Connect with us

crime

ಬಿಜೆಪಿ ಮುಖಂಡ ಮಂಜು ಕೊಳಗೆ ಚಾಕು ಇರಿತ; ಐವರ ಬಂಧನ

Published

on

ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಡೆದ ಸಂಧಾನ ಮಾತುಕತೆ ವಿಕೋಪಕ್ಕೆ ತಿರುಗಿ, ಸ್ಥಳೀಯ ಬಿಜೆಪಿ ಮುಖಂಡ ಹಾಗೂ ಮೀನುಗಾರರ ನಾಯಕ ಮಂಜು ಕೊಳ ಅವರಿಗೆ ಚಾಕುವಿನಿಂದ ಇರಿದಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಬಳಿ ನಡೆದಿದೆ.

ಮಲ್ಪೆಯ ಯುವಕನೊಬ್ಬ ಹಾಗೂ ಪಡುಬಿದ್ರಿ ಪಲಿಮಾರು ಮೂಲದ ಯುವತಿಯ ನಡುವಿನ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಬೀಚ್ ಬಳಿ ರಾಜಿ ಪಂಚಾಯಿತಿ ಆಯೋಜಿಸಲಾಗಿತ್ತು. ಈ ವೇಳೆ ಸಂಧಾನಕ್ಕಾಗಿ ಹಿಂದೂ ಯುವ ಸೇನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರು ಭಾಗವಹಿಸಿದ್ದರು. ಮಾತುಕತೆಯ ಸಂದರ್ಭದಲ್ಲಿ ಯುವತಿಯ ಕಡೆಯವರು ಮತ್ತು ಮಂಜು ಕೊಳ ಅವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕಿಡಿಗೇಡಿಗಳು ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರು ಆರೋಪಿಗಳನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಮಲ್ಪೆ ಪೊಲೀಸರು ಒಬ್ಬ ಬಾಲಾಪರಾಧಿ ಸೇರಿದಂತೆ ಒಟ್ಟು ಐವರನ್ನು ವಶಕ್ಕೆ ಪಡೆದಿದ್ದಾರೆ.


ಚಾಕು ಇರಿತದಿಂದ ಗಾಯಗೊಂಡಿರುವ ಮಂಜು ಕೊಳ ಅವರನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಈ ಚಾಕು ಇರಿತ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸಹಿತ ಐವರನ್ನ ಪೊಲೀಸರು ಬಂಧಿಸಿದ್ದಾರೆ. ಅಮೃತ್ ಭಂಡಾರಿ, ಪ್ರಜ್ಞೇಶ್, ಪುನೀತ್ ಪೂಜಾರಿ, ಅಭಿಜಿತ್ ಬಂಧಿತ ಆರೋಪಿಗಳಾಗಿದ್ದಾರೆ. ಮಲ್ಪೆ ಬೀಚ್ ಬಳಿ ಹಲ್ಲೆ ನಡೆದಿದ್ದು, ಆರೋಪಿಗಳನ್ನು ಸ್ಥಳೀಯ ನಿವಾಸಿಗಳು ಗುರುತಿಸಿದ್ದಾರೆ.


ಕಿಬ್ಬೊಟ್ಟೆಯ ಭಾಗಕ್ಕೆ ಗಾಯಗೊಂಡ ಮಂಜು ಕೊಳ ಅವರನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಅವರು ಈ ಘಟನೆಯ ಹಿಂದೆ ಯಾವುದೇ ಕೋಮು ಸಂಘರ್ಷದ ಉದ್ದೇಶವಿಲ್ಲ, ಇದು ವೈಯಕ್ತಿಕ ಕಾರಣಗಳಿಂದ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Bantawala

ಅಕ್ರಮ ಕಲ್ಲುಕ್ವಾರಿಗೆ ತಹಶೀಲ್ದಾರ್ ತಂಡದಿಂದ ಮಿಂಚಿನ ದಾಳಿ.! ಸರ್ಕಾರಿ ಜಮೀನಿನಲ್ಲಿ ರಾಜಾರೋಷವಾಗಿ ಮೈನಿಂಗ್ ಮಾಫಿಯಾ.!

