Bantawala
ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರಿಗೆ ಸನ್ಮಾನ
ವಿಟ್ಲ : ಐಕ್ಯ ವೇದಿಕೆ (ರಿ) ಕೊಡಾಜೆ ಇದರ ನೂತನ ಕಛೇರಿಗೆ ಬೇಟಿ ನೀಡಿದ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರನ್ನು ಐಕ್ಯ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಸಮಾಜದಲ್ಲಿ ಶಾಂತಿ ಸೌಹಾರ್ದತೆಯ ವಾತಾವರಣ ಮೂಡಿಸುವ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ಸಮಾಜಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡ ಐಕ್ಯ ವೇದಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನೆಟ್ಲಮುಡ್ನೂರು, ಮಾಣಿ, ಅನಂತಾಡಿ ಗ್ರಾಮಗಳಿಗೆ ಸೀಮಿತವಾಗಿರುವ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಐಕ್ಯ ವೇದಿಕೆಯು ಅಧ್ಯಕ್ಷ ಅಶ್ರಫ್ ಭಾರತ್, ಕೋಶಾಧಿಕಾರಿ ರಫೀಕ್ ಎಸ್.ಎಸ್., ಕಾರ್ಯದರ್ಶಿ ಆಬಿದ್ ನೇರಳಕಟ್ಟೆ, ಸದಸ್ಯರಾದ ಅಬೂಬಕ್ಕರ್ (ಅಬ್ಬು), ಮಜೀದ್ ಅನಂತಾಡಿ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ನಿರೂಪಿಸಿದರು.
Bantawala
ಗಾಂಜಾ ಮಾರಾಟ ಯತ್ನ: ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ
ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.
ಕಳೆದ 10.11.2020 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಅಂದಿನ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ಅವರು ತಂಡದೊಂದಿಗೆ ದಾಳಿ ನಡೆಸಿ, ಸುಮಾರು 49,000 ರೂ. ಮೌಲ್ಯದ 1.480 ಕಿ.ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 126/2020 ರಂತೆ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದ ತನಿಖೆಯನ್ನು ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಕೈಗೊಂಡು, ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿತನಾದ ಮಂಗಳೂರು ಬಂದರು ನಿವಾಸಿ ಟಿ.ಪಿ. ಫಾರೂಕ್ (50) ಎಂಬಾತನ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು ದಿನಾಂಕ 04-04-2026 ರಂದು ತೀರ್ಪು ಪ್ರಕಟಿಸಿದರು. ಆರೋಪಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 70,000 ರೂ. ದಂಡ ವಿಧಿಸಿ ಆದೇಶಿಸಲಾಗಿದೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಜೂಡಿತಾ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
Bantawala
ಅಕ್ರಮ ಕಲ್ಲುಕ್ವಾರಿಗೆ ತಹಶೀಲ್ದಾರ್ ತಂಡದಿಂದ ಮಿಂಚಿನ ದಾಳಿ.! ಸರ್ಕಾರಿ ಜಮೀನಿನಲ್ಲಿ ರಾಜಾರೋಷವಾಗಿ ಮೈನಿಂಗ್ ಮಾಫಿಯಾ.!
ಬಂಟ್ವಾಳ ತಾಲೂಕಿನ ವಿಟ್ಲ ಹೋಬಳಿ ವ್ಯಾಪ್ತಿಯ ಅಳಿಕೆ ಗ್ರಾಮದ ಕೋಟೆತ್ತಡ್ಕ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕ್ವಾರಿಗೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಕಲಿ ದಾಖಲೆ ಸೃಷ್ಟಿಸಿ, ಗಣಿ ಇಲಾಖೆಯ ಅಧಿಕಾರಿಯೊಬ್ಬರ ಕುಮ್ಮಕ್ಕಿನಿಂದ ನಡೆಯುತ್ತಿದ್ದ ಈ ದಂಧೆಯನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಘಟನೆಯ ಹಿನ್ನೆಲೆ:
ಅಳಿಕೆ ಗ್ರಾಮದ ನೆಗಳಗುಳಿ ನಿವಾಸಿ ಕೃಷ್ಣ ಕುಡಿಯ ಅವರ ಪುತ್ರ ಚಂದ್ರ ಕುಡಿಯ ಎಂಬವರಿಗೆ 1994ರಲ್ಲಿ ಸರ್ವೆ ನಂ. 377/2ರಲ್ಲಿ 3.15 ಎಕರೆ ಹಾಗೂ 410/1ಬಿಯಲ್ಲಿ 0.80 ಎಕರೆ ಸರ್ಕಾರಿ ಜಮೀನು ಮಂಜೂರಾಗಿತ್ತು. ಆದರೆ, ಕಳೆದ ಕೆಲವು ವರ್ಷಗಳಿಂದ ಚಂದ್ರ ಕುಡಿಯ ಅವರು ಕಾರ್ಕಳ ಪರಿಸರದಲ್ಲಿ ವಾಸವಿದ್ದರು. ಈ ನಡುವೆ, ಕಳೆದ ಎರಡು ವಾರಗಳಿಂದ ಕೋಟೆತ್ತಡ್ಕ ಮುಳಿಯ ಎಂಬಲ್ಲಿನ ಮಂಜೂರಾದ ಸರ್ಕಾರಿ ಜಮೀನಿನಲ್ಲಿ ಏಕಾಏಕಿ ಬೃಹತ್ ಮಟ್ಟದ ಕೆಂಪು ಕಲ್ಲಿನ ಗಣಿಗಾರಿಕೆ ಆರಂಭವಾಗಿತ್ತು.

ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ:
ಸ್ಥಳೀಯರು ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಹಾಗೂ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ ಎಂ.ಎನ್. ಮತ್ತು ತಂಡ ಸ್ಥಳಕ್ಕೆ ದಾಳಿ ನಡೆಸಿತು. ದಾಳಿಯ ವೇಳೆ ಸ್ಥಳದಲ್ಲಿ ಕಲ್ಲು ಕಡಿಯುವ ಯಂತ್ರಗಳು ಹಾಗೂ ಜೆಸಿಬಿಗಳು ಪತ್ತೆಯಾಗಿವೆ. ಭೂಮಾಪನಾ ಇಲಾಖೆ ಮತ್ತು ಕಂದಾಯ ಇಲಾಖೆಯ ಜಂಟಿ ಮೋಜಣೆಯಲ್ಲಿ, ಗಣಿಗಾರಿಕೆ ನಡೆಯುತ್ತಿದ್ದ ಭೂಮಿ ಸಂಪೂರ್ಣವಾಗಿ ಸರ್ಕಾರಿ ಜಮೀನು ಎಂಬುದು ಸಾಬೀತಾಗಿದೆ.
ಈ ಅಕ್ರಮ ಕ್ವಾರಿಯ ಹಿಂದೆ ದೊಡ್ಡ ಮಟ್ಟದ ವಂಚನೆ ನಡೆದಿರುವುದು ಬೆಳಕಿಗೆ ಬಂದಿದ್ದು, 1994ರಲ್ಲಿ ಜಮೀನು ಮಂಜೂರಾತಿ ಪಡೆದಿದ್ದ ಚಂದ್ರ ಕುಡಿಯ ಎಂಬವರು ‘ಚಂದ್ರೇ ಗೌಡ’ ಎಂಬ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಇದಕ್ಕೆ ಪೂರಕವಾಗಿ ಗಣಿ ಇಲಾಖೆಯ ಅಧಿಕಾರಿ ಮಹದೇಶ ಎಂಬುವವರು ಕಂದಾಯ ಇಲಾಖೆಗೆ ಯಾವುದೇ ಮಾಹಿತಿ ನೀಡದೆ, ಸ್ವಹಿತಾಸಕ್ತಿಯಿಂದ ಈ ಅಕ್ರಮ ಗಣಿಗಾರಿಕೆಗೆ ಪರವಾನಗಿ ನೀಡಿರುವುದು ಇಲಾಖೆಯ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಹಶೀಲ್ದಾರ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಕಲ್ಲು ಕಡಿಯುವ ನಾಲ್ಕು ಯಂತ್ರಗಳು ಸೇರಿದಂತೆ ಇತರೆ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಅಳಿಕೆ ಗ್ರಾಮದ ಕೋಟೆತ್ತಡ್ಕ ಮುಳಿಯ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ನಕಲಿ ದಾಖಲೆ ಬಳಸಿ ನಡೆಸುತ್ತಿದ್ದ ಈ ದಂಧೆಯನ್ನು ಕಂದಾಯ ಮತ್ತು ಭೂಮಾಪನಾ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಪತ್ತೆಹಚ್ಚಲಾಗಿದ್ದು, ಅಕ್ರಮಕ್ಕೆ ಸಾಥ್ ನೀಡಿದ ಗಣಿ ಅಧಿಕಾರಿ ಮಹದೇಶ ವಿರುದ್ಧವೂ ಕಾನೂನು ಉರುಳು ಬಿಗಿಯಾಗುವ ಸಾಧ್ಯತೆ ದಟ್ಟವಾಗಿದೆ.
Bantawala
ಕುಡ್ತಮುಗೇರು ಆಸ್ಪತ್ರೆ ಕಟ್ಟಡಕ್ಕೆ MRPL ನಿಂದ ₹30 ಲಕ್ಷ ಅನುದಾನ: ಸುಭಾಶ್ಚಂದ್ರ ಶೆಟ್ಟಿ ಹಾಗೂ ಎಂಎಲ್ಸಿ ಮಂಜುನಾಥ ಭಂಡಾರಿ ಶ್ರಮಕ್ಕೆ ಸಂದ ಜಯ
ಬಂಟ್ವಾಳ: ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರುವಿನಲ್ಲಿ ನೂತನ ಸರ್ಕಾರಿ ಆಸ್ಪತ್ರೆ (ಆರೋಗ್ಯ ವಿಸ್ತರಣಾ ಕೇಂದ್ರ) ಕಟ್ಟಡ ನಿರ್ಮಾಣಕ್ಕೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (CSR) ₹30 ಲಕ್ಷ ಅನುದಾನ ಮಂಜೂರು ಮಾಡಿದೆ.

