Connect with us

Bantawala

ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಬಂಟ್ವಾಳದ ಮೂವರಿಗೆ ಗರಿ; ವಿಟ್ಲ ಪಿಎಂಶ್ರೀ ಶಾಲೆಯ ದೈಹಿಕ ಶಿಕ್ಷಕ ವಿದ್ಯಾಶಂಕರ್ ಡಿ. ಗೆ ಒಲಿದ ಪ್ರಶಸ್ತಿ

Published

on

ಮಂಗಳೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೀಡಲಾಗುವ 2026-27ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಲಾ 7 ಶಿಕ್ಷಕರಂತೆ ಜಿಲ್ಲೆಯ ಒಟ್ಟು 21 ಸಾಧಕ ಶಿಕ್ಷಕರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದ್ದು, ಸೆಪ್ಟೆಂಬರ್ 5 ರಂದು (ಇಂದು) ಮಂಗಳೂರಿನ ಜಿಲ್ಲಾ ಪಂಚಾಯತ್ ಸಂಸದ ರಂಗಮಂದಿರ/ಜಿಲ್ಲಾ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಬಂಟ್ವಾಳ ತಾಲೂಕಿನ ಸಾಧಕ ಶಿಕ್ಷಕರು :

ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ಪಟ್ಟಿಯಲ್ಲಿ ಬಂಟ್ವಾಳ ತಾಲೂಕಿನ ಮೂವರು ಶಿಕ್ಷಕರು ಪ್ರಶಸ್ತಿಗೆ ಭಾಜನರಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.

1. ವಿದ್ಯಾಶಂಕರ್ ಡಿ. – ವಿಟ್ಲ ಪಿಎಂಶ್ರೀ ಸರಕಾರಿ ಶಾಲೆ (ದೈಹಿಕ ಶಿಕ್ಷಣ ಶಿಕ್ಷಕ)

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಪಿಎಂಶ್ರೀ (ಸರಕಾರಿ ಪ್ರೌಢ ಶಾಲೆ) ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿದ್ಯಾಶಂಕರ್ ಡಿ. ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದೀರ್ಘಾವಧಿ ಸೇವೆ & ಅನುಭವ: ವಿದ್ಯಾಶಂಕರ್ ಅವರು ಕಳೆದ 3 ದಶಕಗಳಿಂದ ಸರಕಾರಿ ಶಾಲೆಗಳಲ್ಲಿ ಅತ್ಯಂತ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಿನ್ಯಾ, ನಂದಾವರ, ಬೋಳಂತೂರು ಹಾಗೂ ಕೋಟೇಶ್ವರ ಶಾಲೆಯಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ವಿಟ್ಲ ಪಿಎಂಶ್ರೀ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕ್ರೀಡಾ ಸಾಧನೆ & ರಾಷ್ಟ್ರೀಯ ಗುರುತಿಸುವಿಕೆ: ರಾಷ್ಟ್ರೀಯ ಮಟ್ಟದ ಕಬಡ್ಡಿ ತೀರ್ಪುಗಾರರಾಗಿರುವ ಇವರು ಹಲವು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪಂದ್ಯಾಟಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸಿದ್ದಾರೆ. 14 ವರ್ಷ ವಯೋಮಿತಿಯ RJHL ಸಂಸ್ಥೆ ಆಯೋಜಿಸಿದ್ದ ಬಾಲಕಿಯರ ರಾಷ್ಟ್ರಮಟ್ಟದ ಫೈನಲ್ ಕಬಡ್ಡಿ ಪಂದ್ಯಾಟದಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರದ್ದಾಗಿದೆ.

ಕ್ರೀಡಾಪಟುಗಳ ಮಾರ್ಗದರ್ಶಿ: ಇವರ ಗರಡಿಯಲ್ಲಿ ತರಬೇತಿ ಪಡೆದ ನೂರಾರು ವಿದ್ಯಾರ್ಥಿಗಳು ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯು ಇವರ ಕ್ರೀಡಾಸೇವೆ ಹಾಗೂ ಶೈಕ್ಷಣಿಕ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರಕಟಿಸಿದೆ.

2. ವಿಜಯಲಕ್ಷ್ಮಿ ಕಟೀಲು – ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆ

ಪ್ರೌಢಶಾಲಾ ವಿಭಾಗದಿಂದ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ವಿಜಯಲಕ್ಷ್ಮಿ ಅವರು ಆಯ್ಕೆಯಾಗಿದ್ದಾರೆ.ಎಂ.ಎ.ಎಂ. ಎಡ್.‌ ಪದವೀಧರರಾಗಿರುವ ಇವರು ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ಪ್ರಸಿದ್ಧ ಲೇಖಕಿಯೂ ಆಗಿರುವ ಇವರು ತುಳು ಎಂ.ಎ. ಪದವಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 3ನೇ ರಾಂಕ್ ಪಡೆದಿದ್ದಾರೆ. ‘ ಸತ್ಯ ಸಂಶೋಧನಾ ಕೇಂದ್ರ’ದಿಂದ ‘ಸಾವಿತ್ರಿ ಬಾಯಿ ಫುಲೆ’ ಪ್ರಶಸ್ತಿ ಹಾಗೂ ತುಳು ಸಾಹಿತ್ಯ ಸೇವೆಗಾಗಿ ‘ತುಳುನಾಡ ಸಿರಿ’ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

3. ದಾಮೋದರ – ಸೇರ್ಕಳ ಕಿರಿಯ ಪ್ರಾಥಮಿಕ ಶಾಲೆ

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ಸೇರ್ಕಳ ಕೆ.ಪ್ರಾ. ಶಾಲೆಯ ಸಹಶಿಕ್ಷಕ ದಾಮೋದರ ಅವರು ಆಯ್ಕೆಯಾಗಿದ್ದಾರೆ. ಇವರು ಸುಮಾರು 32 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಇತರೆ ತಾಲೂಕುಗಳ ಪ್ರಶಸ್ತಿ ವಿಜೇತರ ಪಟ್ಟಿ:

1. ಕಿರಿಯ ಪ್ರಾಥಮಿಕ ಶಾಲಾ ವಿಭಾಗ:

  • ದಾಮೋದರ (ಸೇರ್ಕಳ ಶಾಲೆ, ಬಂಟ್ವಾಳ)
  • ಚಿತ್ರಪ್ರಭಾ (ಮುಂಡ್ರುಪಾಡಿ ಶಾಲೆ, ಬೆಳ್ತಂಗಡಿ)
  • ಉಮಾಲಕ್ಷ್ಮಿ (ಸ್ಯಾಂಡ್‌ಪೀಟ್ ಶಾಲೆ, ಮಂಗಳೂರು ಉತ್ತರ)
  • ಪ್ಲೇವಿ ಜೆಸಿಂತ ಮಿರಾಂದ (ಬದ್ರಿಯಾನಗರ ಶಾಲೆ, ಮಂಗಳೂರು ದಕ್ಷಿಣ)
  • ಶ್ರೀವಾಣಿ (ಪೆಂಜಾರು ಶಾಲೆ, ಮೂಡುಬಿದಿರೆ)
  • ಮಾಲತಿ (ಹೊಸ್ತೋಟ ಶಾಲೆ, ಪುತ್ತೂರು)
  • ಯಶೋಧರ (ಪಾಂಡಿಗದ್ದೆ ಶಾಲೆ, ಸುಳ್ಯ)

2. ಹಿರಿಯ ಪ್ರಾಥಮಿಕ ಶಾಲಾ ವಿಭಾಗ:

