Bantawala
ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ಪೊಲೀಸ್ ನೋಟಿಸ್!
ಬಂಟ್ವಾಳ (Bantwal) ಅಬ್ದುಲ್ ರೆಹಮಾನ್ (Abdul Rehman) ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರ್ಎಸ್ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ (Kalladka Prabhakar Bhat) ನೋಟಿಸ್ ನೀಡಲಾಗಿದೆ. ಪೊಲೀಸ್ ಇಲಾಖೆಯಿಂದ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಕ್ರೋಶ ಹೊರಹಾಕಿದೆ.ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ನೋಟಿಸ್ ನೀಡಿರುವುದು ಕರಾವಳಿ ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣದ ಹಿನ್ನೆಲೆ ಮತ್ತು ಹತ್ಯೆಯ ವಿವರ
2025ರ ಮೇ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ (ಕುರಿಯಾಲ ಗ್ರಾಮ) ಬಳಿ ಅಬ್ದುಲ್ ರೆಹಮಾನ್ ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪಿಕ್ಅಪ್ ಟ್ರಕ್ನಿಂದ ಮರಳು ಇಳಿಸುತ್ತಿದ್ದ ವೇಳೆ ಈ ಮಾರಣಾಂತಿಕ ದಾಳಿ ನಡೆದಿತ್ತು. ಈ ಘಟನೆಯಲ್ಲಿ ಮೃತ ಅಬ್ದುಲ್ ರೆಹಮಾನ್ ಜತೆಗೆ ಕಲಂದರ್ ಶಫಿ ಎಂಬುವವರ ಮೇೆಯೂ ಗಂಭೀರ ಹಲ್ಲೆ ನಡೆಸಲಾಗಿತ್ತು. ಸುಹಾಸ್ ಶೆಟ್ಟಿ ಹತ್ಯೆಯಾದ ಕೆಲವೇ ದಿನಗಳಲ್ಲಿ ಈ ಕೃತ್ಯ ನಡೆದಿದ್ದರಿಂದ, ಇದು ಪ್ರತಿಕಾರದ ಕೊಲೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು ಮತ್ತು ರಾಜ್ಯಾದ್ಯಂತ ದೊಡ್ಡ ಸಂಚಲನ ಮೂಡಿಸಿತ್ತು.
ಈ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು, ಈ ಪ್ರಕರಣದ ತನಿಖೆಯಲ್ಲಿ ಕೆಲವೊಂದು ಸತ್ಯಾಂಶಗಳು ಮತ್ತು ಸನ್ನಿವೇಶಗಳನ್ನು ಖಚಿತ ಪಡಿಸಿಕೊಳ್ಳುವ ಸಲುವಾಗಿ ನಿಮ್ಮನ್ನು ವಿಚಾರಣೆ ಮಾಡುವ ಅಗತ್ಯ ಕಂಡುಬರುತ್ತದೆ . ಎಂದು ನೋಟಿಸಿನಲ್ಲಿ ತಿಳಿಸಿದ್ದು, ತನಿಖೆಗೆ ಸಹಕರಿಸುವಂತೆ ಈ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ
ಆರ್ಎಸ್ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ (Kalladka Prabhakar Bhat) ನೋಟಿಸ್ ನೀಡಲಾಗಿರುವ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಕಿಡಿಕಾರಿರುವ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಅಬ್ದುಲ್ ರೆಹಮಾನ್ ಹತ್ಯೆಗೂ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜಕೀಯ ಪ್ರೇರಿತವಾಗಿ ಹಿಂದೂ ಸಂಘಟನೆಗಳನ್ನು ಹಾಗೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಎಸ್ಪಿ ಕಚೇರಿ ಚಲೋ ಹೋರಾಟದ ಎಚ್ಚರಿಕೆ
