Connect with us

crime

ಕೋಲಾರದಲ್ಲಿ ಕಲಬೆರೆಕೆ ಹಾಲು ತಯಾರಿಕಾ ಜಾಲಾ ಪತ್ತೆ ; 8 ಮಂದಿ ದುಷ್ಕರ್ಮಿಗಳ ಬಂಧನ

Published

on

ಕಲಬೆರಕೆ ಹಾಲು ತಯಾರಿಸುತ್ತಿದ್ದ ಮನೆ ಮೇಲೆ ಪೊಲೀಸರು ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಕಲಬೆರೆಕೆ ಹಾಲು ತಯಾರಿಕಾ ಜಾಲಾ ಪತ್ತೆ ಹಚ್ಚಿದ ಘಟನೆ ಕೆಜಿಎಫ್‌ನಿಂದ ವರದಿಯಾಗಿದೆ.
ಕೋಲಾರ (kolar) ಜಿಲ್ಲೆಯ ಗಡಿಭಾಗದಲ್ಲಿ ಕಲಬೆರಕೆ ಹಾಲು ತಯಾರಿಕಾ ಜಾಲಾ ಪತ್ತೆಯಾಗಿದ್ದು, ಕೆಮಿಕಲ್ ಬಳಸಿ ಹಾಲು ತಯಾರಿಸುತ್ತಿದ್ದ ಆಘಾತಕಾರಿ ಮಾಹಿತಿ ಬಯಲಾಗುತ್ತಿದ್ದಂತೆ ದುಷ್ಕರ್ಮಿಗಳ ವಿರುದ್ಧ ಜನ ಆಕ್ರೋಶಿತರಾಗಿದ್ದಾರೆ.


ಕೋಲಾರದ ಕೆಜಿಎಫ್ (KGF) ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಕಲಬೆರಕೆ ಹಾಲು ತಯಾರಿಸುತ್ತಿದ್ದ ಮನೆ ಮೇಲೆ ಕೆಜಿಎಫ್‌ನ ಆಂಡರ್‌ಸನ್ ಪೊಲೀಸರು ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕಲಬೆರಕೆ ಹಾಲು ತಯಾರು ಮಾಡುತ್ತಿದ್ದ 8 ಮಂದಿ ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ದುಷ್ಕರ್ಮಿಗಳು ಕಲಬೆರಕೆ ಹಾಲು ತಯಾರಿಕೆಗೆ ಶಾಲೆ, ಅಂಗನವಾಡಿಗೆ ಪೂರೈಸುವ ನಂದಿನಿ ಹಾಲು ಪೌಡರ್ (NANDINI MILK POWDER), ಪುಷ್ಟಿ ಪೌಡರ್ ಬಳಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.


ಹಾಲು ಗಟ್ಟಿಯಾಗಲು ಫಾಮ್ ಆಯಿಲ್ ಬಳಕೆ
ಕೋಲಾರದ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದಲ್ಲಿ ಅಧಿಕಾರಿಗಳು ಮತ್ತು ಪೊಲೀಸರು ಕಲಬೆರಕೆ ಹಾಲು ದಂಧೆ ಪತ್ತೆ ಮಾಡಿದ್ದಾರೆ. ಹಾಲು ಗಟ್ಟಿಯಾಗಲು ಕೆಮಿಕಲ್ ಮಿಶ್ರಿತ ಫಾಮ್ ಆಯಿಲ್ ಬಳಸುತ್ತಿದ್ದ ಆಂಧ್ರ ಮೂಲದ ವೆಂಕಟೇಶಪ್ಪ, ಬಾಲಾಜಿ, ದಿಲೀಪ್, ಬಾಲರಾಜು ಮತ್ತು ಮನೋಹರ್ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಿದ್ದಾರೆ.

