Bantawala
ಬ್ರಹ್ಮರಕೂಟ್ಲು ಟೋಲ್ ಪ್ಲಾಜಾಗೆ ಹಾನಿ ಸಿಬ್ಬಂದಿ ಮೇಲೆ ಹಲ್ಲೆ..ಲಾರಿ ಚಾಲಕ, ಕ್ಲೀನರ್ ಬಂಧನ.
ಟೋಲ್ ಹಣ ಕೇಳಿದ್ದಕ್ಕೆ ಗೇಟಿಗೆ ಹಾನಿ ಮಾಡಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಚಾಲಕ ಮತ್ತು ಕ್ಲೀನರ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಭರತ್(23) ಮತ್ತು ತೇಜಸ್ (26)ಬಂಧಿತ ಆರೋಪಿಗಳು.


ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭ ಕೆಎ 18 ಸಿ 3048ಸಂಖ್ಯೆಯ ಲಾರಿಯೊಂದು ವಿರುದ್ಧ ದಿಕ್ಕಿನಿಂದ ಬಂದಾಗ ಸ್ಥಳದಲ್ಲಿದ್ದ ಸಿಬ್ಬಂದಿಗಳು ಟೋಲ್ ನೀಡುವಂತೆ ಕೇಳಿದ್ದರು. ಹಣ ನೀಡಲು ನಿರಾಕರಿಸಿದ ಚಾಲಕ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಗೇಟಿಗೆ ಹಾನಿ ಮಾಡಿದ್ದಾರೆ. ತಡೆಯಲು ಬಂದ ಸಿಬ್ಬಂದಿಗಳಾದ ಅಂಕಿತ್ ಮತ್ತು ರೋಹಿತ್ ಎಂಬಿಬ್ಬರಿಗೆ ಅವಾಚ್ಯವಾಗಿ ನಿಂದಿಸಿದ ಚಾಲಕ ಮತ್ತು ಕ್ಲೀನರ್ ಮನಬಂದಂತೆ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ವಿವರಿಸಿದ್ದಾರೆ. ಅದೇ ಸಂದರ್ಭ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದ ಆರೋಪಿಗಳು ಟೋಲ್ ಬೂತ್ ಒಳಗಡೆ ಪ್ರವೇಶಿಸಿ ಇಬ್ಬರು ಟೋಲ್ ಸಿಬ್ಬಂದಿಗಳ ಮೇಲೆ ಪುನಃ ಹಲ್ಲೆ ನಡೆಸಿದ್ದಾರೆಂದು ಗಾಯಾಳುಗಳು ವಿವರಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ ಕ್ರ : 154/2925 ಕಲಂ: 329(3), 351(2), 352, 115(2), 118(1), 324(2), r/w 3(5) BNS-2923ರಂತೆ ಮತ್ತು ಕಲಂ: 184(ಈ) ಐಎಂವಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
Bantawala
ಲಯನ್ಸ್ ಕ್ಲಬ್ ವಿಟ್ಲ ಸಿಟಿ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರ
ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ ಸಂದೇಶ್ ಶೆಟ್ಟಿ ಬಿಕ್ನಾಜೆಯವರ ನೇತೃತ್ವದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರವು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ಆರ್.ಕೆ. ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಶಿಲ್ಪಶ್ರೀ ಯುವಕ ಮಂಡಲದ ಸ್ಥಾಪಕ ಸದಸ್ಯ ಹಾಗೂ ಹಿರಿಯ ಕೃಷಿಕ ಶ್ರೀ ನಾರಾಯಣ ಭಟ್ ಪಳ್ಳಿಗದ್ದೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದ ಸಂಯೋಜಕರಾದ ಶ್ರೀ ಬಿ.ಸಂದೇಶ್ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ..
ಶಿಬಿರದ ಮಹತ್ವದ ಬಗ್ಗೆ ಹಾಗೂ ವಿಟ್ಲ ಪಡ್ನೂರು ಗ್ರಾಮದಲ್ಲಿ ಅನೇಕ ಆರೋಗ್ಯ ಶಿಬಿರವನ್ನು ನಡೆಸಿ ಸುಮಾರು 800 ಜನರಿಗೆ ಕನ್ನಡಕ ವಿತರಣೆ ಮಾಡಿದ್ದನ್ನು ಹಾಗೂ ಈ ಕಾರ್ಯಕ್ರಮಗಳಿಗೆ ಸಹಕರಿಸಿದ ಎಲ್ಲರನ್ನು ನೆನಪಿಸಿದರು.

