crime
ಹಂಚು ತೆಗೆದು ಮನೆಗೆ ನುಗ್ಗಿ ದೈವಗಳನ್ನೇ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ನಟೋರಿಯಸ್ ಕಳ್ಳರಿಬ್ಬರು ಅಂದರ್..ಸುರತ್ಕಲ್ ಪೊಲೀಸರ ಕಾರ್ಯಾಚರಣೆ..
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/01/IMG-20260128-WA0034-1000x600.jpg&description=ಹಂಚು ತೆಗೆದು ಮನೆಗೆ ನುಗ್ಗಿ ದೈವಗಳನ್ನೇ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ನಟೋರಿಯಸ್ ಕಳ್ಳರಿಬ್ಬರು ಅಂದರ್..ಸುರತ್ಕಲ್ ಪೊಲೀಸರ ಕಾರ್ಯಾಚರಣೆ..', 'pinterestShare', 'width=750,height=350'); return false;" title="Pin This Post">
ಮಂಗಳೂರು ಹೊರವಲಯದ ಕುಳಾಯಿಯಲ್ಲಿ ಮನೆಯ ಹಂಚು ತೆಗೆದು ಒಳಗೆ ನುಗ್ಗಿ ದೈವಗಳ ಮೂರ್ತಿಗಳು ಮತ್ತು ಬೆಲೆಬಾಳುವ ಪೂಜಾ ಸಾಮಗ್ರಿಗಳ ಕಳ್ಳತನ ನಡೆಸಿದ್ದ ಅಂತರ್ ಜಿಲ್ಲಾ ಕುಖ್ಯಾತ ಕಳ್ಳರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ತನ್ನ ತಾಯಿಯ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಮತ್ತು ಬೆಲೆಬಾಳುವ ಪೂಜಾ ಸಾಮಗ್ರಿಗಳು ಹಾಗೂ ಎಲ್.ಇ.ಡಿ.ಟಿವಿಯನ್ನು ಕಳ್ಳತನ ನಡೆಸಿದ್ದಾರೆಂದು ಶ್ರೀಮತಿ ಅಮಿತಾ ಎಂಬವರು ಸುರತ್ಕಲ್ ಠಾಣೆಯಲ್ಲಿ ದೂರು ನೀಡಿದ್ದರು.
ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು ರೂ 1,00,000/- ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ-1, ಮಂತ್ರದೇವತೆಯ ಬೆಳ್ಳಿಯ ಮೂರ್ತಿ-1, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ-1, ಬೆಳ್ಳಿಯ ಕಡ್ಸಲೆ (ಖಡ್ಗ)-1, ತಾಮ್ರದ ಘಂಟೆ–2, ತಾಮ್ರದ ಚೆಂಬು–4, ಹಾಗೂ ಎಲ್.ಇ.ಡಿ ಟಿ.ವಿ-1 ಕಳವು ಮಾಡಿದ ಬಗ್ಗೆ ಠಾಣಾ ಅ.ಕ್ರ 170/2025 ಕಲಂ: 331 (4), 305 (ಎ) ಬಿ.ಎನ್.