Connect with us

Dakshina Kannada

ಕರ್ನಾಟಕದಿಂದ ಕೇರಳಕ್ಕೆ 400Kv ವಿದ್ಯುತ್ ಸರಬರಾಜು..ಬಡ ಕೃಷಿಕರ ತೀವ್ರ ವಿರೋಧದ ನಡುವೆಯೂ ಕೇಂದ್ರದ ಹಸಿರು ನಿಶಾನೆ.ರೈತರ ಹೋರಾಟಕ್ಕೆ ಎಳ್ಳುನೀರು ಎರೆದ ಕೇಂದ್ರ ಸರ್ಕಾರ..

Published

on

ಕೇರಳ ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಅಭಾವವನ್ನು ನೀಗಿಸುವುದಕ್ಕಾಗಿ ಕರ್ನಾಟಕದಿಂದ ಕೇರಳಕ್ಕೆ ವಿದ್ಯುತ್ ಆಮದು ಮಾಡಿಕೊಳ್ಳುವ ಬೃಹತ್ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದೆ.
ಉಡುಪಿ-ಕಾಸರಗೋಡು ನಡುವಣ 400kv ವಿದ್ಯುತ್ ಮಾರ್ಗಕ್ಕೆ ಬಡ ಕೃಷಿಕರ ಭಾರೀ ವಿರೋಧದ ನಡುವೆಯೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಹಸಿರು ನಿಶಾನೆ ತೋರಿಸುವ ಮೂಲಕ ಕರಾವಳಿಯ ಪರಿಸರ ಪ್ರೇಮಿಗಳು/ಬಡ ಕೃಷಿಕರ ಹೋರಾಟಕ್ಕೆ ಎಳ್ಳು ನೀರು ಬಿಟ್ಟಂತಾಗಿದೆ.

ಜನ ವಿರೋಧಿ ಯೋಜನೆಗಾಗಿ ಡೀಮ್ಡ್ ಅರಣ್ಯವನ್ನು ಅರಣ್ಯೇತರ ಜಮೀನು ಎಂದು ಕಾನೂನುಬಾಹಿರವಾಗಿ ವರ್ಗೀಕರಿಸಲಾಗಿದೆ. 282.8 ಹೆಕ್ಟೇರ್ ಡೀಮ್ಡ್ ಅರಣ್ಯದಲ್ಲಿ 1.77ಲಕ್ಷ ಮರಗಳಿವೆ. ಸದ್ರಿ ಜಮೀನು ದಟ್ಟವಾಗಿರುವ ನೈಸರ್ಗಿಕ ಸಸ್ಯ ವರ್ಗಗಳನ್ನು ಹಾಗೂ ಅರಣ್ಯದ ಗುಣಲಕ್ಷಣವನ್ನು ಹೊಂದಿದೆ. ಸದ್ರಿ ಯೋಜನೆಯು ಕಾರ್ಯಗತವಾದಲ್ಲಿ ಅಂತರ್ ರಾಜ್ಯ ವಿದ್ಯುತ್ ಪ್ರಸರಣ ವ್ಯವಸ್ಥೆಯ ಮೂಲಕ 1000/-ಮೆಗಾವಾಟ್ ಹೆಚ್ಚುವರಿ ವಿದ್ಯುತ್ ಸಾಗಿಸುವ ಸಾಮರ್ಥ್ಯವನ್ನು ಹೊಂದಲಿದೆ. ಈ ಯೋಜನೆಯಿಂದಾಗಿ ದಕ್ಷಿಣ ಭಾರತದಲ್ಲಿ ವಿದ್ಯುತ್ ಸರಬರಾಜು ಹಾಗೂ ಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಉಡುಪಿ-ಕಾಸರಗೋಡು ಟ್ರಾನ್ಸ್ ಮಿಷನ್ ಲಿಮಿಟೆಡ್ ತನ್ನ ವಾದವನ್ನು ಮಂಡಿಸಿತ್ತು. ಇದಕ್ಕಾಗಿ ಸದ್ರಿ ಪ್ರಸ್ತಾವಿತ ಯೋಜನೆಗೆ ತಡೆ ನೀಡಬೇಕೆಂದು ಅರ್ಜಿದಾರರು (NGT) ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಮೊರೆ ಹೋಗಿದ್ದರು.

ಉಡುಪಿ-ಕಾಸರಗೋಡು ಸಂಪರ್ಕದ ವಿದ್ಯುತ್‌ ಮಾರ್ಗವು ದಕ್ಷಿಣ ಭಾರತದಲ್ಲಿ ವಿದ್ಯುತ್‌ ಸರಬರಾಜು ಹಾಗೂ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಉಡುಪಿ–ಕಾಸರಗೋಡು ಟ್ರಾನ್ಸ್‌ಮಿಷನ್‌ ಲಿಮಿಟೆಡ್‌ ತನ್ನ ವಾದವನ್ನು ಮಂಡಿಸಿತ್ತು.

