕೈಗೊಂಡಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಪೆರ್ಡೂರು ಪ್ರದೀಪ್ ಪೂಜಾರಿ ಹಲ್ಲೆ, ಆತ್ಮಹತ್ಯೆ ಪ್ರಕರಣ – ಇಬ್ಬರು ಆರೋಪಿಗಳು ಮಧ್ಯಪ್ರದೇಶದಲ್ಲಿ ಬಂಧನ..

Published

on

​ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ (28) ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ​

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರು, ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದೆ. ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ​

ಪ್ರಕರಣದ ಹಿನ್ನೆಲೆ:​

ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಮೇಲೆ ಅಕ್ಟೋಬರ್ 27ರ ರಾತ್ರಿ ಶ್ರಾವ್ಯಾ ಶೆಟ್ಟಿ ಕುಟುಂಬದವರು ಮೂರು ಕಾರುಗಳಲ್ಲಿ ಬಂದು ಅಡ್ಡಗಟ್ಟಿ ಭೀಕರವಾಗಿ ಹಲ್ಲೆ ನಡೆಸಿದ್ದರು ಎಂದು ಪ್ರದೀಪ್ ಅವರ ಸಹೋದರ ದಿಲೀಪ್ ಕುಮಾರ್ ದೂರಿನಲ್ಲಿ ಆರೋಪಿಸಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಅಕ್ಟೋಬರ್ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅಕ್ಟೋಬರ್ 30ರ ಸಂಜೆ 5:30ರ ಸುಮಾರಿಗೆ ಆಸ್ಪತ್ರೆಯ ಶೌಚಾಲಯದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದರು. ​ಈ ಘಟನೆಗೆ ಸಂಬಂಧಿಸಿದಂತೆ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.

ವಿಶೇಷ ತಂಡಗಳ ರಚನೆ:

ಪ್ರಕರಣದ ತನಿಖೆಗಾಗಿ ಹಾಗೂ ಆರೋಪಿಗಳ ಪತ್ತೆಗೆ ಎಸ್‌ಪಿ ಅವರು 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದರು. ​ಅಧಿಕಾರಿ ಅಮಾನತು: ಪ್ರದೀಪ್ ಅವರ ಮೇಲೆ ಹಲ್ಲೆ ನಡೆದಾಗ ಆರಂಭದಲ್ಲಿ ಎಫ್‌ಐಆ‌ರ್ (FIR) ದಾಖಲಿಸದೆ ಕೇವಲ ಎನ್‌ಸಿ (NC) ದಾಖಲಿಸಿದ್ದ ಹಿರಿಯಡ್ಕ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (SI) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಅವರನ್ನು ಕರ್ತವ್ಯದಿಂದ ತೆರವುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ​ಪೂರ್ವ ದೂರುಗಳು ಹಾಗೂ ಚಾರ್ಜ್‌ಶೀಟ್:​ಇನ್ನೊಂದೆಡೆ, ಮೃತ ಪ್ರದೀಪ್ ಪೂಜಾರಿ ವಿರುದ್ಧವೂ ಯುವತಿ ಈ ಹಿಂದೆ 3 ಬಾರಿ ದೂರು ನೀಡಿದ್ದರು: ​2025 ನವೆಂಬರ್ 10: ಬೆದರಿಕೆ ಕರೆ ಹಾಕಿದ ಆರೋಪ. ​ನವೆಂಬರ್ 29: ಅತ್ಯಾಚಾರ ಆರೋಪ. ​ಅಕ್ಟೋಬರ್ 28: ಖಾರದ ಪುಡಿ ಎರಚಿ ಕೊಲೆಯತ್ನ ನಡೆಸಿದ ಆರೋಪ. ​ಈ ಮೂರೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ​ಸದ್ಯ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.​

Continue Reading

arrest

ಕೊಲೆ ಮಾಡಿದ ಸ್ನೇಹಿತನೇ ಕನಸಿನಲ್ಲಿ ದೆವ್ವವಾಗಿ ಕಾಡಿದ! ಭಯ ತಾಳಲಾರದೆ ಪೊಲೀಸರಿಗೆ ಶರಣಾದ ಆರೋಪಿ

Published

on

ಮದ್ಯದ ಪಾರ್ಟಿ ವೇಳೆ ಸ್ನೇಹಿತನನ್ನೇ ಹೊಡೆದು ಕೊಂದಿದ್ದ ಯುವಕ; 15 ದಿನಗಳ ಕಾಲ ನಿದ್ರೆಯಲ್ಲೂ ಕಾಡಿದ ಮೃತ ಸ್ನೇಹಿತನ ನೆನಪು – ಕೊನೆಗೆ ಕೊಲೆ ರಹಸ್ಯ ಬಯಲು

