Connect with us

arrest

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ, ಬಿಜೆಪಿ ಮುಖಂಡನ ಅರೆಸ್ಟ್!

Published

on

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹಗರಣ ಇದೀಗ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆಳಕ್ಕಿಳಿದಿರುವ ಅಪರಾಧ ತನಿಖಾ ದಳ (CID) ಅಧಿಕಾರಿಗಳು, ಹಗರಣದ ಪ್ರಮುಖ ಸೂತ್ರಧಾರ ಐಎಎಸ್ ಅಧಿಕಾರಿ ಹಾಗೂ ಮಧ್ಯವರ್ತಿಯಾಗಿದ್ದ ಬಿಜೆಪಿ ಮುಖಂಡನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಐಎಎಸ್ ಅಧಿಕಾರಿಯೇ ಪ್ರಮುಖ ಸೂತ್ರಧಾರ! ಪರೀಕ್ಷೆಗಳ ಉಸ್ತುವಾರಿ ಹಾಗೂ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರೇ ಈ ಇಡೀ ಅಕ್ರಮದ ಪ್ರಮುಖ ರೂವಾರಿ ಎಂಬ ಆಘಾತಕಾರಿ ವಿಚಾರ ಸಿಐಡಿ ತನಿಖೆಯಲ್ಲಿ ಬಯಲಾಗಿದೆ. ಉನ್ನತ ಹುದ್ದೆಯಲ್ಲಿದ್ದು ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಬೇಕಿದ್ದ ಅಧಿಕಾರಿಯೇ ಹಣದ ಆಸೆಗೆ ಬಿದ್ದು ರಹಸ್ಯವಾಗಿ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿರುವುದು ದೃಢಪಟ್ಟಿದೆ.

ದೆಹಲಿ ಏರ್‌ಪೋರ್ಟ್‌ನಲ್ಲಿ ಬಿಜೆಪಿ ಮುಖಂಡನ ಬಂಧನ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು, ದೆಹಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿ ಪ್ರಮುಖ ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿಯಾಗಿರುವ ಬಸವರಾಜ್ ಕನ್ನಾಳೆ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದ.

ಬಂಧನದ ಬೆನ್ನಲ್ಲೇ ಭಾಲ್ಕಿ ನಗರದ ಲೆಕ್ಚರರ್ ಕಾಲನಿ ಹಾಗೂ ಡೋಣಗಾಪುರದಲ್ಲಿರುವ ಈತನ ಮನೆಗಳ ಮೇಲೆಯೂ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

₹40 ಲಕ್ಷಕ್ಕೆ ಮಾರಾಟವಾಗಿತ್ತು ಪ್ರಶ್ನೆಪತ್ರಿಕೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ನಿಂದ ಪ್ರಶ್ನೆಪತ್ರಿಕೆ ಪಡೆದುಕೊಂಡಿದ್ದ ಬಸವರಾಜ್ ಕನ್ನಾಳೆ, ಅದನ್ನು ಅರ್ಹತೆ ಇಲ್ಲದ ಅಭ್ಯರ್ಥಿಗಳಿಗೆ ತಲಾ 40 ಲಕ್ಷ ರೂಪಾಯಿಯಂತೆ ಮಾರಾಟ ಮಾಡಿದ್ದ. ಹುದ್ದೆಯ ಆಸೆಗೆ ಬಿದ್ದ ಹಲವು ಅಭ್ಯರ್ಥಿಗಳು ಲಕ್ಷಾಂತರ ರೂಪಾಯಿ ನೀಡಿ ಪ್ರಶ್ನೆಪತ್ರಿಕೆ ಖರೀದಿಸಿದ್ದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಿಸಿಟಿವಿ ಡಿಲೀಟ್, ಓಎಂಆರ್ ಶೀಟ್ ತಿದ್ದುಪಡಿ: ತಮ್ಮ ಅಕ್ರಮ ಕೃತ್ಯ ಹೊರಬಾರದಂತೆ ತಡೆಯಲು ಆರೋಪಿಗಳು ಸಾಕ್ಷ್ಯ ನಾಶಕ್ಕೂ ವ್ಯವಸ್ಥಿತ ಸಂಚು ರೂಪಿಸಿದ್ದರು. ಪರೀಕ್ಷೆಯ ನಂತರ ಓಎಂಆರ್ (OMR) ಶೀಟ್‌ಗಳಲ್ಲಿ ತಿದ್ದುಪಡಿ ಮಾಡುವುದು ಹಾಗೂ ಅಕ್ರಮದ ಸುಳಿವು ಸಿಗದಿರಲು ಸ್ಟ್ರಾಂಗ್ ರೂಮ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಿಹಾಕುವ ದುಸ್ಸಾಹಸಕ್ಕೂ ಕೈಹಾಕಿದ್ದರು. ಸಿಐಡಿ ಅಧಿಕಾರಿಗಳು ಈ ಎಲ್ಲಾ ಡಿಜಿಟಲ್ ಹಾಗೂ ಭೌತಿಕ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.