ಈ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಅನಗತ್ಯವಾಗಿ ಸಿಲುಕಿಸುವ ಪ್ರಯತ್ನ ನಡೆದರೆ ಹಿಂದೂ ಸಂಘಟನೆಗಳು ಸುಮ್ಮನಿರುವುದಿಲ್ಲ ಎಂದು ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. ಎಸ್ಪಿಯವರು ಈ ಕೇಸ್ನಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ರನ್ನ ಸಿಲುಕಿಸಿದ್ರೆ, ಹಿಂದೂ ಸಂಘಟನೆಗಳು ರಸ್ತೆಗೆ ಇಳಿಯುತ್ತದೆ. ನಿಮ್ಮ ಎಸ್ಪಿ ಕಚೇರಿ ಚಲೋ ಎಂಬ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ. ಅವರಿಗೂ ಈ ಪ್ರಕರಣಕ್ಕೂ ಏನು ಸಂಬಂಧವಿಲ್ಲ, ನ್ಯಾಯಾಲಯ ಕೋಕಾ ಕೇಸ್ನಲ್ಲಿ ಜಾಮೀನು ಕೊಟ್ಟಿದೆ. ಆದರೂ ಪೊಲೀಸ್ ಇಲಾಖೆ ಗೂಂಡಾ ಕಾಯ್ದೆ ಹಾಕುತ್ತಾರೆ. ಇವರಿಗೆ ಒತ್ತಡ ಹಾಕುತ್ತಿರುವವರು ಯಾರು? ಕರಾವಳಿಯ ಹಿಂದೂ ಸಂಘಟನೆಯ ಕಾರ್ಯಕರ್ತರು ರಸ್ತೆಗೆ ಇಳಿಯುತ್ತೇವೆ. ಕೊಲೆಯಾಗಿ ಒಂದು ವರ್ಷ ಕಳೆದಿದೆ, ಎರಡೆರಡು ಚಾರ್ಜ್ ಶೀಟ್ ಆಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗು ಈ ಕೊಲೆಗೆ ಏನು ಸಂಬಂಧ ಇದೆ. ಈ ಹಿಂದೆ ಇದೆ ರೀತಿ ವಿಚಾರಣೆ ಎಂದು ಹೇಳಿ 9 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದು ನೂರಕ್ಕೆ ನೂರು ಹಿಂದೂ ಸಂಘಟನೆಗಳನ್ನ ಟಾರ್ಗೆಟ್ ಮಾಡುವ ಹುನ್ನಾರ ಎಂದು ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ.
award
ಬಾಗಲಕೋಟೆ ರಾಜ್ಯ ಮಟ್ಟದ ಜೂಡೋ ಪಂದ್ಯಾಟ: ವಿಟ್ಲದ ಜೆ.ಸಿ. ಪ್ರೌಢಶಾಲೆಯ ಧನ್ವಿಗೆ ತೃತೀಯ ಸ್ಥಾನ
ವಿಟ್ಲ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ವಿಟ್ಲದ ಜೆ.ಸಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಧನ್ವಿ ಸಣ್ಣಗುತ್ತು -63 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆಗೈದಿದ್ದಾರೆ.
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ದೈಹಿಕ ಶಿಕ್ಷಕರ ಸಂಘದ ಸಹಯೋಗದಲ್ಲಿ ಅಕ್ಟೋಬರ್ 9ರಂದು ನಡೆದ 14 ಮತ್ತು 17 ವರ್ಷದೊಳಗಿನ ವಯೋಮಿತಿಯ ಈ ರಾಜ್ಯಮಟ್ಟದ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಚಾಲನೆ ನೀಡಿದ್ದರು. ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ.
ಸಾಧನೆಯ ಹಿನ್ನೆಲೆ ಹಾಗೂ ಮಾರ್ಗದರ್ಶನ: ಈ ಪ್ರತಿಭಾವಂತ ಕ್ರೀಡಾಪಟು ಧನ್ವಿ ಅವರು ನೋಟರಿ ವಕೀಲರು ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಮತ್ತು ಶ್ವೇತಾ ದಂಪತಿಯ ಪುತ್ರಿಯಾಗಿದ್ದಾರೆ.

