Connect with us

Bantawala

ಅಂತರ್ ರಾಜ್ಯ ಚಿನ್ನಾಭರಣ ಕಳವು ಆರೋಪಿಯ ಬಂಧನ. 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ಸ್ವಾಧೀನ.

Published

on

170 ರಿಂದ 180 ಗ್ರಾಂ ಚಿನ್ನಾಭರಣ ಕಳವು ಪ್ರಕರಣದಲ್ಲಿ ಅಂತರ್ ರಾಜ್ಯದ ಆರೋಪಿ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಿ 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ಸ್ವಾಧೀನ ಪಡಿಸಿಕೊಂಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನಾಂಕ 19.11.2025 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ, ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ. ಕ್ರ :132/2025 , ಕಲಂ :303(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತನಾದ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ಆರೋಪಿತನಿಂದ ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಲಾಗಿದೆ.

ಸದ್ರಿ ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐಪಿಎಸ್, ರವರ ನಿರ್ದೇಶನದಂತೆ, ಪ್ರಕರಣದ ತನಿಖಾಧಿಕಾರಿಯಾದ ಅನಂತ ಪದ್ಮನಾಭ ಕೆ.ವಿ,ಪೊಲೀಸ್ ನಿರೀಕ್ಷಕರು, ಬಂಟ್ವಾಳ ನಗರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ,ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸಿಬ್ಬಂದಿಗಳಾದ ಹೆಚ್.ಸಿ 719 ವಿಜಯ್ ಕುಮಾರ್, ಹೆಚ್.ಸಿ 1023 ರಾಜೇಶ್,ಹೆಚ್.ಸಿ 1037 ಇರ್ಷಾದ್, ಪಿ.ಸಿ 2294 ಬಸವರಾಜ , ಹೆಚ್.ಸಿ 310 ಸುರೇಶ್ ಕುಮಾರ್, ಸಿ ಪಿ.ಸಿ 2471 ವಿಜಯ್ ಕುಮಾರ್, ಮಪಿಸಿ 2436 ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಹಾಗೂ ದಿವಾಕರರವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.

Published

on

​ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ​ದೂರಿನ ಹಿನ್ನೆಲೆ:​ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.

​ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:​ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ​ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ​ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:​ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ​

ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:​ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ​ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.

Continue Reading

Bantawala

ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ: ವಾರದೊಳಗೆ ಇಬ್ಬರು ಮುಖ್ಯಶಿಕ್ಷಕಿಯರ ಸಾವು!

Published

on

ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಇದೀಗ ಮತ್ತೋರ್ವ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯದಲ್ಲಿ ತೀವ್ರ ಶೋಕ ಮೂಡಿಸಿದೆ.

ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಇದಕ್ಕೂ ಮೊದಲು ಅಕ್ಟೋಬರ್ 27ರಂದು ಕೆಲಿಂಜ ಶಾಲೆಯ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಈ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.

ವಾರದ ಅಂತರದಲ್ಲಿ ಇಬ್ಬರು ಶಾಲಾ ಮುಖ್ಯಸ್ಥೆಯರನ್ನು ಕಳೆದುಕೊಂಡಿರುವುದು ಶಿಕ್ಷಕ ಸಮುದಾಯದಲ್ಲಿ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.

Continue Reading

Bantawala

ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Published

on

ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!