Connect with us

Belthangady

ಅಕ್ರಮವಾಗಿ ಶೇಖರಿಸಿದ ಸಾವಿರಾರು ಲೀಟರ್‌ ಡೀಸೆಲ್ ಪತ್ತೆ, ಆರೋಪಿ‌ ಜಗದೀಶ್ ಬಂಧನ

Published

on

ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ 4,175 ಲೀಟರ್ ಡೀಸೆಲನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಆರೋಪಿ ಜಗದೀಶನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ದಿನಾಂಕ 09-03-2026 ರಂದು ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ ಕೆ ರವರಿಗೆ ದೊರೆತ ಮಾಹಿತಿಯ ಮೇರೆಗೆ, ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲ್ ನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ವೃತ್ತ ನಿರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಬರಮಾಡಿ, ಮಾಹಿತಿ ಬಂದ‌ ಸ್ಥಳಕ್ಕೆ ತೆರಳಿ‌ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಗಳು ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಸಿರುವುದು ಕಂಡುಬಂದಿರುತ್ತದೆ.‌

ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೆ ಸೊತ್ತುಗಳು ಪತ್ತೆಯಾಗಿರುತ್ತದೆ. ಸದ್ರಿ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 3,50,000/-ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಡೀಸೆಲ್ ಶೇಖರಿಸಿಟ್ಟಿರುವುದು ತಿಳಿದುಬಂದಿರುತ್ತದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955
(U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ – ಕೂದಲೆಳೆ ಅಂತರದಲ್ಲಿ ಪಾರಾದ ಎಸ್ಪಿ ಸೈಮನ್ ಮತ್ತು ತಂಡ

Published

on

ಬೆಳ್ತಂಗಡಿ: ತೀವ್ರ ಕುತೂಹಲ ಕೆರಳಿಸಿರುವ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ.

ಘಟನೆಯ ವಿವರ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಬಗ್ಗೆ ಚರ್ಚಿಸಲು ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಅಧಿಕಾರಿಗಳ ತಂಡ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ತಂಡದಲ್ಲಿ ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟ‌ರ್ ಕುಸುಮಾಧರ್ ಹಾಗೂ ಸಿಬ್ಬಂದಿ ಮಂಜುನಾಥ್ ಪಿ.ಸಿ. ಇದ್ದರು. ಇವರು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ತಪ್ಪಿದ ಭಾರಿ ಅನಾಹುತ: ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು (KA-01-G-6463) ಚಾರ್ಮಾಡಿ ಘಾಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಕಾರು ಸಂಪೂರ್ಣವಾಗಿ ಉಲ್ಟಾ ಆಗಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ.




Continue Reading

Belthangady

ಕೊಕ್ಕಡ: ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Published

on

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ (18) ಎಂದು ಗುರುತಿಸಲಾಗಿದೆ. ಈಕೆ ಬೆಳ್ತಂಗಡಿಯ ಹಳೆಕೋಟೆ ಪರಿಸರದ ಪದವಿ ಪೂರ್ವ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಕೂಲಿ ಕೆಲಸ ಮಾಡಿ ಮಗಳಿಗೆ ಓದಿಸುತ್ತಿದ್ದ ಪೋಷಕರು

ಮೂಲತಃ ಧಾರವಾಡದವರಾದ ಶ್ವೇತಾ ಅವರ ತಂದೆ-ತಾಯಿ ಕಳೆದ ಐದು ವರ್ಷಗಳಿಂದ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ವಾಸವಾಗಿದ್ದರು. ತಂದೆ ಮತ್ತು ತಾಯಿ ಇಬ್ಬರೂ ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಜೀವನದ ನಡುವೆಯೂ ಮಗಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದರು ಎನ್ನಲಾಗಿದೆ.

