crime
ವರನಿಗೆ ಚಾಕು ಇರಿತ ಕೇಸ್ಗೆ ಬಿಗ್ ಟ್ವಿಸ್ಟ್; ಪ್ರಿಯಕರನೊಂದಿಗೆ ಪ್ಲಾನ್ ರೂಪಿಸಿದ ವಧು ಅಂದರ್
ಚಾಮರಾಜನಗರ : ಕೊಳ್ಳೇಗಾಲದಲ್ಲಿ (Kollegala) ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಮಾಡಿದ ಪ್ಲ್ಯಾನ್ ಬಯಲಾಗಿದೆ.

ಮಾಡಿದ್ದಾಳೆ ಎನ್ನುವುದು ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.

ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ಗೆ ಹೇಳಿದ್ದಳು. ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಪರಾರಿಯಾಗಿತ್ತು.

ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.

6 ತಿಂಗಳ ಹಿಂದೆ ನಯನ ಎನ್ನುವ ಯುವತಿಯೊಂದಿಗೆ ರವೀಶನ ಮದುವೆ ನಿಶ್ಚಯವಾಗಿತ್ತು. ಅದರಂತೆ ಇಂದು (ಜನವರಿ 29) ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ ಆಯೋಜಿಸಲಾಗಿತ್ತು. ಹೀಗಾಗಿ ವರದ ರವೀಶ್,ಕುಣಗಳ್ಳಿ ಗ್ರಾಮದಿಂದಕಾರಿನಲ್ಲಿ ಹೋಗುವ ವೇಳೆ ಸಿನೀಮಿಯಾ ರೀತಿಯಲ್ಲಿ ದುಷ್ಕರ್ಮಿಗಳು ಅಡ್ಡಹಾಕಿದ್ದಾರೆ. ಬಳಿಕ ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಚೂರಿಯಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಎಡಗೈಗೆ ಚಾಕು ತಾಕಿದ್ದರಿಂದ ಸದ್ಯ ರವೀಶ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದುತ್ತಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
arrest
ಮಂಗಳೂರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ‍್ಯಾಗಿಂಗ್ ಶಂಕೆ, ತನಿಖೆ ಆರಂಭ
ಮಂಗಳೂರು ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ – ಕಪ್ಪು ಶೂ ಧರಿಸಿದ್ದಕ್ಕೆ ಜೂನಿಯರ್‌ಗಳ ಮೇಲೆ ಸೀನಿಯರ್‌ಗಳಿಂದ ಭೀಕರ ಹಲ್ಲೆ!
ಮಂಗಳೂರು, ಆಗಸ್ಟ್ 05: ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೇವಲ ಕಪ್ಪು ಬಣ್ಣದ ಶೂ ಧರಿಸಿದ್ದರೆಂಬ ಸಣ್ಣ ಕಾರಣಕ್ಕೆ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ ಗುಂಪು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಿರಿಯ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಘಟನೆಯ ವಿವರ:
ನಗರದ ಗುಜ್ಜರಕೇರೆ ಪ್ರದೇಶದಲ್ಲಿರುವ ಚಹಾ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಪ್ರಥಮ ವರ್ಷದ ಆದರ್ಶ್ ಮತ್ತು ಜಾಸಿನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಿರಿಯ ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಹಾಕಿಕೊಂಡು ಬಂದಿದ್ದನ್ನೇ ನೆಪವಾಗಿಸಿಕೊಂಡ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ವಿದ್ಯಾರ್ಥಿಗಳ ಗುಂಪು, ಅವರೊಂದಿಗೆ ಗಲಾಟೆ ಮತ್ತು ವಾಗ್ವಾದ ನಡೆಸಿದೆ. ಮಾತಿಗೆ ಮಾತು ಬೆಳೆದು ಸೀನಿಯರ್‌ಗಳು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಚುರುಕು:
ವಿಷಯ ತಿಳಿಯುತ್ತಿದ್ದಂತೆ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ಆರು ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಕೇವಲ ವೈಯಕ್ತಿಕ ವೈಷಮ್ಯದಿಂದ ನಡೆದ ಗಲಾಟೆಯೋ ಅಥವಾ ರ‍್ಯಾಗಿಂಗ್‌ಗೆ ಸಂಬಂಧಿಸಿದ ಘಟನೆಯೋ ಎಂಬ ಕುರಿತು ಎಲ್ಲಾ ಆಯಾಮಗಳಲ್ಲೂ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ.
ಪೋಷಕರಲ್ಲಿ ಆತಂಕ – ಸಾರ್ವಜನಿಕರ ಆಕ್ರೋಶ:
ನಗರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತೆ ರ‍್ಯಾಗಿಂಗ್ ಭೂತ ತಲೆಎತ್ತುತ್ತಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲ್ಲೆ ನಡೆಸಿದ ಆರೋಪಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಪೋಷಕರು ತೀವ್ರವಾಗಿ ಆಗ್ರಹಿಸಿದ್ದಾರೆ
arrest
ಪುತ್ತೂರು: ಅಕ್ರಮ ಮರ ಸಾಗಾಟ ಯತ್ನ ವಿಫಲ; 10 ಲಕ್ಷ ರೂ. ಮೌಲ್ಯದ ಸೊತ್ತು ವಶ, ಆರೋಪಿ ಬಂಧನ
ಪುತ್ತೂರು: ಸಕಲೇಶಪುರದಿಂದ ಮಂಗಳೂರಿಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಸೋಮವಾರ (ಆಗಸ್ಟ್ 3) ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.
ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ (KA-13-AA-6340) ವಾಹನವನ್ನು ತಡೆದು ಪರಿಶೀಲಿಸಿದಾಗ, ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕ, ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಲೋಕೇಶ್ ಅವರ ಪುತ್ರ ರೋಹಿತ್ ಎಸ್. ಎಲ್. (20) ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಶಪಡಿಸಿಕೊಂಡ ವಾಹನ ಹಾಗೂ ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿದ್ದ ತಂಡ:
ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ:ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್,ಗಸ್ತು ಅರಣ್ಯ ಪಾಲಕರಾದ ವಿನಯಚಂದ್ರ ಮತ್ತು ದೀಕ್ಷಾ ಕೆ.ಚಾಲಕ ಕಿಶೋರ್ ಕುಮಾರ್ ಕೆ. ಭಾಗವಹಿಸಿದ್ದರು.
ಮುಂದಿನ ತನಿಖೆ:
ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಸಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯಕ್ ಅವರ ನಿರ್ದೇಶನದಂತೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

arrest
ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.
ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.
ದಾಳಿಯ ವಿವರ:
ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.
ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಳು:
ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.
ಪ್ರಕರಣ ದಾಖಲು:
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala1 month agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
