Connect with us

crime

ನ್ಯೂ ಇಯರ್ ಸಂಭ್ರಮಕ್ಕೆ ಮಾರಾಟ ಮಾಡಲು ತಂದಿಟ್ಟ 21kg ಗಾಂಜಾ ಸಹಿತ ಕುಖ್ಯಾತ ಖದೀಮರಿಬ್ಬರು ಅಂದರ್..ಸುರತ್ಕಲ್ ಪೊಲೀಸರ ಕಾರ್ಯಾಚರಣೆ.

Published

on

ಮಂಗಳೂರು : ಹೊಸ ವರ್ಷಾಚರಣೆ ಪ್ರಯುಕ್ತ ಮಾರಾಟ ಮಾಡಲು ತಂದಿಟ್ಟಿದ್ದ ಸುಮಾರು 21ಕಿಲೋ 450 ಗ್ರಾಂ ತೂಕದ ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ, 2ನೇ ಕ್ರಾಸ್ ಬೆನಕ ಎಂಬ ಹೆಸರಿನ ಮನೆಯ ಬಳಿ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ದಾಸ್ತಾನು ಮಾಡಿದ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಸುರತ್ಕಲ್ ಪೊಲೀಸರ ತಂಡ ತಕ್ಷಣವೇ ದಾಳಿ ನಡೆಸಿ ಮೂಲತಃ ಉಳಾಯಿಬೆಟ್ಟು ಗ್ರಾಮ ನಿವಾಸಿಯಾಗಿದ್ದು ಪ್ರಸ್ತುತ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ ಎರಡನೇ ಕ್ರಾಸ್ “ಬೆನಕ” ಹೆಸರಿನ ಮನೆಯಲ್ಲಿರುವ ದಿ.ನಾರಾಯಣ ಪೂಜಾರಿ ಪುತ್ರ ಪ್ರದೀಪ್ ಪೂಜಾರಿ (32), ಮತ್ತು ಮಂಗಳೂರು ಚಿತ್ರಾಪುರ ಫಿಷರೀಸ್ ಶಾಲಾ ಸಮೀಪದ ಕೆ.ವೆಂಕಪ್ಪ ಪೂಜಾರಿ ಪುತ್ರ ವಸಂತ(42) ಎಂಬಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ವಶದಲ್ಲಿದ್ದ 10ಲಕ್ಷದ 72ಸಾವಿರ ರೂಪಾಯಿ ಮೌಲ್ಯದ 21ಕಿಲೋ 450ಗ್ರಾಂ ತೂಕದ ಗಾಂಜಾ, ಮೂರು ಮೊಬೈಲ್ ಫೋನುಗಳು, ಗಾಂಜಾ ಸಾಗಾಟಕ್ಕೆ ಬಳಸಿದ್ದ ಕೆ.ಎ.04 ಎಂ.ಡಿ. 2532ಸಂಖ್ಯೆಯ ಮೂರು ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಕಾರು ಮತ್ತು ಗಾಂಜಾ ಸೇದಲು ಬಳಸುವ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ಒರಿಸ್ಸಾದಿಂದ ತಂದಿರುವುದಾಗಿ ಪೊಲೀಸರ ವಿಚಾರಣೆ ಸಂದರ್ಭ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ಇದ್ದುದರಿಂದಾಗಿ ಮಾರಾಟ ಮಾಡಲು ಸಾಧ್ಯವಾಗದೇ ತಮ್ಮ ಕಾರಿನಲ್ಲಿಯೇ ಇಟ್ಟಿದ್ದೇವೆಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 13ಲಕ್ಷದ 86ಸಾವಿರದ 500ರೂಪಾಯಿಗಳೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ. 01/2026 ಕಲಂ: 8(C), 20(b)(ii),(C) NDPS Act ನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಆರೋಪಿ ಪ್ರದೀಪ್ ಪೂಜಾರಿ ವಿರುದ್ದ ಈ ಹಿಂದೆ ದ.ಕ.ಜಿಲ್ಲೆಯಾಧ್ಯಂತ ಎಂಟು ಪ್ರಕರಣಗಳು ದಾಖಲಾಗಿರುತ್ತವೆ.
1)Bajpe PS -84/2020 u/s 379 ipc
2) Bajpe PS -90/2020 u/s 379 IPC
3) Barke ps-93/2015 u/s 143,144,302,147,148,149,332,353,324,307, IPC
4)Belthangady- 43/2020 379 IPC
5)Darmastal ps-56/2019 u/s 8(c)20(b) Ndps act
6)mulki PS -52/2018 u/s 399,400,402,120(b) IPC 4,20,25,1(B)(b) arms act
7) surathkal PS -92/2023 u/s 8(c)20(b) ndps act
8) north PS -177/15 u/s 307 ipc

