crime
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಳವು ಪ್ರಕರಣ..ಇಬ್ಬರು ಅಂತರ್ ಜಿಲ್ಲಾ ಖದೀಮರು ಅಂದರ್..
ಕಾರ್ಕಳ ಬೈಲೂರು ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ತಾಮ್ರದ ಹೊದಿಕೆ ಕಳವು ಪ್ರಕರಣ ಭೇದಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಖದೀಮರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ತಲಪಾಡಿ ಕಳವಾರು ನಿವಾಸಿ ಆರೀಫ್ ಅಲಿಯಾಸ್ ಮುನ್ನ(37) ಮತ್ತು ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಬಂಧಿತ ನಟೋರಿಯಸ್ ಕಳ್ಳರು. ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ಥೀಮ್ ಪಾರ್ಕ್ ಕಟ್ಟಡದ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿದ್ದ ಕಳ್ಳರು, ಮೇಲ್ಛಾವಣಿಗೆ ಅಳವಡಿಸಿದ್ದ ತಾಮ್ರದ ಹೊದಿಕೆಯನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರು ಪ್ರಕರಣದ ಪತ್ತೆಗಾಗಿ ಮೂರು ಪ್ರತ್ಯೇಕ ವಿಶೇಷ ತಂಡಗಳನ್ನು ರಚಿಸಿದ್ದರು.
ವಿಶೇಷ ತಂಡವು ಉಡುಪಿ, ದಕ್ಷಿಣ ಕನ್ನಡ ಮತ್ತು ಮಂಗಳೂರು ನಗರದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಖದೀಮರಿಂದ ಕಳವು ಮಾಡಲಾಗಿದ್ದ 45,000 ರೂ. ಮೌಲ್ಯದ 51 ಕೆ.ಜಿ. ತಾಮ್ರದ ಶೀಟ್, 2 ಸೀಲಿಂಗ್ ಫ್ಯಾನ್ ಹಾಗೂ ಕೃತ್ಯಕ್ಕೆ ಬಳಸಿದ ಆಪೆ ಗೂಡ್ಸ್ ರಿಕ್ಷಾ ಮತ್ತು ಬೈಕ್ ಸೇರಿದಂತೆ ಒಟ್ಟು 2,18,200 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಂತಿಂಥವರಲ್ಲಾ.. ನಟೋರಿಯಸ್ ಖದೀಮರು..
ಬಂಧಿತ ಆರೋಪಿ ಆರೀಫ್ ಮೇಲೆ ಈಗಾಗಲೇ ಪಡುಬಿದ್ರಿ, ಉಡುಪಿ ನಗರ, ಬ್ರಹ್ಮಾವರ, ಕಾರ್ಕಳ ಗ್ರಾಮಾಂತರ, ಮೂಲ್ಕಿ ಮತ್ತು ಮೂಡುಬಿದ್ರೆ ಠಾಣೆಗಳಲ್ಲಿ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮತ್ತೊಬ್ಬ ಆರೋಪಿ ಅಬ್ದುಲ್ ಹಮೀದ್ ಮೇಲೆ ಬಜಪೆ ಮತ್ತು ಮೂಡುಬಿದಿರೆ ಠಾಣೆಗಳಲ್ಲಿ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರ ಠಾಣೆ ನಿರೀಕ್ಷಕ ಮಂಜಪ್ಪ ಡಿ.ಆರ್., ಪಿಎಸ್‌ಐಗಳಾದ ಮುರಳಿಧರ ನಾಯ್ಕ, ಶಿವಕುಮಾರ್ ಎಸ್.ಆರ್., ಪ್ರಸನ್ನ ಕುಮಾರ್ ಎಂ.ಎಸ್., ಎಂ.ಎಸ್., ಸುಂದರ ಹಾಗೂ ಸಿಬಂದಿ ರಂಜಿತ್ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ, ಗೋಪಾಲಕೃಷ್ಣ, ಚಂದ್ರಶೇಖರ, ಸತೀಶ, ಪ್ರದೀಪ, ಶಿವಾನಂದ, ಲೋಕೇಶ, ಮಹಾತೇಶ, ಸಂತೋಷ ಗೋಣಿಯಪ್ಪನವರ್, ಶ್ರೀನಿವಾಸ, ಆನಂದ, ಸಂತೋಷ, ಅರ್ಚನಾ, ಚಾಲಕರಾದ ಅಶೋಕ ಕುಮಾರ್, ಪ್ರಸಾದ್ ಹಾಗೂ ಜಿಲ್ಲಾ ಆರ್.ಡಿ.ಸೆಲ್‌ನ ದಿನೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Belthangady
ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ
ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 25ರಂದು ವೇಣೂರು ಪೊಲೀಸ್ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
crime
ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.
9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.
ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
