Connect with us

Bantawala

ಬಾಯಾರಿದ 28 ಕುಟುಂಬಗಳ ಬಾಳಿಗೆ ಆಸರೆಯಾದ ಜಮಾಅತೆ ಇಸ್ಲಾಮಿ: ಕೊಳ್ನಾಡಿನಲ್ಲಿ ಕೊಳವೆಬಾವಿ ಸಮರ್ಪಣೆ.

Published

on

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 8ರಲ್ಲಿನ ಮಂಚಿ-ನೂಜಿಬೈಲ್ ಎಂಬಲ್ಲಿನ ಕಟ್ಟಪುಣಿ ಪರಿಸರದ ಇಪ್ಪತ್ತೆಂಟಕ್ಕೂ ಹೆಚ್ಚು ಬಡ ಕುಟುಂಬಗಳು ಎರಡು ವರ್ಷಗಳಿಂದ ಕುಡಿಯುವ ನೀರಿನ ಅಭಾವದಿಂದಾಗಿ ತತ್ತರಿಸಿ ಹೋಗಿದ್ದವು.

ನೀರಿನ ಅಭಾವ ಸರಿಪಡಿಸುವಂತೆ ಇಲ್ಲಿನ ಕುಟುಂಬಗಳು ಗ್ರಾಮ ಪಂಚಾಯತಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರತಿಫಲ ಸಿಕ್ಕಿಲ್ಲವಾಗಿತ್ತು.

ಬಳಿಕ ಸ್ಥಳೀಯರು ಜಿಲ್ಲೆಯಾದ್ಯಂತ ಇನ್ನೂರಕ್ಕೂ ಹೆಚ್ಚು ಕೊಳವೆ ಬಾವಿಗಳ ಕೊರೆಸಿ ಪಂಪ್ ಅಳವಡಿಸುವ ಮೂಲಕ ಬಡ ಕುಟುಂಬಗಳ ಕುಡಿಯುವ ನೀರಿನ ಕೊರತೆ ನೀಗಿಸಿದ ಜಮಾಅತೆ ಇಸ್ಲಾಮಿ ಸ್ವಯಂ ಸೇವಾ ಸಂಘಟನೆಗೆ ಈ ಭಾಗದ ಜನರ ಸಂಪರ್ಕ ಸೇತುವೆಯಾದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಕಾರ್ಯಕರ್ತ ಅಸೈನಾರ್ ತಾಳಿತ್ತನೂಜಿಯವರನ್ನು ಸಂಪರ್ಕಿಸಿ ಸಂದಿಗ್ದ ಪರಿಸ್ಥಿತಿಯನ್ನು ವಿವರಿಸಿದರು. ಸ್ಥಳೀಯರ ಮನವಿಗೆ ತಕ್ಷಣವೇ ಸ್ಪಂದಿಸಿದ ಅಸೈನಾರ್ ತಾಳಿತ್ತನೂಜಿಯವರು ಜಮಾಅತೆ ಇಸ್ಲಾಮಿ ಸಮಾಜಸೇವಾ ಘಟಕದ ಹೃದಯವಂತರ ಜೊತೆ ಮಾತುಕತೆ ನಡೆಸಿ ಸ್ಥಳೀಯರ ಅನಿವಾರ್ಯ ಪರಿಸ್ಥಿತಿಯನ್ನು ವಿವರಿಸಿದರು. ಯಾವುದೇ ಫಲಾಪೇಕ್ಷೆಯಿಲ್ಲದ, ಯಾವುದೇ ರೀತಿಯಲ್ಲೂ ಪ್ರಚಾರ ಬಯಸದ ಸಮಾಜ ಸೇವಾ ಸಂಘಟನೆಯಾಗಿರುವ ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯು ತಕ್ಷಣವೇ 2,50 ಲಕ್ಷ ರೂಪಾಯಿಗಳ ಸಂಪೂರ್ಣ ಖರ್ಚುವೆಚ್ಚದೊಂದಿಗೆ ಕೊಳವೆಬಾವಿ ಕೊರೆಸಿ, ಪಂಪ್ ಸೆಟ್ ಅಳವಡಿಸಿ ಕುಡಿಯುವ ನೀರಿನ ಅಭಾವ ನೀಗಿಸಿದೆ.