ಸೆಪ್ಟೆಂಬರ್ 9ರವರೆಗೆ ಸಿಐಡಿ ಕಸ್ಟಡಿಗೆ ಬಂಧಿತ ಇಬ್ಬರೂ ಆರೋಪಿಗಳನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 9ರವರೆಗೆ ಇಬ್ಬರನ್ನೂ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ಈ ಬೃಹತ್‌ ಹಗರಣದಲ್ಲಿ ಇನ್ನು ಯಾರ್ಯಾರು ಭಾಗಿಯಾಗಿದ್ದಾರೆ ಮತ್ತು ಎಷ್ಟು ಅಭ್ಯರ್ಥಿಗಳು ಹಣ ನೀಡಿ ಹುದ್ದೆ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಮುಂದಿನ ದಿನಗಳಲ್ಲಿ ಹೊರಬರಬೇಕಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಪೆರ್ಡೂರು ಪ್ರದೀಪ್ ಪೂಜಾರಿ ಹಲ್ಲೆ, ಆತ್ಮಹತ್ಯೆ ಪ್ರಕರಣ – ಇಬ್ಬರು ಆರೋಪಿಗಳು ಮಧ್ಯಪ್ರದೇಶದಲ್ಲಿ ಬಂಧನ..

Published

on

​ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ (28) ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ​

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರು, ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದೆ. ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ​

ಪ್ರಕರಣದ ಹಿನ್ನೆಲೆ:​

ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಮೇಲೆ ಅಕ್ಟೋಬರ್ 27ರ ರಾತ್ರಿ ಶ್ರಾವ್ಯಾ ಶೆಟ್ಟಿ ಕುಟುಂಬದವರು ಮೂರು ಕಾರುಗಳಲ್ಲಿ ಬಂದು ಅಡ್ಡಗಟ್ಟಿ ಭೀಕರವಾಗಿ ಹಲ್ಲೆ ನಡೆಸಿದ್ದರು ಎಂದು ಪ್ರದೀಪ್ ಅವರ ಸಹೋದರ ದಿಲೀಪ್ ಕುಮಾರ್ ದೂರಿನಲ್ಲಿ ಆರೋಪಿಸಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಅಕ್ಟೋಬರ್ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅಕ್ಟೋಬರ್ 30ರ ಸಂಜೆ 5:30ರ ಸುಮಾರಿಗೆ ಆಸ್ಪತ್ರೆಯ ಶೌಚಾಲಯದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದರು. ​ಈ ಘಟನೆಗೆ ಸಂಬಂಧಿಸಿದಂತೆ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.