ಎಸ್ ರಂತೆ ದಿನಾಂಕ: 27.12.2025 ರಂದು ಪ್ರಕರಣವನ್ನು ದಾಖಲಿಸಿಕೊಂಡು ಸುರತ್ಕಲ್ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು, ತಾಂತ್ರಿಕ ವಿಧಾನಗಳನ್ನು ಪರಿಶೀಲನೆ ನಡೆಸಿದಂತೆ ವಾಜೀದ್ ಜೆ @ ವಾಜಿ, ಪ್ರಾಯ 27 ವರ್ಷ, ತಂದೆ: ಜಾಫರ್ ಖಾನ್, ವಾಸ: ಮನೆ ನಂ 5-119/2 ಮುನಾಫ್ ಮಂಜಿಲ್, ಬದ್ರಿಯಾ ನಗರ, ಕೊಂಚಾರ್, ಬಜಪೆ, ಮಂಗಳೂರು, ದ.ಕ ಜಿಲ್ಲೆ, ಹಾಲಿ ವಾಸ: 2ನೇ ಮಹಡಿ, ಝೀಹಾ ಅಪಾರ್ಟ್ಮೆಂಟ್, ಮಲ್ಲಮಾರ್ ರೋಡ್, ಚೊಕ್ಕಬೆಟ್ಟು, ಸುರತ್ಕಲ್, ಮಂಗಳೂರು, ಹೆಂಡತಿ ಮನೆ: ಮನೆ ನಂಬ್ರ 10-66ಜೆ, ಸಂಪಿಗೆ ನಗರ, ಕುತ್ಪಾಡಿ ಪೋಸ್ಟ್, ಉದ್ಯಾವರ, ಉಡುಪಿ ಜಿಲ್ಲೆ ಎಂಬಾತನ್ನು ದಸ್ತಗಿರಿ ಮಾಡಿ ವಿಚಾರಿಸಲಾಗಿ ಆತನ ಹೇಳಿಕೆಯಂತೆ ಸದ್ರಿ ಕೃತ್ಯ ಎಸಗಿದ್ದಾಗಿ ಹಾಗೂ ಮನೆಕಳ್ಳತನ ಮಾಡಿದ ಮಾಲಿನಲ್ಲಿ ಹಿತ್ತಾಳೆ ಹಾಗೂ ತಾಮ್ರದ ಸಾಮಾಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿದ್ದಾಗಿ ತಿಳಿಸಿದಂತೆ ದಿನಾಂಕ: 27.01.2026 ರಂದು ಸಯ್ಯದ್ ಆಲಿ, ಪ್ರಾಯ 40 ವರ್ಷ, ತಂದೆ: ಕೆ. ವೀರನ್ ಕುಟ್ಟಿ, ವಾಸ: ಕಟ್ಟೆ ಮಸೀದಿ ಬಳಿ ಮನೆ, ತೆಂಕ ಕಾರಂದೂರು ಪೋಸ್ಟ್ ಮತ್ತು ಗ್ರಾಮ, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ, ಹಾಲಿ ವಿಳಾಸ: ಶರೀಫ್ ರವರ ಬಾಡಿಗೆ ಮನೆ, ಕೆ.ಬಿ.ಎಸ್ ರೈಲ್ವೇ ಗೇಟ್ ಬಳಿ, ಜೋಕಟ್ಟೆ, ಮಂಗಳೂರು ತಾಲೂಕು ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿತರುಗಳಿಂದ ಮನೆಯಿಂದ ಕಳ್ಳತನವಾದ ಸುಮಾರು 1,95,000/- ರೂ ಮೌಲ್ಯದ ಬೆಳ್ಳಿಯ ಮಂತ್ರದೇವತೆಯ ಮೂರ್ತಿ, ಕೊಡೆ, ಕಡ್ಸಲೆ, ಸುಮಾರು ರೂ 2,750/- ಮೌಲ್ಯದ ಹಿತ್ತಾಳೆ ಪೂಜಾ ಸಾಮಾಗ್ರಿ, ಸುಮಾರು 300/- ಮೌಲ್ಯದ ತಾಮ್ರದ ಪೂಜಾ ಸಾಮಾಗ್ರಿ, ಸುಮಾರು 2,000/- ಮೌಲ್ಯದ ಟಿ.ವಿ & ಸೆಟ್ ಆಪ್ ಬಾಕ್ಸ್, ಆರೋಪಿತರ 2 ಮೊಬೈಲ್ ಹಾಗೂ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಸುಮಾರು 30,000/- ಮೌಲ್ಯದ ಸ್ಕೂಟರ್-1 ಅನ್ನು ಮಹಜರು ಮುಖೇನ ಸ್ವಾಧೀನ ಪಡೆಸಿಕೊಂಡಿರುವುದಾಗಿದೆ.
