accident
ಮದ್ಯಪಾನ ಮಾಡಿ ಸಾವಿಗೆ ಕಾರಣರಾದರೆ ಚಾಲಕನಿಗೆ ಜೈಲು ಶಿಕ್ಷೆ ಫಿಕ್ಸ್
ಮಂಗಳೂರು : ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕಿಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನೂ ಮುಂದೆ ಶಿಕ್ಷಾರ್ಹ ನರಹತ್ಯೆ ಕಾಯ್ದೆ ಅಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಂಗಳೂರು ನಗರ ವ್ಯಾಪ್ತಿಯಲ್ಲಿ 2025 ನೇ ಸಾಲಿನಲ್ಲಿ ಸಂಭವಿಸಿದ 171 ರಸ್ತೆ ಅಪಘಾತಗಳಲ್ಲಿ 25 ಪ್ರಕರಣಗಳಲ್ಲಿ ಅಪ್ರಾಪ್ತರ ವಾಹನ ಚಲಾವಣೆ ಆಗಿದ್ದರೆ, ಇನ್ನೂ ಕೆಲವು ಪ್ರಕರಣಗಳಲ್ಲಿ ಕುಡಿದು ವಾಹನ ಚಲಾಯಿಸಿ ಇನ್ನೊಬ್ಬರ ಪ್ರಾಣ ಹಾನಿಯಾಗಿರುವುದಾಗಿದೆ. ಹಾಗಾಗಿ ಇಂಥ ಪ್ರಕರಣಗಳಲ್ಲಿ ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈಗಾಗಲೇ ಸಂಚಾರ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜೈಬುನ್ನಿಸಾ ಮಾತನಾಡಿ ದೇಶದಲ್ಲಿ 2025 ರಲ್ಲಿ ಸಂಭವಿಸಿದ 4.5 ಲಕ್ಷ ಅಪಘಾತಗಳಲ್ಲಿ 1.60 ಲಕ್ಷ ಜನ ಪ್ರಾಣ ಕಳೆದುಕೊಂಡಿದ್ದಾರೆ ಮೃತರಲ್ಲಿ ಶೇಕಡಾ 55ರಷ್ಟು ಮಂದಿ 18 ವರ್ಷದಿಂದ 35 ವರ್ಷದ ಒಳಗಿನವರು ಎಂಬುದು ಗಮನಾರ್ಹವಾಗಿದೆ. ಮಂಗಳೂರಿನಲ್ಲಿ 600ಕ್ಕೂ ಅಧಿಕ ಮಂದಿ ಪಾನಮತ್ತರಾಗಿ ವಾಹನ ಚಲಾಯಿಸಿರುವುದು ಪತ್ತೆಯಾಗಿದೆ ಎಂದರು.

ತುಳುರಂಗಭೂಮಿಯ ಖ್ಯಾತ ನಟ ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್, ಖ್ಯಾತ ನ್ಯೂರೋ ಸರ್ಜನ್ ಡಾ. ಅರ್ಜುನ್ ಶೆಟ್ಟಿ ಅಪಘಾತಗಳಿಂದಾಗುವ ದುರಂತ ಬದುಕಿನ ಬಗ್ಗೆ ವಿವರಿಸಿದರು.
ನಗರದಲ್ಲಿ ಫಲಾಪೇಕ್ಷೆ ಇಲ್ಲದೆ ಟ್ರಾಫಿಕ್ ವಾರ್ಡನ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸಮಾಜಸೇವಕರಾದ ಫ್ರಾನ್ಸಿಸ್ ಮ್ಯಾಕ್ಸಿಮ್ ಮೊರಾಸ್, ಹಸನ್, ವಾಯ್ಲೆಟ್ ಪಿರೇರಾ, ರೋಷನ್ ರಾಯಿ ಸಿಕ್ವೇರಾ, ಬೂಬಣ್ಣ, ರಮೇಶ್ ಕಾವೂರು, ಬಶೀರ್ ಹಳೆಯಂಗಡಿ, ಸಂಚಾರಿ ಪೊಲೀಸ್ ಸಿಬ್ಬಂದಿ ಮನ್ಸಿಜಾ ಬಾನು ಅವರನ್ನು ಅಭಿನಂದಿಸಲಾಯಿತು.
