crime
ಸುಪ್ರೀಂ ಕೋರ್ಟ್ನಿಂದ ಶಿಕ್ಷೆ ಅಮಾನತಿಗೆ ತಡೆ; ಸೆಂಗಾರ್‌ಗೆ ಜೈಲುವಾಸ ಮುಂದುವರಿಕೆ
ದೆಹಲಿ : ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯ ಅಮಾನತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೆಂಗಾರ್ ಅವರಿಗೆ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ರಜಾ ಪೀಠವು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸೆಂಗಾರ್‌ಗೆ ನೋಟಿಸ್ ಜಾರಿ ಮಾಡಿದೆ.

ದೆಹಲಿ ಹೈಕೋರ್ಟ್ ಈ ಹಿಂದೆ ಸೆಂಗಾರ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಆತನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಇದರರ್ಥ ಸೆಂಗಾರ್ ಸದ್ಯಕ್ಕೆ ಜೈಲಿನಲ್ಲೇ ಇರಬೇಕಾಗುತ್ತದೆ. 2017ರಲ್ಲಿ ಉನ್ನಾವ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸೆಂಗಾರ್ ತಪ್ಪಿತಸ್ಥನೆಂದು ಸಾಬೀತಾಗಿತ್ತು. 2019ರಲ್ಲಿ ದೆಹಲಿಯ ವಿಶೇಷ ನ್ಯಾಯಾಲಯವು ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಮತ್ತು 25 ಲಕ್ಷ ರೂಪಾಯಿ ದಂಡ ವಿಧಿಸಿತ್ತು. ತನ್ನ ಮಗಳ ಮದುವೆಯ ಕಾರಣ ನೀಡಿ ಸೆಂಗಾರ್ ಜಾಮೀನು ಕೋರಿದ್ದಾಗ, ಹೈಕೋರ್ಟ್ ಮಾನವೀಯ ನೆಲೆಯಲ್ಲಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು.

ಸೆಂಗಾರ್ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಆತ ಹೊರಬಂದರೆ ತನಗೆ ಮತ್ತು ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಸಂತ್ರಸ್ತೆ ಸುಪ್ರೀಂ ಕೋರ್ಟ್ನಲ್ಲಿ ವಾದಿಸಿದ್ದರು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ದೆಹಲಿ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ತುರ್ತು ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಒಂದು ಪ್ರಮುಖ ಪ್ರಶ್ನೆಯನ್ನು ಎತ್ತಿದೆ. ಹೈಕೋರ್ಟ್ ತನ್ನ ಆದೇಶದಲ್ಲಿ “ಶಾಸಕರು ಸಾರ್ವಜನಿಕ ಸೇವಕರಲ್ಲ ಎಂಬ ತರ್ಕವನ್ನು ಬಳಸಿರುವ ಬಗ್ಗೆ ನ್ಯಾಯಾಲಯ ಅಚ್ಚರಿ ವ್ಯಕ್ತಪಡಿಸಿದೆ. “ಒಂದು ವೇಳೆ ಈ ತರ್ಕ ಒಪ್ಪುವುದಾದರೆ, ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾರ್ವಜನಿಕ ಸೇವಕನಾಗುತ್ತಾನೆ ಆದರೆ ಒಬ್ಬ ಎಂಪಿ ಅಥವಾ ಎಂಎಲ್‌ಎ ಆಗುವುದಿಲ್ಲವೇ?” ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಸೆಂಗಾರ್ ಈಗಾಗಲೆ ಸಂತ್ರಸ್ತೆಯ ತಂದೆಯ ಕಸ್ಟಡಿಯಲ್ ಡೆತ್ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆ ಅನುಭವಿಸುತ್ತಿರುವುದರಿಂದ, ಆತನನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ನ್ಯಾಯಾಲಯ ಹೇಳಿದೆ ಸಂತ್ರಸ್ತೆಯ ಸುರಕ್ಷತೆಯ ದೃಷ್ಟಿಯಿಂದ ಆಕೆಗೆ ಸುಪ್ರೀಂ ಕೋರ್ಟ್ನಿಂದ ಉಚಿತ ಕಾನೂನು ನೆರವು ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಸೆಂಗಾರ್‌ಗೆ ಈ ಕುರಿತು ನೋಟಿಸ್ ಜಾರಿ ಮಾಡಲಾಗಿದ್ದು, ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಲಾಗಿದೆ.ಈ ಪ್ರಕರಣದ ಮುಂದಿನ ವಿಚಾರಣೆಯು ಜನವರಿ 2026ರ ಕೊನೆಯ ವಾರದಲ್ಲಿ ನಡೆಯಲಿದೆ. ಅಲ್ಲಿಯವರೆಗೆ ಸೆಂಗಾರ್ ಜೈಲಿನಲ್ಲೇ ಇರಬೇಕಾಗುತ್ತದೆ.ಸಂತ್ರಸ್ತೆಯು ಸುಪ್ರೀಂ ಕೋರ್ಟ್ನ ಈ ಆದೇಶವನ್ನು ಸ್ವಾಗತಿಸಿದ್ದು, ನ್ಯಾಯದೇವತೆಯ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.
ಒಬ್ಬ ‘ಸಾರ್ವಜನಿಕ ಸೇವಕ’ (ಪೊಲೀಸ್, ಸರ್ಕಾರಿ ಅಧಿಕಾರಿ ಅಥವಾ ಜನಪ್ರತಿನಿಧಿ) ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅತ್ಯಾಚಾರ ಎಸಗಿದರೆ, ಅದನ್ನು ‘ಅಗ್ರಾ ವೇಟೆಡ್ ಪೆನೆಟ್ರೇಟಿವ್ ಸೆಕ್ಷುವಲ್ ಅಸಾಲ್ಟ್’ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ.

ದೆಹಲಿ ಹೈಕೋರ್ಟ್, “ಶಾಸಕರು (ಒಐಂ) ತಾಂತ್ರಿಕವಾಗಿ ಸಾರ್ವಜನಿಕ ಸೇವಕರಲ್ಲ” ಎಂಬ ಕಾರಣ ನೀಡಿ, ಸೆಂಗಾರ್ ವಿರುದ್ಧದ ಈ ಕಠಿಣ ಸೆಕ್ಷನ್ ಅನ್ವಯಿಸುವುದಿಲ್ಲ ಎಂದು ಹೇಳುತ್ತಾ POCSO ಕಾಯ್ದೆಯಡಿ ಅತ್ಯಾಚಾರಕ್ಕೆ ಕನಿಷ್ಠ 7 ರಿಂದ 10 ವರ್ಷಗಳ ಶಿಕ್ಷೆ ಇರುತ್ತದೆ (ಅಪರಾಧ ನಡೆದ ಸಮಯದ ಕಾನೂನಿನಂತೆ). ಸೆಂಗಾರ್ ಈಗಾಗಲೇ ಸುಮಾರು 7 ವರ್ಷ 5 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವುದರಿಂದ ಹೈಕೋರ್ಟ್ ಆತನಿಗೆ ಜಾಮೀನು ನೀಡಿತ್ತು. ಎಂದು ಹೈಕೋರ್ಟ್ ವಾದಿಸಿತು.