ಇನ್ನು ಈ ಬಗ್ಗೆ ಎಸ್‌ಪಿ ಶಿವಾಂಶು ಅವರು ಮಾತನಾಡಿ, ಕಲಬೆರಕೆ ಹಾಲು ದಂಧೆಯ ಬಗ್ಗೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ತೇವೆ ಹೇಳಿದ್ದಾರೆ.
ಫಾಮ್ ಆಯಿಲ್ ಬಳಸಿ ಕಲಬೆರಕೆ ಹಾಲು ತಯಾರಿಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಸರ್ಕಾರಿ ಶಾಲೆಗೆ ಸೇರಿದ ನಂದಿನಿ ಹಾಲು ಪೌಡರ್ ಹಾಗು ಅಂಗನವಾಡಿಯ ಪುಷ್ಟಿ ಪ್ಯಾಕೆಟ್‌ಗಳು ಪತ್ತೆಯಾಗಿದೆ. ದುಷ್ಕರ್ಮಿಗಳು ಕಲಬೆರಕೆ ದಂಧೆಗೆ ಸರ್ಕಾರಿ ಶಾಲೆಗೆ ಪೂರೈಸುವ, ಅವಧಿ ಮೀರಿದ ಹಾಲು ಪುಡಿ ಬಳಕೆ ಮಾಡುತ್ತಿದ್ದರು ಎಂಬ ಆಘಾತಕಾರಿ ಅಂಶ ಬಯಲಾಗಿದೆ.


ಸಮಯಗಳ ಹಿಂದೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ಸವಟೂರು ಗ್ರಾಮದಲ್ಲಿ ನರೇಶ್ ರೆಡ್ಡಿ ಎಂಬವರಿಗೆ ಸೇರಿದ ಹಾಲಿನ ಘಟಕದ ಮೇಲೆ ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಕೆಮಿಕಲ್ ಹಾಲು ತಯಾರಿಕೆಗೆ ಬಳಸುತ್ತಿದ್ದ ಕೆಮಿಕಲ್ ಸೇರಿದಂತೆ ಉಪಕರಣಗಳನ್ನ ವಶಕ್ಕೆ ಪಡೆದಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಗಡಿ ಭಾಗದಲ್ಲಿ ತಿರುಮಲ ಹಾಲಿನ ಡೈರಿಗೆ ಹಾಲು ಸರಬರಾಜು ಮಾಡುತ್ತಿದ್ದ ನರೇಶ್ ರೆಡ್ಡಿ ಎಂಬವರಿಗೆ ಸೇರಿದ ಘಟಕದಲ್ಲಿ ಕೆಮಿಕಲ್ ಹಾಲು ತಯಾರಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿತ್ತು. ಅದರಂತೆ ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿತ್ತು.


ಅಲ್ಲದೇ ಕೆಮಿಕಲ್ ಹಾಲಿನ ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿಯಲ್ಲಿ ಕೆಮಿಕಲ್ ಹಾಲಿನ ಮಾದರಿಯಲ್ಲಿ ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ. ಇನ್ನೂ ನಂಗಲಿ ಪೊಲೀಸ್ ಠಾಣೆಯಲ್ಲಿ ಆಹಾರ ಸುರಕ್ಷಿತ ಕಾಯ್ದೆ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ನರೇಶ್ ರೆಡ್ಡಿ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಂಗಳೂರಿನಲ್ಲಿ ಭೀಕರ ಸರಣಿ ಹತ್ಯಾಕಾಂಡ: ಕೌಟುಂಬಿಕ ಕಲಹಕ್ಕೆ ಪತ್ನಿ ಸೇರಿ ಏಳು ಮಂದಿಯ ಬಲಿ ಪಡೆದ ಕ್ಯಾಬ್ ಚಾಲಕ!

