Dakshina Kannada
ಗ್ರಾಮ ಪಂ.ಸಿಬ್ಬಂದಿಗಳಿಗೆ ಹೊಸವರ್ಷದ ಗಿಫ್ಟ್..ಭವಿಷ್ಯ ನಿಧಿ ಅನುಷ್ಟಾನಗೊಳಿಸಿ ರಾಜ್ಯ ಸರ್ಕಾರದ ಆದೇಶ..
ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಹೊಸವರ್ಷದಲ್ಲಿ ಸಿಹಿಸುದ್ದಿ ನೀಡಿದೆ. ಭವಿಷ್ಯ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಭವಿಷ್ಯ ನಿಧಿ ಯೋಜನೆಗೆ ಸಂಬಂಧಿಸಿದಂತೆ. ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪ 30 ಗ್ರಾಪಂಸಿ 2008, ದಿನಾಂಕ:31.10.2008ರನ್ವಯ ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ದಿನಾಂಕ:01.11.2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.

ಆದರೆ, ಸರ್ಕಾರದ ಸದರಿ ಆದೇಶದನ್ವಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಾತ್ರವೇ ಸಂಪೂರ್ಣವಾಗಿ ಅನುಷ್ಠಾನಗೊಳಿಸಿದ್ದು ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾಗಷ:ವಾಗಿ ಈ ಜಾರಿಗೊಳಿಸಿರುವುದು ಕಂಡು ಬಂದಿದೆ.

ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮವಹಿಸದಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದಾಗಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಅರ್ಹರಿರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಒದಗಿಸುವ ಕುರಿತು ಕ್ರಮವಹಿಸಿ, ಆಯುಕ್ತಾಲಯಕ್ಕೆ ಮಾಹಿತಿ ನೀಡುವಂತೆ ಹಾಗೂ ಈ ವಿಷಯವನ್ನು ಜಿಲ್ಲಾ ಪಂಚಾಯತ್ ಹಂತದಿಂದ ಮೇಲ್ವಿಚಾರಣೆ ನಡೆಸುವಂತೆ ಈ ಮೂಲಕ ತಿಳಿಸಲಾಗಿದೆ.
Bantawala
ದಕ್ಷಿಣ ಕನ್ನಡ ಕಾಂಗ್ರೆಸ್‌ಗೆ ಹೊಸ ಚೈತನ್ಯದ ಸಾರಥಿ: ಜಿಲ್ಲಾ ಅಧ್ಯಕ್ಷ ಗಾದಿಗೆ ‘ಚಂದ್ರಪ್ರಕಾಶ್ ಶೆಟ್ಟಿ ತುಂಬೆ’ ಪ್ರಬಲ ಸ್ಪರ್ಧಿ!
ಕಾರ್ಯಕರ್ತರ ಪಡೆಗೆ ಹೊಸ ಶಕ್ತಿ, ತಳಮಟ್ಟದ ಸಂಘಟನೆಗೆ ಹೊಸ ಹುರುಪು – ಚಂದ್ರಪ್ರಕಾಶ್ ಶೆಟ್ಟಿ ಸಾರಥ್ಯಕ್ಕೆ ಹೈಕಮಾಂಡ್‌ಗೆ ಕಾರ್ಯಕರ್ತರ ಜೈಕಾರ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಅಖಾಡದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ಗಾದಿಯ ಕೌತುಕ ಮುಗಿಲುಮುಟ್ಟಿದೆ. ಜುಲೈ 28ರಿಂದ ಆರಂಭಗೊಂಡಿರುವ ಹೊಸ ಅಧ್ಯಕ್ಷರ ಆಯ್ಕೆಯ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಜಿಲ್ಲಾದ್ಯಂತ ಕಾವೇರಿದ ವಾತಾವರಣ ಸೃಷ್ಟಿಸಿದೆ. ಪ್ರಮುಖ ನಾಯಕರು ಪಟ್ಟಕ್ಕೇರಲು ತೀವ್ರ ಪೈಪೋಟಿ ನಡೆಸುತ್ತಿರುವ ಈ ಹೊತ್ತಿನಲ್ಲಿ, ಪಕ್ಷದ ನಿಷ್ಠಾವಂತ ನಾಯಕ, ಸಂಘಟನಾ ಚತುರ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಹೆಸರು ಕರಾವಳಿ ರಾಜಕೀಯದಲ್ಲಿ ಸಿಂಹಪಾಲು ಪಡೆದುಕೊಂಡಿದೆ!
