Bantawala
ವಿಟ್ಲದ ಹಿರಿಯ ಬಾಡಿಗೆ ಕಾರು ಚಾಲಕ ಈಶ್ವರ್ ಮೂಲ್ಯ ಇನ್ನಿಲ್ಲ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/03/9-1-1000x600.jpg&description=ವಿಟ್ಲದ ಹಿರಿಯ ಬಾಡಿಗೆ ಕಾರು ಚಾಲಕ ಈಶ್ವರ್ ಮೂಲ್ಯ ಇನ್ನಿಲ್ಲ', 'pinterestShare', 'width=750,height=350'); return false;" title="Pin This Post">
ವಿಟ್ಲ: ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿಟ್ಲ ಪರಿಸರದಲ್ಲಿ ಬಾಡಿಗೆ ಕಾರು ಚಾಲಕರಾಗಿ ಗುರುತಿಸಿಕೊಂಡಿದ್ದ, ಅಳಿಕೆ ಗ್ರಾಮದ ಮುಳಿಯ ಅಡ್ಕ ನಿವಾಸಿ ಈಶ್ವರ್ ಮೂಲ್ಯ (71) ಅವರು ಶನಿವಾರ(ಮಾರ್ಚ್ 21) ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಟ್ಲದಲ್ಲಿ ಸುಮಾರು 45 ವರ್ಷಗಳಿಂದ ಬಾಡಿಗೆ ಕಾರು ಚಾಲನೆ ಮಾಡುತ್ತಿದ್ದ ಈಶ್ವರ್ ಅವರು ಸಾರ್ವಜನಿಕ ವಲಯದಲ್ಲಿ ಚಿರಪರಿಚಿತರು. ಸದಾ ಬಿಳಿ ವಸ್ತ್ರ ಧರಿಸುತ್ತಿದ್ದ ಇವರು, ತಮ್ಮ ಸೌಮ್ಯ ಸ್ವಭಾವ ಮತ್ತು ವೃತ್ತಿಪರತೆಯಿಂದ ಎಲ್ಲರ ಪ್ರೀತಿಪಾತ್ರರಾಗಿದ್ದರು.

ಮಾರ್ಚ್ 20ರಂದು ಎಂದಿನಂತೆ ವೃತ್ತಿಗೆ ಹಾಜರಾಗಿದ್ದ ಅವರು, ಕೇರಳದ ಪೆರೂರಿನ ಬೇಕರಿ ಮಾಲೀಕರೊಬ್ಬರ ಮನೆಗೆ ಹಾಗೂ ನಂತರ ಉಳ್ಳಾಲಕ್ಕೆ ಬಾಡಿಗೆ ಹೋಗಿ ಅಳಿಕೆಗೆ ವಾಪಸ್ಸಾಗಿದ್ದರು. ಅಂದು ಸಂಜೆ ಮನೆ ಸಮೀಪದ ಅಂಗಡಿಯಲ್ಲಿ ದಿನಪತ್ರಿಕೆ ಓದಿ, ಮೊಮ್ಮಕ್ಕಳಿಗೆ ತಿಂಡಿ ಖರೀದಿಸಿ ಮನೆಗೆ ತೆರಳಿದ್ದರು.
ಆದರೆ, ಮಾರ್ಚ್ 21ರ ಮುಂಜಾನೆ 3 ಗಂಟೆಯ ಸುಮಾರಿಗೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ವಿಟ್ಲದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ದೇರ್ಲಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಅಂಬ್ಯುಲೆನ್ಸ್ ಸಜ್ಜಾಗುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಯಮುನಾ, ಪುತ್ರಿಯರಾದ ನಳಿನಾಕ್ಷಿ, ಗೀತಾ, ವಿದ್ಯಾ ಹಾಗೂ ಉಳ್ಳಾಲ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಆಗಿರುವ ಪುತ್ರ ವಿನೋದ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಹಿರಿಯ ಚಾಲಕನ ಅಗಲಿಕೆಗೆ ವಿಟ್ಲದ ಚಾಲಕರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.
accident
ಸಜಿಪದಲ್ಲಿ ಭೀಕರ ರಸ್ತೆ ಅಪಘಾತ: ಸಾಮಾಜಿಕ ಕಾರ್ಯಕರ್ತ, ಯುವ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು
ಬಂಟ್ವಾಳ: ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಇಂದು ಸಂಜೆ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಸಜಿಪ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಹಮದ್ ಆಸೀರ್ (22) ಮೃತಪಟ್ಟ ದುರ್ದೈವಿ ಆಕ್ಟಿವಾ ಸವಾರರಾಗಿದ್ದಾರೆ.
