Connect with us

crime

ಮಹಿಳೆ ಜೊತೆ ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧ ; ಪರಸ್ತ್ರೀ ವ್ಯಾಮೋಹಕ್ಕೆ‌ ಕೊಲೆ ಆರೋಪಿಯಾಗಿ ಗುರೂಜಿ ಅರೆಸ್ಟ್; ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆ.

Published

on

ಪರಸ್ತ್ರೀ ವ್ಯಾಮೋಹಕ್ಕೆ‌ ಕೊಲೆ ಆರೋಪಿಯಾಗಿ ಗುರೂಜಿ ಅರೆಸ್ಟ್

ಸ್ವಾಮೀಜಿ. ಗುರೂಜಿ ಗೆಟಪ್‌ನಲ್ಲಿ ಅನೈತಿಕ ಸಂಬಂಧಗಳು, ಅವ್ಯವಹಾರಗಳು, ಅನಾಚಾರಗಳನ್ನು ಮಾಡುತ್ತಾ, ಅಂಧ ಭಕ್ತರನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡು ದಂಧೆ ನಡೆಸುವವರಿಗೆ ಏನೂ ಕಮ್ಮಿಯಿಲ್ಲದ ಈ ಕಾಲದಲ್ಲಿ ಆಗಾಗ ಇಂತವರ ಮುಖವಾಡಗಳನ್ನು ಖಡಕ್‌ ಪೊಲೀಸ್‌ ಅಧಿಕಾರಿಗಳು ಬಯಲು ಮಾಡುತ್ತಲೇ ಇದ್ದಾರೆ. ಇಂತವರ ಪಟ್ಟಿಗೆ ಪರಸ್ತ್ರಿ ವ್ಯಾಮೋಹ ಮಹಾ ಪಾಪ ಎಂದು ಆಗಾಗ ಬೊಗಳೆ ಬಿಡುತ್ತಿದ್ದ ಮಹಾ ಗುರೂಜಿಯೊಬ್ಬ ಅನೈತಿಕ ಸಂಬಂಧದಿಂದ ಸಂಸಾರವೊಂದನ್ನು ಬೀದಿಪಾಲು ಮಾಡಿ, ಸಾಕಾಗದಕ್ಕೆ ಕೊಲೆ ಆರೋಪವನ್ನೂ ಹೊತ್ತು ಜೈಲುಪಾಲಾದ ಬೆಚ್ಚಿ ಬೀಳಿಸುವ ಘಟನೆಯೊಂದು ಸಾವಜನಿಕರನ್ನು ಎಚ್ಚರಿಸಿದೆ.

ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿ ಮತ್ತಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ.
ಮಹಿಳೆಯ ಜೊತೆ ಖ್ಯಾತ ಜ್ಯೋತಿಷಿ ಕಮಲಾಕರ್​ ಭಟ್ ಅನೈತಿಕ ಸಂಬಂಧ (Illegal Relationship) ಹೊಂದಿದ್ದರು ಎನ್ನುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಕೊಲೆ ಮಾಡಲು ಹೆಂಡ್ತಿ ಸ್ಕೆಚ್​​ ಹಾಕಿದ್ದಳಂತೆ. ಆದ್ರೆ ಹಂತಕರ ಪ್ಲಾನ್​​ ಜಸ್ಟ್ ಮಿಸ್​ ಆಗಿದೆ. ದುರಾದೃಷ್ಟ ಎನ್ನುವಂತೆ ತಮ್ಮನನ್ನು ಪಾರು ಮಾಡಲು ಹೋದ ಅಣ್ಣನೇ ಕೊಲೆಯಾಗಿದ್ದಾನೆ. ಈ ಪ್ರಕರಣ ಸಂಬಂಧ ಖ್ಯಾತ ಜ್ಯೋತಿಷಿ ಕಮಲಾಕರ್​ ಭಟ್ (Kamalakar Bhatt) ಅವರನ್ನ ಪೊಲೀಸರು ಬಂಧಿಸಿದ್ದಾರೆ.


ಟಿವಿ ಚಾನೆಲ್ ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಜೊತೆ ವಿವಾಹಿತ ಮಹಿಳೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಆಕೆಯ ಮಗಳು ತಮ್ಮನ್ನು ರಕ್ಷಿಸುವಂತೆ ತಂದೆಗೆ ಮನವಿ ಮಾಡಿದ್ದ ಕಾರಣ ಪತಿ ದೂರು ನೀಡಿದ್ದಕ್ಕೆ ಪುಂಡರ ತಂಡ ದಾಳಿ ನಡೆಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 7ಜನ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಕಮಲಾಕರ ಭಟ್ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವರು. ಗುರೂಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕ್ ಗೆ ಮೆಸೇಜ್ ಮೂಲಕ ತಿಳಿಸಿದ್ದಾಳೆ. ಇದೇ ವಿಚಾರವಾಗಿ ಮಹೇಶ್ ನಾಯ್ಕ ಸಿದ್ಧಾಪುರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ಕಮಲಾಕರ ಭಟ್ ಗುರೂಜಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ದೂರು ನೀಡಿದ್ದಕ್ಕೆ ಕೆಂಡಾಮಂಡಲವಾದ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಚೌಡಪ್ಪ ನಾಯ್ಕ್ ಮತ್ತು ಸಹಚರರು ಮಹೇಶ್ ನಾಯ್ಕ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಬಂದ ವಸಂತ್ ನಾಯ್ಕ್ ಮತ್ತು ಕುಮಾರ್ ಎಂಬವರ ಮೇಲೂ ಆರೋಪಿಗಳು ಮನಬಂದಂತೆ ಹಲ್ಲೆ ನಡೆಸಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಈ ಪೈಕಿ ವಸಂತ್ ನಾಯ್ಕ್ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಸಂಬಂಧ ದುಷ್ಕೃತ್ಯ ಎಸಗಿ ಪರಾರಿಯಾಗುತ್ತಿದ್ದ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಾಗಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್ ಗುರೂಜಿಯನ್ನು ದಾಖಲಿಸಲಾಗಿದ್ದು ಸಿದ್ಧಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಮಾಜದಲ್ಲಿ ಕಾಂಜಿ ಪೀಂಜಿಯಾಗಿ ದಿನ ಕಳೆದಂತೆ ಐಷಾರಾಮಿ ಜೀವನಕ್ಕೆ ಭಡ್ತಿಪಡೆದು ಇಲ್ಲವಾದುದನ್ನೆಲ್ಲಾ ಹೇಳಿಕೊಂಡು ಮಾಡಬಾರದನ್ನೆಲ್ಲಾ ಮಾಡಿಕೊಂಡು ಟಿವಿ ಪರದೆ ಮೇಲೆ ಬೊಗಳೆ ಬಿಡುತ್ತಾ ಜನರನ್ನು ಮಂಗ ಮಾಡುವ ಕಾಯಕದಲ್ಲಿಯೇ ಜೀವನ ಸಾಗಿಸುವ
ಅಸಾಮಿಗಳ ಬಗ್ಗೆ ಜನ ಇನ್ನಾದರೂ ಎಚ್ಚರದಿಂದ ಇರಬೇಕು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!