ಕಷ್ಟಕಾಲದ ನಿಷ್ಠಾವಂತ ಕಾಂಗ್ರೆಸ್ಸಿಗ : ಹೋರಾಟದ ಹಾದಿಯಲ್ಲಿ ಗೆದ್ದು ಬಂದ ಸರದಾರ!
ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಎಂದರೆ ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಹೋರಾಟ, ತ್ಯಾಗ ಮತ್ತು ಸದಾ ಜನಸೇವೆಯಲ್ಲಿ ನಿರತರಾಗಿರುವ ನಿಷ್ಠಾವಂತ ಕಾಂಗ್ರೆಸ್ಸಿಗ. ಪಕ್ಷದ ಪರಿಸ್ಥಿತಿ ಸವಾಲಿನಿಂದ ಕೂಡಿದ್ದಾಗಲೂ ಕಾಂಗ್ರೆಸ್ ಧ್ವಜವನ್ನು ಎತ್ತಿಹಿಡಿದು, ತಳಮಟ್ಟದ ಕಾರ್ಯಕರ್ತನಲ್ಲಿ ಹೊಸ ಆತ್ಮವಿಶ್ವಾಸ ಮತ್ತು ಭರವಸೆಯ ಕಿಚ್ಚು ಹೊತ್ತಿಸಿದ ಧೀರ ನಾಯಕ ಇವರು.
ಇತಿಹಾಸ ಸೃಷ್ಟಿಸಿದ ಐತಿಹಾಸಿಕ ವಿಜಯಗಳು:
ಇವರ ನಾಯಕತ್ವದ ಕಸುವಿಗೆ, ಸಂಘಟನಾ ಶಕ್ತಿಗೆ ಇತಿಹಾಸವೇ ಸಾಕ್ಷಿ ನೀಡುತ್ತದೆ:
ದಿಗ್ಗಜರನ್ನು ಪತನಗೊಳಿಸಿದ ಸಜಿಪ ಮುನ್ನೂರು ಜಯ: ಸಜಿಪ ಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಮಾಜಿ ಶಾಸಕರಂತಹ ಪ್ರಭಾವಿ ಎದುರಾಳಿಯನ್ನೇ ನೆಲಕಚ್ಚಿಸಿ ಐತಿಹಾಸಿಕ ಗೆಲುವು ಸಾಧಿಸಿದ ಹೆಗ್ಗಳಿಕೆ ಇವರದ್ದು.
35 ವರ್ಷಗಳ ಕೋಟೆಯನ್ನು ಪುಡಿಗಟ್ಟಿದ ಗೋಲ್ತಮಜಲು ಕ್ರಾಂತಿ: ಬದ್ಧ ವೈರಿ ಬಿಜೆಪಿಯ ಉಕ್ಕಿನ ಕೋಟೆಯಂತಿದ್ದ ಗೋಲ್ತಮಜಲು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬರೋಬ್ಬರಿ 35 ವರ್ಷಗಳ ಬಳಿಕ ಕಮಲ ಕಲಿಗಳನ್ನು ಸೋಲಿಸಿ, ಕಾಂಗ್ರೆಸ್‌ನ ವಿಜಯ ಪತಾಕೆ ಹಾರಿಸಿದ ಅಪರೂಪದ ಸಾಧನೆ ಇವರದ್ದು!
ಕಾರ್ಯಕರ್ತರೇ ಆಸ್ತಿ, ಹಿರಿಯ-ಕಿರಿಯರ ಸಮನ್ವಯವೇ ಶಕ್ತಿ!
