Connect with us

crime

ಅಂತರ್ ರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನಲಕ್ಷಾಂತರ ಮೌಲ್ಯದ ಮಾದಕ ವಸ್ತು, ವಾಹನ, ಮಾರಕಾಸ್ತ್ರಗಳ ವಶ.ದ.ಕ ಜಿಲ್ಲಾ ಪೊಲೀಸ್‍ ಆಧೀಕ್ಷಕರ ನೇತೃತ್ವದ ತಂಡದ ಕಾರ್ಯಾಚರಣೆ

Published

on

ದ.ಕ ಜಿಲ್ಲಾ ಪೊಲೀಸ್‍ ಆಧೀಕ್ಷಕರ ನೇತೃತ್ವದ ತಂಡ ಜಿಲ್ಲೆಯಾದ್ಯಂತ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಅಂತರ್‌ರಾಜ್ಯ ಮಟ್ಟದಲ್ಲಿ ಕೊಂಡಿಯಾಗಿದ್ದ 3 ಜನ ಕುಖ್ಯಾತ ಮಾದಕ ವಸ್ತು ಮಾರಾಟಗಾರರ ಜಾಲದ ಪ್ರಮುಖ ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ಮಾದಕ ವಸ್ತುಗಳ ಜೊತೆಗೆ ವಾಹನ, ಮೊಬೈಲ್‌, ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡ ಪೊಲೀಸರ ತಂಡ ಡ್ರಗ್ಗ್‌ ಪೆಡ್ಲರ್ಸ್‌ಗಳಿಗೆ ನಡುಕ ಹುಟ್ಟಿಸಿದ್ದಾರೆ.

ದ.ಕ ಜಿಲ್ಲಾ ಪೊಲೀಸ್‍ ಆಧೀಕ್ಷಕರ ವಿಶೇಷ ತಂಡದಿಂದ ಮಾದಕ ವಸ್ತು ಮಾರಾಟಗಾರರ ಜಾಲದ ಪ್ರಮುಖ ಆರೋಪಿಗಳಾದ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಪ್ರಾಯ: 30 ವರ್ಷ ತಂದೆ: ದಿ| ಅಶ್ರಪ್‌ ವಾಸ: ಚೆನ್ನಿಲೊಟ್ಟು, ವೇಲಂ, ವಡಕರ್‌ ತಾಲೂಕು, ಕೋಝಿಕೋಡ್, ಕೇರಳ, ಇಸ್ಮಾಯಿಲ್‌ ಪ್ರಾಯ: 28 ವರ್ಷ ತಂದೆ: ಇಬ್ರಾಹಿಂ ವಾಸ: ಮುಂಡಿಕುಂಞಲ್‌, ಚರುಕಾಟುರ್‌ ಗ್ರಾಮ ಮಾನಂದವಾಡಿ, ವಯನಾಡ್‌ ಜಿಲ್ಲೆ ಕೇರಳ ಮತ್ತು ಸಂಶೀರ್‌ ಪ್ರಾಯ: 27 ವರ್ಷ ತಂದೆ: ಬಶೀರ್‌ ವಾಸ: ಕಹ್ನೀರಾ, ಪಾಲೇರಿ ಗ್ರಾಮ, ಕೊಝಿಕೋಡ್‌ ಜಿಲ್ಲೆ ಕೇರಳ ಇವರುಗಳನ್ನು ಬಂಧಿಸಿದ್ದು, ಪುತ್ತೂರು ಗ್ರಾಮಾಂತರ ಠಾಣಾ ಅ.ಕ್ರ 25/2026 ಕಲಂ 8C, 22(C), 29 NDPS Act 1985 & ಕಲಂ: 25(1B)(B) Arms Act ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಆರೋಪಿಗಳಿಂದ ಮಾದಕ ವಸ್ತುವಾದ ರೂ 5,38,800/- ಮೌಲ್ಯದ 53.58 ಗ್ರಾಂ MDMA ಹಾಗೂ ರೂ 18,00,00/- ಮೌಲ್ಯದ ಮಹೀಂದ್ರ ಕಂಪನಿಯ ಥಾರ್‍ ವಾಹನ ಮತ್ತು ಮಾರಕಾಸ್ತ್ರ ಹಾಗೂ ರೂ. 1 ಲಕ್ಷದ 52,000 ಮೌಲ್ಯದ ಮೊಬೈಲ್‍ಗಳು ಹಾಗೂ ನಗದು ರೂ. 10,000/- ವಶಪಡಿಸಿಕೊಂಡಿದ್ದಾರೆ.