ಸುಪ್ರೀಂ ಕೋರ್ಟ್ ಇದನ್ನು ತಳ್ಳಿಹಾಕುತ್ತಾ, “ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸಾರ್ವಜನಿಕ ಸೇವಕನಾಗುವಾಗ, ಒಬ್ಬ ಶಾಸಕ ಅಥವಾ ಸಂಸದ ಹೇಗೆ ಹೊರತಾಗುತ್ತಾರೆ?” ಎಂದು ಪ್ರಶ್ನಿಸಿದೆ. ಇದು ಕಾನೂನಿನ ವ್ಯಾಖ್ಯಾನದಲ್ಲಿ ದೊಡ್ಡ ತಪ್ಪು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಸಾರ್ವಜನಿಕ ಸೇವಕನಾಗಿದ್ದು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೆ, ಅದು ಜೀವಾವಧಿ ಶಿಕ್ಷೆಗೆ ಅರ್ಹವಾಗಿರುತ್ತದೆ. ಸೆಂಗಾರ್ ಒಬ್ಬ ಶಾಸಕನಾಗಿದ್ದುಕೊಂಡು ಈ ಕೃತ್ಯ ಎಸಗಿರುವುದರಿಂದ ಅವರಿಗೆ ಗರಿಷ್ಠ ಶಿಕ್ಷೆ ನೀಡಲಾಗಿತ್ತು.

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಅಪರಾಧ ನಡೆದಾಗ ಸೆಂಗಾರ್ ಒಬ್ಬ ಪ್ರಭಾವಿ ಶಾಸಕನಾಗಿದ್ದ. ಆತ ತನ್ನ ಅಧಿಕಾರ ಮತ್ತು ಸ್ಥಾನಮಾನದ ಮೂಲಕ ಸಂತ್ರಸ್ತೆಯ ಮೇಲೆ ಹತೋಟಿ ಸಾಧಿಸಿದ್ದರಿಂದ ಇದನ್ನು ಸಾಮಾನ್ಯ ಪ್ರಕರಣವೆಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ವಾದಿಸಿದರು.
ಸಿಬಿಐ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಪೀಠವನ್ನು ಒತ್ತಾಯಿಸಿದರು. ಈ ವಿಷಯವನ್ನು ಪರಿಗಣಿಸುವ ಅಗತ್ಯವಿರುವುದರಿಂದ ಪರಿಶೀಲಿಸುವುದಾಗಿ ಪೀಠ ಹೇಳಿದೆ. ಡಿಸೆಂಬರ್ 23 ರ ಹೈಕೋರ್ಟ್ ಆದೇಶದ ನಂತರ ಸೆಂಗಾರ್ ಅವರನ್ನು ಕಸ್ಟಡಿಯಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಅದು ಹೇಳಿದೆ.
ಸುಪ್ರೀಂ ಕೋರ್ಟ್ ಸಂತ್ರಸ್ತೆಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಸಂತ್ರಸ್ತೆಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯಿಂದ ಉಚಿತ ಕಾನೂನು ನೆರವು ನೀಡುವಂತೆ ಸೂಚಿಸಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯೂ ಸ್ವತಂತ್ರವಾಗಿ ಮೇಲ್ಮನವಿ ಸಲ್ಲಿಸಲು ಹಕ್ಕು ಹೊಂದಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಸುಪ್ರೀಂ ಕೋರ್ಟ್ ಸೆಂಗಾರ್‌ಗೆ 4 ವಾರಗಳ ಕಾಲಾವಕಾಶ ನೀಡಿದ್ದು, ತನ್ನ ಸಮರ್ಥನೆಯನ್ನು ಸಲ್ಲಿಸುವಂತೆ ಸೂಚಿಸಿದೆ. ಅಲ್ಲಿಯವರೆಗೆ ದೆಹಲಿ ಹೈಕೋರ್ಟ್ನ ಜಾಮೀನು ಆದೇಶವು ಕಾರ್ಯರೂಪಕ್ಕೆ ಬರುವುದಿಲ್ಲ.
ಆದಾಗ್ಯೂ, ಉಚ್ಚಾಟಿತ ಬಿಜೆಪಿ ನಾಯಕ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದು, ಆ ಪ್ರಕರಣದಲ್ಲಿ ಜಾಮೀನು ಪಡೆಯದ ಕಾರಣ ಅವರು ಜೈಲಿನಲ್ಲೇ ಇರುತ್ತಾರೆ.
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
crime
ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರಣೆ:
ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.
ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.
ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).
ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
