Kasaragod
ಕೇರಳದಲ್ಲಿ ಭಾರಿ ಪ್ರಮಾಣದಲ್ಲಿ ಸ್ಪೋಟಕ ಸಾಗಾಣಿಕೆ ಪತ್ತೆ ; ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಪಿಕಪ್ ವಾಹನದಲ್ಲಿ ಸಾಗಾಟ; ಫಿಲ್ಮಿ ಸ್ಟೈಲಲ್ಲಿ ಬೆನ್ನಟ್ಟಿ ಖದೀಮನ ಹೆಡೆಮುರಿ ಕಟ್ಟಿದ ಪಾಲಕ್ಕಾಡ್ ಪೊಲೀಸರು..
ಕೇರಳದ ಪಾಲಕ್ಕಾಡ್ ಪಟ್ಟಣದ ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದಾಗ ಪಿಕಪ್ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು ಬೆನ್ನಟ್ಟಿ ಹಿಡಿದ ಪೊಲೀಸರು ಭಾರೀ ಪ್ರಮಾಣದ ಸ್ಫೋಟಕ ಪತ್ತೆ ಹಚ್ಚಿದ್ದಾರೆ.
ಪಾಲಕ್ಕಾಡ್ ಟೌನ್ ಸೌತ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ಭಾರಿ ಪ್ರಮಾಣದ ಸ್ಫೋಟಕ ವಸ್ತು ಪತ್ತೆಯಾಗಿದೆ.

ಪೊಲೀಸರು ತಪಾಸಣೆಗಾಗಿ ವಾಹನ ನಿಲ್ಲಿಸಲು ಸೂಚಿಸಿದಾಗ, ಚಾಲಕ ಗಾಡಿಯನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರ ತಂಡ ಪಿಕಪ್ ವಾಹನವನ್ನು ಫಿಲ್ಮಿ ಸ್ಟೈಲಲ್ಲಿ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಕಪ್ ವಾಹನದಲ್ಲಿ ಮೇಲ್ನೋಟಕ್ಕೆ ಕಲ್ಲಂಗಡಿ ಹಣ್ಣಿನ ಚೀಲಗಳವನ್ನು ಸಾಗಿಸಲಾಗಿತ್ತು. ಅನುದಾನಗೊಂಡ ಪೊಲೀಸರು ಮತ್ತಷ್ಟು ಕೂಲಂಕಷವಾಗಿ ಪರಿಶೀಲಿಸಿದಾಗ ಇವುಗಳ ಕೆಳಗೆ ಅತೀ ವ್ಯವಸ್ಥಿತವಾಗಿ 100ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳ ಪೆಟ್ಟಿಗೆಗಳು ಮತ್ತು 20ಕ್ಕೂ ಹೆಚ್ಚು ಡಿಟೋನೇಟರ್ ಬಾಕ್ಸ್ಗಳನ್ನು ಬಚ್ಚಿಡಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಾಹನ ಚಾಲಕನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ, ಈ ಸ್ಫೋಟಕಗಳನ್ನು ತಮಿಳುನಾಡಿನ ಕೊಯಮತ್ತೂರಿನಿಂದ ತ್ರಿಶೂರ್ನಲ್ಲಿರುವ ಕಲ್ಲಿನ ಕ್ವಾರಿಯೊಂದಕ್ಕೆ ಸಾಗಿಸಲಾಗುತ್ತಿತ್ತು ಎಂದು ಚಾಲಕ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
accident
ಮಂಜೇಶ್ವರ: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸಾವು
ಮಂಜೇಶ್ವರ: ಮಂಜೇಶ್ವರ ಸಮೀಪದ ವರ್ಕಾಡಿ ಬಳಿ ಸೋಮವಾರ (ಅಕ್ಟೋಬರ್ 19, 2026) ಸಂಜೆ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಗಂಭೀರಗೊಂಡು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪ್ರಮುಖ ವಿವರಗಳು:
ಮೃತಪಟ್ಟವರು: ಕೊಡ್ಲಮೊಗರು ನಿವಾಸಿ ಮೊಹಮ್ಮದ್ ಟಿ. ಎಂದು ಗುರುತಿಸಲಾಗಿದೆ.
ಘಟನಾ ಸ್ಥಳ: ಮಂಜೇಶ್ವರದ ವರ್ಕಾಡಿ.
