Bantawala
ವಿಟ್ಲ ಬಳಿಯ ಅನಿಲಕಟ್ಟೆ ಅರಣ್ಯದಲ್ಲಿ ಬೆಂಕಿ ಅನಾಹುತ.ಹತೋಟಿಗೆ ತರಲು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಗಳ ಹರಸಾಹಸ..
ವಿಟ್ಲ ಹೊರವಲಯದ ಅನಿಲಕಟ್ಟೆ ಎಂಬಲ್ಲಿ ಅರಣ್ಯದಲ್ಲಿ ಬೆಂಕಿಯ ರುದ್ರ ನರ್ತನ ನಡೆದು ಭಾರೀ ಪ್ರಮಾಣದಲ್ಲಿ ಮರ, ಗಿಡಗಳು ನಾಶವಾಗಿವೆ. ಸುದ್ದಿ ತಿಳಿದ ಸ್ಥಳೀಯರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಬೆಂಕಿಯನ್ನು ಹತೋಟಿಗೆ ತರಲು ಶ್ರಮಿಸಿದ್ದಾರೆ.

ಸಂಪೂರ್ಣವಾಗಿ ನಂದಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಕಾರದಲ್ಲಿ ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.
Bantawala
ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..
ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.

ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.

ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