ಪ್ರಕರಣದಲ್ಲಿ ಮನೆ ಕಳ್ಳತನ ಮಾಡಿದ ಆರೋಪಿ ವಾಜೀದ್ ಜೆ @ ವಾಜಿ ಈತನ ಮೇಲೆ ಸುರತ್ಕಲ್ ಠಾಣೆಯಲ್ಲಿ ‘ಬಿ’ ರೌಡಿ ಹಾಳೆ ಹಾಗೂ ಎಂಓಬಿ ತೆರೆಯಲಾಗಿದ್ದು ಈತನ ಮೇಲೆ ಮಂಗಳೂರು ನಗರ, ಉಡುಪಿ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಾದ್ಯಂತ 1 ಕೊಲೆಯತ್ನ, 2 ದರೋಡೆ, 3 ದನ ಕಳ್ಳತನ, 6 ಮನೆಕಳ್ಳತನ, 3 ವಾಹನ ಕಳ್ಳತನ, 1 ಇತರ ಪ್ರಕರಣಗಳು ದಾಖಲಾಗಿದ್ದು ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿರುವುದಾಗಿದೆ. ಆರೋಪಿತರನ್ನು ದಿನಾಂಕ: 28.01.2026 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಮಾನ್ಯ ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
crime
ಲಂಚ ಪಡೆದು ನಿಯಮಬಾಹಿರವಾಗಿ PCC ನೀಡುತ್ತಿದ್ದ ಬಜಪೆ ಪೊಲೀಸರ ಜಾಲ ಪತ್ತೆ: ಇಬ್ಬರು ಸಿಬ್ಬಂದಿ ಸಸ್ಪೆಂಡ್, ಮಧ್ಯವರ್ತಿಗಳು ಲಾಕ್!
ಮಂಗಳೂರು: ಅಸ್ಸಾಂ ಹಾಗೂ ಬಿಹಾರ್ ಮೂಲದ ಕಾರ್ಮಿಕರ ಪೂರ್ವಾಪರ ಪರಿಶೀಲಿಸದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿರುವ ಗಂಭೀರ ಆರೋಪದಡಿಯಲ್ಲಿ ಬಜಪೆ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಜಪೆ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆಶಾ ಮತ್ತು ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಅಮಾನತಾದ ಸಿಬ್ಬಂದಿಯಾಗಿದ್ದಾರೆ.
ಪ್ರಕರಣದ ಹಿನ್ನೆಲೆ:
ಇವರಿಬ್ಬರು ಕೈಜೋಡಿಸಿ ಒಟ್ಟು 31 ಮಂದಿಗೆ ನಿಯಮಬಾಹಿರವಾಗಿ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿದ್ದಾರೆ ಎನ್ನಲಾಗಿದೆ. ಉನ್ನತ ಮಟ್ಟದ ತನಿಖಾ ಸಂಸ್ಥೆಯೊಂದರಿಂದ ಈ ರೀತಿಯ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ಎಚ್ಚೆತ್ತ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಇಬ್ಬರನ್ನೂ ಸಸ್ಪೆಂಡ್ ಮಾಡಿದ್ದಾರೆ.
ಕ್ರಿಮಿನಲ್ ಹಿನ್ನೆಲೆ ಹಾಗೂ ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಸ್ಸಾಂ ಮೂಲದ ಕೆಲವು ಕಾರ್ಮಿಕ ಯುವಕರಿಗೆ ಈ ರೀತಿ ನಿಯಮಬಾಹಿರವಾಗಿ ಪಿಸಿಸಿ ನೀಡಿರುವುದು ಇಲಾಖೆಯ ದೊಡ್ಡ ಲೋಪಕ್ಕೆ ಕಾರಣವಾಗಿದೆ. ಈ ಕುರಿತು ಪೊಲೀಸ್ ಕಮಿಷನರ್ ಅವರು ತನಿಖೆಯ ಜವಾಬ್ದಾರಿಯನ್ನು ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ವಹಿಸಿದ್ದಾರೆ.
ಮಧ್ಯವರ್ತಿಗಳ ಮೂಲಕ ಪಾಸ್‌ಪೋರ್ಟ್ ದುರ್ಬಳಕೆ ಸಂಚು?
MRPL ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡಲು ಬಂದಿದ್ದ ಇವರು ತಾತ್ಕಾಲಿಕ ವಿಳಾಸ ಹೊಂದಿದ್ದರು. ಆದರೆ, ಪಾಸ್‌ಪೋರ್ಟ್ ಮಾಡಿಸುವ ಉದ್ದೇಶದಿಂದ ಮಧ್ಯವರ್ತಿಗಳನ್ನು ಬಳಸಿಕೊಂಡು ಬಜಪೆ ಪೊಲೀಸ್ ಠಾಣೆಯಿಂದ ಸುಲಭವಾಗಿ PCC ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ರೀತಿ ಸರ್ಟಿಫಿಕೇಟ್ ಪಡೆದ 31 ಮಂದಿಯಲ್ಲಿ ಕೆಲವರು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಕೇಂದ್ರ ತನಿಖಾ ಸಂಸ್ಥೆಯು ಮಂಗಳೂರು ಪೊಲೀಸರನ್ನು ಪ್ರಶ್ನಿಸಿದಾಗ ಈ ಇಡೀ ಜಾಲ ಬೆಳಕಿಗೆ ಬಂದಿದೆ.
