Connect with us

Belthangady

ಶಿಕ್ಷಕಿಯ ಮೇಲೆ ಅತ್ಯಾಚಾರ ಆರೋಪ: ಲೈಂಗಿಕವಾಗಿ ಬಳಸಿ, ಹಣ-ಆಸ್ತಿ ಲೂಟಿ ಮಾಡಿದ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಪ್ರಕರಣ ದಾಖಲು‌

Published

on

ಬೆಳ್ತಂಗಡಿ: ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ. ಅವರು ಶಿಕ್ಷಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯಿಂದಲೇ ನಿರಂತರ ಲೈಂಗಿಕ ದೌರ್ಜನ್ಯ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಗಂಭೀರ ಸ್ವರೂಪದ ಪ್ರಕರಣವೊಂದು ದಾಖಲಾಗಿದ್ದು, ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೇ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಕೋಟ್ಯಂತರ ರೂಪಾಯಿ ಮೌಲ್ಯದ ಹಣ ಮತ್ತು ಆಸ್ತಿಯನ್ನು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಘಟನೆಯು 2020ರ ನವೆಂಬರ್‌ನಿಂದ 2023ರ ಜೂನ್ ಅವಧಿಯಲ್ಲಿ ನಡೆದಿದ್ದು, ಸಂತ್ರಸ್ತ ಮಹಿಳೆಯು ನೀಡಿದ ದೂರಿನನ್ವಯ ಮಾರ್ಚ್ 21, 2026 ರಂದು ಅಧಿಕೃತವಾಗಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ಮುಖ್ಯ ಆರೋಪಿಯಾದ ಸಂದೇಶ್ ಪಿ.ಜಿ. ಅವರು ಈ ಹಿಂದೆ ದೂರುದಾರ ಮಹಿಳೆಯ ಕುಟುಂಬದಲ್ಲಿ ನಡೆದಿದ್ದ ಆಸ್ತಿ ಕಲಹದ ತನಿಖಾಧಿಕಾರಿಯಾಗಿದ್ದರು. ಈ ತನಿಖೆಯ ನೆಪದಲ್ಲಿ ಮಹಿಳೆಯ ಪರಿಚಯ ಮಾಡಿಕೊಂಡಿದ್ದ ಆರೋಪಿಯು, ಸಂತ್ರಸ್ತೆಯು ಮನೆಯಲ್ಲಿ ಒಬ್ಬರೇ ಇರುವುದನ್ನು ಬಂಡವಾಳ ಮಾಡಿಕೊಂಡು ಅವರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ ಅಂಶ ದೂರಿನಲ್ಲಿ ಉಲ್ಲೇಖವಾಗಿದೆ.

ಲೈಂಗಿಕ ದೌರ್ಜನ್ಯವಷ್ಟೇ ಅಲ್ಲ, ಹಣ-ಆಸ್ತಿ ಲೂಟಿ ಮಾಡಿದ ಇನ್ಸ್‌ಪೆಕ್ಟರ್

ಕೇವಲ ಲೈಂಗಿಕ ದೌರ್ಜನ್ಯವಷ್ಟೇ ಅಲ್ಲದೆ, ಆರೋಪಿಯು ಮಹಿಳೆಯಿಂದ ಹಂತ ಹಂತವಾಗಿ ಸುಮಾರು 13 ಲಕ್ಷ ರೂಪಾಯಿ ನಗದು ಹಣವನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಮಹಿಳೆಯ ಬ್ಯಾಂಕ್ ಖಾತೆಯಿಂದ 3,62,000 ರೂಪಾಯಿಗಳನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುವುದು ವರದಿಯಾಗಿದೆ. ದೂರುದಾರ ಮಹಿಳೆಗೆ ಸೇರಿದ ತೋಟದಲ್ಲಿದ್ದ ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಬೆಲೆಬಾಳುವ ಸಾಗುವಾನಿ ಮರಗಳನ್ನು ಬೆದರಿಸಿ ಕಡಿದು ಸಾಗಿಸಿರುವ ಆರೋಪವೂ ಇವರ ಮೇಲಿದೆ. ಈ ದೌರ್ಜನ್ಯದ ಸರಣಿ ಇಲ್ಲಿಗೆ ನಿಂತಿಲ್ಲ; ಮಹಿಳೆಯ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಅಕ್ರಮವಾಗಿ ಅಕ್ಬರ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಫೆಡರಲ್ ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ಪಡೆದು ಸಂತ್ರಸ್ತೆಗೆ ವಂಚಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

