Connect with us

DEATH

ಕೆದಿಲ: ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶ; ಜನಪ್ರಿಯ ಲೈನ್‌ಮ್ಯಾನ್ ರವಿ ಅಕಾಲಿಕ ನಿಧನ

Published

on

ಪುತ್ತೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಒಬ್ಬರು ಮೃತಪಟ್ಟ ದಾರುಣ ಘಟನೆ ಪುತ್ತೂರು ತಾಲೂಕಿನ ಕೆದಿಲ ಶಾಲಾ ಬಳಿ ಸಂಭವಿಸಿದೆ.

ಕೆದಿಲ, ಮಿತ್ತೂರು ಗಡಿಯಾರ ನಿವಾಸಿ, ಲೈನ್‌ಮ್ಯಾನ್ ರವಿ ಅವರು ಮೃತ ದುರ್ದೈವಿ. ಮಧ್ಯಾಹ್ನ ಸುಮಾರು 3:30 ರ ಸುಮಾರಿಗೆ ಕೆದಿಲ ಶಾಲಾ ಬಳಿ ಅವರು ಎಂದಿನಂತೆ ತಮ್ಮ ಕರ್ತವ್ಯದಲ್ಲಿದ್ದ ವೇಳೆ ಈ ಆಘಾತಕಾರಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದ ವ್ಯಕ್ತಿ: ಮೃತ ರವಿ ಅವರು ಸಾರ್ವಜನಿಕರೊಂದಿಗೆ ಅತ್ಯಂತ ಅನ್ಯೋನ್ಯತೆಯಿಂದ ಇದ್ದರು. ಕರೆ ಬಂದ ತಕ್ಷಣವೇ ಯಾವುದೇ ಸಮಯದ ಹಂಗಿಲ್ಲದೆ ಸ್ಥಳಕ್ಕೆ ಧಾವಿಸಿ ಬಂದು ಸಾರ್ವಜನಿಕರ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತಿದ್ದರು. ತಮ್ಮ ಸ್ನೇಹಪರ ಹಾಗೂ ಸೇವಾ ಮನೋಭಾವದಿಂದ ಅವರು ಗ್ರಾಮಸ್ಥರಿಗೆ ಅಚ್ಚುಮೆಚ್ಚಿನವರಾಗಿದ್ದರು.

ಗ್ರಾಮದಲ್ಲಿ ತೀವ್ರ ಶೋಕ: ರವಿ ಅವರ ಅಕಾಲಿಕ ಹಾಗೂ ಆಘಾತಕಾರಿ ನಿಧನದಿಂದಾಗಿ ಕೆದಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೀವ್ರ ಶೋಕ ಮಡುಗಟ್ಟಿದೆ. ಓರ್ವ ಸಮರ್ಪಿತ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಗ್ರಾಮಸ್ಥರಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಅಚಾನಕ್ ಅಗಲಿಕೆಗೆ ಸ್ಥಳೀಯರು, ಸ್ನೇಹಿತರು ಹಾಗೂ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದು, ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ನಾನಾ ಪಾಟೇಕರ್ ಸಾವಿನಲ್ಲಿ ಬಿಗ್ ಟ್ವಿಸ್ಟ್: ಅಸಹಜ ಸಾವು (UD) ಪ್ರಕರಣ ದಾಖಲು, ತನಿಖೆ ಆರಂಭ!

Published

on

ಭಾರತೀಯ ಚಿತ್ರರಂಗದ ಪ್ರತಿಭಾವಂತ ಹಿರಿಯ ನಟ, ಮೂರು ಬಾರಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಾನಾ ಪಾಟೇಕರ್ (75) ಅವರ ಹಠಾತ್ ನಿಧನವು ದೇಶಾದ್ಯಂತ ಇರುವ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟುಮಾಡಿದೆ. ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿಯಲಾಗಿತ್ತು. ಆದರೆ, ಅವರ ಸಾವಿನ ಬಳಿಕ ಗೋವಾ ಪೊಲೀಸರು ನೀಡಿರುವ ಒಂದು ಹೆಜ್ಜೆಯು ಈ ಸಾವಿನ ಸುತ್ತ ಹೊಸ ಅನುಮಾನಗಳಿಗೆ ಹಾಗೂ ಚರ್ಚೆಗಳಿಗೆ ಕಾರಣವಾಗಿದೆ.

ಪೊಲೀಸರಿಂದ ಯುಡಿ (UD) ಕೇಸ್ ದಾಖಲು:

ನಾನಾ ಪಾಟೇಕರ್ ಅವರ ಸಾವು ಸಹಜವಾದುದಲ್ಲ ಎಂಬ ಶಂಕೆಯ ಹಿನ್ನೆಲೆಯಲ್ಲಿ ಪಣಜಿ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 194ರ ಅಡಿಯಲ್ಲಿ ಅಸ್ವಾಭಾವಿಕ ಸಾವು (Unnatural Death – UD) ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ PSI ನಿತಿನ್ ನಾಯಕ್ ನೇತೃತ್ವದಲ್ಲಿ ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರಕರಣ ದಾಖಲಿಸಿದ್ದು ಯಾಕೆ? (ಅಸಲಿ ಕಾರಣ):

ಇದು ಯಾವುದೇ ಕ್ರಿಮಿನಲ್ ಹಿನ್ನೆಲೆಯ ಪ್ರಕರಣವಲ್ಲ ಬದಲಿಗೆ ಇದೊಂದು ತನಿಖಾ ಪ್ರಕ್ರಿಯೆಯ ಕಾನೂನು ಕ್ರಮವಷ್ಟೇ ಎಂದು ಮೂಲಗಳು ತಿಳಿಸಿವೆ. ಹಿರಿಯ ನಟ ನಾನಾ ಪಾಟೇಕರ್ ಅವರು ತಮ್ಮ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅಥವಾ ಆಸ್ಪತ್ರೆಗೆ ತಲುಪಿದಾಗ ಮೃತಪಟ್ಟಿದ್ದಾರೆ.

