Connect with us

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

arrest

ಮಂಗಳೂರು: ಮುಲ್ಕಿ ಕಿಲ್ಪಾಡಿ ದೈವಸ್ಥಾನ ಕಳವು ಪ್ರಕರಣ ಭೇದಿಸಿದ ಪೊಲೀಸರು; ಅಂತರಜಿಲ್ಲಾ ಕಳ್ಳರ ಬಂಧನ, 17.20 ಲಕ್ಷ ಮೌಲ್ಯದ ಸ್ವತ್ತು ವಶ!

Published

on

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಮಂಗಳೂರು ನಗರ ಪೊಲೀಸರು, ನಾಲ್ವರು ಕುಖ್ಯಾತ ಅಂತರಜಿಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹17.20 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಯ ಹಿನ್ನೆಲೆ:

ಕಳೆದ ಸೆಪ್ಟೆಂಬರ್ 01, 2026ರ ಮಧ್ಯರಾತ್ರಿ ಮುಲ್ಕಿ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗ ಮುರಿದು, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ಚಿನ್ನಾಭರಣಗಳನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಪ್ಟೆಂಬರ್ 331(3), 331(4), 305ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಚುರುಕಾದ ತನಿಖೆ ಮತ್ತು ಬಂಧನ:

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ:

  • ಸೆಪ್ಟೆಂಬರ್ 06, 2026: ಆರೋಪಿಗಳಾದ ಜಾಹೀದ್ ಸಿನಾನ್ ಹಾಗೂ ಯಾಸೀನ್ ಎಂಬಾತನನ್ನು ಮುಲ್ಕಿ ಕಾರ್ನಾಡು ಎಂಬಲ್ಲಿ ಬಂಧಿಸಲಾಗಿದೆ.
  • ಸೆಪ್ಟೆಂಬರ್ 07, 2026: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಗಳಾದ ಮಹಮದ್ ಅಫ್ರಿದಿ ಹಾಗೂ ಎಸ್.ಕೆ. ಅಬ್ದುಲ್ ಜುಮ್ಮಾನ್ ಎಂಬಾತನನ್ನು ದಾವಣಗೆರೆಯಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡಲಾಗಿದೆ.

ಬಂಧಿತ ಆರೋಪಿಗಳ ವಿವರ:

  1. ಜಾಹೀದ್ ಸಿನಾನ್ (36 ವರ್ಷ): ಹೆಚ್.ಕೆ. ಮಂಜಿಲ್, ಎಸ್.ಎಸ್. ರಸ್ತೆ, ಹೆಜಮಾಡಿ ಗ್ರಾಮ, ಪಡುಬಿದ್ರೆ, ಉಡುಪಿ ಜಿಲ್ಲೆ.
  2. ಯಾಸೀನ್ (36 ವರ್ಷ): ಪಡ್ಡೆ ಅಂಗಡಿ ಹವಸ್, ನಿಟ್ಟೆ ಪೋಸ್ಟ್, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ.
  3. ಮಹಮದ್ ಅಫ್ರಿದಿ (26 ವರ್ಷ): ಗೋಕುಲನಗರ, ಛಲವಾದಿಕೇರಿ, ದಾವಣಗೆರೆ.
  4. ಎಸ್.ಕೆ. ಅಬ್ದುಲ್ ಜುಮ್ಮಾನ್ (26 ವರ್ಷ): ಜಾಲಿನಗರ, ದಾವಣಗೆರೆ.

ವಶಪಡಿಸಿಕೊಳ್ಳಲಾದ ಸ್ವತ್ತುಗಳು:

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಿದಾಗ, ಅವರಿಂದ ಅಪಾರ ಪ್ರಮಾಣದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ:

  • ಚಿನ್ನಾಭರಣ: ಸುಮಾರು 34.820 ಗ್ರಾಂ ತೂಕದ ಚಿನ್ನ.
  • ಬೆಳ್ಳಿ ವಸ್ತುಗಳು: ಸುಮಾರು 4 ಕೆ.ಜಿ. 521 ಗ್ರಾಂ ತೂಕದ ಬೆಳ್ಳಿ ಹಾಗೂ ದೈವದ ಮೂರ್ತಿಗಳು (ಅಂದಾಜು ಮೌಲ್ಯ ₹11,20,000/-).
  • ವಾಹನಗಳು: ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಕಾರು (ಅಂದಾಜು ಮೌಲ್ಯ ₹6,00,000/-).
  • ಒಟ್ಟು ವಶಪಡಿಸಿಕೊಂಡ ಸೊತ್ತಿನ ಮೌಲ್ಯ: ₹17,20,000/-.

ಪತ್ತೆಯಾದ ಇತರ ಪ್ರಕರಣಗಳು:

ಬಂಧಿತ ಆರೋಪಿಗಳ ವಿಚಾರಣೆ ವೇಳೆ ಕೇವಲ ಮುಲ್ಕಿ ಮಾತ್ರವಲ್ಲದೆ, ಇತರೆಡೆಗಳಲ್ಲಿ ನಡೆದಿದ್ದ ದೇವಸ್ಥಾನ ಕಳವು ಪ್ರಕರಣಗಳು ಕೂಡ ಬೆಳಕಿಗೆ ಬಂದಿವೆ:

  • ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನದ ಕಳವು ಪ್ರಕರಣ.
  • ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದ ಕಳವು ಪ್ರಕರಣ.

ಅಲ್ಲದೆ, ಈ ಪ್ರಕರಣದ ಪ್ರಮುಖ ಆರೋಪಿ ಜಾಹೀದ್ ಸಿನಾನ್ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಅಪರಾಧ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಕಾರ್ಯಾಚರಣೆಯ ಯಶಸ್ಸು:

ಮಂಗಳೂರು ಉತ್ತರ ಉಪ ವಿಭಾಗದ ಎ.ಸಿ.ಪಿ ಶ್ರೀ ಶ್ರೀಕಾಂತ್ ಕೆ. ಅವರ ನೇತೃತ್ವದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಪ್ರಮೋದ್ ಕುಮಾರ್, ಮುಲ್ಕಿ ಠಾಣಾ ಪಿ.ಎಸ್.ಐ ರಾಘವೇಂದ್ರ ನಾಯಕ್ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿಯವರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Continue Reading

Trending

Copyright © 2025 Deevatige

error: Content is protected !!