ಹಲವು ವರ್ಷಗಳಿಂದ ದ.ಕ.ಜಿಲ್ಲೆಯಾಧ್ಯಂತ ಹಾಗೂ ನೆರೆಯ ಕೇರಳದ ಮಂಜೇಶ್ವರ ತಾಲೂಕಿನ ಹಲವೆಡೆಗಳಲ್ಲೂ ಸೇರಿದಂತೆ ಈವರೆಗೆ ಇನ್ನೂರಕ್ಕೂ ಹೆಚ್ಚು ಕೊಳವೆ ಬಾವಿಗಳ ಕೊಡುಗೆ ನೀಡುವ ಮೂಲಕ ಬಡ ಕುಟುಂಬಗಳ ಕುಡಿಯುವ ನೀರಿನ ಅಭಾವವನ್ನು ನೀಗಿಸಿದ ಖ್ಯಾತಿ ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯು ಪಡೆದಿದೆ.

ನೂತನ ಸಾರ್ವಜನಿಕ ಕೊಳವೆ ಬಾವಿಯ ಹಸ್ತಾಂತರ ಕಾರ್ಯಕ್ರಮ 18/03/2026 ರಂದು ಸರಳವಾಗಿ ನಡೆಯಿತು. ಸ್ಥಳೀಯ ಜನರ ಬಹುಕಾಲದ ನೀರಿನ ಅವಶ್ಯಕತೆಯನ್ನು ಮನಗಂಡು ಈ ಸೇವಾ ಕಾರ್ಯ ಕೈಗೊಳ್ಳಲಾಗಿದ್ದು, ಕಾರ್ಯಕ್ರಮವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ನೂತನ ಸಾರ್ವಜನಿಕ ಕೊಳವೆ ಬಾವಿಯನ್ನು ಜಮಾಅತೆ ಇಸ್ಲಾಮಿ ಪಾಣೆಮಂಗಳೂರು ಘಟಕದ ಅಧ್ಯಕ್ಷರಾದ ಮುಖ್ತಾರ್ ಅಹ್ಮದ್ ಅವರು ಉದ್ಘಾಟಿಸಿ ಗ್ರಾಮ ಪಂಚಾಯತಿಗೆ ಹಸ್ತಾಂತರಿಸಿದರು. ತಮ್ಮ ಉಧ್ಘಾಟನಾ ಭಾಷಣದಲ್ಲಿ ಅವರು, “ನೀರಿನ ಅಭಾವ ನಿವಾರಣೆಗೆ ದಾನಿಯೊಬ್ಬರು ನೀಡಿದ ಕೊಡುಗೆ ಶ್ಲಾಘನೀಯವಾಗಿದೆ. ದಾನದಲ್ಲಿ ದೇವನ ಸಂತೃಪ್ತಿ ಮಾತ್ರ ಮುಖ್ಯ; ಜಾತಿ, ಮತ ಭೇದವಿಲ್ಲದೆ ನೀರು ಮನುಷ್ಯನ ಮೂಲಭೂತ ಹಕ್ಕು. ಆದ್ದರಿಂದ, ಈ ಅಮೂಲ್ಯ ಸಂಪತ್ತನ್ನು ವ್ಯರ್ಥ ಮಾಡದೆ ಎಲ್ಲರೂ ಜವಾಬ್ದಾರಿಯಿಂದ ಬಳಸಬೇಕು,” ಎಂದು ಕಿವಿಮಾತು ಹೇಳಿದರು. ದಾನಿಗಳಿಗೆ ದೇವನು ಹೆಚ್ಚಿನ ಅನುಗ್ರಹವನ್ನು ನೀಡಲಿ ಎಂದು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು, “ಪ್ರಸ್ತುತ ಗ್ರಾಮ ಪಂಚಾಯತಿಗೆ ಅನುದಾನದ ಕೊರತೆ ಇದ್ದರೂ, ನೀರಿನ ಸಮಸ್ಯೆಗೆ ಸ್ಪಂದಿಸಿದ ಜಮಾಅತೆ ಇಸ್ಲಾಮಿ ಸಮಾಜಸೇವಾ ಘಟಕದ ಸೇವೆ ಶ್ಲಾಘನೀಯವಾಗಿದೆ. ಜೆ.ಐ.ಎಚ್. ಸಮಾಜಸೇವಾ ಘಟಕ ಸೇರಿದಂತೆ ಹಲವಾರು ಸಮಾಜಮುಖಿ ಸಂಘಟನೆಗಳು ನಮ್ಮ ಗ್ರಾಮ ಪಂಚಾಯತಿನ ಅಭಿವೃದ್ಧಿಗೆ ಸದಾ ಕೈಜೋಡಿಸುತ್ತಿವೆ,” ಎಂದು ಕೃತಜ್ಞತಾಭಾವದಿಂದ ಅಭಿಪ್ರಾಯಪಟ್ಟರು