Published

on

ಬಂಟ್ವಾಳ ತಾಲೂಕಿನ ವಿಟ್ಲ ಹೋಬಳಿ ವ್ಯಾಪ್ತಿಯ ಅಳಿಕೆ ಗ್ರಾಮದ ಕೋಟೆತ್ತಡ್ಕ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕ್ವಾರಿಗೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಕಲಿ ದಾಖಲೆ ಸೃಷ್ಟಿಸಿ, ಗಣಿ ಇಲಾಖೆಯ ಅಧಿಕಾರಿಯೊಬ್ಬರ ಕುಮ್ಮಕ್ಕಿನಿಂದ ನಡೆಯುತ್ತಿದ್ದ ಈ ದಂಧೆಯನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಘಟನೆಯ ಹಿನ್ನೆಲೆ:
ಅಳಿಕೆ ಗ್ರಾಮದ ನೆಗಳಗುಳಿ ನಿವಾಸಿ ಕೃಷ್ಣ ಕುಡಿಯ ಅವರ ಪುತ್ರ ಚಂದ್ರ ಕುಡಿಯ ಎಂಬವರಿಗೆ 1994ರಲ್ಲಿ ಸರ್ವೆ ನಂ. 377/2ರಲ್ಲಿ 3.15 ಎಕರೆ ಹಾಗೂ 410/1ಬಿಯಲ್ಲಿ 0.80 ಎಕರೆ ಸರ್ಕಾರಿ ಜಮೀನು ಮಂಜೂರಾಗಿತ್ತು. ಆದರೆ, ಕಳೆದ ಕೆಲವು ವರ್ಷಗಳಿಂದ ಚಂದ್ರ ಕುಡಿಯ ಅವರು ಕಾರ್ಕಳ ಪರಿಸರದಲ್ಲಿ ವಾಸವಿದ್ದರು. ಈ ನಡುವೆ, ಕಳೆದ ಎರಡು ವಾರಗಳಿಂದ ಕೋಟೆತ್ತಡ್ಕ ಮುಳಿಯ ಎಂಬಲ್ಲಿನ ಮಂಜೂರಾದ ಸರ್ಕಾರಿ ಜಮೀನಿನಲ್ಲಿ ಏಕಾಏಕಿ ಬೃಹತ್ ಮಟ್ಟದ ಕೆಂಪು ಕಲ್ಲಿನ ಗಣಿಗಾರಿಕೆ ಆರಂಭವಾಗಿತ್ತು.

ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ:
ಸ್ಥಳೀಯರು ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಹಾಗೂ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ ಎಂ.ಎನ್. ಮತ್ತು ತಂಡ ಸ್ಥಳಕ್ಕೆ ದಾಳಿ ನಡೆಸಿತು. ದಾಳಿಯ ವೇಳೆ ಸ್ಥಳದಲ್ಲಿ ಕಲ್ಲು ಕಡಿಯುವ ಯಂತ್ರಗಳು ಹಾಗೂ ಜೆಸಿಬಿಗಳು ಪತ್ತೆಯಾಗಿವೆ. ಭೂಮಾಪನಾ ಇಲಾಖೆ ಮತ್ತು ಕಂದಾಯ ಇಲಾಖೆಯ ಜಂಟಿ ಮೋಜಣೆಯಲ್ಲಿ, ಗಣಿಗಾರಿಕೆ ನಡೆಯುತ್ತಿದ್ದ ಭೂಮಿ ಸಂಪೂರ್ಣವಾಗಿ ಸರ್ಕಾರಿ ಜಮೀನು ಎಂಬುದು ಸಾಬೀತಾಗಿದೆ.