ಪಾಸ್‌ವರ್ಡ್ ದುರ್ಬಳಕೆ – ಇಬ್ಬರು ಮಧ್ಯವರ್ತಿಗಳ ಬಂಧನ:
ಇಲಾಖೆಯ ತನಿಖೆಯ ವೇಳೆ ಬಜಪೆ ಠಾಣಾಧಿಕಾರಿಗಳ ಅಧಿಕೃತ ಲಾಗಿನ್ ಪಾಸ್‌ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು ಈ ಸಿಬ್ಬಂದಿಗಳು ಕ್ಲಿಯರೆನ್ಸ್ ನೀಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ಇದಕ್ಕಾಗಿ ಇಬ್ಬರು ಪೊಲೀಸರು ಮಧ್ಯವರ್ತಿಗಳಾದ ಭರತ್ ಎಕ್ಕಾರು ಹಾಗೂ ಮಮತಾ ಎಂಬವರಿಂದ ಹಣ ಪಡೆದಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಗಳಾದ ಭರತ್ ಮತ್ತು ಮಮತಾ ಅವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿ BNS ಕಲಂ 336(2), (3), 340(2), 316(5), 318(4) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.



crime
ಉಪ್ಪಿನಂಗಡಿ: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; 16 ಮೂಕಪ್ರಾಣಿಗಳ ರಕ್ಷಣೆ, ಇಬ್ಬರ ಬಂಧನ!
ಉಪ್ಪಿನಂಗಡಿ : ಲಾರಿಯೊಂದರಲ್ಲಿ ಜಾನುವಾರುಗಳನ್ನು ಅತ್ಯಂತ ಅಮಾನುಷ ಹಾಗೂ ಕಾನೂನುಬಾಹಿರವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಭಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಲಾರಿಯಲ್ಲಿದ್ದ 16 ಜಾನುವಾರುಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಲಾರಿ ಚಾಲಕ ಮತ್ತು ನಿರ್ವಾಹಕನನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ.

ಭಜರಂಗದಳ ಕಾರ್ಯಕರ್ತರ ಮಾಹಿತಿ, ಪೊಲೀಸರ ಕ್ಷಿಪ್ರ ಕಾರ್ಯಾಚರಣೆ
ಘಟ್ಟ ಪ್ರದೇಶದಿಂದ ಲಾರಿಯೊಂದರಲ್ಲಿ ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ತುಂಬಿಕೊಂಡು ಕೇರಳ ಭಾಗಕ್ಕೆ ಸಾಗಿಸಲಾಗುತ್ತಿದೆ ಎಂಬ ಪಕ್ಕಾ ಮಾಹಿತಿ ಭಜರಂಗದಳದ ಕಾರ್ಯಕರ್ತರಿಗೆ ಲಭ್ಯವಾಗಿತ್ತು. ಅವರು ತಕ್ಷಣವೇ ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದ್ದರು. ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಉಪ್ಪಿನಂಗಡಿ ಪೊಲೀಸರು, ಉಪ್ಪಿನಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿಯನ್ನು ತಡೆದು ತಪಾಸಣೆ ನಡೆಸಿದ್ದಾರೆ.

ಉಸಿರುಗಟ್ಟುವ ವಾತಾವರಣದಲ್ಲಿ 16 ಜಾನುವಾರುಗಳು ಪತ್ತೆ
ಪೊಲೀಸರು ಲಾರಿಯನ್ನು ತಪಾಸಣೆ ನಡೆಸಿದಾಗ, ಅದರಲ್ಲಿ ಯಾವುದೇ ಮಾನವೀಯತೆ ಇಲ್ಲದೆ ಅತ್ಯಂತ ಕಿಕ್ಕಿರಿದು, ಕ್ರೂರವಾಗಿ ತುಂಬಲಾಗಿದ್ದ ಸುಮಾರು 16 ಜಾನುವಾರುಗಳು ಪತ್ತೆಯಾಗಿವೆ. (ಲಾರಿಯಲ್ಲಿ ಜಾನುವಾರುಗಳನ್ನು ಕಟ್ಟಿಹಾಕಿರುವ ಕರುಣಾಜನಕ ದೃಶ್ಯವನ್ನು ಚಿತ್ರದಲ್ಲಿ ಕಾಣಬಹುದು). ತಕ್ಷಣವೇ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯರು ಜಾನುವಾರುಗಳನ್ನು ಲಾರಿಯಿಂದ ಕೆಳಗಿಳಿಸಿ, ಅವುಗಳಿಗೆ ನೀರು-ಮೇವು ಒದಗಿಸಿ ರಕ್ಷಣಾ ಕ್ರಮ ಕೈಗೊಂಡಿದ್ದಾರೆ.