ಈ ವೇಳೆ ಡಿಸಿಪಿಗಳಾದ ಮಿಥುನ್ ಕುಮಾರ್, ಪಿ ಉಮೇಶ್, ಕೆಎಸ್ಆರ್ಟಿಸಿ ಮಂಗಳೂರು ವಿಭಾಗಿಯ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ, ಎಸಿಪಿಗಳಾದ ಗೀತಾ ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು
accident
ಪ್ರವಾಸಕ್ಕೆಂದು ಹೊರಟ ಸ್ನೇಹಿತರ ಗುಂಪು ಶವವಾಗಿ ವಾಪಸ್..ಉತ್ತರಾಖಂಡ ಹೆಲಿಕಾಪ್ಟರ್ ಪತನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ದುರಂತ ಅಂತ್ಯ
ಬೆಂಗಳೂರು: ಉತ್ತರಾಖಂಡದ ಜೋಶಿಮಠ ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಸೇರಿದಂತೆ ಐವರು ಕನ್ನಡಿಗರು ಹಾಗೂ ಪೈಲಟ್ ಸೇರಿ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳ ದರ್ಶನಕ್ಕಾಗಿ ಬೆಂಗಳೂರಿನಿಂದ ಪ್ರವಾಸ ಕೈಗೊಂಡಿದ್ದ ಸ್ನೇಹಿತರ ಗುಂಪು ಈ ದುರಂತಕ್ಕೆ ಬಲಿಯಾಗಿದೆ. ಮೃತರನ್ನು ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಹೆಚ್.ಎಸ್. ನಾಗರಾಜ್, ಪ್ರತಾಪ್, ಸುಧೀರ್ ಕೆ., ಶಂಕರೇಗೌಡ ಹಾಗೂ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಬೆಂಗಳೂರಿನಿಂದ ಧಾರ್ಮಿಕ ಪ್ರವಾಸಕ್ಕೆ ತೆರಳಿದ್ದ ಈ ಸ್ನೇಹಿತರ ತಂಡ ಕೇದಾರನಾಥ ಮತ್ತು ಬದರಿನಾಥ ದರ್ಶನ ಪೂರೈಸಿ, ಬದರಿನಾಥದಿಂದ ಡೆಹ್ರಾಡೂನ್ನ ಸಹಸ್ರಧಾರಕ್ಕೆ ಟ್ರಾನ್ಸ್ ಭಾರತ್ ಏವಿಯೇಷನ್ಗೆ ಸೇರಿದ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿತ್ತು. ಮಧ್ಯಾಹ್ನ 1:14 ಕ್ಕೆ ಬದರಿನಾಥದಿಂದ ಟೇಕಾಫ್ ಆದ ಹೆಲಿಕಾಪ್ಟರ್, ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ಏಕಾಏಕಿ ರೇಡಾರ್ ಸಂಪರ್ಕ ಕಳೆದುಕೊಂಡಿದೆ. ಅಲ್ಲದೆ ಹೆಲಿಕಾಪ್ಟರ್ನ ಟ್ರ್ಯಾಕಿಂಗ್ ವ್ಯವಸ್ಥೆಯೂ ಸ್ಥಗಿತಗೊಂಡು, ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ಅಪಘಾತದ ಕುರಿತು ಮಾಹಿತಿ ಪಡೆದ ಉತ್ತರಾಖಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ಸ್ನೇಹಿತರ ದುರಂತ ಸಾವು ಅವರ ಕುಟುಂಬಸ್ಥರು ಹಾಗೂ ಆಪ್ತರ ವಲಯದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.
