crime
ಮಹಿಳೆಯೊಂದಿಗೆ ಮುದ್ದಾಡ್ತಿರೋ ವಿಡಿಯೋ ವೈರಲ್! ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅನ್ನೋ ಆರೋಪ ; ಪೊಲೀಸ್ ಇಲಾಖೆ ಮಾನ ಹರಾಜು ಹಾಕಿದ ಹಿರಿಯ ಅಧಿಕಾರಿ
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯ ಅವರದ್ದು ಎನ್ನಲಾದ ಖಾಸಗಿ ವಿಡಿಯೋಗಳು ವೈರಲ್ ಆಗಿವೆ. ಡಿಜಿಪಿ ರಾಮಚಂದ್ರ ರಾವ್ ಅವರು ಮಹಿಳೆಯೊಂದಿಗೆ ಕಳೆದ ಖಾಸಗಿ ಕ್ಷಣದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ತಲ್ಲಣ ಸೃಷ್ಟಿಸುತ್ತಿದೆ. ಸರ್ಕಾರಿ ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಡಿಜಿಪಿ ರಾಮಚಂದ್ರರಾವ್ ಮಹಿಳೆಯೊಂದಿಗೆ ಮುದ್ದಾಡ್ತಿರೋ ವಿಡಿಯೋ ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ಸದ್ದು ಮಾಡುತ್ತಿದೆ. ಹಿರಿಯ ಅಧಿಕಾರಿಯ ಈ ನಡೆಗೆ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿ, ಹಾಲಿ ಡಿಜಿಪಿ ರಾಮಚಂದ್ರರಾವ್ ವಿರುದ್ಧ ಮಹಿಳೆಯರ ಜೊತೆ ಅಶ್ಲೀಲವಾಗಿ, ಅಸಭ್ಯವಾಗಿ ವರ್ತಿಸಿರೋ ರೀತಿಯಲ್ಲಿ ಇರುವ ವಿಡೀಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

. ಹಿರಿಯ ಪೊಲೀಸ್ ಅಧಿಕಾರಿ, ಹಾಲಿ ಡಿಜಿಪಿ ರಾಮಚಂದ್ರರಾವ್ ವಿರುದ್ಧ ಮಹಿಳೆಯರ ಜೊತೆ ಅಶ್ಲೀಲವಾಗಿ, ಅಸಭ್ಯವಾಗಿ ವರ್ತಿಸಿರೋ ಆರೋಪ ಕೇಳಿ ಬಂದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಮತ್ತೊಂದೆಡೆ ಭೇಟಿಗೆ ಬಂದಿದ್ದ ಡಿಜಿಪಿ ರಾಮಚಂದ್ರರಾವ್‌ಗೆ ಭೇಟಿಗೆ ಅವಕಾಶ ನೀಡದೇ ಅವರನ್ನು ಗೃಹಸಚಿವ ಡಾ. ಜಿ. ಪರಮೇಶ್ವರ್ ವಾಪಸ್ ಕಳಿಸಿದ್ದಾರೆ ಎನ್ನಲಾಗಿದೆ. ಇದರ ನಡುವೆ ವೈರಲ್ ವಿಡಿಯೋ ಕುರಿತಂತೆ ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ
ವೈರಲ್ ವಿಡಿಯೋ ಬಗ್ಗೆ ರಾಮಚಂದ್ರರಾವ್ ಮಾಧ್ಯಮಗಳಿಗೆ ಮೊದಲ ರಿಯಾಕ್ಷನ್ ನೀಡಿದ್ದಾರೆ. ಗೃಹಸಚಿವರ ನಿವಾಸದ ಬಳಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಇದು ೮ ವರ್ಷಗಳ ಹಳೆ ವಿಡಿಯೋ ಎಂದಿದ್ದಾರೆ. ಮತ್ತೊಂದೆಡೆ ಇದು ಎಐ ವಿಡಿಯೋ, ಇದರಲ್ಲಿ ಇರೋದು ನಾನಲ್ಲ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಮುಂದುವರಿದು ಅದು ಎಐ ವಿಡಿಯೋ, ನನಗೇನೂ ಗೊತ್ತಿಲ್ಲ ಎಂದಿದ್ದಾರೆ.ಇನ್ನು3 ಬೇರೆ ಬೇರೆ ವಿಡಿಯೋಗಳಿದ್ದು, ಎಲ್ಲರೂ ಒಬ್ಬರೇ ಮಹಿಳೆಯರಾ? ಅಥವಾ ಬೇರೆ ಬೇರೆ ಮಹಿಳೆಯರಾ ಎನ್ನುವುದು ಗೊತ್ತಾಗಿಲ್ಲ. ಇನ್ನು ಈ ಆರೋಪವನ್ನು ಖುದ್ದು ಡಿಜಿಪಿ ರಾಮಚಂದ್ರರಾವ್ ಅಲ್ಲಗಳೆದಿದ್ದಾರೆ. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಆ ಮಹಿಳೆಯರು ಯಾರು ಅಂತಾನೂ ಗೊತ್ತಿಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ.
ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯೊಂದಿಗೆ ಸರಸ ನಡೆಸುವ ದೃಶ್ಯಗಳು ಇದರಲ್ಲಿವೆ. ಇದು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೂ ಮುನ್ನ ನಡೆದಿರುವುದು ಎಂಬುದು ಬಹಿರಂಗವಾಗಿದ್ದು, ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿಯೂ ಇವರ ಹೆಸರು ತಳಕು ಹಾಕಿಕೊಂಡಿತ್ತು. ಅಧಿಕಾರ ದುರ್ಬಳಕೆ ಆರೋಪದಡಿ ಅಧಿಕಾರಿಯನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.
ಹಿರಿಯ ಪೊಲೀಸ್ ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದೆ. ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾನೂನು ಹೋರಾಟಕ್ಕೆ ಮುಂದಾದ ಡಿಜಿಪಿ
ಇನ್ನುಕಾನೂನು ಹೋರಾಟದ ಬಗ್ಗೆಯೂ ಡಿಜಿಪಿ ರಾಮಚಂದ್ರರಾವ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸದ್ಯ ರಹಸ್ಯ ಸ್ಥಳದಲ್ಲಿದ್ದು ಕಾನೂನಾತ್ಮಕ ಹೋರಾಟದ ಬಗ್ಗೆ ತಮ್ಮ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚೆ ಮಾಡುತ್ತಾ ಇದ್ದಾರಂತೆ. ದೂರು ಕೊಡೋದಾ? ಅಥವಾ ಬೇರೆ ಯಾವ ರೀತಿ ಹೋರಾಟ ಮಾಡಬೇಕು ಅನ್ನೋ ಬಗ್ಗೆ ಚರ್ಚಿಸಿದ್ದಾರಂತೆ. ಒಂದು ವೇಳೆ ದೂರು ಕೊಡೋದೇ ಆದ್ರೆ ಎಲ್ಲಿ ಕೊಡೋದು? ಸೈಬರ್ ಠಾಣೆಯಲ್ಲಿ ದೂರು ಕೊಡೋದಾ ಎನ್ನುವ ಬಗ್ಗೆ ವಿಚಾರಿಸಿದ್ದಾರೆ. ಚರ್ಚೆ ಬಳಿಕ ಕಾನೂನು ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳೋ ಸಾಧ್ಯತೆ ಇದೆ ಎನ್ನಲಾಗಿದೆ.

