Connect with us

crime

ಕೋಳಿಜೂಜಿನಲ್ಲಿ 1.53 ಕೋಟಿ ಬಾಚಿದ ರಮೇಶ್

Published

on

ಇದೀಗ ಎಲ್ಲಿ ಹೋದರೂ ಕೋಳಿಅಂಕದ್ದೇ ಸುದ್ದಿ.. ಜೂಜು ರಹಿತವೋ ಸಹಿತವೋ ಕೋಳಿ ಅಂಕ ನಡೆಸುವಂತಿಲ್ಲ.. ಪ್ರಾಣಿಹಿಂಸೆ ಹೆಸರಿನಲ್ಲಿ ತಡೆಯಿದೆ. ಕರಾವಳಿಯಲ್ಲಿ ಇನ್ನು ಕೋಳಿ ಅಂಕ ನಡೆಸುವುದು ಸಾಧ್ಯವೇ ಇಲ್ಲ ಎಂದು ಕದ್ದು ಮುಚ್ಚಿ ಮಜಾ ಪಡೆಯುತ್ತಾ ಆ ವಿಚಾರವನ್ನು ಜನ ಬಿಟ್ಟೇ ಬಿಟ್ಟಿದ್ದಾರೆ. ಈ ಮದ್ಯೆ ಕೋಳಿ ಅಂಕದ ಜೂಜಿನಲ್ಲಿ ಒಬ್ಬರು ಬರೋಬ್ಬರಿ 1.53 ಕೋಟಿ ಪಡೆದುಕೊಂಡ ಸುದ್ದಿಯೊಂದು ಹರಿದಾಡುತ್ತಿದ್ದು, ಕಾನೂನು ಪಾಲಕರು ಅವರ ಹಿಂದೆ ಬಿದ್ದಿದ್ದಾರೆ.
ತಾಡೇಪಲ್ಲಿಗುಡೆಮ್ ಪಟ್ಟಣದ ಕೋಳಿ ಕಾಳಗದಲ್ಲಿ ರಾಜಮಂಡ್ರಿ ರಮೇಶ್ ಎಂಬವರೇ ಕೋಳಿ ಅಂಕದಲ್ಲಿ ಪಣಕಟ್ಟಿ 1.53 ಕೋಟಿ ರೂ. ಗೆದ್ದ ಉದ್ಯಮಿ. . ಕಾನೂನು ನಿಷೇಧದ ನಡುವೆಯೂ ಆಂದ್ರದಲ್ಲಿ ಹಬ್ಬದ ವೇಳೆ ಕೋಳಿ ಮತ್ತು ಎಮ್ಮೆ ಕಾಳಗಗಳು ನಡೆಯುತ್ತಲೇ ಇದೆ

ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಸಂಕ್ರಾoತಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾದ ಕೋಳಿ ಅಂಕದಲ್ಲಿ ವ್ಯಕ್ತಿಯೊಬ್ಬ1.53 ಕೋಟಿ ರೂ.ಗಳನ್ನು ಗೆದ್ದಿರುವ ಘಟನೆ ನಡೆದಿದ್ದು, ಈ ಮೊತ್ತವು ಕೋಳಿ ಅಂಕದ ಇತಿಹಾಸದಲ್ಲೇ ಅತೀ ಹೆಚ್ಚಿನ ಮೊತ್ತವಾಗಿ ದಾಖಲೆಯಾಗಿದೆ. ತಾಡೇಪಲ್ಲಿಗುಡೆಮ್ ಪಟ್ಟಣದಲ್ಲಿ ನಡೆದ ಈ ಜೂಜಿನಲ್ಲ್ಲಿ ರಾಜಮಂಡ್ರಿ ರಮೇಶ್ (Rajamandri Ramesh) ಎಂಬ ವ್ಯಕ್ತಿ ತನ್ನ ಕೋಳಿಯ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.
ಸಂಕ್ರಾoತಿ ಹಬ್ಬದ ಆಚರಣೆಗಳ ಭಾಗವಾಗಿ ಆಯೋಜಿಸಲಾದ ಈ ಕೋಳಿ ಅಂಕದಲ್ಲಿ ರಮೇಶ್ ಮತ್ತು ಗುಡಿವಾಡ ಪ್ರಭಾಕರ್ ಎಂಬವರು ತಮ್ಮ ಕೋಳಿಗಳ ಮೇಲೆ ಭಾರೀ ಮೊತ್ತದ ಪಣ ತೊಟ್ಟಿದ್ದರು. ಹೋರಾಟಕ್ಕೆ ಬಳಸಲಾದ ಕೋಳಿಗಳ ಕಾಲುಗಳಿಗೆ ಸಣ್ಣ ಚೂರಿಗಳನ್ನು ಕಟ್ಟಲಾಗಿದ್ದು, ಈ ಹೋರಾಟದಲ್ಲಿ ರಮೇಶ್ ಅವರ ಕೋಳಿ ಗೆಲ್ಲುವ ಮೂಲಕ ವರ ಅಂಕದ ಕೋಳಿ ವಿಜಯಶಾಲಿಯಾಗಿ ಹೊರಹೊಮ್ಮಿ 1.53 ಕೋಟಿ ರೂ.ಗಳ ಮೊತ್ತವನ್ನು ಗೆಲ್ಲುವಂತೆ ಮಾಡಿದೆ.