ಘಟನೆಯ ವಿವರ:
ಅಹಮದ್ ಆಸೀರ್ ಅವರು ಇಂದು ಸಂಜೆ ತನ್ನ ಮನೆಯಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿರುವ ಸಜಿಪ ಬೇಂಕೆ ಎಂಬ ಪ್ರದೇಶಕ್ಕೆ ಆಕ್ಟಿವಾ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಮಾರುತಿ ಕಾರು ಇವರ ದ್ವಿಚಕ್ರ ವಾಹನಕ್ಕೆ ನೇರವಾಗಿ ಮತ್ತು ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಆಕ್ಟಿವಾ ವಾಹನವು ಗುರುತು ಸಿಗದಷ್ಟು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ತಕ್ಷಣವೇ ತಲೆ ಮತ್ತು ದೇಹಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಆಸೀರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಂಬನಿ ಮಿಡಿದ ಸಜಿಪ ಪರಿಸರದ ಜನತೆ:
ಮೃತ ಅಹಮದ್ ಆಸೀರ್ ಅವರು ಸಣ್ಣ ವಯಸ್ಸಿನಲ್ಲೇ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರು SKSSF ಸಜೀಪನಡು ಶಾಖೆಯ ಸಕ್ರಿಯ ಸದಸ್ಯರಾಗಿದ್ದರಲ್ಲದೆ, ತುರ್ತು ಮತ್ತು ಆಪತ್ಕಾಲೀನ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸುವ ಹೆಸರಾಂತ “ವಿಖಾಯ ACTIVE WING” ತಂಡದ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಸದಾ ಪರರ ಸೇವೆಗೆ ಸಿದ್ಧರಿರುತ್ತಿದ್ದ ಎಳೆಯ ಪ್ರಾಯದ ಯುವಕನ ಅಕಾಲಿಕ ಮರಣದ ಸುದ್ದಿ ಸಜಿಪ ಸುತ್ತಮುತ್ತಲಿನ ನಾಗರಿಕರಲ್ಲಿ ಮತ್ತು ಸ್ನೇಹಿತರ ವಲಯದಲ್ಲಿ ತೀವ್ರ ಆಘಾತ ಹಾಗೂ ದುಃಖವನ್ನುಂಟು ಮಾಡಿದೆ.

ಪೊಲೀಸ್ ತನಿಖೆ:
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.



Article
ಗೋದಾಮಿನಲ್ಲೇ ಕೊಳೆಯುತ್ತಿವೆ ಪುಸ್ತಕಗಳು, ಜೇಬಿನಿಂದಲೇ ಮೊಟ್ಟೆ ಹಣ ಹಾಕ್ತಿದ್ದಾರೆ ಶಿಕ್ಷಕರು; ಬಂಟ್ವಾಳ ಶಿಕ್ಷಣ ಇಲಾಖೆಯ ಮಹಾ ಯಡವಟ್ಟು!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವರೇ ಇಲ್ನೋಡಿ.. ಸಿ.ಆರ್.ಪಿ ಗಳ ಸೋಮಾರಿತನ! ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ನರಳಾಟ!
ಬಂಟ್ವಾಳ: ಶಾಲೆಗಳು ಆರಂಭವಾಗಿ 20 ದಿನಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನೂ ಪಠ್ಯಪುಸ್ತಕ ತಲುಪಿಲ್ಲ! ಒಂದೆಡೆ ಪಠ್ಯಪುಸ್ತಕಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ನಿಯಮದಿಂದಾಗಿ ಬಡ ಮಕ್ಕಳಿಗೆ ನೀಡುವ ಕೋಳಿಮೊಟ್ಟೆಯ ಹಣವನ್ನು ಶಿಕ್ಷಕರೇ ತಮ್ಮ ಜೇಬಿನಿಂದ ಭರ್ತಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿತನ ಹಾಗೂ ಕರ್ತವ್ಯಲೋಪಕ್ಕೆ ಇದುವೇ ಸಾಕ್ಷಿ.
ಗೋದಾಮಿನಲ್ಲೇ ಕೊಳೆಯುತ್ತಿವೆ ಪುಸ್ತಕಗಳು: ಸಿ.ಆರ್.ಪಿ ಗಳ ಸೋಮಾರಿತನ!