ಈ ಅಕ್ರಮ ಕ್ವಾರಿಯ ಹಿಂದೆ ದೊಡ್ಡ ಮಟ್ಟದ ವಂಚನೆ ನಡೆದಿರುವುದು ಬೆಳಕಿಗೆ ಬಂದಿದ್ದು, 1994ರಲ್ಲಿ ಜಮೀನು ಮಂಜೂರಾತಿ ಪಡೆದಿದ್ದ ಚಂದ್ರ ಕುಡಿಯ ಎಂಬವರು ‘ಚಂದ್ರೇ ಗೌಡ’ ಎಂಬ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಇದಕ್ಕೆ ಪೂರಕವಾಗಿ ಗಣಿ ಇಲಾಖೆಯ ಅಧಿಕಾರಿ ಮಹದೇಶ ಎಂಬುವವರು ಕಂದಾಯ ಇಲಾಖೆಗೆ ಯಾವುದೇ ಮಾಹಿತಿ ನೀಡದೆ, ಸ್ವಹಿತಾಸಕ್ತಿಯಿಂದ ಈ ಅಕ್ರಮ ಗಣಿಗಾರಿಕೆಗೆ ಪರವಾನಗಿ ನೀಡಿರುವುದು ಇಲಾಖೆಯ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಹಶೀಲ್ದಾರ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಕಲ್ಲು ಕಡಿಯುವ ನಾಲ್ಕು ಯಂತ್ರಗಳು ಸೇರಿದಂತೆ ಇತರೆ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಅಳಿಕೆ ಗ್ರಾಮದ ಕೋಟೆತ್ತಡ್ಕ ಮುಳಿಯ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ನಕಲಿ ದಾಖಲೆ ಬಳಸಿ ನಡೆಸುತ್ತಿದ್ದ ಈ ದಂಧೆಯನ್ನು ಕಂದಾಯ ಮತ್ತು ಭೂಮಾಪನಾ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಪತ್ತೆಹಚ್ಚಲಾಗಿದ್ದು, ಅಕ್ರಮಕ್ಕೆ ಸಾಥ್ ನೀಡಿದ ಗಣಿ ಅಧಿಕಾರಿ ಮಹದೇಶ ವಿರುದ್ಧವೂ ಕಾನೂನು ಉರುಳು ಬಿಗಿಯಾಗುವ ಸಾಧ್ಯತೆ ದಟ್ಟವಾಗಿದೆ.

Continue Reading

crime

ಮಂಗಳೂರಿನ ಪ್ರತಿಷ್ಠಿತ ಪಿ.ಎ. ಕಾಲೇಜು ಕ್ಯಾಂಪಸ್‌ನಲ್ಲಿ ಅರಾಜಕತೆ: ವಿದ್ಯಾ ದೇಗುಲವೋ ಅಥವಾ ರಣರಂಗವೋ?

Published

on

ಮಂಗಳೂರು: ವಿದ್ಯೆ ಕಲಿಯುವ ಪವಿತ್ರ ತಾಣಗಳಾದ ಕಾಲೇಜು ಕ್ಯಾಂಪಸ್‌ಗಳು ಇಂದು ಗ್ಯಾಂಗ್ ವಾರ್ ಮತ್ತು ರಾಗಿಂಗ್‌ಗೆ ಅಡ್ಡೆಯಾಗುತ್ತಿವೆ. ಮಂಗಳೂರಿನ ಪ್ರತಿಷ್ಠಿತ ಪಿ.ಎ. ಕಾಲೇಜಿನಲ್ಲಿ (P.A. College) ಪದೇ ಪದೇ ನಡೆಯುತ್ತಿರುವ ಗುಂಪು ಘರ್ಷಣೆಗಳು ಪೋಷಕರಲ್ಲಿ ಅತೀವ ಆತಂಕ ಮೂಡಿಸಿದ್ದು, ಶಿಕ್ಷಣ ಸಂಸ್ಥೆಯ ಘನತೆಗೆ ಮಸಿ ಬಳಿಯುವಂತಿದೆ.