ಇಬ್ಬರ ಬಂಧನ; ಮತ್ತೊಬ್ಬ ಆರೋಪಿ ಪರಾರಿ
ಸ್ಥಳದಲ್ಲೇ ಲಾರಿ ಚಾಲಕ ಮತ್ತು ಕ್ಲೀನರ್ (ನಿರ್ವಾಹಕ)ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಲಾರಿಯಲ್ಲಿದ್ದ ಮತ್ತೊಬ್ಬ ಆರೋಪಿ ಪೊಲೀಸರನ್ನು ಕಂಡ ತಕ್ಷಣ ವಾಹನದಿಂದ ಜಿಗಿದು ಸ್ಥಳದಿಂದ ಓಡಿ ಪರಾರಿಯಾಗಿದ್ದಾನೆ.
ಪ್ರಸ್ತುತ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕಾನೂನುಬಾಹಿರ ಜಾನುವಾರು ಸಾಗಾಟ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ತೀವ್ರ ಜಾಲ ಬೀಸಿದ್ದಾರೆ.



crime
ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: ಪಿಎಸ್‌ಐ ಅನಿತಾ ಸೇರಿ ಮೂವರ ಅಮಾನತು – ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಚ್‌ಎಎಲ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ. ಅನಿತಾ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನ ಎಚ್‌ಎಎಲ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಅನಿತಾ, ಹೆಡ್ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ. ಇವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ (ACB) ಇತ್ತೀಚೆಗೆ ಬಂಧಿಸಿತ್ತು.
ಹಿರಿಯ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, “ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ಇಡೀ ರಾಜ್ಯಕ್ಕೆ ಕಳಂಕ ತಂದಿರುವ ಪಿಎಸ್‌ಐ ಕೆ.ಅನಿತಾ ಸೇರಿದಂತೆ ಮೂವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಈ ಭ್ರಷ್ಟಾಚಾರ ಪ್ರಕರಣದಲ್ಲಿ ಬೇರೆ ಯಾರಾದರೂ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರಾ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ,” ಎಂದರು.
“ವ್ಯವಸ್ಥೆಯನ್ನು ಸರಿಪಡಿಸಲು ಸ್ವಲ್ಪ ಸಮಯ ಬೇಕು. ನಾವು ಬೇರು ಮಟ್ಟದಿಂದಲೇ ಭ್ರಷ್ಟಾಚಾರವನ್ನು ಕಿತ್ತೊಗೆದು ವ್ಯವಸ್ಥೆಯನ್ನು ಸರಿಪಡಿಸಬೇಕಿದೆ. ಈ ಪ್ರಕರಣದಲ್ಲಿ ಬೇರೆ ಯಾರೇ ಶಾಮೀಲಾಗಿರುವುದು ಕಂಡುಬಂದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.” – ಪ್ರಿಯಾಂಕ್ ಖರ್ಗೆ, ಗೃಹ ಸಚಿವ
ಪ್ರಕರಣದ ಹಿನ್ನೆಲೆ:
ಬೆಂಗಳೂರಿನ ಎಚ್‌ಎಎಲ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ಈ ಮೂವರು ಅಧಿಕಾರಿಗಳು ರಾಜಸ್ಥಾನಕ್ಕೆ ತೆರಳಿದ್ದರು. ಆದರೆ, ಅಲ್ಲಿ ಆರೋಪಿಯಿಂದ ಲಂಚ ಪಡೆಯಲು ಯತ್ನಿಸಿದಾಗ ಜೈಪುರದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಇವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದರು. ಈ ಘಟನೆ ಇಲಾಖೆಗೆ ತೀವ್ರ ಮುಖಭಂಗ ಉಂಟುಮಾಡಿತ್ತು.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident1 month agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala6 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
