karavali
ಪುತ್ತೂರು ಸರ್ಕಾರಿ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಸಸ್ಪೆಂಡ್.. ವಿದ್ಯಾರ್ಥಿಗಳ ಛೂ ಬಿಟ್ಟು ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ಪ್ರತಿಭಟನೆ..
ಫೆಬ್ರವರಿ 16ರಂದು ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ, ಜವಾಬ್ದಾರಿಯಲ್ಲಿ ನುಣುಚಿಕೊಂಡ ಆರೋಪದಲ್ಲಿ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ವೇದಶ್ರೀ ನಿಡ್ಯಾ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ / ರಸ್ತೆ ತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳದೆ ಸಾರ್ವಜನಿಕ ಪ್ರತಿಭಟನೆ ತಡೆಯಲು ಅಗತ್ಯ ಕ್ರಮ ವಹಿಸದೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿದ ಆರೋಪದಲ್ಲಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇಲ್ಲಿನ ಪ್ರಭಾರ ಪ್ರಾಂಶುಪಾಲರು ಹಾಗೂ ಸಹಪ್ರಾಧ್ಯಾಪಕರಾದ ಶ್ರೀಮತಿ ವೇದಶ್ರೀ ನಿಡ್ಯ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅವರನ್ನು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957ರ ನಿಯಮ 10(1)(ಡಿ)ರನ್ವಯ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉನ್ನತ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಮತ್ತು ಸಮನ್ವಯ ಇದರ ಸರಕಾರದ ಅಧೀನ ಕಾರ್ಯದರ್ಶಿಯಾದ ಜಬಿನ್ ತಾಜ್ ಜಿ..ಎಂ. ಅವರು ಆದೇಶಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿ ದಿನಾಂಕ 16.02.2026ರಂದು ವಿದ್ಯಾರ್ಥಿನಿಯರು ಪ್ರತಿಭಟನೆ /ಧರಣಿ ನಡೆಸಿರುವ ಕುರಿತು ದಿನಾಂಕ 17.02.2026ರಂದು ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರು ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ, ಮಾಹಿತಿಯನ್ನು ಸಂಗ್ರಹಿಸಿ ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಸಲ್ಲಿಸಿರುವ ವರದಿಯ ಸಂಕ್ಷಿಪ್ತ ವರದಿಯಂತೆ ಪ್ರಸ್ತುತ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ವೇದಶ್ರೀ ನಿಡ್ಯ ಸಹಪ್ರಾಧ್ಯಾಪಕರು ಅರ್ಥಶಾಸ್ತ್ರ ವಿಭಾಗ ಇವರು ತಮ್ಮ ಹೇಳಿಕೆಯಲ್ಲಿ ನೂತನ ಕಟ್ಟಡಕ್ಕಾಗಿ ಮಾನ್ಯ ಶಾಸಕರಿಗೆ ಮನವಿ ನೀಡಿದ್ದು ದಿನಾಂಕ 16.02.2026ರಂದು ತರಗತಿಗೆ ಬಂದ ಸಂದರ್ಭದಲ್ಲಿ ಉಸಿರುಗಟ್ಟಿಸುವ ವಾತಾವರಣ ಇದ್ದ ಕಾರಣ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವವುದಾಗಿ ತಿಳಿಸಿದ್ದರು.