Published

on

ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ತಲೆಬಾಗಿಸುವಂತಹ ಭೀಕರ ಹಾಗೂ ದುರಂತಮಯ ಘಟನೆಯೊಂದು ಬೆಳಕಿಗೆ ಬಂದಿದೆ. ಕೌಟುಂಬಿಕ ಮನಸ್ತಾಪ ಹಾಗೂ ದ್ವೇಷದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ನಡೆದಿರುವ ಈ ಸರಣಿ ಹತ್ಯಾಕಾಂಡ ನಗರದ ಜನತೆಯನ್ನು ಬೆಚ್ಚಿಬೀಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಇಂದುಶೇಖರ್ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ದುರ್ದೈವಿಗಳು:

ಶ್ರೀರಾಮಪುರದ ನಿವಾಸಿಗಳಾದ:

  1. ರೂಪವತಿ (ಅತ್ತೆ)
  2. ಸುನೀತಾ (ಪತ್ನಿ)
  3. ಶಿವಕುಮಾರ್‌ (ಭಾವ)
  4. ಶಂಕರ್‌ (ಭಾವ)
  5. ದಿವ್ಯಾ (ಶಿವಕುಮಾರ್ ಪತ್ನಿ/ಸೊಸೆ)
  6. ನಳಿನಿ (ಶಂಕರ್ ಪತ್ನಿ/ಸೊಸೆ)
  7. ಪುನೀತ್‌ (ಮೊಮ್ಮಗ)

ದುರಂತದ ಹಿನ್ನೆಲೆ: ತವರು ಮನೆಯ ಒಡನಾಟವೇ ಕೊಲೆಗೆ ಕಾರಣ?

ಸುಮಾರು 20 ವರ್ಷಗಳ ಹಿಂದೆ ಇಂದುಶೇಖರ್ ಮತ್ತು ಸುನೀತಾ ಅವರ ವಿವಾಹವಾಗಿತ್ತು. ರಾಜಾಜಿನಗರದ ಭಾಷ್ಯಂ ವೃತ್ತದ ಸಮೀಪ ಈ ದಂಪತಿ ವಾಸವಾಗಿದ್ದರು. ಆರಂಭದಲ್ಲಿ ಚನ್ನಾಗಿದ್ದ ಸಂಸಾರದಲ್ಲಿ ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ವಿಷಯಗಳಿಗೆ ಸಂಬಂಧಿಸಿದಂತೆ ತೀವ್ರ ಭಿನ್ನಾಭಿಪ್ರಾಯಗಳು ಮೂಡಿದ್ದವು.

ಸುನೀತಾ ಅವರು ತಮ್ಮ ತಾಯಿ ರೂಪಾವತಿ ಹಾಗೂ ಸಹೋದರರಾದ ಶಿವಕುಮಾರ್ ಮತ್ತು ಶಂಕರ್ ಜೊತೆ ಹೆಚ್ಚು ನಿಕಟ ಬಾಂಧವ್ಯ ಹೊಂದಿದ್ದರು. ತವರು ಮನೆಗೆ ಆಗಾಗ್ಗೆ ತೆರಳುತ್ತಿದ್ದ ಪತ್ನಿಯ ನಡವಳಿಕೆಗೆ ಇಂದುಶೇಖರ್ ನಿರ್ಬಂಧ ವಿಧಿಸಿದ್ದ. ಆದಾಗ್ಯೂ ಸುನೀತಾ ತವರಿನೊಂದಿಗಿನ ಸಂಬಂಧವನ್ನು ಕಡಿದುಕೊಂಡಿರಲಿಲ್ಲ. ಇದರಿಂದ ಆಕ್ರೋಶಗೊಂಡಿದ್ದ ಆರೋಪಿ, ತನ್ನ ಬದುಕಿನ ಎಲ್ಲಾ ಸಮಸ್ಯೆಗಳಿಗೆ ಪತ್ನಿಯ ತವರು ಮನೆಯವರೇ ಕಾರಣ ಎಂದು ನಂಬಿ, ಇಡೀ ಕುಟುಂಬವನ್ನೇ ಮುಗಿಸಲು ಸಂಚು ರೂಪಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಹಂತ ಹಂತವಾಗಿ ನಡೆದ ಭೀಕರ ಹತ್ಯಾಕಾಂಡ:

ಪತ್ನಿಯ ಕೊಲೆ ಹಾಗೂ ಶವ ವಿಲೇವಾರಿ:ಮೊದಲು ಪತ್ನಿ ಸುನೀತಾಳ ತಲೆಗೆ ರುಬ್ಬುಗುಂಡಿನಿಂದ ಹೊಡೆದು ಹತ್ಯೆ ಮಾಡಿದ ಆರೋಪಿ, ಶವವನ್ನು ತನ್ನ ಕಾರಿನಲ್ಲಿ ಸಾಗಿಸಿ ನಂದಿ ಬೆಟ್ಟದ ತಪ್ಪಲಿನಲ್ಲಿ ಎಸೆದಿದ್ದಾನೆ. ಯಾರಿಗೂ ಅನುಮಾನ ಬಾರದಂತೆ “ಆಕೆ ಸ್ನೇಹಿತೆಯರೊಂದಿಗೆ ಪ್ರವಾಸಕ್ಕೆ ಹೋಗಿದ್ದಾಳೆ” ಎಂದು ನೆರೆಹೊರೆಯವರಿಗೆ ಸುಳ್ಳು ಹೇಳಿ, ಆಕೆಯ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ.

ಮದ್ಯದ ಪಾರ್ಟಿ ನೆಪದಲ್ಲಿ ಇಬ್ಬರ ಹತ್ಯೆ:ತನ್ನ ಸಂಚಿನ ಎರಡನೇ ಹಂತವಾಗಿ ಪತ್ನಿಯ ಸಹೋದರರಾದ ಶಿವಕುಮಾರ್ ಮತ್ತು ಶಂಕರ್ ಅವರನ್ನು ಮನೆಗೆ ಕರೆಸಿಕೊಂಡು ಮದ್ಯದ ಪಾರ್ಟಿ ಏರ್ಪಡಿಸಿದ್ದ. ಕುಡಿತದ ಅಮಲಿನಲ್ಲಿದ್ದಾಗ ಅವರಿಬ್ಬರನ್ನೂ ಅದೇ ರುಬ್ಬುಗುಂಡಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸೊಸೆಯಂದಿರು, ಅತ್ತೆ ಮತ್ತು ಮಗುವಿನ ಬಲಿ:ಬಳಿಕ ಶಂಕರ್ ಪತ್ನಿ ನಳಿನಿ, ಶಿವಕುಮಾರ್ ಪತ್ನಿ ದಿವ್ಯಾ, ಅತ್ತೆ ರೂಪಾವತಿ ಹಾಗೂ ಶಂಕರ್ ಅವರ ಸಣ್ಣ ಮಗ ಪುನೀತ್‌ನನ್ನು ಒಬ್ಬೊಬ್ಬರಾಗಿ ಮನೆಗೆ ಕರೆಸಿಕೊಂಡು ಅತ್ಯಂತ ಪಾತಕ ರೀತಿಯಲ್ಲಿ ಹತ್ಯೆ ಮಾಡಿದ್ದಾನೆ.

ಸಾಕ್ಷ್ಯ ನಾಶಕ್ಕೆ ಕಠಿಣ ಪ್ರಯತ್ನ:ಕೊಲೆಯ ಬಳಿಕ ಏಳೂ ಮೃತದೇಹಗಳನ್ನು ಒಂದೇ ಸ್ಥಳದಲ್ಲಿ ಇರಿಸದೆ, ಕಾರಿನಲ್ಲಿ ಸಾಗಿಸಿ ಬೇರೆ ಬೇರೆ ಪ್ರದೇಶಗಳಲ್ಲಿ ಎಸೆದಿದ್ದಾನೆ. ಮನೆಗೆ ಮರಳಿ ರಕ್ತದ ಕಲೆಗಳನ್ನು ತಳೆದು ಶುಚಿಗೊಳಿಸಿದ್ದಲ್ಲದೆ, ಕೃತ್ಯಕ್ಕೆ ಬಳಸಿದ್ದ ರುಬ್ಬುಗುಂಡನ್ನು ಕೆಮಿಕಲ್ ಬಳಸಿ ಸ್ವಚ್ಛಗೊಳಿಸಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾನೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

    ಮಗಳು ನಳಿನಿ ದಿಢೀರನೆ ನಾಪತ್ತೆಯಾಗಿದ್ದರಿಂದ ಆತಂಕಗೊಂಡ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಇಂದುಶೇಖರ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದಾಗ ಈ ಅಸಲಿ ಭೀಕರ ಸರಣಿ ಹತ್ಯೆಯ ಕರಾಳ ಮುಖ ಅನಾವರಣಗೊಂಡಿದೆ.

    ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ಚುರುಕು:

    ಪ್ರಸ್ತುತ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೃತ್ಯಕ್ಕೆ ಬಳಸಿದ ಕಾರು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ನೀಡಿದ ಮಾಹಿತಿ ಆಧಾರದ ಮೇಲೆ ನಂದಿ ಬೆಟ್ಟ ಸೇರಿದಂತೆ ಹಲವು ಕಡೆ ಶೋಧ ನಡೆಸಲಾಗಿದ್ದು, ಮಗು ಪುನೀತ್‌ನ ಮೃತದೇಹ ಪತ್ತೆಯಾಗಿದೆ.

    ಉಳಿದ ಆರು ಮಂದಿಯ ಮೃತದೇಹಗಳ ಪತ್ತೆಗಾಗಿ ಉತ್ತರ ವಿಭಾಗದ ಮೂವರು ಎಸಿಪಿಗಳನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿದೆ. ಹತ್ಯೆ ನಡೆದ ಸ್ಥಳ, ಶವ ಸಾಗಿಸಿದ ಮಾರ್ಗ ಹಾಗೂ ಸಾಕ್ಷ್ಯ ನಾಶದ ಪ್ರಯತ್ನಗಳ ಬಗ್ಗೆ ಸಮಗ್ರ ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

    Continue Reading

    crime

    ಕುಕ್ಕೆ ಸುಬ್ರಹ್ಮಣ್ಯ: ನದಿಗೆ ಹಾರಿದ ಮಹಿಳೆಗೆ ಮೊಸಳೆ ಕಚ್ಚಿದ್ದೇ ಜೀವದಾನ!

    Published

    on

    ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಮೊಸಳೆ ದಾಳಿಯಿಂದ ಭಯಗೊಂಡು ಚೀರಾಟ – ಸ್ಥಳೀಯರ ಸಮಯಪ್ರಜ್ಞೆಯಿಂದ ಸುರಕ್ಷಿತ ರಕ್ಷಣೆ

    ಮಂಗಳೂರು: ಕೌಟುಂಬಿಕ ಮನಸ್ತಾಪದಿಂದ ಬೇಸತ್ತು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರು ಮೊಸಳೆಯ ದಾಳಿಯಿಂದಾಗಿ ಜೀವ ಉಳಿಸಿಕೊಂಡಿರುವ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸೇತುವೆ ಬಳಿ ನವೆಂಬರ್ 4ರ ತಡರಾತ್ರಿ ನಡೆದಿದೆ.

    ಉಡುಪಿ ಮೂಲದ ಮಹಿಳೆಯೊಬ್ಬರು ಕೌಟುಂಬಿಕ ವಿಚಾರಗಳಿಂದ ಮನನೊಂದು ನವೆಂಬರ್ 4ರ ತಡರಾತ್ರಿ ಕುಮಾರಧಾರ ಸೇತುವೆಯ ಮೇಲಿನಿಂದ ನದಿಗೆ ಹಾರಿದ್ದಾರೆ. ಆದರೆ, ನೀರಿಗೆ ಧುಮುಕಿದ ತಕ್ಷಣವೇ ನದಿಯಲ್ಲಿದ್ದ ಮೊಸಳೆಯೊಂದು ಮಹಿಳೆಗೆ ಕಚ್ಚಿದೆ ಎನ್ನಲಾಗಿದೆ. ಮೊಸಳೆಯ ದಾಳಿಯಿಂದ ತೀವ್ರ ಭಯ ಹಾಗೂ ನೋವಿನಿಂದ ಕಂಗಾಲಾದ ಮಹಿಳೆ ನದಿಯ ಮಧ್ಯದಲ್ಲೇ ಜೋರಾಗಿ ಚೀರಾಡಲು ಆರಂಭಿಸಿದ್ದಾರೆ.