ತನಿಖೆಗೆ ಆದೇಶ – ಹಾರಾಟ ಸ್ಥಗಿತ:
ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಯ ಎಲ್ಲಾ ಹೆಲಿಕಾಪ್ಟರ್ಗಳ ಹಾರಾಟವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ
accident
ಕುಂದಾಪುರ: ಬಟ್ಟೆ ಒಗೆಯಲು ತೆರಳಿದ್ದ ಇಬ್ಬರು ಶಾಲಾ ಬಾಲಕಿಯರು ಕೆರೆಗೆ ಬಿದ್ದು ದುರಂತ ಸಾವು
ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು 13 ವರ್ಷದ ಶಾಲಾ ಬಾಲಕಿಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸಮೀಪದ ಕೊಪ್ಪರಿಗೆ ಗುಡ್ಡೆ ಕಡುಬಿನ ಕೆರೆಯಲ್ಲಿ ಭಾನುವಾರ ಸಂಭವಿಸಿದೆ.
ಮೃತರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಮುದ್ದಿನಕೊಪ್ಪ ಮೂಲದ, ಪ್ರಸ್ತುತ ಮುಳ್ಳಿಕಟ್ಟೆ ಟೆಂಟ್ ಹೌಸ್ನಲ್ಲಿ ವಾಸವಾಗಿದ್ದ ಚಂದ್ರು ಬಸವರಾಜ ವೇಷಗಾರ ಎಂಬುವರ ಪುತ್ರಿ ಸುನೀತಾ (13) ಹಾಗೂ ಅವರ ಸಂಬಂಧಿ ದಿ. ಮಂಜುನಾಥ್ ಅವರ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಮೃತ ಬಾಲಕಿಯರಿಬ್ಬರೂ ಹೊಸಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಘಟನೆಯ ವಿವರ: ಭಾನುವಾರ ಸಂಜೆ ಟೆಂಟ್ ಹೌಸ್ ನಿವಾಸಿಗಳಾದ 5 ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ತೆರಳಿದ್ದರು. ಕೆರೆಯ ದಡದಲ್ಲಿ ಸುನೀತಾ ಹಾಗೂ ವೈಶಾಲಿ ಬಟ್ಟೆ ಒಗೆಯುತ್ತಿದ್ದಾಗ, ಸುನೀತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಈ ವೇಳೆ ಆಕೆಯನ್ನು ರಕ್ಷಿಸಲು ಯತ್ನಿಸಿದ ವೈಶಾಲಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಜೊತೆಯಲ್ಲಿದ್ದ ಇತರ ಮಕ್ಕಳು ಕೂಡಲೇ ವಿಷಯ ತಿಳಿಸಿದ್ದು, ಪಾಲಕರು ಹಾಗೂ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಸಂಜೆ 5.15ರ ಅಂದಾಜಿಗೆ ಇಬ್ಬರೂ ಬಾಲಕಿಯರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು.
ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು ಶವ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತ ಸುನೀತಾಳ ತಂದೆ ನೀಡಿದ ದೂರಿನನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
accident
ಕೋಟ: ಸೈಕಲ್ಗೆ ಕಾರು ಡಿಕ್ಕಿ – RSS ಮುಖಂಡ ಸ್ಥಳದಲ್ಲೇ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ
ಕೋಟ: ಸೈಕಲ್ಗೆ ಕಾರು ಡಿಕ್ಕಿ – RSS ಮುಖಂಡ ಸ್ಥಳದಲ್ಲೇ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ, ಸ್ಥಳೀಯ RSS ಮುಖಂಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.
ಕೋಟ ಮಣೂರು ನಿವಾಸಿ, ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ಮೃತಪಟ್ಟವರು. ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಿಗ್ಗೆ ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ ಬಳಿ ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಧಾವಿಸಿ ಬಂದ ಕಾರು ಸೈಕಲ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭರಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇತ್ತ ಸೈಕಲ್ನಿಂದ ರಸ್ತೆಗೆ ಎಸೆಯಲ್ಪಟ್ಟ ಗುರುದಾಸ್ ಶೆಣೈ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