ಧನ್ವಿಯವರ ಈ ಯಶಸ್ಸಿನ ಹಿಂದೆ ಮಾಧವ ಅಳಿಕೆ ಅವರ ಮಾರ್ಗದರ್ಶನವಿದ್ದು, ರೋಹಿತ್ ಎಸ್.ಎನ್., ನಿಖಿಲ್ ಕೆ.ಟಿ., ತನುಶ್ರೀ ಡಿ. ಬಂಗೇರ, ಭವಿಶ್ ಸಿಂಹಮೂಲೆ ಹಾಗೂ ಸುಧೀನ್ ಆಚಾರ್ ಅವರು ಅತ್ಯುತ್ತಮ ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿನಿಯ ಈ ಕ್ರೀಡಾ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಊರ ನಾಗರಿಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 700 ಕ್ಕೂ ಹೆಚ್ಚು ಕ್ರೀಡಾಪಟುಗಳು (350 ಬಾಲಕರು ಮತ್ತು 350 ಬಾಲಕಿಯರು) ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ
arrest
17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ದಸ್ತಗಿರಿ
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಮೂಡಬಿದ್ರೆ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ತಲಪಾಡಿ ನಿವಾಸಿ ಹನೀಫ್ @ ಕೊಕ್ಕಡ ಹನೀಫ್ (57) ಬಂಧಿತ ಆರೋಪಿ.
ಪ್ರಕರಣದ ಹಿನ್ನೆಲೆ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ: 163/2009 ರಂತೆ ಕೆ.ಇ. ಕಾಯ್ದೆ (KE Act) ಕಲಂ: 11, 13, 32, 33, 34, 38(a), 43 ರ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಕಳೆದ 17 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಅಲ್ಲದೆ, ಈತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 143/2023 ಕಲಂ 143, 147, 448, 427, 436, 307, 149 ಐಪಿಸಿ (IPC) ಪ್ರಕರಣದಲ್ಲೂ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್ಐ ಬಶೀರ್, ಹೆಡ್ ಕಾನ್ಸ್ಸ್ಟೇಬಲ್ಗಳಾದ ಜಗದೀಶ್, ಸಂತೋಷ್ ಹಾಗೂ ಪಿಸಿ ಗವಿ ಸಿದ್ದಪ್ಪ ಅವರ ತಂಡವು ದಿನಾಂಕ 09/10/2026 ರಂದು ಮೂಡಬಿದ್ರೆಯ ಶಿರ್ತಾಡಿ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
accident
ಪುಂಜಾಲಕಟ್ಟೆ ಬಳಿ ಸಿಡಿಲು ಬಡಿದು ಮನೆ ಸಂಪೂರ್ಣ ಧ್ವಂಸ; ಮಹಿಳೆಗೆ ಗಂಭೀರ ಗಾಯ
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಸೋಮವಾರ (ಅ.5) ಬೆಳಿಗ್ಗೆ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಇಲ್ಲಿನ ನಿವಾಸಿ ನಾಗೇಶ್ ಕುಲಾಲ್ ಅವರ ಹಂಚಿನ ಮನೆಗೆ ಇಂದು ಬೆಳಿಗ್ಗೆ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ತೀವ್ರತೆಗೆ ಇಡೀ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಂತೆ ಹಾನಿಗೊಂಡಿದ್ದು, ಹೆಂಚಿನ ಭಾವಣೆ ಸಹಿತ ಮನೆಯೊಳಗಿನ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಅಡುಗೆ ಮನೆಯಲ್ಲಿದ್ದಾಗ ದುರ್ಘಟನೆ: ಘಟನೆ ಸಂಭವಿಸಿದ ಸಮಯದಲ್ಲಿ ಕುಶಾಲಾಕ್ಷಿ ಅವರು ಅಡುಗೆ ಮನೆಯಲ್ಲಿ ಕೆಲಸದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿದಿದೆ. ಆ ಸಮಯದಲ್ಲಿ ನಾಗೇಶ್ ಕುಲಾಲ್ ಅವರು ಸಮೀಪದಲ್ಲಿದ್ದ ತಂದೆಯ ಮನೆಗೆ ತೆರಳಿದ್ದರು. ಮನೆಯಲ್ಲಿ ಪತಿ-ಪತ್ನಿ ಇಬ್ಬರೇ ವಾಸವಿದ್ದು, ಅಕ್ಕಪಕ್ಕದಲ್ಲಿ ಬೇರೆ ಮನೆಗಳು ಇಲ್ಲದಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಆಸ್ಪತ್ರೆಗೆ ದಾಖಲು: ಸಿಡಿಲು ಬಡಿತದಿಂದ ಗಂಭೀರವಾಗಿ ಗಾಯಗೊಂಡ ಕುಶಾಲಾಕ್ಷಿ ಅವರನ್ನು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರಿದಿದೆ.
ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala3 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident5 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
