Connect with us

crime

ಮಂಗಳೂರು: ಅಕ್ರಮ ಜಾನುವಾರು ಕಸಾಯಿಖಾನೆ ಮೇಲೆ ಪಣಂಬೂರು ಪೊಲೀಸರ ದಾಳಿ – 9 ಜಾನುವಾರು ರಕ್ಷಣೆ, 205 ಕೆಜಿ ಮಾಂಸ ವಶ

Published

on

ಮಂಗಳೂರು, ಮಾರ್ಚ್ 18: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ, ದೊಡ್ಡ ಪ್ರಮಾಣದ ಮಾಂಸ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಮಂಗಳೂರು ತಾಲೂಕು ಕಸಬಾ ಬೆಂಗ್ರೆ ಗ್ರಾಮದಲ್ಲಿ ನಡೆದಿದೆ.

ದಿನಾಂಕ: 18.03.2026 ರಂದು ಬೆಳಗ್ಗೆ 9.15 ಗಂಟೆಗೆ ಕಸಬಾ ಬೆಂಗ್ರೆ ಗ್ರಾಮದ ಬದ್ರಿಯಾ ಜುಮ್ಮಾ ಮಸೀದಿಯ ಬಳಿ ಅಹಮ್ಮದ್ ಎಂಬವರ ಮನೆಯ ಹಿಂಭಾಗದಲ್ಲಿ, ಫಲ್ಗುಣಿ ನದಿಯ ದಡದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್ ನಲ್ಲಿ 4-5 ಜನರು ಸೇರಿಕೊಂಡು ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಪೊಲೀಸ್ ಆಯುಕ್ತರ ಕಚೇರಿಯ ಎಸಿಪಿ ಶ್ರೀಕಾಂತ್ ಮತ್ತು ಪಣಂಬೂರು ಠಾಣಾ ಪಿಐ ಸಲೀಂ ಅಬ್ಬಾಸ್ ರವರ ಮಾರ್ಗದರ್ಶನದಲ್ಲಿ, ಪಿಎಸ್ಐ ಶ್ರೀಮತಿ ಶ್ರೀಕಲಾ ಮತ್ತು ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದಾಳಿ ಮಾಡಿದರು. ದಾಳಿಯ ಸಮಯದಲ್ಲಿ, ಅಲ್ಲಿ ಅಕ್ರಮವಾಗಿ ವಧೆ ಮಾಡಲು ಕಟ್ಟಿ ಹಾಕಿದ್ದ 09 ಜಾನುವಾರಗಳನ್ನು ರಕ್ಷಿಸಲಾಯಿತು. ಈಗಾಗಲೇ ವಧೆ ಮಾಡಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಸುಮಾರು 205 ಕೆ.ಜೆ ಜಾನುವಾರು ಮಾಂಸ ಮತ್ತು ವಧೆ ಮಾಡಲು ಉಪಯೋಗಿಸಿದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಕಸಬಾ ಬೆಂಗ್ರೆಯ ಕಬೀರ್ ಅಲಿಯಾಸ್ ಪೆತ್ತ ಕಬೀರ್, ಜೋಕಟ್ಟೆ ವಾಸಿ ಬದ್ರು ಅಲಿಯಾಸ್ ಬದ್ರುದ್ದೀನ್ ಮತ್ತು ಇತರ ಮೂವರು ಆರೋಪಿಗಳು ದಾಳಿಯ ಸುಳಿವು ಅರಿತು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲಿಯೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2026 ಪ್ರಕಾರ, ಕಲಂ-303(2) BNS, ಕಲಂ 4,7,12 THE KARNATAKA PREVENTION OF SLAUGHTER AND PRESERVATION OF CATTLE ACT-2020 ಮತ್ತು ಕಲಂ 11 PREVENTION OF CRUELTY TO ANIMALS ACT ರಂತೆ ಪ್ರಕರಣ ದಾಖಲಾಗಿ, ತನಿಖೆ ಮುಂದುವರಿದಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!