ಕಚೇರಿಯಲ್ಲಿ ಕುಳಿತು ಪೊಲೀಸ್ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ.

ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬAಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು.

ಯಾರು ಈ ರಾಮಚಂದ್ರ ರಾವ್?
ಕೆ. ರಾಮಚಂದ್ರ ರಾವ್ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ಲಿಮಿಟೆಡ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಸೇವೆ ಸಲ್ಲಿಸಿದ್ದರು. ೨೦೨೩ರಲ್ಲಿ ಇವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಡಿಜಿಪಿ ಮತ್ತು ಅಧ್ಯಕ್ಷ ಮತ್ತು ಎಂಡಿ ಆಗಿ ಬಡ್ತಿ ನೀಡಲಾಗಿತ್ತು. ಬಳಿಕ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ನೇಮಕಗೊಂಡಿದ್ದರು. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇವರ ಮಲಮಗಳು ರನ್ಯಾ ರಾವ್ ಭಾಗಿ ಪ್ರಕರಣ ಸಂಬoಧ ಪೊಲೀಸರ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಮಾರ್ಚ್ 2025ರಲ್ಲಿ ಇವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.
ಇಲಾಖೆಗೆ ದೊಡ್ಡ ಅಪಮಾನ’
ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ವಿಚಾರ ಸಂಬoಧ ಅಧಿಕಾರಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಟಿವಿ೯ ಮೂಲಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಹಿಂದೆಯೂ ರಾಮಚಂದ್ರ ರಾವ್ ಇದೇ ರೀತಿ ನಡೆದುಕೊಂಡಿದ್ದರು, ಆದರೂ ಇಲಾಖೆಯಲ್ಲಿ ಮುಂದುವರಿದಿದ್ದಾರೆ. ಕಚೇರಿಯಲ್ಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರೋದು, ಗೃಹ ಇಲಾಖೆಗೆ ದೊಡ್ಡ ಅಪಮಾನ ಎಂದಿದ್ದಾರೆ.

ತಪ್ಪು ಮಾಡಿದ್ರೆ ಶಿಸ್ತಿನ ಕ್ರಮ ಜರುಗಿಸುತ್ತೇವೆ
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಡಿಜಿಪಿ ರಾಮಚಂದ್ರ ರಾವ್ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಡಿಜಿಪಿ ರಾಮಚಂದ್ರರಾವ್ ಅವರದ್ದು ಎನ್ನಲಾದ ವಿಡಿಯೋ ಸಾಕಷ್ಟು ಸಂಚಲನ ಮೂಡಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ, ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಡಿಜಿಪಿ ರಾಮಚಂದ್ರರಾವ್ ವಿರುದ್ಧ ಗರಂ ಆದ್ರೂ. ಬೆಳಗಾವಿಯಲ್ಲಿ ಮಾತನಾಡಿರುವ ಸಿಎಂ, ತಪ್ಪು ಮಾಡಿದ್ರೆ ಶಿಸ್ತಿನ ಕ್ರಮ ಜರುಗಿಸುತ್ತೇವೆ, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
crime
ಸಕಲೇಶಪುರ ಲಾಡ್ಜ್ನಲ್ಲಿ ಕರಾಳ ರಾತ್ರಿ: ಬಾತ್ರೂಮ್ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರಣೆ:
ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.
ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್ನಲ್ಲಿ ಮೂವರು ಒಂದೇ ರೂಮ್ನಲ್ಲಿ ತಂಗಿದ್ದರು.
ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್ನ ಬಾತ್ರೂಮ್ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).
ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾತ್ರೂಮ್ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