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಕಟ್ಟಿಬೆಳೆಸಲು ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವ ಶಕ್ತಿ ಬೇಕಿದೆ. ಯುವಕರಲ್ಲಿ ಹೊಸ ಹುರುಪು ತುಂಬಿ, ಹಿರಿಯ ನಾಯಕರ ಸುದೀರ್ಘ ಅನುಭವವನ್ನು ಮಾರ್ಗದರ್ಶನವಾಗಿ ಪಡೆದುಕೊಂಡು ಪಕ್ಷವನ್ನು ಮುನ್ನಡೆಸಬಲ್ಲ ಏಕೈಕ ಸಮರ್ಥ ನಾಯಕ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಎಂಬ ಮಾತುಗಳು ಜಿಲ್ಲೆಯ ಮೂಲೆ ಮೂಲೆಯಿಂದ ಕೇಳಿಬರುತ್ತಿವೆ.
“ಸಂಘಟನೆಗೆ ಶಕ್ತಿ – ಕಾರ್ಯಕರ್ತರಿಗೆ ಗೌರವ – ಕಾಂಗ್ರೆಸ್‌ಗೆ ವಿಜಯ!”
ಈ ಧ್ಯೇಯಮಂತ್ರದೊಂದಿಗೆ ನಿರಂತರವಾಗಿ ಶ್ರಮಿಸುತ್ತಿರುವ ಚಂದ್ರಪ್ರಕಾಶ್ ಶೆಟ್ಟಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಗಾದಿ ಒಲಿಯಲೇಬೇಕು ಎಂದು ಸಾವಿರಾರು ಅಭಿಮಾನಿಗಳು ಹಾಗೂ ಬ್ಲಾಕ್ ಮಟ್ಟದ ಕಾರ್ಯಕರ್ತರು ಕಾಂಗ್ರೆಸ್ ಹೈಕಮಾಂಡ್‌ಗೆ ಬಿನ್ನವಿಸಿಕೊಂಡಿದ್ದಾರೆ.
ಅವರ ಕಟ್ಟುಮಸ್ತಾದ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಮುಂಬರುವ ಸ್ಥಳೀಯ ಸಂಸ್ಥೆಗಳು ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿ, ಕರಾವಳಿಯಲ್ಲಿ ಕಾಂಗ್ರೆಸ್ ಅಲೆ ಸೃಷ್ಟಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಜಿಲ್ಲೆಯ ಕಾರ್ಯಕರ್ತರ ದೃಢ ವಿಶ್ವಾಸ!

Dakshina Kannada
ದಕ್ಷಿಣ ಕನ್ನಡ: ನಾಳೆ (ಆಗಸ್ಟ್ 4) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 04, 2026 (ಮಂಗಳವಾರ) ರಂದು ಜಿಲ್ಲೆಯ ಪ್ರಮುಖ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದ್ದಾರೆ:
ರಜೆ ವಿವರ:
- ಮಂಗಳೂರು ಉಪವಿಭಾಗ: ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (10 ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.
- ಪುತ್ತೂರು ಉಪವಿಭಾಗ: ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ (PUC), ITI ಹಾಗೂ ಡಿಪ್ಲೊಮಾ (12 ನೇ ತರಗತಿವರೆಗೆ) ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಲಾಗಿದೆ.
ಗಮನಿಸಿ: ಈ ನಿಯಮವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ‘ವಿಪತ್ತು ನಿರ್ವಹಣಾ ಕಾಯ್ದೆ 2005’ ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಮುನ್ನೆಚ್ಚರಿಕೆ ಸೂಚನೆಗಳು:
- ಪೋಷಕರ ಗಮನಕ್ಕೆ: ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು.
- ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
- ಪ್ರವಾಸಿಗರಿಗೆ ಸೂಚನೆ: ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರತೀರಕ್ಕೆ ತೆರಳದಂತೆ ನಿರ್ಬಂಧಿಸಲಾಗಿದೆ.
- ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ತುರ್ತು ನಿರ್ವಹಣೆಗೆ ಸದಾ ಸನ್ನದ್ಧರಾಗಿರಲು ಸೂಚಿಸಲಾಗಿದೆ.
ತುರ್ತು ಸಹಾಯವಾಣಿ (Helpline Numbers):
ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ಮಾಹಿತಿಗಾಗಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
- Toll Free No: 1077
- ದೂರವಾಣಿ: 0824-2442590

Bantawala
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ
ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.
ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು
ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.
ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.
ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.
ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.
ಪ್ರಶಸ್ತಿ ಹಾಗೂ ಪುರಸ್ಕಾರ
ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