ಬೆಳ್ಳಂಬೆಳಗ್ಗೆ ನಡೆದ ದುರಂತ

ಎಂದಿನಂತೆ ಬೆಳಗ್ಗೆ ಎದ್ದಿದ್ದ ಶ್ವೇತಾ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಳು. ಈ ವೇಳೆ ತಂದೆ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ತೆರಳಿದ್ದರು, ತಾಯಿ ಮಾತ್ರ ಮನೆಯಲ್ಲಿದ್ದರು. ತಾಯಿ ಮನೆಯ ಬೇರೆ ಕೆಲಸದಲ್ಲಿ ನಿರತರಾಗಿದ್ದ ಸಂದರ್ಭವನ್ನು ಗಮನಿಸಿ ಕೊಠಡಿಯೊಳಗೆ ಹೋದ ಶ್ವೇತಾ ನೇಣು ಬಿಗಿದುಕೊಂಡಿದ್ದಾಳೆ. ತದನಂತರ ತಾಯಿ ಗಮನಿಸಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆತ್ಮಹತ್ಯೆಗೆ ಕಾರಣ ನಿಗೂಢ

ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ದಿಢೀರನೆ ಇಂತಹ ಕಠಿಣ ನಿರ್ಧಾರ ಕೈಗೊಳ್ಳಲು ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಮಾನಸಿಕ ಒತ್ತಡ ಅಥವಾ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಸಹಾಯ ಪಡೆಯಲು ಸರ್ಕಾರಿ ಹೆಲ್ಪ್‌ಲೈನ್ ಸಂಖ್ಯೆ 104 ಅಥವಾ ಇತರೆ ಆಪ್ತಸಮಾಲೋಚನಾ ಕೇಂದ್ರಗಳನ್ನು ಸಂಪರ್ಕಿಸಬಹುದು.




Continue Reading

Belthangady

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು: ಚಿನ್ನಯ್ಯ ವಿರುದ್ಧ ಎಸ್‌ಐಟಿಗೆ ಗಿರೀಶ್ ಮಟ್ಟಣ್ಣನವರ್ ದೂರು

Published

on

ಧರ್ಮಸ್ಥಳದ ಬುರುಡೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಇತ್ತೀಚೆಗೆ ಮಾಸ್ಟರ್‌ಮ್ಯಾನ್ ಚಿನ್ನಯ್ಯ ತನ್ನದೇ ತಂಡದ ವಿರುದ್ಧ 200 ಕೋಟಿ ರೂ. ಫಂಡಿಂಗ್, ಪಿತೂರಿ ಹಾಗೂ ನಟ Prakash Raj ಹೆಸರನ್ನು ಉಲ್ಲೇಖಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ, ಇದೀಗ ಗಿರೀಶ್ ಮಟ್ಟಣ್ಣನವರ್ ಪ್ರತಿದಾಳಿ ನಡೆಸಿದ್ದಾರೆ.

ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ಗಿರೀಶ್ ಮಟ್ಟಣ್ಣನವರ್, ಹೋರಾಟಗಾರ ಟಿ. ಜಯಂತ್ ಹಾಗೂ ಯೂಟ್ಯೂಬರ್ ಅಭಿಷೇಕ್ ಅವರೊಂದಿಗೆ ಚಿನ್ನಯ್ಯ ವಿರುದ್ಧ ದೂರು ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿನ್ನಯ್ಯನ ಬ್ರೈನ್‌ ಮ್ಯಾಪಿಂಗ್‌ ಸೇರಿದಂತೆ ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ಮಾಡಿರುವ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

“ಚಿನ್ನಯ್ಯ ನಮ್ಮ ವಿರುದ್ಧ ಮಾಡಿರುವ ಆರೋಪಗಳ ಆಧಾರದ ಮೇಲೆ ನಮ್ಮೆಲ್ಲರನ್ನೂ ತನಿಖೆಗೆ ಒಳಪಡಿಸಬೇಕು. ನನ್ನ ಬ್ರೈನ್ ಮ್ಯಾಪಿಂಗ್ ಪರೀಕ್ಷೆಯನ್ನು ಬೇಕಿದ್ದರೆ ಲೈವ್ ಆಗಿಯೇ ನಡೆಸಲಿ. ಆತ ಹೇಳಿರುವ 200 ಕೋಟಿ ರೂ. ಹಣದ ಆರೋಪ ಸೇರಿದಂತೆ ರಿಟ್ ಅರ್ಜಿಯಲ್ಲಿರುವ ಪ್ರತಿಯೊಂದು ಅಂಶವನ್ನು ಎಸ್‌ಐಟಿ ತನಿಖೆ ಮಾಡಬೇಕು” ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದರು.