ಪುತ್ತೂರು ನಗರ ಪೊಲೀಸ್ ಠಾಣೆಯವರು ಪೋಲಿಸ್ ನಿರೀಕ್ಷಕರು ಪುತ್ತೂರು ನಗರ ಪೊಲೀಸ್ ಠಾಣೆ ಅವರು ತಮ್ಮ ಪತ್ರದಲ್ಲಿ ದಿನಾಂಕ 16.02.2026ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳದಲ್ಲಿ ರಸ್ತೆ ತಡೆಯನ್ನು ಯಾವುದೇ ಪೂರ್ವಾನುಮತಿ ಪಡೆಯದೆ ನಡೆಸಿರುವುದಲ್ಲದೆ ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುವುದಾಗಿ ತಿಳಿಸಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ವೇದಶ್ರೀ ನಿಡ್ಯ ಮತ್ತು ಪ್ರಾಧ್ಯಾಪಕರಾದ ಐವನ್ ಫ್ರಾನ್ಸಿಸ್ ಲೋಬೋರವರು ಉಪಸ್ಥಿತರಿದ್ದು ಮತ್ತು ಈ ಪ್ರತಿಭಟನೆಗೆ ಪ್ರೇರೇಪಿಸಿರುವ ಬಗ್ಗೆ ಇಲಾಖೆಗೆ ಗುಪ್ತ ಮಾಹಿತಿ ಬಂದಿರುವುದಾಗಿ ತಿಳಿಸಿರುತ್ತಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಆಶೋಕ್ ಕುಮಾರ್ ರೈಯವರು ತಮ್ಮ ಪತ್ರದಲ್ಲಿ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಿಡ್ಯ ಇವರು ವಿದ್ಯಾರ್ಥಿಗಳು ಡಯಾಲಿಸಿಸ್ ಕೇಂದ್ರದ ನಿರ್ಮಾಣ ಕಾಮಗಾರಿಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಆರೋಗ್ಯದ ಸಮಸ್ಯೆಗಳಾಗಲಿ, ತೊಂದರೆಗಳಾಗಲಿ, ಯಾವುದೇ ಮಾಹಿತಿಯನ್ನು ನನಗೆ ಅಥವಾ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದಿರುವುದಿಲ್ಲ, ಮತ್ತು ಈ ವಿಚಾರವಾಗಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ ವಿದ್ಯಾರ್ಥಿಗಳಿಂದ ಸರ್ಕಾರದ ವಿರುದ್ಧ/ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿರುವುದಾಗಿ ತಿಳಿಸಿರುತ್ತಾರೆ. ಸದರಿ ಕಾಲೇಜಿನ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿರುವ ಬಗ್ಗೆ ಪತ್ರಿಕೆ ಮತ್ತು ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿದ್ದು, ಈ ರೀತಿ ವಿದ್ಯಾರ್ಥಿನಿಯರು ಪ್ರತಿಭಟಿಸುವ ಸಂದರ್ಭದಲ್ಲಿ ಯಾವುದೇ ಅನಾಹುತಗಳು ನಡೆದರೆ ಅಥವಾ ಕಾನೂನಾತ್ಮಕ ಕ್ರಮಗಳು ಜಾರಿಯಾದಲ್ಲಿ ವಿದ್ಯಾರ್ಥಿನಿಯರ ಜವಾಬ್ದಾರಿ ಸಂಪೂರ್ಣವಾಗಿ ಪ್ರಾಂಶುಪಾಲರು ಮತ್ತು ಕಾಲೇಜಿನ ಸಿಬ್ಬಂದಿಗಳದಾಗಿರುತ್ತದೆ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಅಥವಾ ಉಪನ್ಯಾಸಕರಿಗೆ ಮನವಿಯನ್ನು ಸಲ್ಲಿಸಲು ಅವಕಾಶವಿದ್ದು, ಆದರೆ ಸದರಿ ಸಮಸ್ಯೆಗಳ ಬಗ್ಗೆ ತರಗತಿ ಪ್ರಾರಂಭಗೊಂಡ ನಂತರ ಇಂಥ ಯಾವುದೇ ಮಾಹಿತಿ ನೀಡಿರುವ ಬಗ್ಗೆ ದಾಖಲೆ ಇರುವುದಿಲ್ಲ ಮುಂದುವರಿದು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಂಸ್ಥೆಗಳ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಆಶೋಕ್ ಕುಮಾರ್ ರೈ ಇವರೊಂದಿಗೆ ಸಭೆ ನಡೆಸಿರುವ ಬಗ್ಗೆ ಸಭಾ ನಡವಳಿಯ ಯಾವುದೇ ದಾಖಲೆ ಅಥವಾ ಲಿಖಿತವಾಗಿ ಈ ಬಗ್ಗೆ ಅಧ್ಯಕ್ಷರಿಗೆ ಸಲ್ಲಿಸಿರುವ ಯಾವುದೇ ಪತ್ರ ವ್ಯವಹಾರ ದಾಖಲೆಗಳನ್ನು ಪ್ರಾಂಶುಪಾಲರು ನೀಡಿರುವುದಿಲ್ಲ, ಮತ್ತು ಈ ಸಭೆ ನಡೆಸಿರುವ ಬಗ್ಗೆ ಮಾಹಿತಿ ಇರುವುದಿಲ್ಲ, ಕಾಲೇಜಿನ ಅಭಿವೃದ್ಧಿಗೆ ಸಂಬಂಧಪಟ್ಟಂತ ವಿಷಯಗಳಲ್ಲಿ ಪ್ರಾಂಶುಪಾಲರು ಮಾನ್ಯ ಶಾಸಕರ / ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರ ವಿಶ್ವಾಸವನ್ನು ಗಳಿಸುವಲ್ಲಿ ವಿಫಲರಾಗಿರುತ್ತಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕಾಲೇಜಿನ ಮತ್ತು ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತ ದೃಷ್ಟಿಯಿಂದ ಪ್ರಸ್ತುತ ಪ್ರಧಾನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೇದಶ್ರೀ ನಡ್ಯಾರವರ ಪ್ರಭಾರವನ್ನು ರದ್ದುಗೊಳಿಸಿ ಕಾಲೇಜಿನ ಹಿರಿಯ ಉಪನ್ಯಾಸಗಳಿಗೆ ಪ್ರಾಂಶುಪಾಲರ ಪ್ರಭಾರವನ್ನು ನೀಡಬಹುದೆಂದು ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ವರದಿ ನೀಡಿದ್ದರು.

ದಿನಾಂಕ 16.02.2026ರಂದು ಸರಕಾರಿ ಪ್ರಥಮ ದರ್ಜೆಕ ಮಹಿಳಾ ಕಾಲೇಜು ಪುತ್ತೂರಿನಲ್ಲಿ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ/ ರಸ್ತೆ ತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾದೇಶಿಕ ಜಂಟಿ ನಿರ್ದೇಶಕ ವರದಿ, ಪೊಲೀಸ್ ವರದಿ ಹಾಗೂ ಮಾನ್ಯ ಶಾಸಕರ ಪತ್ರಗಳನ್ನು ಪರಿಶೀಲಿಸಿದ್ದು, ವಿದ್ಯಾರ್ಥಿನಿಯರು ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳದೆ ಸಾರ್ವಜನಿಕ ಪ್ರತಿಭಟನೆ ತಡೆಯಲು ಅಗತ್ಯ ಕ್ರಮ ವಹಿಸದೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೋರಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸದರಿ ಘಟನೆಯಿಂದಾಗಿ ಕಾಲೇಜಿನ ಪ್ರಾಂಶುಪಾಲರು ಶೈಕ್ಷಣಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಜವಾಬ್ದಾರಿಯನ್ನು ಸಮರ್ಥಕವಾಗಿ ನೆರವೇರಿಸಲು ವಿಫಲರಾಗಿರುವುದು ಸ್ಪಷ್ಟವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ವೇದಶ್ರೀ ನಿಡ್ಯ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮಾವಳಿಗಳಲ್ಲಿ ಶಿಸ್ತು ಕ್ರಮ ಜರಗಿಸಲು ಉದ್ದೇಶಿಸಿ ಪ್ರಕರಣದ ಗಂಭೀರತೆಯನ್ನು ಹಾಗೂ ಇಲಾಖೆ ತನಿಖೆಯ ನಿಷ್ಪಕ್ಷಪಾತ ನಿರ್ವಹಣೆಯನ್ನು ಮನಗಂಡು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇಲ್ಲಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಮತಿ ವೇದಶ್ರೀ ನಡ್ಯ ಇವರನ್ನು ವಿಚಾರಣೆ ಕಾಯ್ದಿರಿಸಿ ಮೇಲ್ಕಂಡ ನಿಯಮಗಳ ನಿಯಮ 10ರಡಿಯಲ್ಲಿ ಅಮಾನತುಗೊಳಿಸಲು ಸರಕಾರದ ಅನುಮೋದನೆಗಾಗಿ ಆಯುಕ್ತರು (ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ) ಇವರು ಪ್ರಸ್ತಾವನೆ ಸಲ್ಲಿಸಿದ್ದರು.