ಸದ್ರಿ ಪತ್ತೆ ಕಾರ್ಯದಲ್ಲಿ ಉತ್ತರ ಉಪ ವಿಭಾಗದ ಎ.ಸಿ.ಪಿ. ಶ್ರೀ ಶ್ರೀಕಾಂತ.ಕೆ. ರವರು ಮತ್ತು ಅವರ ತಂಡದ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಶೇಖರ್, ಹೆಚ್.ಸಿ ಗಳಾದ ರೆಜಿ.ಎಂ., ದಾಮೋದರ್, ಹಾಲೇಶ್ ನಾಯ್ಕ್, ಸುನೀಲ್ ಪಡನಾಡ, ಸಂಪತ್ ಹಾಗೂ ಸುರತ್ಕಲ್ ಠಾಣಾ ಪಿ.ಐ. ಶ್ರೀ ಪ್ರಮೋದ್ ಕುಮಾರ್, ಪಿ.ಎಸ್.ಐ ರಘುನಾಯ್ಕ್ ಮತ್ತು ಸಿಬ್ಬಂದಿಗಳಾದ ಅಣ್ಣಪ್ಪ, ಅಜಿತ್ ಮ್ಯಾಥ್ಯೂ, ಅಂಜಿನಪ್ಪ ರವರು ಭಾಗವಹಿಸಿರುತ್ತಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

court

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಮರುತನಿಖೆಗೆ ಐತಿಹಾಸಿಕ ಆದೇಶ

Published

on

ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ಮತ್ತು ದಶಕಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆದಿದ್ದ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಹಾಗೂ ಐತಿಹಾಸಿಕ ಆದೇಶ ಹೊರಡಿಸಿದೆ. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯ, ಹೊಸದಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ನಿರ್ದೇಶಿಸಿದೆ. ಅಲ್ಲದೆ, ಕೇವಲ ಮೂರು ತಿಂಗಳ ಒಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಗಡುವು ವಿಧಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರನ್ನು ಹೊಸ ಎಸ್‌ಐಟಿ ಮರುತನಿಖೆ ಮಾಡುವಂತಿಲ್ಲ ಅಥವಾ ವಿಚಾರಣೆಗೆ ಒಳಪಡಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ

ಪ್ರಕರಣದ ಹಿನ್ನೆಲೆ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಮುಖ್ಯಾಂಶಗಳು:

ಘಟನೆಯ ಹಿನ್ನೆಲೆ: 2012ರ ಅಕ್ಟೋಬರ್‌ನಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಕಾಲೇಜಿನಿಂದ ಮನೆಗೆ ಮರಳುವಾಗ ನಾಪತ್ತೆಯಾಗಿದ್ದರು. ಅಕ್ಟೋಬರ್ 10ರಂದು ಧರ್ಮಸ್ಥಳದ ಮಣ್ಣಸಂಕ ಎಂಬಲ್ಲಿ ಆಕೆಯ ಅರ್ಧನಗ್ನ ಮೃತದೇಹ ಪತ್ತೆಯಾಗಿತ್ತು.

ತನಿಖಾ ವೈಫಲ್ಯ ಮತ್ತು ಆಕ್ರೋಶ: ಸ್ಥಳೀಯ ಪೊಲೀಸರು ಮಾನಸಿಕ ಅಸ್ವಸ್ಥ ಸಂತೋಷ್‌ ರಾವ್‌ ಎಂಬಾತನನ್ನು ಬಂಧಿಸಿದ್ದರು. ಆದರೆ ಇದು ಪ್ರಭಾವಿಗಳನ್ನು ರಕ್ಷಿಸಲು ನಡೆಸಿದ ನಾಟಕ ಎಂದು ಸಾರ್ವಜನಿಕರು ಮತ್ತು ಸೌಜನ್ಯಾ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಸಾರ್ವಜನಿಕ ಪ್ರತಿಭಟನೆಯ ಬಳಿಕ ಪ್ರಕರಣವು ಸಿಐಡಿ ಹಾಗೂ ನಂತರ ಸಿಬಿಐ ತನಿಖೆಗೆ ಹಸ್ತಾಂತರಗೊಂಡಿತ್ತು. ಆದರೆ ಸಿಬಿಐ ಕೂಡ ಆರೋಪಿಯನ್ನು ಖುಲಾಸೆಗೊಳಿಸಿತ್ತು.