ಪ್ರಾಣ ಬೆದರಿಕೆಯಿಂದ ದೂರು ವಿಳಂಬ

ಈ ಇಡೀ ಕೃತ್ಯದಲ್ಲಿ ಸಂದೇಶ್ ಪಿ.ಜಿ. ಅವರಿಗೆ ಅಕ್ಬರ್, ಸ್ಮಿತಾ ಮತ್ತು ಸುನೀತ ಲೋಬೋ ಎಂಬುವವರು ಸಾಥ್ ನೀಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆಯು ಈ ವಿಚಾರವನ್ನು ಎಲ್ಲಿಯಾದರೂ ಬಹಿರಂಗಪಡಿಸಿದರೆ ಅಥವಾ ಪೊಲೀಸ್ ದೂರು ನೀಡಿದರೆ ಅವರನ್ನು ಮತ್ತು ಅವರ ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಆರೋಪಿಗಳು ನಿರಂತರವಾಗಿ ಪ್ರಾಣ ಬೆದರಿಕೆ ಹಾಕುತ್ತಿದ್ದರು. ಇದೇ ಕಾರಣದಿಂದ ದೂರು ನೀಡಲು ವಿಳಂಬವಾಗಿದ್ದು, ಅಂತಿಮವಾಗಿ ಧೈರ್ಯ ಮಾಡಿದ ಮಹಿಳೆಯು ತನ್ನ ಕುಟುಂಬದವರೊಂದಿಗೆ ಚರ್ಚಿಸಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಪ್ರಸ್ತುತ ವೇಣೂರು ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), 376(2)(n) (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ), 384 (ಸುಲಿಗೆ), 506 (ಜೀವ ಬೆದರಿಕೆ) ಹಾಗೂ 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಂದೇಶ್ ಪಿ.ಜಿ. ಅವರನ್ನು ತಕ್ಷಣ ಬಂಧಿಸಿ ತನಿಖೆ ನಡೆಸಬೇಕು

ಮಹಿಳೆಯರೊಂದಿಗೆ ಅನುಚಿತ ವರ್ತನೆ ಹಾಗೂ ಪ್ರಶ್ನಾರ್ಹ ನಡವಳಿಕೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್‌ ಸಂದೇಶನನ್ನು ಮಂಗಳೂರು ಪೊಲೀಸ್ ಕಮಿಷನರ್ ಸೇವೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಆತನ ಮೇಲೆ ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ ಎಂದು ಪ್ರಚಾರವಾಗಿತ್ತು. ಮತ್ತು ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣ ಬಂಧಿಸಿ ತನಿಖೆ ನಡೆಸಬೇಕು ಎಂಬ ಸಂತ್ರಸ್ತರ ಕೂಗು ಹೆಚ್ಚಾಗುತ್ತಿದೆ.