ಮೇಲ್ಕಂಡ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇಲ್ಲಿನ ಪ್ರಭಾರ ಪ್ರಾಂಶುಪಾಲರು ಹಾಗೂ ಸಹಪ್ರಾಧ್ಯಾಪಕರಾದ ಶ್ರೀಮತಿ ವೇದಶ್ರೀ ನಿಡ್ಯ ಇವರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರಿನಲ್ಲಿ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ / ರಸ್ತೆತಡೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿದ ಪ್ರಕರಣದಲ್ಲಿ ಸದರಿಯವರ ವಿರುದ್ಧ ಇಲಾಖೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿ ಆದೇಶಿಸಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಲ್ಲಿಸಿದ್ದ ವರದಿಯ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಫೆ.17ರಂದು ಕಾಲೇಜಿಗೆ ಭೇಟಿ ನೀಡಿದ ಪ್ರಾದೇಶಿಕ ಜಂಟಿ ನಿರ್ದೇಶಕರು ವಿದ್ಯಾರ್ಥಿನಿಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದ ಜೊತೆ ಚರ್ಚಿಸಿ ವರದಿ ನೀಡಿದ್ದರು.
Watch the video
Bantawala
ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಒಡಿಯೂರು ಶ್ರೀಗಳಿಂದ ಐತಿಹಾಸಿಕ ನಿರ್ಧಾರಕ್ಕೆ ಹರ್ಷ ಹಾಗೂ ಅಭಿನಂದನೆ
ಮಂಗಳೂರು: ಕರಾವಳಿಯ ದಶಕಗಳ ಬೇಡಿಕೆಯಂತೆ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಿರುವ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಣಯಕ್ಕೆ ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹರ್ಷ ವ್ಯಕ್ತಪಡಿಸಿದ್ದು, ಸಮಸ್ತ ತುಳುವರಿಗೆ ಮತ್ತು ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಚಿವ ಸಂಪುಟದ ಮಹತ್ವದ ತೀರ್ಮಾನ
ಮಂಗಳೂರಿನ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವಂತೆ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಲು ಸಂಪುಟ ಅನುಮೋದನೆ ನೀಡಿದೆ.
ಕನ್ನಡವು ಎಂದಿನಂತೆ ರಾಜ್ಯದ ಮೊದಲ ಅಧಿಕೃತ ಆಡಳಿತ ಭಾಷೆಯಾಗಿ ಮುಂದುವರಿಯಲಿದೆ.
2000 ವರ್ಷಕ್ಕೂ ಅಧಿಕ ಇತಿಹಾಸವಿರುವ ಹಾಗೂ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ಸಿಕ್ಕಿರುವ ಈ ಮಾನ್ಯತೆ, ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳುವನ್ನು ಸೇರಿಸುವ ಮುಂದಿನ ಹೋರಾಟಕ್ಕೂ ಮಹತ್ವದ ಬಲ ತುಂಬಲಿದೆ.
ಒಡಿಯೂರು ಶ್ರೀಗಳ ಸಂದೇಶದ ಸಾರ
ತುಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಒಡಿಯೂರು ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ತಮ್ಮ ಸಂದೇಶದಲ್ಲಿ, “ಹೃದಯದ ಭಾವನೆಗಳ ಇನ್ನೊಂದು ರೂಪವೇ ಭಾಷೆ. ತುಳುನಾಡಿನವರಿಗೆ ಕನ್ನಡ ರಾಜ್ಯ ಭಾಷೆಯಾದರೆ, ತುಳು ಮಾತೃಭಾಷೆಯಾಗಿದೆ. ಈ ಎರಡು ಭಾಷೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದ್ದಾರೆ.