ಬಂಟ್ವಾಳ ತಾಲೂಕಿನಲ್ಲಿ ಒಟ್ಟು 221 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಸುಮಾರು 50,000 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿನ ಪಠ್ಯಪುಸ್ತಕಗಳಿಗಾಗಿ ಆಯಾ ಶಾಲಾ ಮುಖ್ಯ ಶಿಕ್ಷಕರು ಏಪ್ರಿಲ್ ತಿಂಗಳಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಛೇರಿಗೆ ಆನ್‌ಲೈನ್ ಮೂಲಕ ನಿಖರವಾದ ಬೇಡಿಕೆಯನ್ನು ಸಲ್ಲಿಸಿದ್ದರು.
ಸರ್ಕಾರದಿಂದ ಶೇಕಡಾ 95ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಬಂಟ್ವಾಳಕ್ಕೆ ಪೂರೈಕೆಯಾಗಿವೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಒಪ್ಪಿಕೊಳ್ಳುತ್ತಿದ್ದಾರೆ. ಬಂದಿರುವ ಪುಸ್ತಕಗಳನ್ನು ನಂದಾವರದ ಸರ್ಕಾರಿ ಶಾಲೆಯಲ್ಲಿ ತಂದಿರಿಸಲಾಗಿದೆ. ಆದರೆ, ತಾಲೂಕಿನ 25 ಕ್ಲಸ್ಟರ್‌ಗಳಿಗೆ ಲಭ್ಯವಿರುವ 16 ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿಗಳು (CRP) ಮತ್ತು ನೋಡಲ್ ಅಧಿಕಾರಿಗಳು ತೀರಾ ಸೋಮಾರಿತನ ಹಾಗೂ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದಾರೆ. ಗೋದಾಮಿನಲ್ಲಿರುವ ಪುಸ್ತಕಗಳನ್ನು ಶಾಲೆಗಳಿಗೆ ಸರಿಯಾಗಿ ವಿತರಣೆ ಮಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಒಳ ಒಪ್ಪಂದದ ಶಂಕೆ?
ಶಾಲೆ ಪ್ರಾರಂಭವಾಗಿ ಇಷ್ಟು ದಿನಗಳಾದರೂ ಮಕ್ಕಳಿಗೆ ಪುಸ್ತಕ ತಲುಪಿಸದ ಅಧಿಕಾರಿಗಳ ನಡವಳಿಕೆಯನ್ನು ನೋಡಿದರೆ ಸಾರ್ವಜನಿಕರಲ್ಲಿ ತೀವ್ರ ಸಂಶಯ ಮೂಡುತ್ತಿದೆ. ಸರ್ಕಾರಿ ಶಾಲೆಗಳನ್ನು ದಿವಾಳಿ ಮಾಡಿ, ಬಡ ವಿದ್ಯಾರ್ಥಿಗಳು ಅನಿವಾರ್ಯವಾಗಿ ಖಾಸಗಿ ಶಾಲೆಗಳತ್ತ ಹಾದಿ ಹಿಡಿಯುವಂತೆ ಮಾಡಲು ಇವರು ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಏನಾದರೂ ಒಳ ಒಪ್ಪಂದ ಮಾಡಿಕೊಂಡಿದ್ದಾರೆಯೇ? ಎಂಬ ಪ್ರಶ್ನೆಯನ್ನು ಸ್ವತಃ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೇಸರದಿಂದ ವ್ಯಕ್ತಪಡಿಸಿದ್ದಾರೆ. ಇಂತಹ ಸಿಬ್ಬಂದಿಗಳನ್ನು ಕೇಳುವವರೇ ಇಲ್ಲವೇ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೋಳಿಮೊಟ್ಟೆಯಲ್ಲೂ ಶಿಕ್ಷಕರಿಗೆ ‘ಲುಕ್ಸಾನ್’: ಜೇಬಿನಿಂದ ಹಣ ಹಾಕುವ ಸ್ಥಿತಿ!
ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಉದ್ದೇಶದಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಕೋಳಿಮೊಟ್ಟೆಯನ್ನು ನೀಡಲಾಗುತ್ತಿದೆ. ಆದರೆ ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಕೋಳಿಮೊಟ್ಟೆಯ ಬೆಲೆ 7.50/- ರೂಪಾಯಿ ಆಗಿದೆ. ಆದರೆ ಸರ್ಕಾರದಿಂದ ಬಿಡುಗಡೆಯಾಗುತ್ತಿರುವುದು ಕೇವಲ 5.00 ರೂಪಾಯಿ ಮಾತ್ರ!