ಅಲ್ಲದೆ, ಚಿನ್ನಯ್ಯನಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಎಸ್‌ಐಟಿ ಅರ್ಜಿ ಸಲ್ಲಿಸಬೇಕು ಹಾಗೂ ಆತನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂಬುದನ್ನೂ ತಮ್ಮ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಿದರು.

ಚಂದ್ರಶೇಖರ್ ಸ್ವಾಮೀಜಿ ಅವರನ್ನು ಭೇಟಿಯಾಗಿದ್ದ ವಿಚಾರವನ್ನು ಒಪ್ಪಿಕೊಂಡ ಗಿರೀಶ್ ಮಟ್ಟಣ್ಣನವರ್, “ಪಾಯಿಂಟ್ ತೋರಿಸುವ ಸಂದರ್ಭದಲ್ಲಿ ಚಿನ್ನಯ್ಯನಿಗೆ ವಿಚಿತ್ರ ಅನುಭವವಾಗುತ್ತಿದೆ ಎಂದು ಹೇಳಿದ್ದ. ಆ ಕಾರಣದಿಂದಲೇ ಮಾಟ-ಮಂತ್ರ ಸಂಬಂಧ ಸಲಹೆ ಪಡೆಯಲು ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೆವು. ಆದರೆ ಅವರು ಯಾವುದೇ ಪೊಲೀಸರಿಗೆ ಶಿಫಾರಸು ಮಾಡಿಲ್ಲ” ಎಂದು ಸ್ಪಷ್ಟಪಡಿಸಿದರು.

ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರನ್ನು ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಪ್ರಕಾಶ್ ರಾಜ್ ಕರೆ ಮಾಡಿದ್ದಾರೆಯೇ ಎಂಬ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅದಕ್ಕೆ ಅವರೇ ಉತ್ತರ ನೀಡುತ್ತಾರೆ. ಈ ಹೋರಾಟಕ್ಕೆ ನೈತಿಕವಾಗಿ ಸಾಕಷ್ಟು ಜನ ಬೆಂಬಲ ನೀಡಿದ್ದಾರೆ” ಎಂದು ಹೇಳಿದರು.

ಇದೇ ವೇಳೆ, ಚಿನ್ನಯ್ಯನಿಗೆ ಹಿಂಸೆ ನೀಡಿ ಕೈ-ಕಾಲು ಒತ್ತಿಸಿಕೊಳ್ಳುತ್ತಿದ್ದೆವು ಎಂಬ ಆರೋಪವನ್ನೂ ಗಿರೀಶ್ ಮಟ್ಟಣ್ಣನವರ್ ತಳ್ಳಿಹಾಕಿದರು. “ಚಿನ್ನಯ್ಯ ನಮ್ಮೊಂದಿಗೆ ಆತ್ಮೀಯವಾಗಿದ್ದ. ನಾವು ಬೇಡ ಎಂದರೂ ಆತನೇ ಬಂದು ಕಾಲು ಒತ್ತುತ್ತಿದ್ದ. ನನಗೆ ಕಾಲಿನ ನೋವು ಇದ್ದ ಕಾರಣ ಆತ ಸ್ವಯಂಪ್ರೇರಿತವಾಗಿ ಸಹಾಯ ಮಾಡುತ್ತಿದ್ದ. ಇದರಲ್ಲಿ ಯಾವುದೇ ಬಲವಂತ ಅಥವಾ ಹಿಂಸೆ ಇರಲಿಲ್ಲ” ಎಂದು ಸಮರ್ಥಿಸಿಕೊಂಡರು.

ಪ್ರಕರಣ ಮತ್ತಷ್ಟು ಸಂಕೀರ್ಣ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಮತ್ತು ಆತನ ವಿರುದ್ಧ ಆರೋಪ ಕೇಳಿಬರುತ್ತಿರುವವರ ನಡುವಿನ ಪರಸ್ಪರ ಆರೋಪಗಳು ಪ್ರಕರಣವನ್ನು ಮತ್ತಷ್ಟು ಸಂಕೀರ್ಣಗೊಳಿಸಿವೆ. ಇದೀಗ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿನ ಆರೋಪಗಳು ಹಾಗೂ ಗಿರೀಶ್ ಮಟ್ಟಣ್ಣನವರ್ ನೀಡಿರುವ ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ




Continue Reading

Trending

Copyright © 2025 Deevatige

error: Content is protected !!