ಸದ್ರಿ ಯೋಜನೆಗೆ ಕೃಷಿಕರು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮರಗಳ ಮಾರಣಹೋಮ ಕಡಿಮೆ ಮಾಡಲು ಪರ್ಯಾಯ ಮಾರ್ಗ ಹುಡುಕುವಂತೆ ಕೇಂದ್ರ ಇಂಧನ ಸಚಿವಾಲಯ ನಿರ್ದೇಶನ ನೀಡಿತ್ತು.
ಇದಕ್ಕೆ ಎಚ್ಚೆತ್ತುಕೊಂಡ ಕಂಪನಿಯು ವಿದ್ಯುತ್ ಟವರ್(ಗೋಪುರಗಳು)ಗಳ ಎತ್ತರವನ್ನು ಹೆಚ್ಚಿಸುವ, ಡ್ರೋಣ್ ತಂತ್ರಜ್ಞಾನದ ಬಳಕೆ ಹಾಗೂ ಇನ್ನಿತರ ಉಪಕ್ರಮಗಳನ್ನು ಅಳವಡಿಸುವ ಮೂಲಕ 48,433 ಮರಗಳನ್ನು ನಾಶ ಮಾಡದೇ ಉಳಿಸಿಕೊಳ್ಳುತ್ತೇವೆಂದು ಕಂಪನಿಯು ಬರಹ ಮೂಲಕ ಪ್ರತಿಪಾದಿಸಿತ್ತು.

‘ಪ್ರಸ್ತಾವಿತ ಅರಣ್ಯ ಪ್ರದೇಶದಲ್ಲಿ 8,145 ಮರಗಳನ್ನು ಗುರುತಿಸಲಾಗಿತ್ತು. ಅರಣ್ಯ ಬಳಕೆಗೆ 2022ರಲ್ಲಿ ಮೊದಲ ಹಂತದ ಅನುಮೋದನೆ ನೀಡಲಾಗಿತ್ತು. ಗುರುತಿಸಿರುವ ಮರಗಳ ಪೈಕಿ ಶೇ 40ರಷ್ಟನ್ನು ಮಾತ್ರ ಕತ್ತರಿಸಬೇಕು ಎಂದು ಅರಣ್ಯ ಇಲಾಖೆ ಷರತ್ತು ವಿಧಿಸಿತ್ತು. ಪರಿಹಾರಾತ್ಮಕ ಅರಣ್ಯೀಕರಣ ಹಾಗೂ ಅರಣ್ಯದ ಒಟ್ಟು ಮೌಲ್ಯಕ್ಕೆ (ಎನ್‌ಪಿವಿ) ನಿಗದಿಪಡಿಸಿರುವ ಮೊತ್ತವನ್ನು ಕಂಪನಿ ಈ ಹಿಂದೆಯೇ ಪಾವತಿಸಿದೆ. ಈ ಯೋಜನೆಗೆ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ ಷರತ್ತುಬದ್ಧ ಅನುಮೋದನೆ ನೀಡಿದೆ’ ಎಂದು ಕೇಂದ್ರ ಅರಣ್ಯ ಸಚಿವಾಲಯವು ಎನ್‌ಜಿಟಿಗೆ ಪ್ರಮಾಣಪತ್ರ ಸಲ್ಲಿಸಿತ್ತು.

Continue Reading
Advertisement

award

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕೆ. ಮತ್ತು ಎಸಿಪಿ ನಜ್ಮಾ ಫಾರೂಕಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕದ ಗೌರವ

Published

on

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ ಅವರಿಗೂ ಚಿನ್ನದ ಪದಕ ಪ್ರಕಟಗೊಂಡಿದೆ.


ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ ಪ್ರಕಟಗೊಂಡಿದ್ದು, ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ಘೋಷಿಸಿದೆ.
ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸ್ಪೆಷಲ್ ಎಆರ್‌ಎಸ್‌ಐ, 7ನೇ ಪಡೆ ಕೆಎಸ್‌ಆರ್‌ಪಿಯ ಕೆ.ಎಂ. ಶಿವಶೇಖರ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಡಿಎಆರ್ ವಿಭಾಗದ ಎಎಸ್‌ಐ ತಿಲಕ್ ರಾಜ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಲ್ಲದೆ, ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಇರ್ಷಾದ್ ಪಿ. , ಮಂಗಳೂರು ನಗರದ ಊರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಲಲಿತಾಲಕ್ಷ್ಮಿ , ಬೆಳ್ತಂಗಡಿ ಗ್ರಾಮಾಂತರ ಠಾಣೆಯ ವಿಜಯ ಕುಮಾರ್ ರೈ , ಕಂಕನಾಡಿ ನಗರ ಠಾಣೆಯ ಜಯಾನಂದ ಎನ್., ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗಳಾದ ಮಣಿ ಎಂ.ಎನ್. ಹಾಗೂ ಸತೀಶ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪದಕ ಪ್ರದಾನ ಸಮಾರಂಭವು ಏಪ್ರಿಲ್ 02, 2026 ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಪದಕ ವಿಜೇತ ಅಧಿಕಾರಿಗಳು ಮಾರ್ಚ್ 29 ರಿಂದಲೇ ಬೆಂಗಳೂರಿನ ಕೆಎಸ್‌ಆರ್‌ಪಿ 3ನೇ ಪಡೆಯಲ್ಲಿ ನಡೆಯುವ ಪೂರ್ವಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ತಿಳಿಸಿದೆ.

Continue Reading

accident

ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

Published

on

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್‌ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್‌ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.


2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading

cyber crime

AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

Published

on

ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

Trending

Copyright © 2025 Deevatige