crime
ಸೈಕಲ್ಲಿಂದ ಬಿದ್ದು ಬಾಲಕ ದುರ್ಮರಣ..ಇಫ್ತಾರ್ ಕೂಟ ಮುಗಿಸಿ ವಾಪಸಾಗುತ್ತಿದ್ದ ಆಸಿಫ್ ನಿಧನ.
*ವಿಧಿಯೇ ನೀನೆಷ್ಟು ಕ್ರೂರಿ.?* ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬಾಕೆಯ ಏಕೈಕ ಪುತ್ರ ಆಸೀಪ್(11) ಎಂಬಾತ ಇಫ್ತಾರ್ ಕೂಟ ಮುಗಿಸಿ ಮನೆಗೆ ಬರುತ್ತಿದ್ದ ಸಂದರ್ಭ ಸೈಕಲ್‌ನಿಂದ ಬಿದ್ದು ದೇಹದ ಒಳಭಾಗಕ್ಕೆ ಉಂಟಾದ ಗಂಭೀರ ಸ್ವರೂಪದ ಗಾಯದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯ ಮದರಸಾದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ತನ್ನ ಸೈಕಲ್‌ನಲ್ಲಿ ಹಿಂತಿರುಗುವ ಸಂದರ್ಭ ಪಂಜಿಗದ್ದೆ ಎಂಬಲ್ಲಿನ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಆಸಿಫ್ ಕೆಳಕ್ಕೆ ಬಿದ್ದಿದ್ದಾನೆ. ಬಾಲಕನ ದೇಹದ ಒಳಭಾಗಕ್ಕೆ ತೀವ್ರ ಸ್ವರೂದ ಹೊಡೆತ ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಸೀಫ್ ನನ್ನು ತಕ್ಷಣವೇ ಚಿಕಿತ್ಸೆಗಾಗಿ ತುಂಬೆಯ ಪಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿಯಾಗಿದ್ದ ಆಸೀಪ್ ಶಾಲೆಯ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ಬಾಲಕನಾಗಿದ್ದನು ಎಂದು ಶಿಕ್ಷಕರು ಹಾಗೂ ಸ್ಥಳೀಯರು ತಿಳಿಸಿದ್ದಾರೆ. ತಾಯಿಗೆ ಏಕೈಕ ಮಗನಾಗಿದ್ದ ಆಸೀಪ್‌ನ ಅಕಾಲಿಕ ನಿಧನ ಕುಟುಂಬದವರನ್ನು ತೀವ್ರ ಆಘಾತಕ್ಕೆಡೆಮಾಡಿದೆ. ಬಾಲಕ ಆಸಿಫ್ ನ ಅಕಾಲಿಕ ನಿಧನದ ವಾರ್ತೆ ಬಂಧು-ಬಳಗ ಹಾಗೂ ಗ್ರಾಮಸ್ಥರಿಗೆ ತಡೆಯಲಾರದ ನೋವನ್ನುಂಟುಮಾಡಿದೆ.
court
ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಮರುತನಿಖೆಗೆ ಐತಿಹಾಸಿಕ ಆದೇಶ
ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ಮತ್ತು ದಶಕಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆದಿದ್ದ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಹಾಗೂ ಐತಿಹಾಸಿಕ ಆದೇಶ ಹೊರಡಿಸಿದೆ. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯ, ಹೊಸದಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ನಿರ್ದೇಶಿಸಿದೆ. ಅಲ್ಲದೆ, ಕೇವಲ ಮೂರು ತಿಂಗಳ ಒಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಗಡುವು ವಿಧಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರನ್ನು ಹೊಸ ಎಸ್‌ಐಟಿ ಮರುತನಿಖೆ ಮಾಡುವಂತಿಲ್ಲ ಅಥವಾ ವಿಚಾರಣೆಗೆ ಒಳಪಡಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ
ಪ್ರಕರಣದ ಹಿನ್ನೆಲೆ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಮುಖ್ಯಾಂಶಗಳು:
ಘಟನೆಯ ಹಿನ್ನೆಲೆ: 2012ರ ಅಕ್ಟೋಬರ್‌ನಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಕಾಲೇಜಿನಿಂದ ಮನೆಗೆ ಮರಳುವಾಗ ನಾಪತ್ತೆಯಾಗಿದ್ದರು. ಅಕ್ಟೋಬರ್ 10ರಂದು ಧರ್ಮಸ್ಥಳದ ಮಣ್ಣಸಂಕ ಎಂಬಲ್ಲಿ ಆಕೆಯ ಅರ್ಧನಗ್ನ ಮೃತದೇಹ ಪತ್ತೆಯಾಗಿತ್ತು.