ಹೈಕೋರ್ಟ್ ಆದೇಶ ಹಾಗೂ ಸುಪ್ರೀಂ ಮೆಟ್ಟಿಲು: ಸಿಬಿಐ ತೀರ್ಪನ್ನು ಪ್ರಶ್ನಿಸಿ ಹಾಗೂ ಮರುತನಿಖೆಗೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ (SLP) ದಾಖಲಿಸಿದ್ದರು.

ಸಿಬಿಐ ತನಿಖೆಗೆ ತೀವ್ರ ತರಾಟೆ: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ಹಾಗೂ ನ್ಯಾಯಮೂರ್ತಿ ಸಂಜೀವ್‌ ಸಚ್‌ದೇವ್‌ ಅವರನ್ನೊಳಗೊಂಡ ಪೀಠವು, ಸಿಬಿಐ ತನಿಖೆಯ ಕಳಪೆ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. “ಸಿಬಿಐ ತನಿಖಾಧಿಕಾರಿ ನ್ಯಾಯಾಧೀಶರಂತೆ ವರ್ತಿಸಿದ್ದು, ಯಾವುದೇ ಸ್ವತಂತ್ರ ತನಿಖೆ ನಡೆಸದೆ ಹಿಂದಿನ ತನಿಖೆಯನ್ನೇ ಆಧರಿಸಿ ವರದಿ ಸಲ್ಲಿಸಿದ್ದಾರೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿ ತೀರ್ಪು ಕಾಯ್ದಿರಿಸಿತ್ತು.

ಹೊಸ ತಿರುವು ಹಾಗೂ ಮುಂದಿನ ಹೆಜ್ಜೆಗಳು:

ಹೊಸ ತನಿಖೆ: 2012ರ ಧರ್ಮಸ್ಥಳದ 17 ವರ್ಷದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

ಎಸ್‌ಐಟಿ (SIT) ರಚನೆ: ಈ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಮತ್ತು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಲಾಗಿದೆ.

ಸಿಬಿಐ ಹಾಗೂ ಹಳೇ ಸಿಬ್ಬಂದಿಗೆ ನಿರ್ಬಂಧ: ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ (CBI) ಅಥವಾ ಹಿಂದಿನ ತನಿಖಾ ತಂಡದಲ್ಲಿದ್ದ ಯಾವುದೇ ಪೊಲೀಸರನ್ನು ಹೊಸ ಎಸ್‌ಐಟಿಗೆ ನೇಮಿಸುವಂತಿಲ್ಲ.

ಸಂತೋಷ್ ರಾವ್ ವಿಚಾರಣೆಗೆ ತಡೆ: ಈ ಪ್ರಕರಣದಲ್ಲಿ ಈಗಾಗಲೇ ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರನ್ನು ಹೊಸ ಎಸ್‌ಐಟಿ ಮರುತನಿಖೆ ಮಾಡುವಂತಿಲ್ಲ ಅಥವಾ ವಿಚಾರಣೆಗೆ ಒಳಪಡಿಸುವಂತಿಲ್ಲ.

3 ತಿಂಗಳ ಡೆಡ್‌ಲೈನ್: ಹೊಸ ಎಸ್‌ಐಟಿ ತಂಡವು ಪ್ರಕರಣದ ಮರುತನಿಖೆಯನ್ನು ಪೂರ್ಣಗೊಳಿಸಿ, ಆದೇಶದಂತೆ ನಿಗದಿತ ಮೂರು ತಿಂಗಳೊಳಗೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕಿದೆ.

ಹಿನ್ನೆಲೆ: ಸೌಜನ್ಯಾ ತಾಯಿ ಕುಸುಮಾವತಿ ಅವರು ಸಲ್ಲಿಸಿದ್ದ ವಿಶೇಷ ಅನುಮತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ್ ಅವರ ಪೀಠ ಈ ಆದೇಶ ನೀಡಿದೆ. ಒಂದು ದಶಕದ ಬಳಿಕ ಈ ಹೊಸ ತನಿಖಾ ಚೌಕಟ್ಟು ರೂಪುಗೊಂಡಿದೆ.

ಈ ಮಹತ್ವದ ತೀರ್ಪಿನಿಂದಾಗಿ ಕಳೆದ 14 ವರ್ಷಗಳಿಂದ ನ್ಯಾಯಕ್ಕಾಗಿ ಪರಿತಪಿಸುತ್ತಿರುವ ಸೌಜನ್ಯಾ ಕುಟುಂಬಕ್ಕೆ ಹಾಗೂ ಮೃತ್ಯುವಿಗೆ ನ್ಯಾಯ ಸಿಗುವ ಭರವಸೆ ಮತ್ತು ನಿರೀಕ್ಷೆಗಳು ಗರಿಗೆದರಿವೆ

Continue Reading

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

Trending

Copyright © 2025 Deevatige