ಉಳಿದ 2.50/- ರೂಪಾಯಿಯನ್ನು ಯಾರು ಭರಿಸಬೇಕು? ಬೇರೆ ದಾರಿಯಿಲ್ಲದೆ ಆಯಾ ಶಾಲೆಯ ಶಿಕ್ಷಕರೇ ಪ್ರತಿದಿನ ತಮ್ಮ ಜೇಬಿನಿಂದ ಈ ಹಣವನ್ನು ಭರ್ತಿ ಮಾಡುತ್ತಿದ್ದಾರೆ. ಇದರಿಂದಾಗಿ ಪ್ರತಿ ಶಾಲೆಯ ಶಿಕ್ಷಕರು ಪ್ರತಿನಿತ್ಯ 180 ರಿಂದ 200 ರೂಪಾಯಿಗಳವರೆಗೆ ಸ್ವಂತ ಹಣವನ್ನು ಖರ್ಚು ಮಾಡಬೇಕಾದ ದುಸ್ಥಿತಿ ಎದುರಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ನೋಡಿಕೊಳ್ಳಬೇಕಾದ ಶಿಕ್ಷಕರು, ಇಂತಹ ಆರ್ಥಿಕ ಹೊರೆಯಿಂದಾಗಿ ಕಂಗಾಲಾಗಿದ್ದಾರೆ.
ಮಾಧ್ಯಮದ ಒತ್ತಾಯ: ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರೇ ಮತ್ತು ಶಿಕ್ಷಣ ಸಚಿವರೇ, ಬಡ ಮತ್ತು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಬಂಟ್ವಾಳ ತಾಲೂಕಿನ ನೋಡಲ್ ಅಧಿಕಾರಿಗಳು ಹಾಗೂ ಸಿ.ಆರ್.ಪಿಗಳ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕಾಗಿದೆ. ಹಾಗೂ ಮೊಟ್ಟೆಯ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಿ ಶಿಕ್ಷಕರ ಮೇಲಿನ ಹೊರೆಯನ್ನು ತಪ್ಪಿಸಬೇಕಾಗಿದೆ. ಈ ಮೂಲಕ ಉನ್ನತ ಅಧಿಕಾರಿಗಳು ಮತ್ತು ಸಚಿವರು ತಕ್ಷಣ ಕಣ್ಣು ತೆರೆದು ಈ ಸಮಸ್ಯೆಯನ್ನು ಬಗೆಹರಿಸುವರೇ ಎಂದು ಕಾದು ನೋಡಬೇಕಿದೆ



accident
ಕನ್ಯಾನ: ಬಾಕ್ಸೈಟ್ ಗಣಿಗಾರಿಕೆ ಸ್ಥಳದಲ್ಲಿ ಭೀಕರ ದುರಂತ; ಟಿಪ್ಪರ್ ಲಾರಿ ಚಲಿಸಿ ಚಾಲಕ ಸ್ಥಳದಲ್ಲೇ ಸಾವು
ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಅಕ್ರಮ ಎನ್ನಲಾದ ಬಾಕ್ಸೈಟ್ ದಂಧೆ ನಡೆಯುವ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಾರ್ವಜನಿಕರ ಆಕ್ರೋಶ: ಪ್ರದೇಶದಲ್ಲಿ ರಾಜಕೀಯ ನಾಯಕರು ಪಕ್ಷಬೇಧ ಮರೆತು ನಡೆಸುತ್ತಿದ್ದಾರೆ ಎನ್ನಲಾದ ಈ ಬಾಕ್ಸೈಟ್ ದಂಧೆಯ ವಿರುದ್ಧ ಸ್ಥಳೀಯ ನಾಗರಿಕರು ನಿರಂತರವಾಗಿ ಹಿಡಿಶಾಪ ಹಾಕುತ್ತಿದ್ದಾರೆ. ಈ ಹಿಂದೆ ಬಾಕ್ಸೈಟ್ ಲಾರಿಗಳ ಅಟ್ಟಹಾಸ ಹಾಗೂ ದಬ್ಬಾಳಿಕೆಯಿಂದಾಗಿ ವಿಟ್ಲ ಸೇರಿದಂತೆ ಸುತ್ತಮುತ್ತಲಿನ ವಾಹನ ಚಾಲಕರು ಮತ್ತು ಸಾರ್ವಜನಿಕರು ತೀವ್ರ ಹೈರಾಣಾಗಿದ್ದರು. ಇದರ ವಿರುದ್ಧ ಪ್ರತಿಭಟನೆಗಳು ನಡೆದಿದ್ದರೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಈ ದಂಧೆಯು, ಇಂದು ಸ್ವತಃ ತನ್ನದೇ ಲಾರಿಯ ಚಾಲಕನ ಬಲಿ ಪಡೆದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ




-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident1 month agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala6 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
