BANGALORE
ಬೆಳ್ತಂಗಡಿಯ ಯುವ ವಕೀಲನ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲು: ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಬೆಳ್ತಂಗಡಿ/ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮದುವೆಯಾಗಲು ನಿರಾಕರಿಸಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲ್ಕೊಡಿ ನಿವಾಸಿ ಜಿಜೊ ಪೌಲ್ ಅವರ ಮಗ, ಪ್ರಸ್ತುತ ಬೆಳ್ತಂಗಡಿ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ವಕೀಲ ವೃತ್ತಿ ನಡೆಸುತ್ತಿರುವ ಜಿತಿನ್ ಜಿಜೋ (26) ಎಂಬಾತನೇ ಆರೋಪಿಯಾಗಿದ್ದಾನೆ.
ಪ್ರಕರಣದ ಹಿನ್ನೆಲೆ: ಬೆಂಗಳೂರು ನಿವಾಸಿಯಾಗಿರುವ 36 ವರ್ಷದ ಮಹಿಳೆಯು 2021ರಲ್ಲಿ ವಿವಾಹವಾಗಿದ್ದು, ಪತಿಯೊಂದಿಗಿನ ಭಿನ್ನಾಭಿಪ್ರಾಯದ ಕಾರಣ ನ್ಯಾಯಾಲಯದಲ್ಲಿ ಗೃಹಹಿಂಸೆ (Domestic Violence) ದಾವೆ ಹೂಡಿದ್ದರು. ಈ ವೇಳೆ, 2025ರ ಫೆಬ್ರವರಿಯಲ್ಲಿ ಯಲಹಂಕದಲ್ಲಿ ವಾಸವಿದ್ದ ವಕೀಲ ಜಿತಿನ್ ಜಿಜೊ ಪರಿಚಯವಾಗಿ, ಅವರನ್ನೇ ತಮ್ಮ ಪ್ರಕರಣದ ವಕೀಲರನ್ನಾಗಿ ನೇಮಿಸಿಕೊಂಡಿದ್ದರು.
ಪ್ರಕರಣದ ವಿಚಾರವಾಗಿ ಮಾತನಾಡುತ್ತಾ ಜಿತಿನ್ ಜಿಜೋ ಮಹಿಳೆಯನ್ನು ಪ್ರೀತಿಸುವುದಾಗಿ ತಿಳಿಸಿ, ಪತಿಯಿಂದ ಶೀಘ್ರವೇ ವಿಚ್ಛೇದನ ಕೊಡಿಸಿ ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಅಲ್ಲದೆ ಮಹಿಳೆ ವಾಸವಿದ್ದ ಕಟ್ಟಡದ 3ನೇ ಮಹಡಿಯಲ್ಲಿ ಬಾಡಿಗೆಗೆ ಮನೆ ಪಡೆದು, ಆಗಾಗ್ಗೆ ಅವರ ಮನೆಗೆ ಬಂದು ಆಕೆಯ ಇಷ್ಟವಿಲ್ಲದಿದ್ದರೂ ಲೈಂಗಿಕ ಸಂಪರ್ಕ ಬೆಳೆಸುತ್ತಿದ್ದ ಎನ್ನಲಾಗಿದೆ.

ಸಂಶಯ, ಸಾಕ್ಷ್ಯ ನಾಶ ಹಾಗೂ ಕೊಲೆಗೆ ಯತ್ನ: 2026ರಲ್ಲಿ ಮಹಿಳೆಗೆ ಪತಿಯಿಂದ ವಿಚ್ಛೇದನ ಲಭಿಸಿದ ಬಳಿಕ, ಜಿತಿನ್ ಆಕೆಯ ಮೇಲೆ ಅನುಮಾನ ಪಡಲು ಪ್ರಾರಂಭಿಸಿ ನಿಂದಿಸುತ್ತಿದ್ದ. ಸೆಪ್ಟೆಂಬರ್ 2 ರಂದು ಮಹಿಳೆಯ ಮನೆಗೆ ಬಂದ ಆರೋಪಿ, ಆಕೆಯ ಮೊಬೈಲ್ನಲ್ಲಿದ್ದ ‘Signal App’ ಸಂಭಾಷಣೆ ಹಾಗೂ ಮದುವೆಯ ಭರವಸೆ ನೀಡಿದ್ದ ಪ್ರಮುಖ ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ಅಳಿಸಿಹಾಕಿದ್ದ.
ಇದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಆರೋಪಿ, “ನನ್ನ ವಕೀಲ ವೃತ್ತಿಗೆ ಅವಮಾನವಾಗುತ್ತದೆ, ನಿನ್ನನ್ನು ಕೊಲ್ಲುತ್ತೇನೆ” ಎಂದು ಬೆದರಿಕೆಯೊಡ್ಡಿ, ಮೈಮೇಲಿದ್ದ ಬಟ್ಟೆ ಹರಿದು, ಮುಖ, ಎದೆ, ಬೆನ್ನಿನ ಭಾಗಗಳಿಗೆ ನಿರಂತರವಾಗಿ ಹೊಡೆದು, ದೇಹಕ್ಕೆ ಕಚ್ಚಿ ವಿಕೃತ ಮೆರೆದಿದ್ದಾನೆ. ಅಲ್ಲದೆ ಕೋಣೆಯಲ್ಲಿದ್ದ ಸ್ಟ್ಯಾಂಡ್ ಫ್ಯಾನ್ನಿಂದ ಹಲ್ಲೆ ನಡೆಸಿ, ವೇಲ್ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲ್ಲಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಹೇಗೋ ಆತನಿಂದ ತಪ್ಪಿಸಿಕೊಂಡು ಓಡಿಬಂದು ಸಮೀಪದ ಎನ್ಆರ್ಆರ್ (N.R.R) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಪೊಲೀಸ್ ದೂರು – ಆರೋಪಿ ನಾಪತ್ತೆ: ಘಟನೆಗೆ ಸಂಬಂಧಿಸಿ ಸಂತ್ರಸ್ತೆ ನೀಡಿದ ದೂರಿನನ್ವಯ ಸೆಪ್ಟೆಂಬರ್ 3 ರಂದು ಬಾಗಲಗುಂಟೆ ಪೊಲೀಸರು ಜಿತಿನ್ ಜಿಜೊ ವಿರುದ್ಧ BNS-2023 ರ ವಿವಿಧ ಸೆಕ್ಷನ್ಗಳಡಿ (u/s 69, 126(2), 115(2), 118(1), 74, 351(2), 352, 238) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಜಿತಿನ್ ಜಿಜೊ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗೆ ಜಾಲ ಬೀಸಿದ್ದಾರೆ
arrest
8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರಿನ ವಿದ್ಯಾರ್ಥಿನಿಯರು ಪತ್ತೆ: ಒಬ್ಬಳು ಗರ್ಭಿಣಿ !
ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರದಿಂದ ಕಳೆದ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ (CID) ಅಧಿಕಾರಿಗಳು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಪತ್ತೆಯಾದ ಯುವತಿಯರು.
ಪ್ರಕರಣದ ಹಿನ್ನೆಲೆ: ಕಳೆದ ಜನವರಿ 31 ರಂದು ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಇಬ್ಬರೂ ವಿದ್ಯಾರ್ಥಿನಿಯರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸ್ಥಳೀಯ ಪೊಲೀಸರ ಆರಂಭಿಕ ತನಿಖೆಯಲ್ಲಿ ಯಾವುದೇ ಮಹತ್ವದ ಸುಳಿವು ಸಿಗಲಿಲ್ಲ. ಈ ನಡುವೆ ಇಬ್ಬರೂ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾಗ ಅಲ್ಲಿನ ಮಹಿಳೆಯೊಬ್ಬರ ಜೊತೆ ಸೆಲ್ಫಿ ತೆಗೆಸಿಕೊಂಡಿದ್ದ ಫೋಟೋ ಲಭ್ಯವಾಗಿತ್ತು.