ತಿಂಗಳಿಗೆ ಐದಾರು ಬಾರಿ ಗಲಾಟೆ: ಶಿಸ್ತು ಮರೆತ ವಿದ್ಯಾರ್ಥಿಗಳು
ಇತ್ತೀಚಿನ ದಿನಗಳಲ್ಲಿ ಈ ಕಾಲೇಜಿನ ಕ್ಯಾಂಪಸ್‌ನಲ್ಲಿ ಪ್ರತಿ ತಿಂಗಳು ಕನಿಷ್ಠ ಐದಾರು ಬಾರಿ ರಾಗಿಂಗ್ ಮತ್ತು ಗುಂಪು ಘರ್ಷಣೆಗಳು ವರದಿಯಾಗುತ್ತಿವೆ. ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸಿ, ಉತ್ತಮ ಭವಿಷ್ಯದ ಕನಸು ಹೊತ್ತು ಬರುವ ವಿದ್ಯಾರ್ಥಿಗಳು ಇಲ್ಲಿ ಕಲಿಯುವುದನ್ನು ಬಿಟ್ಟು ಕಿತ್ತಾಟದಲ್ಲಿ ತೊಡಗುತ್ತಿರುವುದು ದುರದೃಷ್ಟಕರ. ವೈರಲ್ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿಗಳು ಹಾಡುಹಗಲೇ ಪರಸ್ಪರರ ಮೇಲೆ ಮುಗಿಬಿದ್ದು, ಹೊಡೆದಾಡುತ್ತಿರುವುದು ಅರಾಜಕತೆಯ ಪರಾಕಾಷ್ಠೆಯನ್ನು ಎತ್ತಿ ತೋರಿಸುತ್ತಿದೆ.

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಎಚ್ಚರಿಕೆ: ಊರಿನ ಗೌರವಕ್ಕೆ ಧಕ್ಕೆ ತರಬೇಡಿ
ಬೇರೆ ರಾಜ್ಯಗಳಿಂದ ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ಬರುವ ಕೆಲವು ವಿದ್ಯಾರ್ಥಿಗಳು ಸ್ಥಳೀಯ ಸಂಸ್ಕೃತಿ ಮತ್ತು ಶಿಸ್ತನ್ನು ಗಾಳಿಗೆ ತರುತ್ತಿದ್ದಾರೆ. ರಾಗಿಂಗ್ ಹೆಸರಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವುದು ಅಥವಾ ಗುಂಪು ಕಟ್ಟಿಕೊಂಡು ಗಲಾಟೆ ಮಾಡುವುದು ಅಕ್ಷಮ್ಯ ಅಪರಾಧ. ಕಲಿಯಲು ಬಂದವರು ಕಲಿಕೆಯತ್ತ ಗಮನ ಹರಿಸಬೇಕೇ ಹೊರತು, ನಮ್ಮ ಊರಿನ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳುಮಾಡಬಾರದು ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಆಡಳಿತ ಮಂಡಳಿಯ ಮೌನವೇಕೆ?
ಇಷ್ಟೆಲ್ಲಾ ಗದ್ದಲಗಳು ಕ್ಯಾಂಪಸ್ ಒಳಗೇ ನಡೆಯುತ್ತಿದ್ದರೂ ಕಾಲೇಜು ಆಡಳಿತ ಮಂಡಳಿ ಕಠಿಣ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪೋಷಕರು ಕಷ್ಟಪಟ್ಟು ದುಡಿದ ಹಣವನ್ನು ಫೀಸ್ ರೂಪದಲ್ಲಿ ಪಡೆವ ಸಂಸ್ಥೆ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶಿಸ್ತಿನ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಘರ್ಷಣೆಯಲ್ಲಿ ತೊಡಗಿರುವ ಕಿಡಿಗೇಡಿ ವಿದ್ಯಾರ್ಥಿಗಳನ್ನು ತಕ್ಷಣವೇ ಗುರುತಿಸಿ ಕಾಲೇಜಿನಿಂದ ವಜಾಗೊಳಿಸಬೇಕು. ರಾಗಿಂಗ್ ವಿರುದ್ಧ ಶೂನ್ಯ ಸಹಿಷ್ಣುತೆ (Zero Tolerance) ತೋರಬೇಕು ಮತ್ತು ಪೊಲೀಸ್ ದೂರು ದಾಖಲಿಸಬೇಕು. ಕ್ಯಾಂಪಸ್‌ನಲ್ಲಿ ಸಿಸಿಟಿವಿ ಕಣ್ಗಾವಲು ಮತ್ತು ಭದ್ರತೆಯನ್ನು ಹೆಚ್ಚಿಸಬೇಕು ಎಂದು ಪೋಷಕರು, ಸಾರ್ವಜನಿಕರು ಆಡಳಿತ ಮಂಡಳಿಯ ಮೌನದ ವಿರುದ್ದ ಕಿಡಿಕಾರಿದ್ದಾರೆ.

