Connect with us

F.I.R.

ಕುಂಬಳೆ ಆರಿಕ್ಕಾಡಿ ಹೆದ್ದಾರಿಯ ಅಕ್ರಮ ಟೋಲ್ ದೌರ್ಜನ್ಯ ಪ್ರಶ್ನಿಸಿದ ವ್ಯಕ್ತಿಯನ್ನು ಪುಟ್ಟ ಮಕ್ಕಳ ಕಣ್ಮುಂದೆಯೇ ಹೊತ್ತೊಯ್ದ ಪೊಲೀಸರು..ಮಾನವ ಹಕ್ಕು ಉಲ್ಲಂಘಿಸಿದ ಪೊಲೀಸ್ ದೌರ್ಜನ್ಯ ವಿರುದ್ಧ ಇಂದು ಸಂಜೆ ಯುಡಿಎಫ್ ಪ್ರತಿಭಟನೆ.

Published

on

ಅಂತರ್ ರಾಜ್ಯ ಹೆದ್ದಾರಿಯ ಕುಂಬಳೆ ಸಮೀಪದ ಆರಿಕ್ಕಾಡಿಯಲ್ಲಿ ಹೆದ್ದಾರಿ ಇಲಾಖೆ ತಾತ್ಕಾಲಿಕ ಸ್ಥಾಪಿಸಿದ ಅನಧಿಕೃತ ಟೋಲ್ ಪ್ಲಾಜಾ ಸಂಬಂಧ ಕೇರಳ ಹೈಕೋರ್ಟು ಅಂತಿಮ ತೀರ್ಪು ನೀಡಲು ದಿನಾಂಕ ಮುಂದೂಡಿದ ಬೆನ್ನಲ್ಲೇ ಕುಂಬಳೆ ಟೋಲ್ ಪ್ಲಾಜಾದಲ್ಲಿ ವಾಹನ ಚಾಲಕರಿಂದ ಟೋಲ್ ವಸೂಲಿ ದಂಧೆ ಬುಧವಾರ ಸಂಜೆಯಿಂದ ಅಧಿಕೃತವಾಗಿ ಆರಂಭಗೊಂಡಿದೆ.

ಅನಧಿಕೃತ ಟೋಲ್ ಪ್ಲಾಜಾ ವಿರೋಧಿಗಳ ಆಕ್ರೋಶಕ್ಕೆ ಇದು ಕಾರಣವಾಗಿದೆ. ಅಕ್ರಮ ಟೋಲ್ ವ್ಯವಸ್ಥೆಯನ್ನು ಪ್ರಶ್ನಿಸಿದ ವಾಹನ ಚಾಲಕರೊಬ್ಬರನ್ನು ಟೋಲ್ ಗೇಟಲ್ಲಿ ತಡೆದ ಪೊಲೀಸರು ಬಲಾತ್ಕಾರದಿಂದ ಮಕ್ಕಳ ಕಾರಿನಿಂದ ಹೊರಗೆಳೆದು ಕುಖ್ಯಾತ ಕ್ರಿಮಿನಲ್ ಆರೋಪಿಯಂತೆ ದೌರ್ಜನ್ಯ ಎಸಗಿ ತಮ್ಮ ಪೊಲೀಸ್ ವಾಹನಕ್ಕೆ ಹೊತ್ತೊಯ್ದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದು ಸ್ಪಷ್ಟ ಮಾನವ ಹಕ್ಕು ಉಲ್ಲಂಘನೆಯಾಗಿದೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಜನವರಿ 29(ಗುರುವಾರ)ರಂದು ಕುಂಬಳೆ ಪೊಲೀಸ್ ದೌರ್ಜನ್ಯ/ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಮಂಜೇಶ್ವರ ಮಂಡಲ ಯು. ಡಿ. ಎಫ್ ನೇತೃತ್ವದಲ್ಲಿ ಕುಂಬಳೆ ಠಾಣೆಗೆ ಮುತ್ತಿಗೆ ನಡೆಸುವುದಾಗಿ ಘೋಷಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ‍್ಯಾಗಿಂಗ್ ಶಂಕೆ, ತನಿಖೆ ಆರಂಭ

Published

on

ಮಂಗಳೂರು ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ – ಕಪ್ಪು ಶೂ ಧರಿಸಿದ್ದಕ್ಕೆ ಜೂನಿಯರ್‌ಗಳ ಮೇಲೆ ಸೀನಿಯರ್‌ಗಳಿಂದ ಭೀಕರ ಹಲ್ಲೆ!

ಮಂಗಳೂರು, ಆಗಸ್ಟ್ 05: ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೇವಲ ಕಪ್ಪು ಬಣ್ಣದ ಶೂ ಧರಿಸಿದ್ದರೆಂಬ ಸಣ್ಣ ಕಾರಣಕ್ಕೆ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ ಗುಂಪು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಿರಿಯ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ವಿವರ:

ನಗರದ ಗುಜ್ಜರಕೇರೆ ಪ್ರದೇಶದಲ್ಲಿರುವ ಚಹಾ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಪ್ರಥಮ ವರ್ಷದ ಆದರ್ಶ್ ಮತ್ತು ಜಾಸಿನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಿರಿಯ ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಹಾಕಿಕೊಂಡು ಬಂದಿದ್ದನ್ನೇ ನೆಪವಾಗಿಸಿಕೊಂಡ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ವಿದ್ಯಾರ್ಥಿಗಳ ಗುಂಪು, ಅವರೊಂದಿಗೆ ಗಲಾಟೆ ಮತ್ತು ವಾಗ್ವಾದ ನಡೆಸಿದೆ. ಮಾತಿಗೆ ಮಾತು ಬೆಳೆದು ಸೀನಿಯರ್‌ಗಳು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಚುರುಕು:

ವಿಷಯ ತಿಳಿಯುತ್ತಿದ್ದಂತೆ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ಆರು ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಕೇವಲ ವೈಯಕ್ತಿಕ ವೈಷಮ್ಯದಿಂದ ನಡೆದ ಗಲಾಟೆಯೋ ಅಥವಾ ರ‍್ಯಾಗಿಂಗ್‌ಗೆ ಸಂಬಂಧಿಸಿದ ಘಟನೆಯೋ ಎಂಬ ಕುರಿತು ಎಲ್ಲಾ ಆಯಾಮಗಳಲ್ಲೂ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ.

ಪೋಷಕರಲ್ಲಿ ಆತಂಕ – ಸಾರ್ವಜನಿಕರ ಆಕ್ರೋಶ:

ನಗರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತೆ ರ‍್ಯಾಗಿಂಗ್ ಭೂತ ತಲೆಎತ್ತುತ್ತಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲ್ಲೆ ನಡೆಸಿದ ಆರೋಪಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಪೋಷಕರು ತೀವ್ರವಾಗಿ ಆಗ್ರಹಿಸಿದ್ದಾರೆ

Continue Reading

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!