ತನಿಖೆ ವಿಳಂಬವಾದ ಹಿನ್ನೆಲೆಯಲ್ಲಿ ತನಿಷ್ಕಾ ಅವರ ಕುಟುಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಹೈಕೋರ್ಟ್, ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವರ್ಗಾಯಿಸಿ ಆದೇಶಿಸಿತ್ತು.
ಸುಳ್ಳು ಹೇಳಿ ಯುವಕನ ಜೊತೆ ತೆರಳಿದ್ದ ಯುವತಿಯರು: ಮನೆಯಲ್ಲಿದ್ದ ಕೌಟುಂಬಿಕ ಒತ್ತಡಕ್ಕೆ ಹೆದರಿ ಹೊರಬಂದಿದ್ದ ತನಿಷ್ಕಾ ಮತ್ತು ತೇಜಸ್ವಿನಿಗೆ ಮಲೆ ಮಹದೇಶ್ವರ ಬೆಟ್ಟದ ಆವರಣದಲ್ಲಿ ಕನಕಪುರ ಮೂಲದ ಯುವಕನೊಬ್ಬನ ಪರಿಚಯವಾಗಿತ್ತು. “ನಾವಿಬ್ಬರೂ ಅನಾಥ ಅಕ್ಕ-ತಂಗಿಯರು, ನಮಗೆ ಯಾರೂ ಇಲ್ಲ” ಎಂದು ಯುವತಿಯರು ಸುಳ್ಳು ಹೇಳಿದ್ದರು. ಇದನ್ನು ನಂಬಿದ ಯುವಕ ಇಬ್ಬರನ್ನೂ ತನ್ನ ಮನೆಗೆ ಕರೆದೊಯ್ದಿದ್ದನು. ಬಳಿಕ ಯುವಕ ತನಿಷ್ಕಾಳನ್ನು ಮದುವೆಯಾಗಿದ್ದು, ತೇಜಸ್ವಿನಿಯನ್ನು ತಂಗಿಯಂತೆ ತನ್ನ ಮನೆಯಲ್ಲೇ ಇರಿಸಿಕೊಂಡಿದ್ದನು.
ಸಿಐಡಿ ಬಲೆಗೆ ಬಿದ್ದಿದ್ದು ಹೇಗೆ? ಇತ್ತೀಚೆಗೆ ತನಿಷ್ಕಾ ಹೊಸ ಸಿಮ್ ಕಾರ್ಡ್ ಪಡೆಯಲು ತನ್ನ ಮೂಲ ಆಧಾರ್ ಕಾರ್ಡ್ ನೀಡಿದ್ದಳು. ಸಿಐಡಿ ಅಧಿಕಾರಿಗಳು ಈಗಾಗಲೇ ಈ ಆಧಾರ್ ಸಂಖ್ಯೆಯ ಮೇಲೆ ತೀವ್ರ ನಿಗಾ ವಹಿಸಿದ್ದರಿಂದ, ಟೆಲಿಕಾಂ ಸರ್ವಿಸ್ ಪ್ರೊವೈಡರ್ ಮೂಲಕ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ರವಾನೆಯಾಯಿತು. ಆಧಾರ್ ಮಾಹಿತಿ ಹಾಗೂ ನೆಟ್ವರ್ಕ್ ಲೊಕೇಶನ್ ಬೆನ್ನತ್ತಿದ ಸಿಐಡಿ ತಂಡ, ಇಬ್ಬರೂ ಯುವತಿಯರಿದ್ದ ಜಾಗವನ್ನು ಪತ್ತೆಹಚ್ಚಿ ಅವರನ್ನು ವಶಕ್ಕೆ ಪಡೆದಿದೆ.
ಪ್ರಸ್ತುತ ತನಿಷ್ಕಾ ಗರ್ಭಿಣಿಯಾಗಿದ್ದು, ಸಿಐಡಿ ಪೊಲೀಸರು ಇಬ್ಬರೂ ಯುವತಿಯರನ್ನು ಇಂದು ಹೈಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
