Connect with us

arrest

ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಗಳು ಪೊಲೀಸ್ ವಶಕ್ಕೆ: ವಂಚನೆ ಹಾಗೂ ಕೊಲೆ ಪ್ರಕರಣದ ಆರೋಪಿಗಳು ಜೈಲಿಗೆ

Published

on

ಮಂಗಳೂರು / ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ.

1. ಹಣಕಾಸು ಸಂಸ್ಥೆಗೆ ವಂಚನೆ: 2012ರ ಪ್ರಕರಣದ ಆರೋಪಿ ಬಂಧನ

ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡವು ಬಂಧಿಸಿದೆ.

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ಮನೆ ನಿವಾಸಿ ಶ್ರೀನಿವಾಸ ಬಿ.ಆರ್ (48) ಬಂಧಿತ ಆರೋಪಿ.

ಪ್ರಕರಣದ ಹಿನ್ನೆಲೆ: ಆರೋಪಿ ಶ್ರೀನಿವಾಸ ಬಿ.ಆರ್. 2009ರ ಮೇ ತಿಂಗಳಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ ಟೆಲ್ಕಾನ್ ಇ ಎಕ್ಸ್ 70 ಮೆಶಿನ್ ವಾಹನ ಖರೀದಿಸಲು ₹10,00,000 ಸಾಲ ಪಡೆದಿದ್ದರು. ಆದರೆ, ಷರತ್ತಿನಂತೆ ಸಾಲದ ಕಂತುಗಳನ್ನು ಮರುಪಾವತಿಸದೇ, ವಾಹನವನ್ನೂ ತಪಾಸಣೆಗೆ ಹಾಜರುಪಡಿಸದೇ ಸಂಸ್ಥೆಗೆ ವಂಚಿಸಿದ್ದರು. ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 59/2012, ಕಲಂ 406, 420, 421 ಜೊತೆಗೆ 34 ಐಪಿಸಿ ಅಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಜಾರಿಗೊಳಿಸಿದ್ದ ಜಾಮೀನು ರಹಿತ ವಾರಂಟ್‌ಗೆ (ಸಿಸಿ ನಂಬ್ರ 526/2025) ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ದಿನಾಂಕ 02-09-2026 ರಂದು ಜಾಲ್ಸೂರು ಗ್ರಾಮದ ಬೈತಡ್ಕ ಜಂಕ್ಷನ್‌ನಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಆರೋಪಿ ಶ್ರೀನಿವಾಸ ವಿರುದ್ಧ ಮೂಡಬಿದ್ರೆ ಠಾಣೆಯ ವಂಚನೆ ಪ್ರಕರಣದ ಜೊತೆಗೆ, ಮಂಗಳೂರಿನ ಮಾನ್ಯ ಜೆಎಂಎಫ್‌ಸಿ 5ನೇ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣವೂ (ಸಿಸಿ ನಂಬ್ರ 1453/2024) ಬಾಕಿ ಉಳಿದಿದೆ.

2. ಪಶ್ಚಿಮ ಬಂಗಾಳದಲ್ಲಿ ಸುಳ್ಯ ಕೊಲೆ ಪ್ರಕರಣದ ಆರೋಪಿ ದಸ್ತಗಿರಿ

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದು, ಕಳೆದ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ನಾದಿಯಾ ಜಿಲ್ಲೆಯ ಶ್ರೀಮಾಯಾಪುರ ಅಂಚೆಯ ಬಾಮನ್ ಪುಕೂರ್ ಗ್ರಾಮದ ನಿವಾಸಿ ಇಮ್ರಾನ್ ಶೇಖ್ ಬಂಧಿತ ಆರೋಪಿ.

ಪ್ರಕರಣದ ಹಿನ್ನೆಲೆ: ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 138/2022, ಕಲಂ 302, 316 IPC ಅಡಿ ಕೊಲೆ ಪ್ರಕರಣ ದಾಖಲಾಗಿದ್ದು, ಮಾನ್ಯ ಪುತ್ತೂರು ನ್ಯಾಯಾಲಯದಲ್ಲಿ (SC NO-5024/2023) ವಿಚಾರಣೆ ಚಾಲ್ತಿಯಲ್ಲಿದೆ. ಉಚ್ಚ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಈತ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯಕ ಹಾಗೂ ಸುಳ್ಯ ಠಾಣಾ ಪಿಎಸ್‌ಐ ಉದಯ ರವಿ ಎಂ.ವೈ. ಅವರ ಮಾರ್ಗದರ್ಶನದಂತೆ, ಠಾಣಾ ಸಿಬ್ಬಂದಿಗಳಾದ ಹೆಚ್.ಸಿ.368 ರಾಜು ನಾಯ್ಕ ಡಿ, ಪಿ.ಸಿ.2283 ಶ್ರೀಶೈಲ ಎಂ.ಕೆ. ಮತ್ತು ಪಿ.ಸಿ.1020 ಸೋಮಯ್ಯ ಹಿರೇಮಠ ಅವರ ತಂಡವು ಪಶ್ಚಿಮ ಬಂಗಾಳದ 24 ನೋರ್ಥ್ ಪರಗಣ ಜಿಲ್ಲೆಯ ಹಾದಿಪುರ್ ಗ್ರಾಮದಲ್ಲಿ ಸೆಪ್ಟೆಂಬರ್ 01, 2026 ರಂದು ಆರೋಪಿಯನ್ನು ದಸ್ತಗಿರಿ ಮಾಡಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

Trending

Copyright © 2025 Deevatige

error: Content is protected !!