ಯಾವುದೇ ವ್ಯಕ್ತಿ ಮನೆಯಲ್ಲಿ ಒಂಟಿಯಾಗಿರುವಾಗ ಅಥವಾ ಅನಿರೀಕ್ಷಿತವಾಗಿ ಸಾವನ್ನಪ್ಪಿದಾಗ, ಭವಿಷ್ಯದಲ್ಲಿ ಯಾವುದೇ ಕಾನೂನು ತೊಡಕುಗಳು ಅಥವಾ ಅನುಮಾನಗಳು ಬಾರದಂತೆ ಎಚ್ಚರಿಕೆ ವಹಿಸಲು ಪೊಲೀಸರು ಇಂತಹ ಸಂದರ್ಭಗಳಲ್ಲಿ ಮೆಡಿಕೋ-ಲೀಗಲ್ ಕೇಸ್ (MLC) ಅಥವಾ ಯುಡಿ (UD) ಪ್ರಕರಣವನ್ನು ದಾಖಲಿಸುವುದು ವಾಡಿಕೆ. ಮಣಿಪಾಲ್ ಆಸ್ಪತ್ರೆಯಿಂದ ಸಲ್ಲಿಕೆಯಾದ ವರದಿಯ ಆಧಾರದ ಮೇರೆಗೆ ಗೋವಾ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರ ಸ್ಪಷ್ಟನೆ:

ಗೋವಾದ ಬಂಬೋಲಿಮ್‌ನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ನಾನಾ ಪಾಟೇಕರ್ ಅವರನ್ನು ಕರೆತಂದಾಗ ನಡೆದ ಘಟನೆಗಳ ಬಗ್ಗೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ತೀವ್ರವಾದ ಹೃದಯಾಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ತರಲಾಗಿತ್ತು. ವೈದ್ಯಕೀಯ ತಂಡವು ಸುಮಾರು 45 ನಿಮಿಷಗಳಿಗೂ ಹೆಚ್ಚು ಕಾಲ ಸತತವಾಗಿ ಸಿಪಿಆರ್ (CPR) ನೀಡಿ ಜೀವ ಉಳಿಸಲು ಹರಸಾಹಸ ಪಟ್ಟಿತಾದರೂ, ದುರದೃಷ್ಟವಶಾತ್ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ (GMC) ರವಾನಿಸಲಾಗಿದ್ದು, ಅಂತಿಮ ವಿಧಿವಿಧಾನಗಳನ್ನು ಪುಣೆಯ ದೋಂಜೆ ಗ್ರಾಮದಲ್ಲಿರುವ ಅವರ ತೋಟದ ಮನೆಯಲ್ಲಿ ಪೂರ್ಣಗೊಳಿಸಲಾಗಿದೆ.

Continue Reading

Belthangady

ಧರ್ಮಸ್ಥಳ: ಅಡಿಕೆ ಮರದಿಂದ ದೊಂಟಿ ತಾಗಿ ವಿದ್ಯುತ್ ಸ್ಪರ್ಶ: ಚಿಕಿತ್ಸೆ ಫಲಕಾರಿಯಾಗದೆ ನಝೀರ್ ನಿಧನ

Published

on

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ದೊಂಟಿ (ಕೋಲು) ತಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್ (38) ಮೃತ ವ್ಯಕ್ತಿ. ಅವರು ಅಡಿಕೆ ಮರದ ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಡಿಕೆ ಕೊಯ್ಯಲು ಬಳಸುತ್ತಿದ್ದ ದೊಂಟಿ ಆಕಸ್ಮಿಕವಾಗಿ ತಗುಲಿದ ಪರಿಣಾಮ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

accident

ಕಾಸರಗೋಡು: ಸಿಡಿಲು ಬಡಿದು ಯುವಕ ಸಾವು – ದಾರುಣ ಘಟನೆ

Published

on

ಕಾಸರಗೋಡು: ಆದುರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಪಾಂಡಿ ಬಳವಂತಡ್ಕ ಎಂಬಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಕುಂಟಾರು ಉಯಿತಡ್ಕ ಮಾಯಿಲಾಂಕೋಟೆ ನಿವಾಸಿ ಅರಬಿ ಹಾಗೂ ನಫೀಸಾ ದಂಪತಿಯ ಪುತ್ರ ಮುಹಮ್ಮದ್ ನೌಫಲ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಅವರು ಪಾಂಡಿ ಬಳವಂತಡ್ಕದಲ್ಲಿರುವ ತನ್ನ ಪತ್ನಿಯ ಮನೆಗೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸಿಡಿಲು ಬಡಿದ ತಕ್ಷಣವೇ ಅವರನ್ನು ಮುಳ್ಳೇರಿಯಾ ಸಹಕಾರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ನೌಫಲ್ ಅವರು ತಿರುವನಂತಪುರದ ಜ್ಯೂಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆದುರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!