ವಿಶೇಷ ತಂಡಗಳ ರಚನೆ:

ಪ್ರಕರಣದ ತನಿಖೆಗಾಗಿ ಹಾಗೂ ಆರೋಪಿಗಳ ಪತ್ತೆಗೆ ಎಸ್‌ಪಿ ಅವರು 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದರು. ​ಅಧಿಕಾರಿ ಅಮಾನತು: ಪ್ರದೀಪ್ ಅವರ ಮೇಲೆ ಹಲ್ಲೆ ನಡೆದಾಗ ಆರಂಭದಲ್ಲಿ ಎಫ್‌ಐಆ‌ರ್ (FIR) ದಾಖಲಿಸದೆ ಕೇವಲ ಎನ್‌ಸಿ (NC) ದಾಖಲಿಸಿದ್ದ ಹಿರಿಯಡ್ಕ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (SI) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಅವರನ್ನು ಕರ್ತವ್ಯದಿಂದ ತೆರವುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ​ಪೂರ್ವ ದೂರುಗಳು ಹಾಗೂ ಚಾರ್ಜ್‌ಶೀಟ್:​ಇನ್ನೊಂದೆಡೆ, ಮೃತ ಪ್ರದೀಪ್ ಪೂಜಾರಿ ವಿರುದ್ಧವೂ ಯುವತಿ ಈ ಹಿಂದೆ 3 ಬಾರಿ ದೂರು ನೀಡಿದ್ದರು: ​2025 ನವೆಂಬರ್ 10: ಬೆದರಿಕೆ ಕರೆ ಹಾಕಿದ ಆರೋಪ. ​ನವೆಂಬರ್ 29: ಅತ್ಯಾಚಾರ ಆರೋಪ. ​ಅಕ್ಟೋಬರ್ 28: ಖಾರದ ಪುಡಿ ಎರಚಿ ಕೊಲೆಯತ್ನ ನಡೆಸಿದ ಆರೋಪ. ​ಈ ಮೂರೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ​ಸದ್ಯ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.​

Continue Reading

arrest

ಕೊಲೆ ಮಾಡಿದ ಸ್ನೇಹಿತನೇ ಕನಸಿನಲ್ಲಿ ದೆವ್ವವಾಗಿ ಕಾಡಿದ! ಭಯ ತಾಳಲಾರದೆ ಪೊಲೀಸರಿಗೆ ಶರಣಾದ ಆರೋಪಿ

Published

on

ಮದ್ಯದ ಪಾರ್ಟಿ ವೇಳೆ ಸ್ನೇಹಿತನನ್ನೇ ಹೊಡೆದು ಕೊಂದಿದ್ದ ಯುವಕ; 15 ದಿನಗಳ ಕಾಲ ನಿದ್ರೆಯಲ್ಲೂ ಕಾಡಿದ ಮೃತ ಸ್ನೇಹಿತನ ನೆನಪು – ಕೊನೆಗೆ ಕೊಲೆ ರಹಸ್ಯ ಬಯಲು

