Connect with us

crime

ಬೀದಿಗೆ ಬಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಪುತ್ತೂರು ಶಾಸಕರ ಮದ್ಯಪ್ರವೇಶದಿಂದ ನ್ಯಾಯ; ಧರಣಿ ಕೈಬಿಟ್ಟ ದಂಪತಿ

Published

on

ಪುತ್ತೂರು : ಕಳೆದ ಒಂದು ವರ್ಷಗಳಿಂದ ಮನೆಸೂರು ಕಳೆದು ಕೊಂಡು ಬೀದಿಗೆ ಬಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಪುತ್ತೂರು ಶಾಸಕರ ಮದ್ಯಪ್ರವೇಶದಿಂದ ನ್ಯಾಯ ಲಭಿಸಿದೆ. ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳು ಕೊನೆಗೂ ಧರಣಿ ಕೈಬಿಟ್ಟಿದ್ದಾರೆ.


ಕಂದಾಯ ಇಲಾಖೆಯ ಅಧಿಕಾರಿಗಳು ನೆಲಸಮಗೊಳಿಸಿ ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಮತ್ತು ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದಿರುವ ಕಡಬಾ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನ ಬಾಗಿಲು ನಿವಾಸಿಗಳಾದ ವೃದ್ಧ ರಾಧಮ್ಮ ಹಾಗೂ ಮುತ್ತುಸ್ವಾಮಿ ದಂಪತಿಗಳನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಭೇಟಿ ಮಾಡಿ ಅವರಿಗೆ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದ 24 ಗಂಟೆಯೊಳಗಡೆ ನಿವೇಶನ ಹಾಗೂ ಮನೆ ನಿರ್ಮಿಸಿ ಕೊಡುವ ಮಾತು ನೀಡುವುದರ ಮೂಲಕ ವೃದ್ಧ ದಂಪತಿಯ ಬದುಕಿನಲ್ಲಿ ಬೆಳಕಾಗಿ ಬಂದಿದ್ದಾರೆ. ಧರಣಿ ಮುಕ್ತಾಯಗೊಂಡಿದ್ದು, ವೃದ್ಧ ದಂಪತಿಗಳಿಗೆ ಮನೆ ನಿವೇಶನ ಹಾಗೂ ಮನೆ ನಿರ್ಮಿಸಿ ಕೊಡಲು ಭರವಸೆ ನೀಡಲಾಗಿದೆ. ನಮಗೆ ನ್ಯಾಯ ಸಿಗಬೇಕು ಮತ್ತು ತಮ್ಮ ಮನೆಯನ್ನು ತೆರವುಗೊಳಿಸಿದ ಸಂಬoಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳು ಕೊನೆಗೂ ಧರಣಿ ಕೈಬಿಟ್ಟಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಬಾಗಿಲು ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದ ರಾಧಮ್ಮ–ಮುತ್ತುಸ್ವಾಮಿ ದಂಪತಿಗಳ ಮನೆಯನ್ನು ಅಕ್ರಮ ನಿರ್ಮಾಣ ಮಾಡಲಾಗಿದೆ ಎಂದು ಅಧಿಕಾರಿಗಳು ಕಾನೂನು ಕ್ರಮದಂತೆ ತೆರವುಗೊಳಿಸಿದ್ದರೆನ್ನಲಾಗಿದೆ.
ಈ ಕ್ರಮವನ್ನು ಪ್ರಶ್ನಿಸಿ ನ್ಯಾಯಕ್ಕಾಗಿ ಡಿಸೆಂಬರ್ 29ರಿಂದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಎದುರು ಧರಣಿ ಆರಂಭಿಸಿದ್ದರು. ಈ ವೇಳೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ನ್ಯಾಯ ಒದಗಿಸುವ ಭರವಸೆ ನೀಡಿದ್ದರು.