ಮುಂಬೈ: ಮದ್ಯದ ಪಾರ್ಟಿ ವೇಳೆ ಉಂಟಾದ ಜಗಳದಲ್ಲಿ ಸ್ನೇಹಿತನನ್ನೇ ಹೊಡೆದು ಕೊಲೆಗೈದು, ಮೃತದೇಹವನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ ಯುವಕನೊಬ್ಬ, ಕೊನೆಗೆ ಮೃತ ಸ್ನೇಹಿತ ಕನಸಿನಲ್ಲಿ ಪದೇಪದೇ ಬಂದು ಕಾಡುತ್ತಿದ್ದಾನೆಂಬ ಭಯದಿಂದ ಪೊಲೀಸರ ಮುಂದೆ ಶರಣಾಗಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ನಿವಾಸಿ, ಹೌಸ್‌ಕೀಪಿಂಗ್ ಕೆಲಸಗಾರ ಪ್ರಭು ಕಾರ್ಕಡೆ (24) ಬಂಧಿತ ಆರೋಪಿ. ಎರಡು ವಾರಗಳ ಹಿಂದೆ ಡೊಂಬಿವ್ಲಿ ಸಮೀಪದ ಮೋಥಾ ಗ್ರಾಮದಲ್ಲಿ ಪಲ್ಲವ್ ಅಲಿಯಾಸ್ ವಿಶಾಲ್ ಮಧುಕರ್ ಕದಮ್ (43) ಎಂಬವರ ಮೃತದೇಹ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಫುಲ್ಲ ಜಾಧವ್ ತಿಳಿಸಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಪ್ರಭು ನೀಡಿದ ಹೇಳಿಕೆಯ ಪ್ರಕಾರ, ಸ್ನೇಹಿತ ಕದಮ್ ಅವರ ಮನೆಯಲ್ಲೇ ಇಬ್ಬರೂ ಮದ್ಯಪಾನ ಮಾಡುತ್ತಿದ್ದಾಗ ಜಗಳ ಉಂಟಾಗಿತ್ತು. ಈ ವೇಳೆ ಆಕ್ರೋಶಗೊಂಡ ಪ್ರಭು, ಕದಮ್ ಅವರನ್ನು ಹೊಡೆದು ಕೊಲೆ ಮಾಡಿದ್ದಾನೆ.ಆತ ಮೃತಪಟ್ಟಿದ್ದ. ಸ್ನೇಹಿತ ಮೃತಪಟ್ಟಿರುವುದನ್ನು ಕಂಡು ಗಾಬರಿಗೊಂಡ ಪ್ರಭು, ತಕ್ಷಣ ತನ್ನ ಬಾಡಿಗೆ ಮನೆಯ ಮಾಲೀಕ ಸಂದೇಶ್ ಮ್ಹಾತ್ರೆ ಎಂಬಾತನ ಸಹಾಯ ಕೋರಿದ್ದಾನೆ. ಅವರಿಬ್ಬರೂ ಸೇರಿ ವಿಶಾಲ್ ಅವರ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ, ರಾತ್ರೋರಾತ್ರಿ ಹತ್ತಿರದ ನಿರ್ಜನ ಪ್ರದೇಶದಲ್ಲಿ ಎಸೆದು ಸಾಕ್ಷ್ಯ ನಾಶಪಡಿಸಿದ್ದರು. ಬಳಿಕ ಪರಾರಿಯಾಗಿದ್ದಾನೆ.

ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಆರಾಮವಾಗಿದ್ದ ಪ್ರಭುವಿಗೆ ಕೆಲವೇ ದಿನಗಳಲ್ಲಿ ಭಯ ಶುರುವಾಗಿದೆ. ಮೃತಪಟ್ಟ ಸ್ನೇಹಿತ ವಿಶಾಲ್ ಪದೇಪದೇ ಕನಸಿನಲ್ಲಿ ಬಂದು ಕಾಡುತ್ತಿದ್ದ. ಸುಮಾರು 15 ದಿನಗಳ ಕಾಲ ಸರಿಯಾಗಿ ನಿದ್ರೆ ಮಾಡಲೂ ಸಾಧ್ಯವಾಗದೆ ತೀವ್ರ ಆತಂಕಕ್ಕೆ ಒಳಗಾಗಿದ್ದ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.

