Connect with us

DEATH

ಪುತ್ತೂರು: ಕೌಟುಂಬಿಕ ಕಲಹಕ್ಕೆ ಪತ್ನಿ ಬಲಿ; ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

Published

on

ಪುತ್ತೂರು  ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ದಾರುಣ ಘಟನೆಯೊಂದು ನಡೆದಿದ್ದು, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನೇ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಂಭವಿಸಿದೆ.

ಕಡಬ ತಾಲೂಕಿನ ಪುಣ್ಚಪ್ಪಾಡಿ ನಿವಾಸಿ ಸಾವಿತ್ರಿ (42) ಕೊಲೆಯಾದ ದುರ್ದೈವಿ. ಇವರು ಕಳೆದ ಒಂದು ತಿಂಗಳಿನಿಂದ ಅರಿಯಡ್ಕ ಗ್ರಾಮದ ಗೋಳ್ತಿಲ ಎಂಬಲ್ಲಿ ಚೈತನ್ಯ ಎಂಬವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಸಾವಿತ್ರಿ ಮತ್ತು ಆಕೆಯ ಪತಿ ಎಮೆಟ್ಟಿ ನಿವಾಸಿ ಪುರುಷೋತ್ತಮ ಯಾನೆ ಬೈರಪ್ಪ ಎಂಬವರ ನಡುವೆ ಕಳೆದ ಕೆಲವು ಸಮಯದಿಂದ ವೈವಾಹಿಕ ಕಲಹವಿತ್ತು ಎನ್ನಲಾಗಿದೆ.

ದಿನಾಂಕ 20.03.2026 ರಂದು ಬೆಳಿಗ್ಗೆ, ಗೋಳ್ತಿಲದ ರಬ್ಬರ್ ತೋಟವೊಂದರ ಮಣ್ಣಿನ ರಸ್ತೆಯಲ್ಲಿ ಬೈರಪ್ಪನು ಸಾವಿತ್ರಿಗೆ ಚೂರಿಯಿಂದ ಮಾರಣಾಂತಿಕವಾಗಿ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಾವಿತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಯನ್ನು ಕೊಂದ ಬಳಿಕ ಆರೋಪಿ ಬೈರಪ್ಪನು ಅದೇ ಚೂರಿಯಿಂದ ತನ್ನ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆಸ್ಪತ್ರೆಗೆ ದಾಖಲು: ಸ್ಥಳೀಯರು ತಕ್ಷಣವೇ ಗಾಯಾಳು ಬೈರಪ್ಪನನ್ನು ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಾವಿತ್ರಿಯವರ ತಂದೆ ತಿಪ್ಪ (75) ಭೇಟಿ ನೀಡಿದ್ದು, ಮಗಳ ಸಾವಿನ ಬಗ್ಗೆ ಕಣ್ಣೀರು ಹಾಕಿದ್ದಾರೆ. ಸ್ಥಳದಲ್ಲಿ ಕೊಲೆಗೆ ಬಳಸಿದ ಚೂರಿ ಪತ್ತೆಯಾಗಿದೆ.

ಪೊಲೀಸ್ ಕ್ರಮ: ಈ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103ರ ಅಡಿಯಲ್ಲಿ (ಅ.ಕ್ರ: 46/2026) ಪೊಲೀಸರು ಎಫ್.ಐ.ಆರ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

accident

ಉಚ್ಚಿಲ: ಜಿಒಎಸ್ ಆಫ್ ಮಾಡದೆ ಟ್ರಾನ್ಸ್‌ಫಾರ್ಮರ್ ಏರಿದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್ ಆಘಾತದಿಂದ ಸಾವು

Published

on

ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝುಮೀರ್ (49) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.

ಘಟನೆಯ ವಿವರ:

ಉಚ್ಚಿಲ ನಯಾಪಟ್ಟಣದ ಟ್ರಾನ್ಸ್‌ಫಾರ್ಮರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬಗ್ಗೆ ಮೆಸ್ಕಾಂಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೇಖ್ ಝುಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಎಂಬುವರು ಇಂದು ಬೆಳಿಗ್ಗೆ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.

ಜಿಒಎಸ್ (GOS) ಆಫ್ ಆಗಿದೆ ಎಂದು ತಪ್ಪಾಗಿ ಗ್ರಹಿಸಿದ ಝುಮೀರ್, ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಈ ವೇಳೆ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತೀವ್ರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಝುಮೀರ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading

DEATH

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ – ವಾರೀಸುದಾರರ ಪತ್ತೆಗೆ ಪೋಲಿಸ್ ಮನವಿ

Published

on

ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.

ಆಗಸ್ಟ್ 02, 2026ರಂದು ಮಧ್ಯಾಹ್ನ ಸುಮಾರು 03:00 ಗಂಟೆಯ ವೇಳೆಗೆ ನದಿ ದಡದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮನವಿ:

ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರಲ್ಲಿ ಈ ಕೆಳಗಿನಂತೆ ಕೋರಲಾಗಿದೆ:

ಇತರ ಪೊಲೀಸ್ ಠಾಣೆಗಳಿಗೆ: ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಗಂಡಸು ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.

ಸಾರ್ವಜನಿಕರಿಗೆ/ವಾರೀಸುದಾರರಿಗೆ: ಯಾರಾದರೂ ವ್ಯಕ್ತಿ ನಾಪತ್ತೆಯಾಗಿದ್ದು, ಮೃತರ ವಾರೀಸುದಾರರು ಅಥವಾ ಗುರುತು ತಿಳಿದವರು ಇದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಉಪ್ಪಿನಂಗಡಿ ಪೊಲೀಸ್ ಠಾಣೆ: 9480805362

Continue Reading

Trending

Copyright © 2025 Deevatige

error: Content is protected !!