ಇಂದು ಪುತ್ತೂರು ಸಹಾಯಕ ಆಯುಕ್ತರು ಹಾಗೂ ಕಡಬ ತಹಶೀಲ್ದಾರ್ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಶಾಸಕರು, ವೃದ್ಧ ದಂಪತಿಗಳು ಇದ್ದ ಜಾಗದಲ್ಲೇ ಮನೆ ನಿರ್ಮಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದು, 94ಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಕೂಡಾ ತೀರ್ಮಾನಿಸಿರುವುದನ್ನು ತಿಳಿಸಿದ್ದಾರೆ.
ರಾಧಮ್ಮ–ಮುತ್ತುಸ್ವಾಮಿ ಅವರು ನಾಲ್ಕೈದು ವರ್ಷಗಳ ಹಿಂದೆಯೇ ಅಕ್ರಮ–ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರೂ, ಅದನ್ನು ತಿರಸ್ಕರಿಸಲಾಗಿತ್ತು. ಇದೀಗ ಮರುಅರ್ಜಿಗೆ ಅವಕಾಶ ನೀಡಲಾಗಿದೆ ಮತ್ತು ಅದೇ ಜಾಗವನ್ನು ಮಂಜೂರು ಮಾಡಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.


ಪುತ್ತೂರು ಆಡಳಿತ ಸೌಧದ ಎದುರು ಆರಂಭಿಸಿರುವ ಅಹೋರಾತ್ರಿ ಧರಣಿ 9ದಿನಗಳಿಂದ ಮುಂದುವರೆದಿದ್ದು, ರಜಾ ದಿನವಾದ ಭಾನುವಾರವೂ ಮುಂದುವರೆದಿತ್ತು. ಆಡಳಿತ ಸೌಧದ ಎದುರು ಭಾಗದಲ್ಲಿರುವ ಮರದಡಿಯಲ್ಲಿ ಕಳೆದ ಹಲವು ದಿನಗಳಿಂದ ವೃದ್ಧ ದಂಪತಿ ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ ಆರಂಭದ ದಿನ ಧರಿಸಿದ ಬಟ್ಟೆಯಲ್ಲಿ ಸ್ನಾನವನ್ನು ಮಾಡದೆ ಧರಣಿ ನಡೆಸುತ್ತಿದ್ದು, ರಾತ್ರಿ ವೇಳೆ ಮರದಡಿಯಲ್ಲಿ ಮಲಗುತ್ತಿದ್ದಾರೆ ರಾತ್ರಿವೇಳೆ ಸೊಳ್ಳೆಗಳ ಕಾಟದಿಂದ ಅವರ ಆರೋಗ್ಯದಲ್ಲಿ ಏರುಪೇರು ಆಗುತ್ತಿದೆ ಎಂದು ದಂಪತಿಯೊAದಿಗೆ ಧರಣಿ ಕುಳಿತಿರುವ ಅವರ ಪುತ್ರ ಸುಬ್ರಹ್ಮಣ್ಯ ತಿಳಿಸಿದ್ದರು. ಶುಕ್ರವಾರ ಸಂಜೆ ಪುತ್ತೂರು ಉಪವಿಭಾಗಾಧಿಕಾರಿಗಳ ಕಚೇರಿಗೆ ಜಿಲ್ಲಾಧಿಕಾರಿ ಬರುತ್ತಾರೆಂಬ ಮಾಹಿತಿ ಇತ್ತು ಆದರೆ ಅವರು ಬಂದಿರಲಿಲ್ಲ. ನ್ಯಾಯ ಸಿಗದಿದ್ದರೆ ಜನವರಿ 6 ರಿಂದ ಆಹಾರ ತ್ಯಜಿಸಿ ಧರಣಿ ನಡೆಸುವುದಾಗಿ ಮರದಡಿಯಲ್ಲಿ ಕುಳಿತಿದ್ದ ವೃದ್ಧ ಧರಣಿ ನಿರತ ದಂಪತಿಯನ್ನು ಶಾಸಕರು ಭೇಟಿ ಮಾಡಿ ಅವರ ಸಂಕಷ್ಟವನ್ನು ಆಲಿಸಿ ನ್ಯಾಯ ಒದಗಿಸುವ ಭರವಸೆಯನ್ನು ಜ.4ರಂದು ನೀಡಿದ್ದರು.


ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನ ಬಾಗಿಲು ನಿವಾಸಿಗಳಾದ ವೃದ್ಧ ರಾಧಮ್ಮ ಹಾಗೂ ಮುತ್ತುಸ್ವಾಮಿ ದಂಪತಿಗಳ ಮನೆಯನ್ನು ನೆಲಸಮ ಗೊಳಿಸಿ ಒಂದು ವರ್ಷವೇ ಕಳೆದಿದೆ ಒಂದು ವರ್ಷದ ಹಿಂದೆ ಇವರ ಮನೆಯನ್ನು ನೆಲಸಮಗೊಳಿಸಲಾಗಿತ್ತು. ವೃದ್ಧ ದಂಪತಿಗಳು ಅಂದಿನಿAದ ಸರಿಯಾದ ಸೂರು ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಪ್ರಸ್ತುತ ಸ್ಥಿತಿ: ಮಳೆ, ಗಾಳಿ ಮತ್ತು ಬಿಸಿಲಿಗೆ ಮೈಯೊಡ್ಡಿ ತಾತ್ಕಾಲಿಕ ಶೆಡ್ ಅಥವಾ ಅಸುರಕ್ಷಿತ ಜಾಗದಲ್ಲಿ ವಾಸಿಸುವ ಅನಿವಾರ್ಯತೆ ಇವರಿಗೆ ಎದುರಾಗಿದೆ. ಅವರಿಗೆ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿ ನೀತಿ ತಂಡವು ಕಳೆದ ಒಂದು ವರ್ಷದಿಂದಲೂ ತಂಡದ ಮುಖ್ಯಸ್ಥ ಹಾಗೂ ಹೋರಾಟಗರರಾದ ಜಯಂತ್ ಟಿ ನೇತೃತ್ವದಲಿ ನಿರಂತರವಾಗಿ ಹೋರಾಟ ನಡೆಸುತ್ತಲೇ ಇತ್ತು. ನ್ಯಾಯಸ್ಥಾನದಲ್ಲಿರುವ ವೃದ್ಧರಿಗೆ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂಬ ವಿಶ್ವಾಸ ನಮಗಿದೆ. ಅವರಿಗೆ ನ್ಯಾಯ ಸಿಗಲೇ ಬೇಕು ಎಂದು ನೀತಿ ತಂಡ ತಿಳಿಸುತ್ತಾ ಬಂದಿತ್ತು. ವೃದ್ಧ ದಂಪತಿಗಳ ಮನೆ ತೆರವುಗೊಳಿಸಿದ ಪ್ರಕರಣಕ್ಕೆ ಸಂಬAಧಿಸಿದ ತನಿಖಾ ವರದಿಯ ವಿವರಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿ ತನಿಖೆ ನಡೆಸಲಿದ್ದು, ಹೋರಾಟದ ಬೆನ್ನೆಲುಬಾಗಿ ನಿಂತ ನೀತಿ ತಂಡಕ್ಕೆ ಜಯ ಸಿಕ್ಕಿದೆ.


ನ್ಯಾಯಕ್ಕಾಗಿ ಬಡ ವೃದ್ಧ ದಂಪತಿಗಳು ಕಚೇರಿಯಿಂದ ಕಚೇರಿಗೆ ಜನಪ್ರತಿನಿಧಿಗಳಲ್ಲಿಗೆ ಅಲೆದರೂ ಸ್ಪಂದನೆ ದೊರಕಿರಲಿಲ್ಲ. ಪ್ರಜಾಪ್ರಭುತ್ವದ ಆಶಯದಂತೆ ನ್ಯಾಯ ಪಡೆಯಲು ಕಟ್ಟಕಡೆಯ ವ್ಯಕ್ತಿಯಾಗಿ ಧರಣಿ ನಡೆಸಿದ ಪರಿಣಾಮ, ಇದೀಗ ಪುತ್ತೂರು ಶಾಸಕರ ಮುತುವರ್ಜಿಯಿಂದ ಪ್ರಕರಣದಲ್ಲಿ ಬಡ ನಿರ್ಗತಿಕ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರ ಸಿಕ್ಕಿದೆ. ಧರಣಿನಿರತರಲ್ಲಿ ಮತ್ತು ದಲಿತ ಸಂಘಟಕರಲ್ಲಿ ಸಂತಸ ಮೂಡಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!