DEATH
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/03/1-5-1000x600.jpg&description=ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ', 'pinterestShare', 'width=750,height=350'); return false;" title="Pin This Post">
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡವು ಜನರನ್ನು ಬೆಚ್ಚಿಬೀಳಿಸಿದೆ. ಎಲೆಕ್ಟ್ರಿಕ್ ವಾಹನ (EV) ಚಾರ್ಜ್ ಮಾಡುತ್ತಿದ್ದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು, ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ನಗರದ ಬ್ರಿಜೇಶ್ವರಿ ಅನೆಕ್ಸ್ ವಸತಿ ಪ್ರದೇಶದಲ್ಲಿ ಬೆಳಗ್ಗಿನ ಜಾವ ನಡೆದಿದೆ. ಘಟನೆ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿದ್ದ ಎಲ್ಲರೂ ಗಾಢ ನಿದ್ರೆಯಲ್ಲಿದ್ದರು ಎಂದು ತಿಳಿದುಬಂದಿದೆ. ಮನೆಯ ಹೊರಭಾಗದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಾರಿಗೆ ಬೆಂಕಿ ತಗುಲಿತು. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಮನೆಯನ್ನು ಆವರಿಸಿತು.

ಬೆಂಕಿಯ ತೀವ್ರತೆ ಅಷ್ಟರ ಮಟ್ಟಿಗೆ ಇತ್ತು, ಮನೆಯವರು ಎಚ್ಚರವಾಗುವಷ್ಟರಲ್ಲೇ ಪರಿಸ್ಥಿತಿ ಕೈಮೀರಿ ಹೋಗಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿಕೊಂಡಿದ್ದು, ಒಳಗಿದ್ದವರಿಗೆ ಹೊರಬರಲು ಯಾವುದೇ ಅವಕಾಶ ಸಿಗಲಿಲ್ಲ.

ಘಟನೆಯನ್ನು ಇನ್ನಷ್ಟು ಭೀಕರಗೊಳಿಸಿದ ಅಂಶವೆಂದರೆ ಮನೆಯೊಳಗೆ ಸಂಗ್ರಹಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು. ಮೂಲಗಳ ಪ್ರಕಾರ, ಮನೆಯಲ್ಲಿ ಸುಮಾರು 15 ಗ್ಯಾಸ್ ಸಿಲಿಂಡರ್‌ಗಳನ್ನು ಇಡಲಾಗಿದ್ದು, ಅವುಗಳಲ್ಲಿ ನಾಲ್ಕು ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಈ ಸ್ಫೋಟಗಳ ಪರಿಣಾಮವಾಗಿ ಬೆಂಕಿ ಮತ್ತಷ್ಟು ವ್ಯಾಪಕವಾಗಿ ಹರಡಿದ್ದು, ಸುತ್ತಮುತ್ತಲಿನ ಮನೆಗಳಿಗೂ ಕಂಪನ ಉಂಟಾಗಿದೆ.
ಅಪಘಾತದ ವೇಳೆ ಮನೆಯಲ್ಲಿ ಕುಟುಂಬ ಸಭೆ ನಡೆಯುತ್ತಿದ್ದು, ಅನೇಕ ಸಂಬಂಧಿಕರು ಒಂದೇ ಕಡೆ ಸೇರಿದ್ದರಿಂದ ಹಾನಿ ಹೆಚ್ಚಾಗಿದೆ. ಸಂತೋಷದ ಕ್ಷಣಗಳು ಕ್ಷಣಾರ್ಧದಲ್ಲಿ ಶೋಕಕ್ಕೆ ತಿರುಗಿದ್ದು, ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿದರೂ, ಬೆಂಕಿಯ ತೀವ್ರತೆ ಹಾಗೂ ಕಿರಿದಾದ ರಸ್ತೆಗಳ ಕಾರಣದಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು. ಬಹಳ ಸಮಯದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಮನೆ ಸಂಪೂರ್ಣವಾಗಿ ಭಸ್ಮವಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಗ್ನಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಆಡಳಿತವೂ ಗಮನಹರಿಸಿದ್ದು, ಇಂತಹ ಅವಘಡಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಲಾಗಿದೆ.
Bantawala
ಆಝಾನ್ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಧರ್ಮಗುರು ಮೃತ್ಯು
ಅತ್ಯಂತ ಅಪರೂಪದ ಹಾಗೂ ಇಡೀ ಮುಸ್ಲಿಂ ಸಮುದಾಯವನ್ನು ಭಾವುಕರನ್ನಾಗಿಸುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಸಂಭವಿಸಿದೆ. ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ, ನೂಜಿ ಉಸ್ಮಾನ್ ಅವರ ಪುತ್ರ ಹಾಗೂ SYS ಕುಕ್ಕಾಜೆ ಯೂನಿಟ್ ಸದಸ್ಯರಾಗಿದ್ದ ಅಬ್ದುಲ್ ಲತೀಫ್ ಮದನಿ (50) ಮೃತಪಟ್ಟ ದುರ್ದೈವಿ ಧರ್ಮಗುರುಗಳಾಗಿದ್ದಾರೆ.
ಇಂದು ಸಂಜೆ ಸುಮಾರು 4 ಗಂಟೆಯ ನಮಾಜ್ ಸಮಯಕ್ಕೆ ಸರಿಯಾಗಿ ಹೊನ್ನಾವರದ ಮಸೀದಿಯಲ್ಲಿ ಅಬ್ದುಲ್ ಲತೀಫ್ ಮದನಿ ಅವರು ಆಝಾನ್ ನೀಡುತ್ತಿದ್ದರು. ಈ ವೇಳೆ ಅವರಿಗೆ ದಿಢೀರನೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಪರಿಣಾಮವಾಗಿ ಅವರು ಮೈಕ್ ಮುಂದೆಯೇ ಸ್ಥಳದಲ್ಲೇ ಕುಸಿದು ಬಿದ್ದು, ಕೊನೆಯುಸಿರೆಳೆದಿದ್ದಾರೆ. ಆಝಾನ್ ಕೂಗುತ್ತಿದ್ದಾಗಲೇ ಧರ್ಮಗುರುಗಳು ಮೃತಪಟ್ಟ ಘಟನೆ ಸ್ಥಳೀಯವಾಗಿ ತೀವ್ರ ಸಂಕಷ್ಟತೆ ಹಾಗೂ ಭಾವುಕತೆಯನ್ನು ಮೂಡಿಸಿದೆ.
ರಾತ್ರಿ ಹುಟ್ಟೂರಿಗೆ ಪಾರ್ಥಿವ ಶರೀರ ಆಗಮನ: ಸದ್ಯ ಮೃತರ ಪಾರ್ಥಿವ ಶರೀರವನ್ನು ಹೊನ್ನಾವರದಿಂದ ಅವರ ಹುಟ್ಟೂರಾದ ಬಂಟ್ವಾಳದ ಮಂಚಿ ಗ್ರಾಮದ ಪುಚ್ಚೆಕೆರೆಗೆ ತರುವ ವ್ಯವಸ್ಥೆಯನ್ನು ಮುಸ್ಲಿಂ ಬಾಂಧವರು ಮಾಡುತ್ತಿದ್ದಾರೆ. ಇಂದು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಮೃತದೇಹವು ಸ್ವಗೃಹಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗ, ಧಾರ್ಮಿಕ ವಲಯದ ಪ್ರಮುಖರನ್ನು ಅಗಲಿದ್ದಾರೆ. ಧರ್ಮಗುರುಗಳ ನಿಧನಕ್ಕೆ SYS ಸಂಘಟನೆ ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ



DEATH
ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ
ಬೆಂಗಳೂರು, ಜೂನ್ 08: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಹೃದಯಾಘಾತದಿಂದ ಭಾನುವಾರ (ಜೂನ್ 8) ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅಂದು ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೊಳಗಾದ ಸೂರಜ್ ಹೆಗ್ಡೆ ಅವರನ್ನು ತಕ್ಷಣವೇ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮುಖ್ಯಾಂಶಗಳು
ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇವರು ಮಾಜಿ ಸಿಎಂ ದಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದರು. ಸೂರಜ್ ಹೆಗ್ಡೆ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೃತರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದು, ಪಕ್ಷದ ಸಂಘಟನೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜಕೀಯ ಜೀವನ ಆರಂಭಿಸಿದ್ದ ಸೂರಜ್ ಹೆಗ್ಡೆ , ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಸದ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.
ಗಣ್ಯರ ಸಂತಾಪ
ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.



crime
ಕೊಡಗಿನ ಹೋಂ ಸ್ಟೇನಲ್ಲಿ ಮೈಸೂರಿನ ಯುವತಿ ಅನುಮಾನಾಸ್ಪದ ಸಾವು: ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ ಶಂಕೆ?
ಮಡಿಕೇರಿ: ಸ್ನೇಹಿತರೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬರು ಹೋಂ ಸ್ಟೇನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ.
ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಗಳಾದ ಜಗನ್ನಾಥ್ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ (27) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ನಡೆದಿದ್ದೇನು?
ಮೃತ ವಿನುತಾ ತನ್ನ 14 ಮಂದಿ ಸ್ನೇಹಿತರ ತಂಡದೊಂದಿಗೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದಲ್ಲಿರುವ ಹೋಂ ಸ್ಟೇ ಒಂದಕ್ಕೆ ಪ್ರವಾಸಕ್ಕೆ ಬಂದಿದ್ದರು. ಬೆಳಗ್ಗೆ ಸ್ನಾನ ಮಾಡಲು ಬಾತ್ ರೂಮ್‌ಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.
ಅನುಮಾನಕ್ಕೆ ಕಾರಣವಾದ ಸಾವು: ವಿನುತಾ ಬಾತ್ ರೂಮ್‌ನಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವವು ಬಕೆಟ್ ಒಳಗಡೆ ತಲೆ ಮುಳುಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಗ್ಯಾಸ್ ಗೀಸರ್ ದುರಂತದ ಶಂಕೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾತ್ ರೂಮ್‌ನಲ್ಲಿದ್ದ ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೈಡ್‌ನಂತಹ ವಿಷಾನಿಲ ಸೋರಿಕೆಯಾಗಿ, ಉಸಿರಾಟದ ತೊಂದರೆಯಿಂದ ಯುವತಿ ಪ್ರಜ್ಞೆ ತಪ್ಪಿ ಬಕೆಟ್‌ನೊಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿಯ ನಂತರವಷ್ಟೇ ತಿಳಿದುಬರಬೇಕಿದೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
