accident
ಪುಂಜಾಲಕಟ್ಟೆ ಬಳಿ ಸಿಡಿಲು ಬಡಿದು ಮನೆ ಸಂಪೂರ್ಣ ಧ್ವಂಸ; ಮಹಿಳೆಗೆ ಗಂಭೀರ ಗಾಯ
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಸೋಮವಾರ (ಅ.5) ಬೆಳಿಗ್ಗೆ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಇಲ್ಲಿನ ನಿವಾಸಿ ನಾಗೇಶ್ ಕುಲಾಲ್ ಅವರ ಹಂಚಿನ ಮನೆಗೆ ಇಂದು ಬೆಳಿಗ್ಗೆ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ತೀವ್ರತೆಗೆ ಇಡೀ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಂತೆ ಹಾನಿಗೊಂಡಿದ್ದು, ಹೆಂಚಿನ ಭಾವಣೆ ಸಹಿತ ಮನೆಯೊಳಗಿನ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಅಡುಗೆ ಮನೆಯಲ್ಲಿದ್ದಾಗ ದುರ್ಘಟನೆ: ಘಟನೆ ಸಂಭವಿಸಿದ ಸಮಯದಲ್ಲಿ ಕುಶಾಲಾಕ್ಷಿ ಅವರು ಅಡುಗೆ ಮನೆಯಲ್ಲಿ ಕೆಲಸದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿದಿದೆ. ಆ ಸಮಯದಲ್ಲಿ ನಾಗೇಶ್ ಕುಲಾಲ್ ಅವರು ಸಮೀಪದಲ್ಲಿದ್ದ ತಂದೆಯ ಮನೆಗೆ ತೆರಳಿದ್ದರು. ಮನೆಯಲ್ಲಿ ಪತಿ-ಪತ್ನಿ ಇಬ್ಬರೇ ವಾಸವಿದ್ದು, ಅಕ್ಕಪಕ್ಕದಲ್ಲಿ ಬೇರೆ ಮನೆಗಳು ಇಲ್ಲದಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಆಸ್ಪತ್ರೆಗೆ ದಾಖಲು: ಸಿಡಿಲು ಬಡಿತದಿಂದ ಗಂಭೀರವಾಗಿ ಗಾಯಗೊಂಡ ಕುಶಾಲಾಕ್ಷಿ ಅವರನ್ನು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರಿದಿದೆ.
ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
accident
ಕಾಸರಗೋಡು: ಸಿಡಿಲು ಬಡಿದು ಯುವಕ ಸಾವು – ದಾರುಣ ಘಟನೆ
ಕಾಸರಗೋಡು: ಆದುರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಪಾಂಡಿ ಬಳವಂತಡ್ಕ ಎಂಬಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಕುಂಟಾರು ಉಯಿತಡ್ಕ ಮಾಯಿಲಾಂಕೋಟೆ ನಿವಾಸಿ ಅರಬಿ ಹಾಗೂ ನಫೀಸಾ ದಂಪತಿಯ ಪುತ್ರ ಮುಹಮ್ಮದ್ ನೌಫಲ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಅವರು ಪಾಂಡಿ ಬಳವಂತಡ್ಕದಲ್ಲಿರುವ ತನ್ನ ಪತ್ನಿಯ ಮನೆಗೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸಿಡಿಲು ಬಡಿದ ತಕ್ಷಣವೇ ಅವರನ್ನು ಮುಳ್ಳೇರಿಯಾ ಸಹಕಾರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ನೌಫಲ್ ಅವರು ತಿರುವನಂತಪುರದ ಜ್ಯೂಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆದುರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
accident
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು
ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.
ಕರಿಕ್ಕಳ – ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಎದುರಿನಿಂದ ಹೋಗುತ್ತಿದ್ದ ಕಾರು ಸಡನ್ನಾಗಿ ಬ್ರೇಕ್ ಹಾಕಿದ ಪರಿಣಾಮ ಶಾಸಕರ ಕಾರು ಅದಕ್ಕೆ ಡಿಕ್ಕಿ ಹೊಡೆದಿದೆಯೆನ್ನಲಾಗಿದೆ.