ನ್ಯಾಯವಾದಿಗಳ ತಂಡಕ್ಕೇ ಹಣದ ಆಮಿಷ.?
ಸಂತ್ರಸ್ತೆಯ ದೂರು ಸ್ವೀಕರಿಸಲು ವೇಣೂರು ಪೊಲೀಸ್ ಠಾಣೆಯಲ್ಲಿ ನಿರಾಕರಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಮಂಗಳೂರಿನ ನ್ಯಾಯವಾದಿ ಶಿವಾನಂದ ವಿಟ್ಲ ಮತ್ತು ತಂಡ ವೇಣೂರು ಪೊಲೀಸ್ ಠಾಣೆಗೆ ತೆರಳಿದೆ. ಅಲ್ಲಿನ ಅಧಿಕಾರಿಗಳಲ್ಲಿ ಕಾನೂನುಗಳ ಬಗ್ಗೆ ವಕೀಲರು ಮನವರಿಕೆ ಮಾಡುತ್ತಿದ್ದಂತೆ ಆರೋಪಿ ಸಂದೇಶ್ ಪರ ತಂಡವೊಂದು ಸ್ವತಃ ವಕೀಲರಿಗೆ ಲಕ್ಷಾಂತರ ರೂಪಾಯಿಗಳ ಆಮಿಷ ನೀಡಿದ್ದರೂ ಶಿವಾನಂದ ವಿಟ್ಲ ತಂಡ ಸ್ಪಷ್ಟವಾಗಿ ನಿರಾಕರಿಸಿ ಸಂತ್ರಸ್ತೆ ಪರ ನಿಂತಿರುವುದು ವಕೀಲರ ಮೇಲಿನ ಗೌರವ, ಘನತೆಯನ್ನು ಎತ್ತಿಹಿಡಿದಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರು: MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ; 15.30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

Published

on

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್‌ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ನಂಬರ್ 103ರಲ್ಲಿ ವಾಸ್ತವ್ಯವಿದ್ದ ನಸೀಮಾ @ ನಸೀಮ (42) ಬಂಧಿತ ಆರೋಪಿ.

ಘಟನೆಯ ವಿವರ: ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ವೇಳೆ ಪಂಪ್‌ವೆಲ್ ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿತೆಯ ವಶದಲ್ಲಿದ್ದ ಸುಮಾರು 15,30,000 ರೂಪಾಯಿ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿತೆಯು ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಜಾಲದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Continue Reading

Belthangady

ಸೌಜನ್ಯ ಪ್ರಕರಣದ ತನಿಖಾ ಸಮಿತಿ ಪುನಾರಚನೆ: ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಮುಖ್ಯಸ್ಥರಾಗಿ ನೇಮಕ

Published

on

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿ ತಿದ್ದುಪಡಿ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಒಳಾಡಳಿತ ಇಲಾಖೆ (ಅಪರಾಧಗಳು) ದಿನಾಂಕ 30-10-2026 ರಂದು ಆದೇಶ ಸಂಖ್ಯೆ: ಹೆಚ್‌ಸಿಡಿ 228 ಸಿಒಡಿ 2026 ರಂತೆ ಈ ತಿದ್ದುಪಡಿ ಆದೇಶವನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 24, 2026 ರಂದು ಹೊರಡಿಸಿದ್ದ ಮೂಲ ಆದೇಶದ ಕೋಷ್ಟಕದ ಕ್ರಮ ಸಂಖ್ಯೆ 01 ಮತ್ತು 05 ರಲ್ಲಿದ್ದ ಅಧಿಕಾರಿಗಳನ್ನು ಬದಲಾಯಿಸಲಾಗಿದೆ.

ತಿದ್ದುಪಡಿ ಆದೇಶದ ಪ್ರಕಾರ:

  1. ಶ್ರೀ ಚೇತನ್ ಸಿಂಗ್ ರಾಥೋಡ್, ಐಪಿಎಸ್, ಐಜಿಪಿ, ಸಿಐಡಿ, ಬೆಂಗಳೂರು – ಮುಖ್ಯಸ್ಥರಾಗಿ ನೇಮಕ
  2. ಶ್ರೀ ಶ್ರೀನಿಧಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಾಸನ ಜಿಲ್ಲೆ – ಸದಸ್ಯರಾಗಿ ನೇಮಕ

ಈ ಇಬ್ಬರು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರ ಸಹಿಯಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಆದೇಶದ ಪ್ರತಿಯನ್ನು ಡಿಜಿ & ಐಜಿಪಿ, ಸಿಐಡಿ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ರವಾನಿಸಲಾಗಿದೆ.