ಹಿನ್ನೆಲೆ ಮತ್ತು ಬೇಡಿಕೆ:
ಕುಡ್ತಮುಗೇರು ಸುತ್ತಮುತ್ತಲಿನ ಸುಮಾರು 14,000 ಜನಸಂಖ್ಯೆಗೆ ಈ ಭಾಗದಲ್ಲಿ ಸೂಕ್ತ ಆಸ್ಪತ್ರೆಯ ವ್ಯವಸ್ಥೆ ಇರಲಿಲ್ಲ. 2018ರಲ್ಲಿಯೇ ಸರ್ಕಾರದಿಂದ ಆರೋಗ್ಯ ಕೇಂದ್ರ ಮಂಜೂರಾಗಿದ್ದರೂ, ಸ್ವಂತ ಕಟ್ಟಡವಿಲ್ಲದೆ ಸ್ಥಳೀಯ ಶಾಲೆಯ ಕೊಠಡಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಶಾಲಾ ಕೊಠಡಿಯ ಕೊರತೆಯಿಂದಾಗಿ ಆಸ್ಪತ್ರೆಗೆ ಪ್ರತ್ಯೇಕ ಕಟ್ಟಡದ ಅವಶ್ಯಕತೆ ತುರ್ತಾಗಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ಕೆ. ಸುಭಾಶ್ಚಂದ್ರ ಶೆಟ್ಟಿ ಅವರು, ಎಂಆರ್ಪಿಎಲ್ ಸಂಸ್ಥೆಯಿಂದ ಅನುದಾನ ಕೊಡಿಸುವಂತೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರಿಗೆ 2025ರ ಸೆಪ್ಟೆಂಬರ್ನಲ್ಲಿ ಮನವಿ ಸಲ್ಲಿಸಿದ್ದರು.
ಎಂಎಲ್ಸಿ ಮಂಜುನಾಥ ಭಂಡಾರಿ ಅವರ ಶಿಫಾರಸು:
ಸುಭಾಶ್ಚಂದ್ರ ಶೆಟ್ಟಿ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಎಂಎಲ್ಸಿ ಮಂಜುನಾಥ ಭಂಡಾರಿ ಅವರು, ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು, ಬಂಟ್ವಾಳದ ಅತೀ ದೊಡ್ಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಈ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಈ ಯೋಜನೆಗೆ ಸಿ.ಎಸ್.ಆರ್ ನಿಧಿ ಒದಗಿಸುವಂತೆ ಬಲವಾಗಿ ಶಿಫಾರಸು ಮಾಡಿದ್ದರು.

ಎಂಆರ್ಪಿಎಲ್ ಅಧಿಕೃತ ಘೋಷಣೆ:
ಈ ನಿರಂತರ ಬೆನ್ನಟ್ಟುವಿಕೆಯ ಫಲವಾಗಿ, ಎಂಆರ್ಪಿಎಲ್ ಸಂಸ್ಥೆಯು 2026ರ ಮಾರ್ಚ್ 26ರಂದು ಅಧಿಕೃತವಾಗಿ ‘ಆಶಯ ಪತ್ರ’ (Letter of Intent) ಹೊರಡಿಸಿದೆ. ಬಂಟ್ವಾಳ ತಾಲೂಕು ಆರೋಗ್ಯ ಅಧಿಕಾರಿಯವರಿಗೆ ಬರೆದ ಪತ್ರದಲ್ಲಿ, ಕುಡ್ತಮುಗೇರು ಸರ್ಕಾರಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಜಿಎಸ್ಟಿ ಸೇರಿದಂತೆ ಒಟ್ಟು ₹30.00 ಲಕ್ಷ ಹಣವನ್ನು ಒದಗಿಸುವುದಾಗಿ ಸಂಸ್ಥೆ ತಿಳಿಸಿದೆ. ಈ ಯೋಜನೆಯ ಸಾಕಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ಕೆ. ಸುಭಾಶ್ಚಂದ್ರ ಶೆಟ್ಟಿ ಅವರು ವಿಶೇಷ ಆಸಕ್ತಿ ವಹಿಸಿ ಪ್ರಸ್ತಾವನೆ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ ವಿಧಾನ ಪರಿಷತ್ ಸದಸ್ಯರಾದ (ಎಂಎಲ್ಸಿ) ಮಂಜುನಾಥ ಭಂಡಾರಿ ಅವರು ಯೋಜನೆಯ ತುರ್ತು ಅಗತ್ಯವನ್ನು ಮನಗಂಡು ಸಂಸ್ಥೆಗೆ ಶಿಫಾರಸು ಮಾಡುವ ಮೂಲಕ ಅನುದಾನ ಬಿಡುಗಡೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
-
crime1 week agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala4 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