ಅಪಘಾತದ ವಿವರ:
ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕಾರು ಜಖಂಗೊಂಡಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
accident
ಬಣಕಲ್ ಅಪಘಾತ: ಮಂತ್ರಾಲಯ ಯಾತ್ರೆಗೆ ತೆರಳಿದ್ದ ಶಿಶಿಲದ ಯುವಕ ದೀಪೇಶ್ ಸಾವು – ಪೊಲೀಸರ ವಿರುದ್ಧ ಎಫ್ಐಆರ್ ತಿರುಚಿದ ಗಂಭೀರ ಆರೋಪ
ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ವಾಹನ ಡಿಕ್ಕಿ ಹೊಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಮೃತಪಟ್ಟಿದ್ದಾರೆ.
ಅಪಘಾತಕ್ಕೆ ಕಾರಣನಾದ ಕಾರಿನ ಚಾಲಕ ಮದ್ಯಪಾನ ಮಾಡಿದ್ದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರೂ, ಎಫ್ಐಆರ್ನಲ್ಲಿ ಅದನ್ನು ದಾಖಲಿಸದೆ ಪ್ರಕರಣವನ್ನು ದಾರಿ ತಪ್ಪಿಸಲು ಯತ್ನಿಸಲಾಗಿದೆ ಎಂದು ಗಾಯಾಳುಗಳು ಗಂಭೀರ ಆರೋಪ ಮಾಡಿದ್ದಾರೆ.

ಘಟನೆಯ ವಿವರ: ಸೆಪ್ಟೆಂಬರ್ 29ರಂದು ಶಿಶಿಲದ ರಘು (32), ಶಿಶಿಲ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಧೀನ್, ಸತೀಶ, ದೀಪೇಶ್, ದೀಪಕ್ ಅಲಿಯಾಸ್ ತಿರುಮಲೇಶ್ವರ ಹಾಗೂ ಶೋಭಿತ್ ಅಲಿಯಾಸ್ ನಾಗರಾಜ್ ಅವರು ಮಂತ್ರಾಲಯಕ್ಕೆ ಯಾತ್ರೆಗೆ ಹೊರಟಿದ್ದರು. ಅಂದು ನಸುಕಿನ ಸುಮಾರು 3:40ರ ಸುಮಾರಿಗೆ ಬಣಕಲ್ ಸಮೀಪದ ಸಬ್ಬೇನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮೂಡಿಗೆರೆ ಕಡೆಯಿಂದ ಅತಿವೇಗವಾಗಿ ಬಂದ ಕಾರು ಇವರ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಗಾಯಾಳುಗಳು ಮತ್ತು ಚಿಕಿತ್ಸೆ: ಅಪಘಾತದ ತೀವ್ರತೆಗೆ ಕಾರಿನ ಹಿಂಬದಿಯಲ್ಲಿ ಕುಳಿತಿದ್ದ ದೀಪೇಶ್ ಅವರ ಕುತ್ತಿಗೆಗೆ ಹಾಗೂ ಸುಧೀನ್ ಅವರ ಎಡಭುಜಕ್ಕೆ ಗಂಭೀರ ಪೆಟ್ಟಾಗಿತ್ತು. ಜತೆಗೆ ರಘು, ಸತೀಶ, ನಾಗರಾಜ್ ಹಾಗೂ ದೀಪಕ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳಾದ ದೀಪೇಶ್ ಹಾಗೂ ಸುಧೀನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರ ಸಲಹೆಯಂತೆ ದೀಪೇಶ್ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಂತಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೀಪೇಶ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯೆಸಿರೆಳೆದಿದ್ದಾರೆ.

ಪೊಲೀಸರ ವಿರುದ್ಧ ಆಕ್ರೋಶ: ಅಪಘಾತ ಎಸಗಿದ ಎದುರಿನ ಕಾರಿನ ಚಾಲಕ ಮದ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಬಗ್ಗೆ ಸ್ಥಳದಲ್ಲಿದ್ದವರು ಪೊಲೀಸರಿಗೆ ಸ್ಪಷ್ಟ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಈ ಪ್ರಮುಖ ವಿಚಾರವನ್ನು ಎಫ್ಐಆರ್ನಲ್ಲಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟು, ಪ್ರಕರಣವನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರು ಹಾಗೂ ಗಾಯಾಳುಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala3 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident5 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