    ಮಹಿಳೆಯ ಕಿರುಚಾಟ ಕೇಳಿದ ಸೇತುವೆ ಸಮೀಪದ ವಸತಿಗೃಹದ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣ ಟಾರ್ಚ್‌ ಹಿಡಿದು ನದಿಯ ದಂಡೆಯತ್ತ ಧಾವಿಸಿದ್ದಾರೆ. ಮಹಿಳೆಯ ನಿರಂತರ ಚೀರಾಟ ಹಾಗೂ ಜನರ ಆಗಮನದಿಂದ ಗಾಬರಿಗೊಂಡ ಮೊಸಳೆ ಆಕೆಯನ್ನು ಬಿಟ್ಟು ನೀರಿನಲ್ಲಿ ಮರೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಮಹಿಳೆಯನ್ನು ಸುರಕ್ಷಿತವಾಗಿ ನೀರಿನಿಂದ ಹೊರತೆಗೆದು ದಂಡೆಗೆ ಕರೆತಂದಿದ್ದಾರೆ.

    ವಿಶೇಷವೆಂದರೆ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ನದಿಗೆ ಹಾರಿದ್ದ ಮಹಿಳೆ ಮೊಸಳೆಯ ದಾಳಿಯಿಂದ ಭಯಭೀತರಾಗಿ ಚೀರಾಡಿದ್ದೇ ಸ್ಥಳೀಯರ ಗಮನ ಸೆಳೆಯಲು ಕಾರಣವಾಗಿದೆ. ಹೀಗಾಗಿ ಮೊಸಳೆಯ ದಾಳಿಯೇ ಆಕೆಯ ಜೀವ ಉಳಿಸಲು ಪರೋಕ್ಷವಾಗಿ ಕಾರಣವಾಯಿತು ಎಂಬ ಅಚ್ಚರಿ ಸ್ಥಳೀಯರಲ್ಲಿ ವ್ಯಕ್ತವಾಗಿದೆ.

    ಘಟನೆಯ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೌಟುಂಬಿಕ ಮನಸ್ತಾಪದಿಂದ ಬೇಸತ್ತು ಉಡುಪಿಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ನದಿಗೆ ಹಾರಿರುವುದಾಗಿ ಮಹಿಳೆ ತಿಳಿಸಿದ್ದಾರೆ.

    ಬಳಿಕ ಪೊಲೀಸರು ಉಡುಪಿಯಲ್ಲಿದ್ದ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಮಹಿಳೆಗೆ ಸೂಕ್ತ ಸಮಾಲೋಚನೆ ಹಾಗೂ ಕೌನ್ಸೆಲಿಂಗ್ ವ್ಯವಸ್ಥೆ ಕಲ್ಪಿಸಿ, ಕುಟುಂಬಸ್ಥರೊಂದಿಗೆ ಸುರಕ್ಷಿತವಾಗಿ ಊರಿಗೆ ಕಳುಹಿಸಿಕೊಟ್ಟಿದ್ದಾರೆ.

    ಸಾವಿನ ದವಡೆಯಿಂದ ಪಾರಾದ ಮಹಿಳೆ! ಮೊಸಳೆಯ ದಾಳಿ, ಮಹಿಳೆಯ ಚೀರಾಟ, ಸ್ಥಳೀಯರ ಸಮಯಪ್ರಜ್ಞೆ ಹಾಗೂ ಪೊಲೀಸರ ಮಧ್ಯಸ್ಥಿಕೆಯಿಂದಾಗಿ ಕೊನೆಗೂ ಮಹಿಳೆಯ ಜೀವ ಉಳಿದಿದೆ.