ಮೊದಲ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಈತನು ಕೇರಳ , ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್‍ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿ, ತಲೆ ಮರೆಸಿಕೊಂಡಿರುತ್ತಾನೆ. ಅಲ್ಲದೆ ಈತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣಾ ಅ.ಕ್ರ: 04/2026 ಹಿಂದಿನ ಪ್ರಕರಣದಲ್ಲಿ ಮಹಮ್ಮದ್‌ ಶಾಬಾದ್‌, ಪಲ್ಲಂಗೋಡು, ಅಡೂರು, ಕಾಸರಗೋಡು, ಅಬ್ದುಲ್‌ ನಾಸೀರ್‌.ಎ.ಪಿ, ಪುದಿಯಾಪುರ, ನೆಟ್ಟಣಿಗೆ ಮುಡ್ನೂರು, ಪುತ್ತೂರು , ವಿಧು ಕೃಷ್ಣನ್‍ ತಲಿಪರಂಭ ಕಣ್ಣೂರು ಕೇರಳ ಎಂಬವರನ್ನು ಬಂಧಿಸಿ, ಆರೋಪಿಗಳಿಂದ ರೂ 1,64,000/-ಮೌಲ್ಯದ 16.26 ಗ್ರಾಂ MDMA ಹಾಗೂ ರೂ 11,00,000/- ಮೌ್ಲ್ಯದ 2 ಕಾರು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾದ ಪ್ರಕರಣದ ಪ್ರಮುಖ ಆರೋಪಿಯಾಗಿರುತ್ತಾನೆ. ಅಜ್ಮಲ್‍ ಸಹಚರನಾದ ಇಸ್ಮಾಯಿಲ್‌ನ ಮೇಲೆ ಕೂಡ ಕೇರಳ ರಾಜ್ಯದ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿರುತ್ತದೆ.

        ಸದ್ರಿ ಎರಡು ಪ್ರಕರಣಗಳಲ್ಲಿ ಆರೋಪಿಗಳಿಂದ ಒಟ್ಟು ಅಂದಾಜು ಮೌಲ್ಯ 6 ಲಕ್ಷದ 98,000/- ರೂಪಾಯಿಯ 69.84 ಗ್ರಾಂ  MDMA ಹಾಗೂ ಪ್ರಕರಣಕ್ಕೆ ಉಪಯೋಗಿಸಿದ ರೂ. 29 ಲಕ್ಷದ  3 ವಾಹನದ ಮೌಲ್ಯ ಹಾಗೂ 2 ಲಕ್ಷ ಮೌಲ್ಯದ ಮೊಬೈಲ್‍ ಗಳು ಹಾಗೂ ನಗದು ರೂ.44,000/- ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ ರೂ. 38 ಲಕ್ಷದ 42,000/- ಆಗಿರುತ್ತವೆ.

         ಇತ್ತೀಚೆಗೆ ದ.ಕ ಜಿಲ್ಲಾ ಪೊಲೀಸ್‍ ಆಧೀಕ್ಷಕರ ನೇತೃತ್ವದ ತಂಡ ಜಿಲ್ಲೆಯಾದ್ಯಂತ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು ಈ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ  ಪ್ರಮೋದ್‍ ಕುಮಾರ್‍, ಪುತ್ತೂರು ಗ್ರಾಮಾಂತರ ಪೊಲೀಸ್‍ ನಿರೀಕ್ಷಕರಾದ ಸುನಿಲ್‍ ಕುಮಾರ್, ದ.ಕ ಜಿಲ್ಲೆ, ಡಿ.ಎಸ್‍.ಬಿ ಪೊಲೀಸ್‍ ನಿರೀಕ್ಷಕರಾದ ನಂದ ಕುಮಾರ್‍, ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸ್‍(ಕಾ&ಸು) ಉಪನಿರೀಕ್ಷಕರಾದ  ಗುಣಪಾಲ ಜೆ  ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸ್‍ ಉಪನಿರೀಕ್ಷಕರಾದ ಸುಶ್ಮಾ ಜೆ ಭಂಡಾರಿ,  ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್‍ ರೈ, ಪ್ರಶಾಂತ್‍ ಎಂ, ಪ್ರವೀಣ್‍ ರೈ, ಹರ್ಷಿತ್‍, ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಪರಮೇಶ್ವರ ಗೌಡ, ಹರೀಶ್‍, ಸುಬ್ರಹ್ಮಣ್ಯ, ಬೀಮಸೇನ್‍,  ಭವಿತ್ ರೈ, ನಾಗಾರಾಜ್‍, ಕಾರ್ತಿಕ್‍ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್‍, ಸಂಪತ್‍ ರವರು ಭಾಗವಹಿಸಿದ್ದಾರೆ.
ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!