ತನಿಖಾ ವೈಫಲ್ಯ ಮತ್ತು ಆಕ್ರೋಶ: ಸ್ಥಳೀಯ ಪೊಲೀಸರು ಮಾನಸಿಕ ಅಸ್ವಸ್ಥ ಸಂತೋಷ್ ರಾವ್ ಎಂಬಾತನನ್ನು ಬಂಧಿಸಿದ್ದರು. ಆದರೆ ಇದು ಪ್ರಭಾವಿಗಳನ್ನು ರಕ್ಷಿಸಲು ನಡೆಸಿದ ನಾಟಕ ಎಂದು ಸಾರ್ವಜನಿಕರು ಮತ್ತು ಸೌಜನ್ಯಾ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಸಾರ್ವಜನಿಕ ಪ್ರತಿಭಟನೆಯ ಬಳಿಕ ಪ್ರಕರಣವು ಸಿಐಡಿ ಹಾಗೂ ನಂತರ ಸಿಬಿಐ ತನಿಖೆಗೆ ಹಸ್ತಾಂತರಗೊಂಡಿತ್ತು. ಆದರೆ ಸಿಬಿಐ ಕೂಡ ಆರೋಪಿಯನ್ನು ಖುಲಾಸೆಗೊಳಿಸಿತ್ತು.
ಹೈಕೋರ್ಟ್ ಆದೇಶ ಹಾಗೂ ಸುಪ್ರೀಂ ಮೆಟ್ಟಿಲು: ಸಿಬಿಐ ತೀರ್ಪನ್ನು ಪ್ರಶ್ನಿಸಿ ಹಾಗೂ ಮರುತನಿಖೆಗೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ (SLP) ದಾಖಲಿಸಿದ್ದರು.
ಸಿಬಿಐ ತನಿಖೆಗೆ ತೀವ್ರ ತರಾಟೆ: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಹಾಗೂ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ್ ಅವರನ್ನೊಳಗೊಂಡ ಪೀಠವು, ಸಿಬಿಐ ತನಿಖೆಯ ಕಳಪೆ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. “ಸಿಬಿಐ ತನಿಖಾಧಿಕಾರಿ ನ್ಯಾಯಾಧೀಶರಂತೆ ವರ್ತಿಸಿದ್ದು, ಯಾವುದೇ ಸ್ವತಂತ್ರ ತನಿಖೆ ನಡೆಸದೆ ಹಿಂದಿನ ತನಿಖೆಯನ್ನೇ ಆಧರಿಸಿ ವರದಿ ಸಲ್ಲಿಸಿದ್ದಾರೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿ ತೀರ್ಪು ಕಾಯ್ದಿರಿಸಿತ್ತು.
ಹೊಸ ತಿರುವು ಹಾಗೂ ಮುಂದಿನ ಹೆಜ್ಜೆಗಳು:
ಹೊಸ ತನಿಖೆ: 2012ರ ಧರ್ಮಸ್ಥಳದ 17 ವರ್ಷದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.
ಎಸ್‌ಐಟಿ (SIT) ರಚನೆ: ಈ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಮತ್ತು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಲಾಗಿದೆ.
ಸಿಬಿಐ ಹಾಗೂ ಹಳೇ ಸಿಬ್ಬಂದಿಗೆ ನಿರ್ಬಂಧ: ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ (CBI) ಅಥವಾ ಹಿಂದಿನ ತನಿಖಾ ತಂಡದಲ್ಲಿದ್ದ ಯಾವುದೇ ಪೊಲೀಸರನ್ನು ಹೊಸ ಎಸ್‌ಐಟಿಗೆ ನೇಮಿಸುವಂತಿಲ್ಲ.
ಸಂತೋಷ್ ರಾವ್ ವಿಚಾರಣೆಗೆ ತಡೆ: ಈ ಪ್ರಕರಣದಲ್ಲಿ ಈಗಾಗಲೇ ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರನ್ನು ಹೊಸ ಎಸ್‌ಐಟಿ ಮರುತನಿಖೆ ಮಾಡುವಂತಿಲ್ಲ ಅಥವಾ ವಿಚಾರಣೆಗೆ ಒಳಪಡಿಸುವಂತಿಲ್ಲ.
3 ತಿಂಗಳ ಡೆಡ್‌ಲೈನ್: ಹೊಸ ಎಸ್‌ಐಟಿ ತಂಡವು ಪ್ರಕರಣದ ಮರುತನಿಖೆಯನ್ನು ಪೂರ್ಣಗೊಳಿಸಿ, ಆದೇಶದಂತೆ ನಿಗದಿತ ಮೂರು ತಿಂಗಳೊಳಗೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕಿದೆ.
ಹಿನ್ನೆಲೆ: ಸೌಜನ್ಯಾ ತಾಯಿ ಕುಸುಮಾವತಿ ಅವರು ಸಲ್ಲಿಸಿದ್ದ ವಿಶೇಷ ಅನುಮತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ್ ಅವರ ಪೀಠ ಈ ಆದೇಶ ನೀಡಿದೆ. ಒಂದು ದಶಕದ ಬಳಿಕ ಈ ಹೊಸ ತನಿಖಾ ಚೌಕಟ್ಟು ರೂಪುಗೊಂಡಿದೆ.
ಈ ಮಹತ್ವದ ತೀರ್ಪಿನಿಂದಾಗಿ ಕಳೆದ 14 ವರ್ಷಗಳಿಂದ ನ್ಯಾಯಕ್ಕಾಗಿ ಪರಿತಪಿಸುತ್ತಿರುವ ಸೌಜನ್ಯಾ ಕುಟುಂಬಕ್ಕೆ ಹಾಗೂ ಮೃತ್ಯುವಿಗೆ ನ್ಯಾಯ ಸಿಗುವ ಭರವಸೆ ಮತ್ತು ನಿರೀಕ್ಷೆಗಳು ಗರಿಗೆದರಿವೆ
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