ಮುಂಬೈ: ಮದ್ಯದ ಪಾರ್ಟಿ ವೇಳೆ ಉಂಟಾದ ಜಗಳದಲ್ಲಿ ಸ್ನೇಹಿತನನ್ನೇ ಹೊಡೆದು ಕೊಲೆಗೈದು, ಮೃತದೇಹವನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ ಯುವಕನೊಬ್ಬ, ಕೊನೆಗೆ ಮೃತ ಸ್ನೇಹಿತ ಕನಸಿನಲ್ಲಿ ಪದೇಪದೇ ಬಂದು ಕಾಡುತ್ತಿದ್ದಾನೆಂಬ ಭಯದಿಂದ ಪೊಲೀಸರ ಮುಂದೆ ಶರಣಾಗಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ನಿವಾಸಿ, ಹೌಸ್‌ಕೀಪಿಂಗ್ ಕೆಲಸಗಾರ ಪ್ರಭು ಕಾರ್ಕಡೆ (24) ಬಂಧಿತ ಆರೋಪಿ. ಎರಡು ವಾರಗಳ ಹಿಂದೆ ಡೊಂಬಿವ್ಲಿ ಸಮೀಪದ ಮೋಥಾ ಗ್ರಾಮದಲ್ಲಿ ಪಲ್ಲವ್ ಅಲಿಯಾಸ್ ವಿಶಾಲ್ ಮಧುಕರ್ ಕದಮ್ (43) ಎಂಬವರ ಮೃತದೇಹ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಫುಲ್ಲ ಜಾಧವ್ ತಿಳಿಸಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಪ್ರಭು ನೀಡಿದ ಹೇಳಿಕೆಯ ಪ್ರಕಾರ, ಸ್ನೇಹಿತ ಕದಮ್ ಅವರ ಮನೆಯಲ್ಲೇ ಇಬ್ಬರೂ ಮದ್ಯಪಾನ ಮಾಡುತ್ತಿದ್ದಾಗ ಜಗಳ ಉಂಟಾಗಿತ್ತು. ಈ ವೇಳೆ ಆಕ್ರೋಶಗೊಂಡ ಪ್ರಭು, ಕದಮ್ ಅವರನ್ನು ಹೊಡೆದು ಕೊಲೆ ಮಾಡಿದ್ದಾನೆ.ಆತ ಮೃತಪಟ್ಟಿದ್ದ. ಸ್ನೇಹಿತ ಮೃತಪಟ್ಟಿರುವುದನ್ನು ಕಂಡು ಗಾಬರಿಗೊಂಡ ಪ್ರಭು, ತಕ್ಷಣ ತನ್ನ ಬಾಡಿಗೆ ಮನೆಯ ಮಾಲೀಕ ಸಂದೇಶ್ ಮ್ಹಾತ್ರೆ ಎಂಬಾತನ ಸಹಾಯ ಕೋರಿದ್ದಾನೆ. ಅವರಿಬ್ಬರೂ ಸೇರಿ ವಿಶಾಲ್ ಅವರ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ, ರಾತ್ರೋರಾತ್ರಿ ಹತ್ತಿರದ ನಿರ್ಜನ ಪ್ರದೇಶದಲ್ಲಿ ಎಸೆದು ಸಾಕ್ಷ್ಯ ನಾಶಪಡಿಸಿದ್ದರು. ಬಳಿಕ ಪರಾರಿಯಾಗಿದ್ದಾನೆ.

ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಆರಾಮವಾಗಿದ್ದ ಪ್ರಭುವಿಗೆ ಕೆಲವೇ ದಿನಗಳಲ್ಲಿ ಭಯ ಶುರುವಾಗಿದೆ. ಮೃತಪಟ್ಟ ಸ್ನೇಹಿತ ವಿಶಾಲ್ ಪದೇಪದೇ ಕನಸಿನಲ್ಲಿ ಬಂದು ಕಾಡುತ್ತಿದ್ದ. ಸುಮಾರು 15 ದಿನಗಳ ಕಾಲ ಸರಿಯಾಗಿ ನಿದ್ರೆ ಮಾಡಲೂ ಸಾಧ್ಯವಾಗದೆ ತೀವ್ರ ಆತಂಕಕ್ಕೆ ಒಳಗಾಗಿದ್ದ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.

ಕನಸಿನ ಭಯ ಹಾಗೂ ಪಶ್ಚಾತ್ತಾಪದಿಂದ ಕಂಗೆಟ್ಟ ಪ್ರಭು, ಕೊನೆಗೆ ತಾನಾಗಿಯೇ ಪೊಲೀಸರ ಬಳಿಗೆ ತೆರಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾನೆ. ಸೋಮವಾರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ಮೃತದೇಹ ಎಸೆದಿದ್ದ ಸ್ಥಳವನ್ನೂ ಪೊಲೀಸರಿಗೆ ತೋರಿಸಿದ್ದಾನೆ.

ಈ ಸಂಬಂಧ ವಿಷ್ಣು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103(1)ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

arrest

ಮಂಗಳೂರು: MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ; 15.30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

Published

on

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್‌ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ನಂಬರ್ 103ರಲ್ಲಿ ವಾಸ್ತವ್ಯವಿದ್ದ ನಸೀಮಾ @ ನಸೀಮ (42) ಬಂಧಿತ ಆರೋಪಿ.

ಘಟನೆಯ ವಿವರ: ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ವೇಳೆ ಪಂಪ್‌ವೆಲ್ ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿತೆಯ ವಶದಲ್ಲಿದ್ದ ಸುಮಾರು 15,30,000 ರೂಪಾಯಿ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿತೆಯು ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಜಾಲದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!