ವಿಜಯದ ಬಳಿಕ ಮಾತನಾಡಿದ ರಮೇಶ್, “ನನ್ನ ಕೋಳಿಗಳನ್ನು ಹೋರಾಟಕ್ಕೆ ತಯಾರಿಸಲು ಕಳೆದ ಆರು ತಿಂಗಳುಗಳಿoದ ವಿಶೇಷ ಕಾಳಜಿ ವಹಿಸಿದ್ದೇನೆ. ಉತ್ತಮ ಆಹಾರ, ವ್ಯಾಯಾಮ ಮತ್ತು ವಿಶೇಷ ತಳಿಯ ಆಯ್ಕೆಯೇ ನನ್ನ ಗೆಲುವಿನ ರಹಸ್ಯ” ಎಂದು ತಿಳಿಸಿದ್ದಾರೆ. ಈ ಗೆಲುವಿನೊಂದಿಗೆ ರಮೇಶ್ ತಕ್ಷಣವೇ ಕೋಟ್ಯಾಧಿಪತಿಯಾಗಿದ್ದು, ಅವರ ಮನೆ ಮುಂದೆ ಜನಸಂದಣಿ ಜಮಾಯಿಸಿದ ದೃಶ್ಯಗಳು ಕಂಡುಬoದವು.
ವನ್ಯಜೀವಿ ಸಂರಕ್ಷಣಾ ಹಕ್ಕು ಸಂಘಟನೆಗಳ ಆಕ್ರೋಶ!
ಆದರೆ, ಈ ಘಟನೆಯು ಕೇವಲ ಸಂಭ್ರಮಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಳಿ ಕಾಳಗವು ಪ್ರಾಣಿ ಹಿಂಸೆ ಮತ್ತು ಜೂಜಿನ ರೂಪವಾಗಿದ್ದು, ಇದು ಕಾನೂನಾತ್ಮಕವಾಗಿ ನಿಷೇಧಿತ ಎಂಬ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಗುರುವಾರ ಸತತ ಎರಡನೇ ದಿನವೂ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕೋಳಿ ಅಂಕಗಳು ನಡೆದಿರುವ ವರದಿಗಳು ಹೊರಬಿದ್ದಿವೆ. ಹಬ್ಬದ ಹೆಸರಿನಲ್ಲಿ ಕಾನೂನು ಉಲ್ಲಂಘನೆ ನಡೆಯುತ್ತಿರುವುದರ ಬಗ್ಗೆ ಪ್ರಾಣಿ ಹಕ್ಕು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕೋರ್ಟ್ ನಿಷೇಧವಿದ್ದರೂ ಆಟ ಜಾರಿ!
ಇದೇ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ನಿಷೇಧ ಹೇರಿದ್ದರೂ ಅಸ್ಸಾಂನಲ್ಲಿಯೂ ಇಂತಹದ್ದೇ ಘಟನೆಗಳು ನಡೆದಿರುವುದು ಗಮನಾರ್ಹ. ಮಾಘ ಬಿಹು ಹಬ್ಬದ ಅಂಗವಾಗಿ ಮಧ್ಯ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ಬೈದ್ಯಾಬೋರಿ ಮತ್ತು ಅಹತ್ಗುರಿ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಎಮ್ಮೆ ಕಾಳಗಗಳು ನಡೆದಿವೆ. ಸ್ಥಳೀಯವಾಗಿ ‘ಮೊಹ್ ಜುಜ್’ ಎಂದು ಕರೆಯಲ್ಪಡುವ ಈ ಕಾಳಗಗಳನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳಿಂದ ಜನರು ಆಗಮಿಸಿದ್ದರು ಎಂದು ಪಿಟಿಐ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಅಧಿಕಾರಿಗಳು ನಿರಾಕರಿಸಿದ್ದು, “ವಿಷಯ ನ್ಯಾಯಾಲಯದಲ್ಲಿ ಬಾಕಿ ಇದೆ” ಎಂದು ಮಾತ್ರ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ಆಡಳಿತದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಎಳೆದಿದೆ.
ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ಕೋಳಿಜೂಜುಗಳು ಅವ್ಯಾಹಿತವಾಗಿ ನಡೆದಿರುವ ಬಗ್ಗೆ ಸಂಘಟನೆಗಳು ಇನ್ನಷ್ಟು ಆಕ್ರೋಶಿತರಾಗಿದ್ದು, ಕೋಳಿ ಅಂಕವನ್ನು ಕಾನೂನಾತ್ಮಕವಾಗಿ ನಿಷೇಧ ಮತ್ತು ದಂಡ ವಿಧಿಸಲು ಆಡಳಿತದ ವಿರುದ್ಧ ಹೋರಾಟ ಮುಂದುವರಿಯುವ ಸಾಧ್ಯತೆ ಕಂಡುಬರುತ್ತಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