Continue Reading

Belthangady

ಸೌಜನ್ಯ ಕೇಸ್ ಮರುತನಿಖೆಗೆ ಬಿಗ್ ಟ್ವಿಸ್ಟ್: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್!

Published

on

ಬೆಂಗಳೂರು: ಧರ್ಮಸ್ಥಳದ ಬಹುಚರ್ಚಿತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ (SIT) ಮರುತನಿಖೆ ಬಿರುಸಿನಿಂದ ಸಾಗುತ್ತಿರುವ ನಡುವೆಯೇ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದೆ. ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DG-IGP) ಲಿಖಿತ ಮನವಿ ಸಲ್ಲಿಸಿದ್ದಾರೆ.

ಹೋರಾಟಗಾರರ ಅಪಸ್ವರ ಮತ್ತು ವಿರೋಧ: ಸೌಜನ್ಯ ಕುಟುಂಬಸ್ಥರು ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂಘಟನೆಗಳು ಐಜಿಪಿ ಶಶಿಕುಮಾರ್ ಅವರ ನೇಮಕಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಶಶಿಕುಮಾರ್ ಅವರು ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದ ವೇಳೆ ಸ್ಥಳೀಯ ಪ್ರಭಾವಿಗಳೊಂದಿಗೆ ಒಡನಾಟ ಹೊಂದಿದ್ದರು, ಹೀಗಾಗಿ ಅವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದರು. ಇತ್ತೀಚೆಗೆ ಹೋರಾಟಗಾರರ ನಿಯೋಗವು ಗೃಹ ಸಚಿವರನ್ನು ಭೇಟಿಯಾಗಿ ಎಸ್‌ಐಟಿ ಮುಖ್ಯಸ್ಥರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತಲ್ಲದೆ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿಯೂ ಎಚ್ಚರಿಸಿತ್ತು.

ತನಿಖೆಯ ಪಾರದರ್ಶಕತೆಗಾಗಿ ನಿರ್ಧಾರ: ಸಾರ್ವಜನಿಕ ವಲಯದಲ್ಲಿ ಎದ್ದಿರುವ ಅಪಸ್ವರಗಳು ಹಾಗೂ ತನಿಖೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶಶಿಕುಮಾರ್ ಅವರು ಸ್ವತಃ ತಾವೇ ಈ ಜವಾಬ್ದಾರಿಯಿಂದ ಕೈಬಿಡುವಂತೆ ಡಿಜಿ-ಐಜಿಪಿ ಎಂ.ಎ. ಸಲೀಂ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ವಿಶೇಷವೆಂದರೆ, ಅಕ್ಟೋಬರ್ 28 ರಂದು ಶಶಿಕುಮಾರ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮರುತನಿಖೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದರು. ಅಲ್ಲದೆ, ಅಕ್ಟೋಬರ್ 30 ರಂದು ಆರಂಭಿಕ ತನಿಖಾಧಿಕಾರಿಗಳು ಹಾಗೂ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿತ್ತು. ಈ ಹಂತದಲ್ಲೇ ಮುಖ್ಯಸ್ಥರು ಹಿಂದೆ ಸರಿಯಲು ಮನವಿ ಮಾಡಿರುವುದು ಕುತೂಹಲ ಮೂಡಿಸಿದೆ.

ಈಗಾಗಲೇ ತಂಡದ ಮತ್ತೊಬ್ಬ ಪ್ರಮುಖ ಸದಸ್ಯರಾದ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಅವರು ವೈಯಕ್ತಿಕ ಕಾರಣಗಳಿಂದ ಹೊರಬಂದಿದ್ದು, ಇದೀಗ ಮುಖ್ಯಸ್ಥರೂ ವಿನಾಯಿತಿ ಕೋರಿರುವುದರಿಂದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಎಸ್‌ಐಟಿಗೆ ನೂತನ ದಕ್ಷ ಅಧಿಕಾರಿಯನ್ನು ನೇಮಕ ಮಾಡುವ ಸಾಧ್ಯತೆಯಿದೆ

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!