ಕನಸಿನ ಭಯ ಹಾಗೂ ಪಶ್ಚಾತ್ತಾಪದಿಂದ ಕಂಗೆಟ್ಟ ಪ್ರಭು, ಕೊನೆಗೆ ತಾನಾಗಿಯೇ ಪೊಲೀಸರ ಬಳಿಗೆ ತೆರಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾನೆ. ಸೋಮವಾರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ಮೃತದೇಹ ಎಸೆದಿದ್ದ ಸ್ಥಳವನ್ನೂ ಪೊಲೀಸರಿಗೆ ತೋರಿಸಿದ್ದಾನೆ.

ಈ ಸಂಬಂಧ ವಿಷ್ಣು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103(1)ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

crime

ಮಂಗಳೂರಿನಲ್ಲಿ ಫಿಲ್ಮಿ ದರೋಡೆ: ಬಸ್ ಇಳಿದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ ₹1.15 ಕೋಟಿ ದರೋಡೆ!

Published

on

ಮಂಗಳೂರು, ಅ.29: ಶಿವಮೊಗ್ಗದಿಂದ ಮಂಗಳೂರಿಗೆ ತರಲಾಗುತ್ತಿದ್ದ ₹1.15 ಕೋಟಿ ನಗದು ಹಣವನ್ನು ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಇಳಿದ ಕೂಡಲೇ ವ್ಯಕ್ತಿಯನ್ನು ಅಪಹರಿಸಿ ನಗರದಾದ್ಯಂತ ಸುತ್ತಾಡಿಸಿ ಹಣ ಕಿತ್ತುಕೊಂಡು ಕಾವೂರಿನ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಶಿವಮೊಗ್ಗ ಗಾಂಧಿ ಬಜಾರ್ ನಿವಾಸಿ ನಾಗರಾಜ್ ಎಂಬುವರ ಕೆಲಸದಾಳು ಸತ್ಯನಾರಾಯಣ ಅವರು ಅ.23ರಂದು 2 ಬ್ಯಾಗ್‌ಗಳಲ್ಲಿ ₹1 ಕೋಟಿ 15 ಲಕ್ಷ ಹಣವನ್ನು ಮಂಗಳೂರಿಗೆ ತರಲು ದಾವಣಗೆರೆಯಿಂದ ಹೊರಟಿದ್ದರು. ಅ.27ರ ರಾತ್ರಿ ದಾವಣಗೆರೆಯಿಂದ ಬಸ್ ಹತ್ತಿದ್ದ ಅವರು, ಅ.28ರ ಬೆಳಿಗ್ಗೆ 6 ಗಂಟೆಗೆ ಲಾಲ್‌ಬಾಗ್ ಬಳಿ ಬಸ್ ಇಳಿದಿದ್ದಾರೆ.

ಈ ವೇಳೆ ಕಪ್ಪು ಕಾರಿನಲ್ಲಿ ಮುಖಕ್ಕೆ ಮಫ್ಲರ್ ಕಟ್ಟಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸತ್ಯನಾರಾಯಣ ಅವರನ್ನು ಬಲವಂತವಾಗಿ ಕಾರಿನಲ್ಲಿ ಎಳೆದು ಅಪಹರಿಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಮಂಗಳೂರು ನಗರದಾದ್ಯಂತ ಕಾರಿನಲ್ಲಿ ಸುತ್ತಾಡಿಸಿ, ಅವರ ಬಳಿ ಇದ್ದ 2 ಬ್ಯಾಗ್ ಹಣ ಮತ್ತು 2 ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ.

ನಂತರ ಬೆಳಿಗ್ಗೆ 8 ಗಂಟೆಗೆ ಕಾವೂರು ಬಸ್ ನಿಲ್ದಾಣದ ಬಳಿಯ ಗುಡ್ಡದ ಮೇಲೆ ಅವರನ್ನು ತಳ್ಳಿ, “ಪೊಲೀಸರಿಗೆ ಹೇಳಿದರೆ ಕೊಲೆ ಮಾಡುತ್ತೇವೆ” ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

ಈ ಸಂಬಂಧ ಮಂಗಳೂರು ಪೊಲೀಸರು ಬಿಎನ್‌ಎಸ್ ಕಾಯ್ದೆಯಡಿ ಅಪಹರಣ, ದರೋಡೆ ಮತ್ತು ಜೀವ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದು, ಕಪ್ಪು ಕಾರು ಮತ್ತು ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಈ ದೊಡ್ಡ ಮೊತ್ತದ ಹಣದ ಸಾಗಾಟದ ಮಾಹಿತಿ ದರೋಡೆಕೋರರಿಗೆ ಮೊದಲೇ ಹೇಗೆ ಗೊತ್ತಾಯಿತು ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!