ನಂತರ ಕೊಳ್ನಾಡು ಗ್ರಾಮ ಅಧ್ಯಕ್ಷರಾದ ಅಶ್ರಪ್ ಕೆ ಸಾಲೆತ್ತೂರು, ಸಾಮಾಜಿಕ ಕಾರ್ಯಕರ್ತ ಹಸೈನಾರ್ ತಾಳಿತ್ತನೂಜಿ, ಪತ್ರಕರ್ತ ವಿ.ಟಿ.ಪ್ರಸಾದ್ ಅವರು ಸಾರ್ವಜನಿಕ ಮೂಲಭೂತ ಸೌಕರ್ಯ, ಜೀವ ಮಾತನಾಡುತ್ತಾ.. ಕಾರುಣ್ಯದಂತಹ ನಿರಂತರ ಸೇವೆಯಲ್ಲಿರುವ ಜೆ.ಐ.ಹೆಚ್.ಸಮಾಜಸೇವಾ ಘಟಕದ ಸೇವಾ ಕಾರ್ಯವನ್ನು ಪ್ರಶಂಸಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಜಯಂತಿ ಎಸ್.ಪೂಜಾರಿ, ಶ್ರೀಮತಿ ಸವಿತಾ ಬರ್ಕಳ, ಸುಲೋಚನಾ ರೈ,ಮಹಮ್ಮದ್ ಕಟ್ಟೆ, ಜಗದೀಶ್ ರೈ ನೂಜಿಬೈಲ್, ಸಾಮಾಜಿಕ ಮುಖಂಡ ಸೋಮಶೇಖರ ಗೌಡ ತಾಳಿತ್ತನೂಜಿ, ಜಮಾಅತೆ ಇಸ್ಲಾಮಿ ಹಿಂದ್ ಪ್ರಮುಖರಾದ ಸಿ.ಕಾಸೀಂ, ಆದಮ್‌ ಇಸ್ಮಾಯಿಲ್ ಹಾಗೂ ಕುಡಿಯುವ ನೀರಿನ ಪಲಾನುಭವಿಗಳು ಉಪಸ್ಥಿತರಿದ್ದರು.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.

Published

on

​ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ​ದೂರಿನ ಹಿನ್ನೆಲೆ:​ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.

​ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:​ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ​ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ​ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:​ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ​

ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:​ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ​ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.

Continue Reading

Bantawala

ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ: ವಾರದೊಳಗೆ ಇಬ್ಬರು ಮುಖ್ಯಶಿಕ್ಷಕಿಯರ ಸಾವು!

Published

on

ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಇದೀಗ ಮತ್ತೋರ್ವ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯದಲ್ಲಿ ತೀವ್ರ ಶೋಕ ಮೂಡಿಸಿದೆ.

ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಇದಕ್ಕೂ ಮೊದಲು ಅಕ್ಟೋಬರ್ 27ರಂದು ಕೆಲಿಂಜ ಶಾಲೆಯ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಈ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.

ವಾರದ ಅಂತರದಲ್ಲಿ ಇಬ್ಬರು ಶಾಲಾ ಮುಖ್ಯಸ್ಥೆಯರನ್ನು ಕಳೆದುಕೊಂಡಿರುವುದು ಶಿಕ್ಷಕ ಸಮುದಾಯದಲ್ಲಿ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.

Continue Reading

Bantawala

ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Published

on

ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!