Connect with us

suicide

ಅನಾರೋಗ್ಯಕ್ಕೆ ಬೇಸತ್ತು ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

Published

on

ವಿಟ್ಲ: ದೀರ್ಘಕಾಲದ ಅನಾರೋಗ್ಯದಿಂದ ನೊಂದ ವೃದ್ಧೆಯೊಬ್ಬರು ಮನೆ ಮುಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

ಪುತ್ತೂರಿನ ಆಟೋ ಚಾಲಕ ನಾರಾಯಣ ಗೌಡ ಎಂಬವರ ತಾಯಿ ಗಿರಿಜಾ ಗೌಡ (78) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ.

ಕೆಲವು ದಿನಗಳ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಗಿರಿಜಾ ಗೌಡ ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಆದರೆ ಅನಾರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು.

ಮಗ ನಾರಾಯಣ ಗೌಡ ಅವರು ಪುತ್ತೂರಿನಲ್ಲಿ ಆಟೋ ಚಾಲನೆಗೆ ತೆರಳಿದ್ದ ವೇಳೆ, ಸೊಸೆ ಪುಷ್ಪಲತಾ ಅವರು ಮಗುವನ್ನು ಕರೆತರಲು ಪಡಿಬಾಗಿಲು ಅಂಗನವಾಡಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ವೃದ್ಧೆ ಬಾವಿಗೆ ಹಾರಿದ್ದಾರೆ. ಅಂಗನವಾಡಿಯಿಂದ ವಾಪಸ್ ಬಂದ ಸೊಸೆಗೆ ಅತ್ತೆ ಮನೆಯಲ್ಲಿ ಕಾಣಿಸದಿದ್ದಾಗ ಹುಡುಕಾಟ ನಡೆಸಿದ್ದು, ಬಾವಿಯಲ್ಲಿ ಇಣುಕಿ ನೋಡಿದಾಗ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ.

ಅನಾರೋಗ್ಯದ ತೀವ್ರ ನೋವ ತಾಳಲಾರದೆ ಅವರು ಈ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಫ್ರೆಂಡ್ಸ್ ವಿಟ್ಲ’ ಸ್ವಯಂಸೇವಕ ಮುರಳೀಧರ ಅವರ ನೇತೃತ್ವದ ತಂಡ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

ಸರ್ಕಾರಿ ಕಾಲೇಜಿನ ಗುಮಾಸ್ತೆ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ – ಅನಾರೋಗ್ಯವೇ ಕಾರಣವೆಂಬ ಶಂಕೆ; ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡದಲ್ಲಿ ದಾರುಣ ಘಟನೆ

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ದರ್ಜೆ ಗುಮಾಸ್ತೆ (ಕ್ಲರ್ಕ್) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುದುವೆಟ್ಟು ಗ್ರಾಮದ ಮಿಯಾರು ಎಂಬಲ್ಲಿ ಸೆಪ್ಟೆಂಬರ್ 9 ರಂದು ಸಂಜೆ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿಗಳಾದ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಯ ಪುತ್ರಿ ಲಿಶ್ಮಿತಾ ಗೌಡ (20) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಲಿಶ್ಮಿತಾ ಗೌಡ ಅವರು ನಡ ಸರ್ಕಾರಿ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್ 9 ರಂದು ಸಂಜೆ ವೇಳೆಗೆ ಮನೆಯ ಸಮೀಪವೇ ಇದ್ದ ಕುಡಿಯುವ ನೀರಿನ ಬಾವಿಗೆ ಏಕಾಏಕಿ ಹಾರಿದ್ದಾರೆ.

ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳೀಯರು ಹಾಗೂ ಕುಟುಂಬಸ್ಥರು ಆಕೆಯನ್ನು ರಕ್ಷಿಸಲು ಮುಂದಾದರೂ, ಅಷ್ಟರಲ್ಲಾಗಲೇ ಆಕೆ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಬಳಿಕ ಸ್ಥಳೀಯರ ನೆರವಿನೊಂದಿಗೆ ಮೃತದೇಹವನ್ನು ಬಾವಿಯಿಂದ ಮೇಲೆತ್ತಿ, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಅನಾರೋಗ್ಯದ ಹಿನ್ನೆಲೆ ಶಂಕೆ:

ಪ್ರಾಥಮಿಕ ಮಾಹಿತಿಯ ಪ್ರಕಾರ, ಲಿಶ್ಮಿತಾ ಗೌಡ ಅವರು ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದ ಬಾಧೆ ತಾಳಲಾರದೆ, ಮಾನಸಿಕವಾಗಿ ನೊಂದು ಈ ದುಡುಕಿನ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು:

ವಿಷಯ ತಿಳಿದು ಧರ್ಮಸ್ಥಳ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (UDR / Suicide Case) ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಲಾಗಿದೆ.

Continue Reading

Bantawala

ಕೂಲಿ ಕಾರ್ಮಿಕ ಆತ್ಮಹತ್ಯೆ: ವೀರಕಂಬದಲ್ಲಿ ದುರಂತ

Published

on

ವಿಟ್ಲ: ಕೂಲಿ ಕಾರ್ಮಿಕರೊಬ್ಬರು ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಕಂಬ ಗ್ರಾಮದಲ್ಲಿ ನಡೆದಿದೆ.

ವೀರಕಂಬ ಗ್ರಾಮದ ಶಿಂಗೇರಿ ನಿವಾಸಿ ದಿವಂಗತ ತನಿಯಪ್ಪ ನಾಯ್ಕ ಅವರ ಪುತ್ರ ಹರೀಶ್ ನಾಯ್ಕ (46) ಆತ್ಮಹತ್ಯೆಗೆ ಶರಣಾದವರು.

ದಿವಂಗತ ತನಿಯಪ್ಪ ನಾಯ್ಕ ಅವರ ಆರು ಜನ ಪುತ್ರರು ಹಾಗೂ ಮೂವರು ಪುತ್ರಿಯರ ಪೈಕಿ ಹರೀಶ್ ನಾಯ್ಕ ಅವರು ಅವಿವಾಹಿತರಾಗಿದ್ದರು. ಇಂದು ಬೆಳಿಗ್ಗೆ ತಮ್ಮ ಮನೆಯ ಸಮೀಪದಲ್ಲಿರುವ ತೋಟದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಯಾವುದೇ ದುಶ್ಚಟಗಳಿಲ್ಲದೆ ಶಾಂತ ಸ್ವಭಾವದವರಾಗಿದ್ದ ಹರೀಶ್ ಅವರ ಈ ನಿರ್ಧಾರಕ್ಕೆ ನಿಖರ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Continue Reading

Bantawala

ಉಪ್ಪಿನಂಗಡಿ: ಮನೆ ಒಳಗೆ ಮಹಿಳೆಯ ಅನುಮಾನಾಸ್ಪದ ಸಾವು – ಸತ್ಯಾಸತ್ಯತೆ ಹೊರತರಲು ಪೊಲೀಸ್ ತನಿಖೆ ತೀವ್ರ

Published

on

ಉಪ್ಪಿನಂಗಡಿ: ಪರ್ನೆ ಸಮೀಪದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಮನೆಯ ಒಳಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅರ್ಧ ಕಾಲು ನೆಲದ ಮೇಲೆ ಬಿದ್ದಿರುವ ಭಂಗಿಯಲ್ಲಿರುವ ಮೃತದೇಹದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಮೃತ ಕಾವ್ಯ ಅವರಿಗೆ ಇಬ್ಬರು ಮಕ್ಕಳಿದ್ದು, ಇತ್ತೀಚೆಗಷ್ಟೇ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು. ಅಗಲಿದ ಪತಿ, ಮಗ ಹಾಗೂ ಕುಟುಂಬಸ್ಥರನ್ನು ಅವರು ಅಗಲಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ವಿಷಯ ತಿಳಿಯುತ್ತಿದ್ದಂತೆ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ಏನೆಂಬುದನ್ನು ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಸಮಗ್ರ ತನಿಖೆಯ ಬಳಿಕವಷ್ಟೇ ಸಾವಿನ ಹಿಂದಿನ ನೈಜ ಕಾರಣ ಬೆಳಕಿಗೆ ಬರಬೇಕಿದೆ

Continue Reading

Trending

Copyright © 2025 Deevatige