ನಮ್ಮ ಊರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಹೆಸರನ್ನು ಹಾಳು ಮಾಡುವ ಇಂತಹ ಕಿಡಿಗೇಡಿಗಳಿಗೆ ಪಾಠ ಕಲಿಸದಿದ್ದರೆ, ಮುಂದಿನ ದಿನಗಳಲ್ಲಿ ಕರಾವಳಿಯ ಶೈಕ್ಷಣಿಕ ಪರಂಪರೆಗೆ ದೊಡ್ಡ ಹೊಡೆತ ಬೀಳುವುದರಲ್ಲಿ ಸಂಶಯವಿಲ್ಲ.

Continue Reading

crime

ಕಂಟೇನರ್‌ನಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 18ಕ್ಕೂ ಹೆಚ್ಚು ಗೋವುಗಳ ರಕ್ಷಣೆ; ಕಡಬ ಪೊಲೀಸರ ಮಿಂಚಿನ ಕಾರ್ಯಾಚರಣೆ

Published

on

ಕಡಬ: ಹಾಸನ ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಂಟೇನರ್ ಲಾರಿಯಲ್ಲಿ ಅತೀ ಕ್ರೂರವಾಗಿ ತುಂಬಿದ್ದ 20 ಗೋವುಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಒಂದು ಕಂಟೈನರ್ ಲಾರಿಯಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು, ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ KA 11 B 9413 ನೇ ನೋಂದಣಿಯ ಕಂಟೇನರ್ ಲಾರಿಯನ್ನು ಪರಿಶೀಲಿಸಲಾಗಿ, ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿರುತ್ತದೆ. ಈ ವೇಳೆ ಕಂಟೇನರ್ ಒಳಗೆ ಗೋವುಗಳನ್ನು ಅತೀ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಿರುವುದು ಕಂಡುಬಂದಿದೆ.

ಸಬ್ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ ಸದ್ರಿ ಲಾರಿಯಲ್ಲಿದ್ದಾತನಲ್ಲಿ ವಿಚಾರಿಸಲಾಗಿ ಹಾಸನ ಬೇಲೂರು ನಿವಾಸಿ ಇರ್ಫಾನ್ (26) ಎಂಬುದಾಗಿ ತಿಳಿಸಿರುತ್ತಾನೆ . ಸದ್ರಿ ಜಾನುವಾರುಗಳನ್ನು ಸಾಗಾಟ ಮಾಡಲು ಪರವಾನಿಗೆ ಬಗ್ಗೆ ವಿಚಾರಿಸಲಾಗಿ ಯಾವುದೇ ಪರವಾನಿಗೆ ಇರುವುದಿಲ್ಲ ಹಾಗೂ ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾನೆ.‌ಸದ್ರಿ ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿ‌, ಈ ಬಗ್ಗೆ ಕಡಬ ಪೊಲೀಸ್‌‌ ಠಾಣೆಯಲ್ಲಿ ಅ.ಕ್ರ: 36/2026, ಕಲಂ: 4,7,12 The Karnatak Prevention Of Slaughter And Preservation Of Cattle Act 2020 ಮತ್ತು ಕಲಂ: 4,11 Prevention Of Cruelty to Animals Act-1960 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Continue Reading

Trending

Copyright © 2025 Deevatige