  • ವಿದ್ಯಾಶಂಕರ್ ಡಿ. (ಪಿಎಂಶ್ರೀ ಶಾಲೆ ವಿಟ್ಲ, ಬಂಟ್ವಾಳ)
  • ಕೃಷ್ಣಪ್ಪ ಪೂಜಾರಿ (ಅಂಡೆತಡ್ಕ ಶಾಲೆ, ಬೆಳ್ತಂಗಡಿ)
  • ಇಂದಿರಾ ಎಸ್. (ಕಾಟಿಪಳ್ಳ ಶಾಲೆ, ಮಂಗಳೂರು ಉತ್ತರ)
  • ಹರೀಶ್ ಕುಮಾರ್ ಬಿ.ಎಂ. (ಉಚ್ಚಿಲಗುಡ್ಡೆ ಶಾಲೆ, ಮಂಗಳೂರು ದಕ್ಷಿಣ)
  • ಭುವನೇಶ್ವರಿ ಕೆ. (ಸಾಮೆತ್ತಡ್ಕ ಶಾಲೆ, ಪುತ್ತೂರು)

3. ಪ್ರೌಢಶಾಲಾ ವಿಭಾಗ:

  • ವಿಜಯಲಕ್ಷ್ಮಿ (ಮಂಚಿ ಕೊಳ್ನಾಡು ಶಾಲೆ, ಬಂಟ್ವಾಳ)
  • ರವೀಂದ್ರ ಕೆ. (ವೇಣೂರು ಪ್ರೌಢಶಾಲೆ, ಬೆಳ್ತಂಗಡಿ)
  • ಪ್ರವೀಣ್ ಕುಟಿನ್ಹೋ (ಸಂತ ಅಲೋಶಿಯಸ್ ಶಾಲೆ, ಮಂಗಳೂರು ಉತ್ತರ)
  • ಕಿಶೋರ್ (ಮುಚ್ಚೂರು ಪ್ರೌಢಶಾಲೆ, ಮಂಗಳೂರು ದಕ್ಷಿಣ)
  • ಜಾನ್ ರೊನಾಲ್ಡ್ ಡಿಸೋಜ (ಮೂಡುಮಾರ್ನಾಡು ಶಾಲೆ, ಮೂಡುಬಿದಿರೆ)
  • ಥಾಮಸ್ ಎಂ.ಐ. (ಸಂತ ಜಾರ್ಜ್ ಶಾಲೆ ನೆಲ್ಯಾಡಿ, ಪುತ್ತೂರು)
  • ಕಿಶೋರ್ ಕುಮಾರ್ (ಸರಕಾರಿ ಪ್ರೌಢಶಾಲೆ, ಸುಳ್ಯ)

ಜಿಲ್ಲೆಯಾದ್ಯಂತ ಆಯ್ಕೆಯಾದ ಎಲ್ಲಾ ಉತ್ತಮ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.

Published

on

​ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ​ದೂರಿನ ಹಿನ್ನೆಲೆ:​ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.

​ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:​ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ​ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ​ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:​ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ​

ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:​ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ​ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.

Continue Reading

Bantawala

ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ: ವಾರದೊಳಗೆ ಇಬ್ಬರು ಮುಖ್ಯಶಿಕ್ಷಕಿಯರ ಸಾವು!

Published

on

ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಇದೀಗ ಮತ್ತೋರ್ವ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯದಲ್ಲಿ ತೀವ್ರ ಶೋಕ ಮೂಡಿಸಿದೆ.

ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಇದಕ್ಕೂ ಮೊದಲು ಅಕ್ಟೋಬರ್ 27ರಂದು ಕೆಲಿಂಜ ಶಾಲೆಯ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಈ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.

ವಾರದ ಅಂತರದಲ್ಲಿ ಇಬ್ಬರು ಶಾಲಾ ಮುಖ್ಯಸ್ಥೆಯರನ್ನು ಕಳೆದುಕೊಂಡಿರುವುದು ಶಿಕ್ಷಕ ಸಮುದಾಯದಲ್ಲಿ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.

Continue Reading

Bantawala

ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Published

on

ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!