ಬಳಿಕ ಬಾಲಕೃಷ್ಣ ಶೆಟ್ಟಿಯವರು ಮಾತನಾಡುತ್ತಾ..ಇಂತಹ ಆರೋಗ್ಯ ಶಿಬಿರಗಳು ಈಗಿನ ಪರಿಸ್ಥಿತಿಯಲ್ಲಿ ನಾಗರಿಕರಿಗೆ ಬಹಳಷ್ಟು ಅತೀ ಅವಶ್ಯಕವಾಗಿದೆ. ಇಂತಹ ಆರೋಗ್ಯ ಶಿಬಿರಗಳು ನಮ್ಮ ದೇಹದ ಆರೋಗ್ಯವನ್ನು ಮುಂಜಾಗ್ರತೆಯಾಗಿ ಪರೀಕ್ಷಿಸಿಕೊಳ್ಳುವ ಒಂದು ಸದವಕಾಶ ಎಂದು ಬಣ್ಣಿಸಿದರು. ಪ್ರಜ್ಞ ಸಲಹಾ ಕೇಂದ್ರದ ಪ್ರಾಂಶು ಪಾಲೆ ಶ್ರೀಮತಿ ವಿಜಯ ಶೆಟ್ಟಿ ಅವರು ಮಾತನಾಡುತ್ತಾ..ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರನ್ನೂ ಅಭಿನಂದಿಸಿದರು. ಮತ್ತೋರ್ವ ಅತಿಥಿ ಸ್ಪೀಡಿ ಮಲ್ಟಿ ಮೋಡ್ ನ ಅಸಿಸ್ಟೆಂಟ್ ಮ್ಯಾನೇಜರ್ ವಿಶಾಲ್ ಆಳ್ವ ಅವರು ಇಂದಿನ ಕಾಲಘಟ್ಟದಲ್ಲಿ ಆರೋಗ್ಯ ಶಿಬಿರದ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸುಖಾಯುಷ್ ನ್ಯಾಚುರೋಪಥಿ ಕ್ಲಿನಿಕ್, ವಿಟ್ಲ ಇದರ ವೈದ್ಯೆ ಶ್ರೀಮತಿ ಸ್ವಸ್ತಿ ಸಂತೋಷ್ ಶೆಟ್ಟಿ .ಯನೆಪೋಯ ವೈದ್ಯಕೀಯ ಸಂಸ್ಥೆಯ ಡಾಕ್ಟರ್ ಸಿರಾಜ್, ಶಿಲ್ಪಶ್ರೀ ಯುವಕ ಮಂಡಲದ ಅಧ್ಯಕ್ಷರಾದ ರೋಹಿತ್ ರೈ ಚಂಬರಡ್ಕ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶ್ರೀ ಬಿ. ಸಂದೇಶ್ ಶೆಟ್ಟಿಯವರು ಎಲ್ಲರನ್ನು ಸ್ವಾಗತಿಸಿ, ಆರೋಗ್ಯ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನೂ ಸಮಾನವಾಗಿ ಯನಪೋಯ ಸಂಸ್ಥೆಯ ವೈದ್ಯಕೀಯ ವಿದ್ಯಾರ್ಥಿಗಳನ್ನು, ವಿಟ್ಲ ಆರೋಗ್ಯ ಸಮುದಾಯ ಕೇಂದ್ರದ ಪಿ.ಎಚ್.ಓ. ಗೀತಾ, ನಿಂಗಪ್ಪ, ಮತ್ತು ಆಶಾ ಕಾರ್ಯಕರ್ತೆಯರನ್ನು ಶಿಲ್ಪಶ್ರೀ ಯುವಕ ಮಂಡಲದ ಕಾರ್ಯದರ್ಶಿ ಜಯರಾಮ್ ಗೌಡ ಮಾರುಗುಳಿ ಹಾಗೂ ಕಾರ್ಯಕ್ರಮವನ್ನು ಮಾಡಲು ಸ್ಥಳಾವಕಾಶ ಮಾಡಿಕೊಟ್ಟ ವಿಟ್ಲ ಪಡ್ನೂರು ಪಂಚಾಯತಿನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯ ಮಿತ್ರರಿಗೆ ಹಾಗೂ ಪಂಚಾಯತಿನ ಅಭಿವೃದ್ಧಿ ಅಧಿಕಾರಿಯವರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಹಾಗೂ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡ ಸುಮಾರು 150 ಜನ ನಾಗರಿಕರಿಗೆಲ್ಲರಿಗೂ ಅಭಿವಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕಳೆದ ವರ್ಷ ತೆಂಗಿನ ಮರದಿಂದ ಬಿದ್ದು ಗಾಯಕೊಂಡು ಈಗ ಚೇತರಿಸಿಕೊಂಡಿರುವ ಲೋಕೇಶ್ ಕುಂಟ್ರಕಲ ಅವರಿಗೆ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸ್ಥಾಪಕ ಅಧ್ಯಕ್ಷ ಶ್ರೀ ಸಂದೇಶ್ ಶೆಟ್ಟಿಯವರು ಆರ್ಥಿಕ ಸಹಾಯಧನವನ್ನು ಕ್ಲಬ್ ನ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ಆರ್.ಕೆ. ಅವರ ಉಪಸ್ಥಿತಿಯಲ್ಲಿ ನೀಡಿದರು.
Bantawala
ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..
ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.

ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು 17 ವರ್ಷದ ಪುತ್ತೂರು ಬನ್ನೂರು ನಿವಾಸಿ ಮತ್ತು 16 ವರ್ಷದ ಮಂಜೇಶ್ವರ ದೈಗೋಳಿ ನಿವಾಸಿ ವಿದ್ಯಾರ್ಥಿಗಳ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (19) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.

ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಸಹಪಾಠಿಯನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ನೊಂದ ವಿದ್ಯಾರ್ಥಿ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಸಹಪಾಠಿಯ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ಇನ್ನೋರ್ವ ವಿದ್ಯಾರ್ಥಿ ಯ ತೊಡೆಗೂ ಚೂರಿ ಇರಿದಿದ್ದಾನೆ. ಚೂರಿ ಇರಿತಕ್ಕೊಳಗಾದ ಗಾಯಾಳು ವಿದ್ಯಾರ್ಥಿಗಳಿಬ್ಬರೂ ಅಪ್ರಾಪ್ತರೆಂದು(ಕಾನೂನು ಸಂಘರ್ಷಕ್ಕೆ ಒಳಗಾದ ವ್ಯಕ್ತಿಗಳು) ತನಿಖೆಯ ವೇಳೆ ತಿಳಿದು ಬಂದಿದೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆನ್ನಿಗೆ ಇರಿತಕ್ಕೊಳಗಾದ ವಿದ್ಯಾರ್ಥಿಗೆ 11 ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳುಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ-32/2026 ಕಲಂ115(1) 352 109 118(1) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ
Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
-
crime1 week agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