    Continue Reading

    arrest

    ಪೆರ್ಡೂರು ಪ್ರದೀಪ್ ಪೂಜಾರಿ ಹಲ್ಲೆ, ಆತ್ಮಹತ್ಯೆ ಪ್ರಕರಣ – ಇಬ್ಬರು ಆರೋಪಿಗಳು ಮಧ್ಯಪ್ರದೇಶದಲ್ಲಿ ಬಂಧನ..

    Published

    on

    ​ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ (28) ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ​

    ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರು, ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದೆ. ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ​

    ಪ್ರಕರಣದ ಹಿನ್ನೆಲೆ:​

    ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಮೇಲೆ ಅಕ್ಟೋಬರ್ 27ರ ರಾತ್ರಿ ಶ್ರಾವ್ಯಾ ಶೆಟ್ಟಿ ಕುಟುಂಬದವರು ಮೂರು ಕಾರುಗಳಲ್ಲಿ ಬಂದು ಅಡ್ಡಗಟ್ಟಿ ಭೀಕರವಾಗಿ ಹಲ್ಲೆ ನಡೆಸಿದ್ದರು ಎಂದು ಪ್ರದೀಪ್ ಅವರ ಸಹೋದರ ದಿಲೀಪ್ ಕುಮಾರ್ ದೂರಿನಲ್ಲಿ ಆರೋಪಿಸಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಅಕ್ಟೋಬರ್ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅಕ್ಟೋಬರ್ 30ರ ಸಂಜೆ 5:30ರ ಸುಮಾರಿಗೆ ಆಸ್ಪತ್ರೆಯ ಶೌಚಾಲಯದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದರು. ​ಈ ಘಟನೆಗೆ ಸಂಬಂಧಿಸಿದಂತೆ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.

    ವಿಶೇಷ ತಂಡಗಳ ರಚನೆ:

    ಪ್ರಕರಣದ ತನಿಖೆಗಾಗಿ ಹಾಗೂ ಆರೋಪಿಗಳ ಪತ್ತೆಗೆ ಎಸ್‌ಪಿ ಅವರು 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದರು. ​ಅಧಿಕಾರಿ ಅಮಾನತು: ಪ್ರದೀಪ್ ಅವರ ಮೇಲೆ ಹಲ್ಲೆ ನಡೆದಾಗ ಆರಂಭದಲ್ಲಿ ಎಫ್‌ಐಆ‌ರ್ (FIR) ದಾಖಲಿಸದೆ ಕೇವಲ ಎನ್‌ಸಿ (NC) ದಾಖಲಿಸಿದ್ದ ಹಿರಿಯಡ್ಕ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (SI) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಅವರನ್ನು ಕರ್ತವ್ಯದಿಂದ ತೆರವುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ​ಪೂರ್ವ ದೂರುಗಳು ಹಾಗೂ ಚಾರ್ಜ್‌ಶೀಟ್:​ಇನ್ನೊಂದೆಡೆ, ಮೃತ ಪ್ರದೀಪ್ ಪೂಜಾರಿ ವಿರುದ್ಧವೂ ಯುವತಿ ಈ ಹಿಂದೆ 3 ಬಾರಿ ದೂರು ನೀಡಿದ್ದರು: ​2025 ನವೆಂಬರ್ 10: ಬೆದರಿಕೆ ಕರೆ ಹಾಕಿದ ಆರೋಪ. ​ನವೆಂಬರ್ 29: ಅತ್ಯಾಚಾರ ಆರೋಪ. ​ಅಕ್ಟೋಬರ್ 28: ಖಾರದ ಪುಡಿ ಎರಚಿ ಕೊಲೆಯತ್ನ ನಡೆಸಿದ ಆರೋಪ. ​ಈ ಮೂರೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ​ಸದ್ಯ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.​

    Continue Reading

    ads (2)
    ads (3)
    ads (4)
    ads (5)
    ads (6)
    ads (1)
    ads (8)
    ads (7)

    Trending

    Copyright © 2025 Deevatige

    error: Content is protected !!