ಜೊತೆಗೆ, ತುಳು ಅತ್ಯಂತ ಸಂಪನ್ನ ಹಾಗೂ ಸಮೃದ್ಧ ಭಾಷೆಯಾಗಿದ್ದು, ತುಳುವರದು ಸೌಹಾರ್ದಯುತ ಮನೋಭಾವ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತುಳು ಸಂಸ್ಕೃತಿಗೆ ಒಡಿಯೂರು ಸಂಸ್ಥಾನದ ಕೊಡುಗೆ
ಒಡಿಯೂರು ಶ್ರೀಗಳ ದಿವ್ಯ ಮಾರ್ಗದರ್ಶನದಲ್ಲಿ ತುಳುವಿನ ಪೋಷಣೆಗಾಗಿ ನಿರಂತರ ಕಾರ್ಯಕ್ರಮಗಳು ನಡೆಯುತ್ತಿವೆ:
ಪ್ರತಿವರ್ಷ ಒಡಿಯೂರಿನಲ್ಲಿ ‘ತುಳುನಾಡ್ದ ಜಾತ್ರೆ’, ‘ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ’ ಹಾಗೂ ‘ತುಳುವೆರೆ ತುಳಿಪು’ ಕಾರ್ಯಕ್ರಮಗಳ ಆಯೋಜನೆ.
ಭಾಷೆಯ ಬೆಳವಣಿಗೆಗಾಗಿ ‘ಒಡಿಯೂರುದ ತುಳುಕೂಟ’ ಹಾಗೂ ‘ವಿದ್ಯಾರ್ಥಿ ತುಳುಕೂಟ’ ಸಂಘಟನೆಗಳ ಸ್ಥಾಪನೆ.
ಸರ್ಕಾರದ ಈ ದಿಟ್ಟ ನಿರ್ಣಯವು ತುಳು ಭಾಷೆಯ ಅಭಿಮಾನಿಗಳು, ಸಾಹಿತಿಗಳು ಹಾಗೂ ಕರಾವಳಿಯ ನೂರಾರು ತುಳು ಸಂಘಟನೆಗಳಿಗೆ ಸಂದ ಅಪೂರ್ವ ಗೆಲುವು ಎಂದು ಬಣ್ಣಿಸಿರುವ ಸ್ವಾಮೀಜಿಯವರು, ಮುಂದೆಯೂ ಸಂಸ್ಥಾನದ ವತಿಯಿಂದ ತುಳು ಭಾಷೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳು ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.
ಇಂದು ತುಳುನಾಡಿನ ಕೇಂದ್ರ ಸ್ಥಳವಾದ ಮಂಗಳೂರಿನಲ್ಲಿ ಜರಗಿದ ಕರ್ನಾಟಕ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತುಳುಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಮಾನ್ಯತೆಯನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಘೋಷಿಸಿರುವುದು ಸಂತಸದ ವಿಚಾರ.
ಎರಡೂವರೆ ಸಾವಿರ ವರ್ಷದ ಇತಿಹಾಸದ ತುಳುಭಾಷೆಗೆ ಮಾನ್ಯತೆ ದೊರೆತಿರುವುದು ತುಳುವರ ಹಲವು ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ವಿಜಯ. ಇದರಿಂದಾಗಿ ತುಳುಭಾಷೆ ಸಂವಿಧಾನದ 8ನೇ ಪರಿಚ್ಛೆದಕ್ಕೆ ಸೇರ್ಪಡೆಗೆ ರಹದಾರಿಯಾಗಿದೆ. ಅದಲ್ಲದೆ ಕರಾವಳಿಯ ಅಭಿವೃದ್ಧಿಗೆ ಸ್ಪಂದಿಸಿದ
ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ಎಲ್ಲಾ ಸಚಿವರುಗಳಿಗೆ, ಶಾಸಕರುಗಳಿಗೆ ಅಭಿನಂದನೆಗಳು.
ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
award
ತುಳು ಭಾಷೆಗೆ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ: ಸಮಸ್ತ ತುಳುವರಿಂದ ಹರ್ಷ; ನುಡಿದಂತೆ ನಡೆದ ಸರಕಾರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹರ್ಷ
ಮಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸರ್ಕಾರವು ನುಡಿದಂತೆ ನಡೆದುಕೊಂಡಿದ್ದು, ಜಗತ್ತಿನಾದ್ಯಂತ ನೆಲೆಸಿರುವ ತುಳು ಭಾಷಿಗರಲ್ಲಿ ಇದು ಹೊಸ ಆತ್ಮವಿಶ್ವಾಸವನ್ನು ಮೂಡಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸುಮಾರು 3 ಸಾವಿರ ವರ್ಷಗಳ ಇತಿಹಾಸವಿರುವ ತುಳು ಭಾಷೆಗೆ ಸಿಕ್ಕಿರುವ ಈ ಮಾನ್ಯತೆ ಭಾಷೆಯ ಸಮಗ್ರ ಬೆಳವಣಿಗೆಗೆ ಮೈಲಿಗಲ್ಲಾಗಿದೆ ಎಂದಿದ್ದಾರೆ.
ಪ್ರಮುಖ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳಿಗೆ ಅಭಿನಂದನೆ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು: ಶಿವರಾಜ್ ಎಸ್. ತಂಗಡಗಿ
- ಜಿಲ್ಲಾ ಉಸ್ತುವಾರಿ ಸಚಿವರು: ಯು.ಟಿ. ಖಾದರ್
- ಶಾಸಕರು: ಅಶೋಕ್ ರೈ ಹಾಗೂ ಕರಾವಳಿಯ ಎಲ್ಲಾ ಜನಪ್ರತಿನಿಧಿಗಳು
- ಇತರರು: ಸರ್ಕಾರಕ್ಕೆ ನಿರಂತರ ಒತ್ತಡ ತಂದ ದೇಶ-ವಿದೇಶದ ಎಲ್ಲಾ ತುಳು ಸಂಘ-ಸಂಸ್ಥೆಗಳು
ಐತಿಹಾಸಿಕ ನಿರ್ಧಾರದ ಹಿನ್ನೆಲೆ
ಈ ಹಿಂದೆ ಡಾ. ಎಂ. ಮೋಹನ್ ಆಳ್ವ ಅವರು ಸಲ್ಲಿಸಿದ ವರದಿ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ್ದ ‘ಆಂಧ್ರಪ್ರದೇಶ ಅಧ್ಯಯನ ವರದಿ’ಯ ಆಧಾರದ ಮೇಲೆ ಈ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಗೆ ಅಧಿಕೃತ ಮಾನ್ಯತೆ ನೀಡಿದ ಕಾನೂನು ಪ್ರಕ್ರಿಯೆಗಳ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ತಮಗೆ ಅವಕಾಶ ಸಿಕ್ಕಿFತು ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ನೆನಪಿಸಿಕೊಂಡಿದ್ದಾರೆ. ಈ ವರದಿಯು ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸಿಕೊಡುವಲ್ಲಿ ಪ್ರಮುಖ ದಾಖಲೆಯಾಗಿ ಸಹಕಾರಿಯಾಗಿದೆ ಎಂದರು.
ಮುಂದಿನ ಗುರಿ: ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ
ಕರ್ನಾಟಕ ಸರ್ಕಾರದ ಈ ಚಾರಿತ್ರಿಕ ನಿರ್ಧಾರವು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ತುಳುವರ ದೀರ್ಘಕಾಲದ ಮಹತ್ವದ ಬೇಡಿಕೆ ಈಡೇರುವ ನಿಟ್ಟಿನಲ್ಲಿ ದೊಡ್ಡ ಶಕ್ತಿಯಾಗಲಿದೆ ಎಂದು ಅಕಾಡೆಮಿ ಅಧ್ಯಕ್ಷರು ಆಶಾವಾಹಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