ಘಟನೆ: ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಪೊಲೀಸ್ ತನಿಖೆ ಮತ್ತು ಕ್ರಮಗಳು:
ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಜೇಶ್ವರ ಠಾಣೆಯ ಪೊಲೀಸರು ಪ್ರಾಥಮಿಕ ಸ್ಥಳ ತನಿಖೆ (Spot Inspection) ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತಿವೇಗದ ಶಂಕೆ: ಕಾರು ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣವೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಾಹನಗಳ ವಶ: ಅಪಘಾತಕ್ಕೀಡಾದ ಕಾರು ಹಾಗೂ ಮುಹಮ್ಮದ್ ಅವರು ಚಲಾಯಿಸುತ್ತಿದ್ದ ಬೈಕ್ ಎರಡನ್ನೂ ಪೊಲೀಸರು ಕಾನೂನು ಪ್ರಕ್ರಿಯೆಗಾಗಿ ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಮಂಜೇಶ್ವರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Entertainment
ದೈಗೋಳಿ ಶ್ರೀ ಸಾಯಿನಿಕೇತನ ಸೇವಾಶ್ರಮದಲ್ಲಿ ಅನ್ನದಾನ: ಡಾ. ಮಂಜುನಾಥ ಭಂಡಾರಿ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
ಗ್ರಾಮ ಸ್ವರಾಜ್ ಟ್ರಸ್ಟ್ ಮಂಗಳೂರು (ರಿ.) ವತಿಯಿಂದ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಶಾಸಕ ಡಾ. ಮಂಜುನಾಥ ಭಂಡಾರಿ ಅವರ ಹುಟ್ಟುಹಬ್ಬವನ್ನು ದೈಗೋಳಿಯ ಶ್ರೀ ಸಾಯಿನಿಕೇತನ ಸೇವಾಶ್ರಮದಲ್ಲಿ ವಿಶೇಷ ಅನ್ನದಾನ ಸೇವೆ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸುಸಂದರ್ಭದಲ್ಲಿ ಖುದ್ದಾಗಿ ಉಪಸ್ಥಿತರಿದ್ದ ಡಾ. ಮಂಜುನಾಥ ಭಂಡಾರಿಯವರು ಆಶ್ರಮದ ಸಮಾಜಮುಖಿ ಹಾಗೂ ಮಾನವೀಯ ಕಾರ್ಯಚಟುವಟಿಕೆಗಳಿಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ, ತಮ್ಮ ವೈಯಕ್ತಿಕ ನೆಲೆಯಲ್ಲಿ ₹50,000 ಪ್ರೋತ್ಸಾಹಕ ದೇಣಿಗೆಯನ್ನು ಹಸ್ತಾಂತರಿಸಿದ ಅವರು, ಮುಂಬರುವ ದಿನಗಳಲ್ಲಿಯೂ ಆಶ್ರಮದ ಪ್ರತಿಯೊಂದು ಸತ್ಕಾರ್ಯಗಳಿಗೆ ಅಗತ್ಯವಿರುವ ಸಕಲ ಬೆಂಬಲ ಹಾಗೂ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಈ ಮಂಗಳಕರ ಕಾರ್ಯಕ್ರಮದಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ) ಮಂಗಳೂರು ಅಧ್ಯಕ್ಷರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಟ್ರಸ್ಟ್ನ ಕೋಶಾಧಿಕಾರಿ ಹಾಗೂ ಮಾಜಿ ಕಾರ್ಪರೇಟರ್ ಪ್ರವೀಣ್ ಚಂದ್ರ ಆಳ್ವ, ಮಂಗಳೂರು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಂಬಳಿ, ಮಾಜಿ ಮೇಯರ್ ಮಹಾಬಲ ಮಾರ್ಲ ಹಾಗೂ ಟ್ರಸ್ಟ್ ಕಾರ್ಯದರ್ಶಿ ಲಾರೆನ್ಸ್ ಡಿ ಸೋಜಾ, ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ಮಾಜಿ ನಾಯಕರಾದ ಅನಿಲ್ ಕುಮಾರ್ ಪ್ರಮುಖವಾಗಿ ಭಾಗವಹಿಸಿದ್ದರು. ಇವರೊಂದಿಗೆ ಪವಿತ್ರ ಪೂಂಜ ಕೊಡಂಗೆ, ಹಿರಿಯ ಪತ್ರಕರ್ತ ವಿ. ಟಿ. ಪ್ರಸಾದ್, ಮಂಗಳೂರಿನ ಸುನಿಲ್ ಪೂಜಾರಿ ಹಾಗೂ ರಾಕೇಶ್ ದೇವಾಡಿಗ, ಕುಂದಾಪುರದ ಇಚ್ಚಿತ್ ಶೆಟ್ಟಿ, ಉಡುಪಿಯ ರವಿ ಶೆಟ್ಟಿ ಸೇರಿದಂತೆ ಹಲವು ಪ್ರಮುಖ ಮುಖಂಡರು, ಆಶ್ರಮದ ಪದಾಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಶ್ರೀ ಸಾಯಿ ನಿಕೇತನ ಸೇವಾಶ್ರಮದ ಡಾ. ಉದಯಕುಮಾರ್-ಡಾ. ಶಾರದಮ್ಮ ದಂಪತಿ ಮಂಜುನಾಥ ಭಂಡಾರಿಯವರ ಮುಂದಿನ ರಾಜಕೀಯ ಜೀವನ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
accident
ಕಾಸರಗೋಡು: ಸಿಡಿಲು ಬಡಿದು ಯುವಕ ಸಾವು – ದಾರುಣ ಘಟನೆ
ಕಾಸರಗೋಡು: ಆದುರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಪಾಂಡಿ ಬಳವಂತಡ್ಕ ಎಂಬಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಕುಂಟಾರು ಉಯಿತಡ್ಕ ಮಾಯಿಲಾಂಕೋಟೆ ನಿವಾಸಿ ಅರಬಿ ಹಾಗೂ ನಫೀಸಾ ದಂಪತಿಯ ಪುತ್ರ ಮುಹಮ್ಮದ್ ನೌಫಲ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಅವರು ಪಾಂಡಿ ಬಳವಂತಡ್ಕದಲ್ಲಿರುವ ತನ್ನ ಪತ್ನಿಯ ಮನೆಗೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸಿಡಿಲು ಬಡಿದ ತಕ್ಷಣವೇ ಅವರನ್ನು ಮುಳ್ಳೇರಿಯಾ ಸಹಕಾರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ನೌಫಲ್ ಅವರು ತಿರುವನಂತಪುರದ ಜ್ಯೂಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆದುರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