crime

ಮಣಿಪಾಲ: ಬಾರ್, ಪಬ್‌ಗಳ ಮೇಲೆ ಪೊಲೀಸರ ಮಿಂಚಿನ ದಾಳಿ; ಮದ್ಯ ಸೇವಿಸುತ್ತಿದ್ದ 64 ಯುವಕರು, 23 ಯುವತಿಯರು

Published

on

ಮಣಿಪಾಲ: 21 ವರ್ಷದೊಳಗಿನವರಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪ್ರಮುಖ ಬಾರ್ ಮತ್ತು ಪಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಮದ್ಯ ಸೇವನೆಯಲ್ಲಿ ತೊಡಗಿದ್ದ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು 87 ಮಂದಿ ಸಿಕ್ಕಿಬಿದ್ದಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಈ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಗಾಗಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನೊಳಗೊಂಡ 6 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.

ದಾಳಿಗೊಳಗಾದ ಬಾರ್ ಮತ್ತು ಪಬ್‌ಗಳು:

ಪೊಲೀಸರು ಮಣಿಪಾಲ ವ್ಯಾಪ್ತಿಯ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು:

  1. ಎಕ್ಸ್ಟಸಿ 7ನೇ ಹೆವೆನ್ ಪಬ್, ಮಣಿಪಾಲ್
  2. ಸಾಯಿ ಸಾಗರ್ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
  3. ಡೌನ್ ದಿ ರೋಡ್ ಬಾರ್ ಮತ್ತು ರೆಸ್ಟೋರೆಂಟ್, ಮಣಿಪಾಲ್
  4. ಡೆಕ್ಸ್ಟರ್ ಬಾರ್ ಮತ್ತು ರೆಸ್ಟೋರೆಂಟ್
  5. ಡೀ ಟೀ ಬಾರ್ ಮತ್ತು ರೆಸ್ಟೋರೆಂಟ್, ಈಶ್ವರ್ ನಗರ
  6. ಜನನಿ ಬಾರ್ ಮತ್ತು ರೆಸ್ಟೋರೆಂಟ್ (ಎಡ್ಜ್ ಬಾರ್ ಮತ್ತು ರೆಸ್ಟೋರೆಂಟ್), ಈಶ್ವರ್ ನಗರ

ಕಾನೂನು ಉಲ್ಲಂಘನೆ ಮತ್ತು ಪ್ರಕರಣ ದಾಖಲು:

ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳ 10(1)(ಇ), ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 36(1)(ಬಿ) ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ (COTPA) ಕಾಯ್ದೆಯನ್ನು ಉಲ್ಲಂಘಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಹಾಗೂ ಹುಕ್ಕಾ ಮಾರಾಟ ಮಾಡುತ್ತಿದ್ದದ್ದು ತಪಾಸಣೆ ವೇಳೆ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿದ ಆಯಾ ಪಬ್ ಮತ್ತು ಬಾರ್‌ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ (ಮ್ಯಾನೇಜರ್) ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ 6 ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.

ಪೊಲೀಸರ ಎಚ್ಚರಿಕೆ:

“21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ, ಮದ್ಯ/ಹುಕ್ಕಾ ಪೂರೈಸುವ ಅಥವಾ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಗಳನ್ನು ಉಲ್ಲಂಘಿಸುವ ಬಾರ್ ಮತ್ತು ರೆಸ್ಟೋರೆಂಟ್‌ಗಳ ವಿರುದ್ಧ ಮುಂಬರುವ ದಿನಗಳಲ್ಲೂ ಇಂತಹುದೇ ಕಠಿಣ ಕಾನೂನು ಕ್ರಮಗಳು ಮುಂದುವರಿಯಲಿವೆ.” ಎಂದು ಪೊಲೀಸರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!