Connect with us

Dakshina Kannada

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

Published

on

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆಯಾಗಿದ್ದಾರೆ.

ಮಂಗಳೂರು: ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಭಾರತೀಯ ಬೀಚ್ ರೆಸ್ಲಿಂಗ್ ಚೇರ್ ಮೆನ್ ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಯವರು ನಿತ್ಯಾನಂದ ಶೆಟ್ಟಿಯವರನ್ನು ಆಯ್ಕೆ ಮಾಡಿದರು.

ನಿತ್ಯಾನಂದ ಶೆಟ್ಟಿಯವರು ಲಯನ್ಸ್ ಕ್ಲಬ್ ನ ಕಾವೂರು ಇದರ ಮಾಜಿ ಅಧ್ಯಕ್ಷರಾಗಿ, ಪಶ್ಚಿಮ ಆಫ್ರಿಕಾದ ಸೀರಾಲಿಯೋನ್ ವಿಶೇಷ ನ್ಯಾಯಾಲಯದಲ್ಲಿ (5 ವರ್ಷಗಳ ಕಾಲ) ಅಂತರರಾಷ್ಟ್ರೀಯ ನಾಗರಿಕ ಸೇವಕರಾಗಿ ಮತ್ತು ಲೆಬನಾನ್‌ನ ವಿಶೇಷ ನ್ಯಾಯಾಲಯದಲ್ಲಿ ಅಂತರರಾಷ್ಟ್ರೀಯ ನಾಗರಿಕ ಸೇವಕರಾಗಿ 9 ವರ್ಷಗಳ ಕಾಲ ಅದೇ ಹುದ್ದೆಯನ್ನು ಹೊಂದಿದ್ದರು.
ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ, ಚಂದ್ರಶೇಖರ್, ವಿ ಪಿ ಸಿಂಗ್, ಎಚ್ ಡಿ ದೇವೇಗೌಡ, ಐ ಕೆ ಗುಜರಾಲ್ ಮತ್ತು ಇನ್ನೂ ಅನೇಕ ಪ್ರಧಾನ ಮಂತ್ರಿಗಳ ನಿಕಟ ರಕ್ಷಣಾ ತಂಡದಲ್ಲಿ ಎಸ್‌ಪಿಜಿ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ.

ಮಂಗಳೂರಿನಲ್ಲಿ ಸತತ 3 ವರ್ಷಗಳಿಂದ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಯವರ ನೇತೃತ್ವದಲ್ಲಿ ನಡೆಯುತ್ತಿರುವ ಬೀಚ್ ರೆಸ್ಲಿಂಗ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿಭಾಯಿಸಿದ ನಿತ್ಯಾನಂದ ಶೆಟ್ಟಿ ಅವರು ಕರ್ನಾಟಕ ಬೀಚ್ ರೆಸ್ಲಿಂಗ್ ನ ಚೇರ್ ಮೆನ್ ಆಗಿ ಆಯ್ಕೆಯಾಗಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

Trending

Copyright © 2025 Deevatige

error: Content is protected !!