Bantawala
ಬಂಟ್ವಾಳ: ಮಸೀದಿ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ – ಮೂರು ಪ್ರತ್ಯೇಕ ಪ್ರಕರಣ ದಾಖಲು
ಬಂಟ್ವಾಳ: ತಾಲೂಕಿನ ಸಜೀಪಪಡು ಗ್ರಾಮದ ತಲೆಮೊಗರು ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ಮಾರ್ಚ್ 22ರಂದು ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರತ್ಯೇಕ ಎಫ್.ಐ.ಆರ್ (FIR) ದಾಖಲಾಗಿವೆ.
ಪ್ರಕರಣ 1: ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ಆರೋಪ
ಪ್ರಕರಣದ ಪಿರ್ಯಾದಿದಾರರಾದ ಉಳ್ಳಾಲ ಸಜಿಪ ಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರ ದೂರಿನಂತೆ, ದಿನಾಂಕ: 22/03/2026 ರಂದು ಬೆಳಿಗ್ಗೆ, ಪಿರ್ಯಾದುದಾರರು ಮತ್ತು ಅವರ ಸಂಬಂಧಿ ದಾವೂದ್ ಜೊತೆಯಲ್ಲಿ ತಲೆಮೊಗರು ಮಸೀದಿಗೆ ಹೋಗಿ ವಾಪಾಸ್ಸು ಬರುತ್ತಿರುವಾಗ ಸದ್ರಿ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಕತ್ ಎಂಬಾತನ ಅಂಗಡಿಯ ಬಳಿ ಆರೋಪಿತರಾದ ಶೌಕತ್, ಇಸಾಕ್, ಸಫಿಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಹಾಗೂ ನಿಝಾಲ್ ರವರು ಗುಂಪು ಕಟ್ಟಿಕೊಂಡು ನಿಂತಿರುವುದಾಗಿದೆ. ಪಿರ್ಯಾದಿರವರು ಹಾಗೂ ದಾವೂದ್ ರವರು ಸ್ಥಳಕ್ಕೆ ಬಂದಾಗ ಆರೋಪಿಗಳು ಮಸೀದಿಯ ವಿಚಾರದಲ್ಲಿ ತಕರಾರು ತೆಗೆದು, ಅವ್ಯಾಚವಾಗಿ ನಿಂದಿಸಿ, ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿ ತೆರಳಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿದಾರರು ಹಾಗೂ ದಾವೂದ್ ರವರು ಉಪಚರಿಸಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದಿರುವುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/2026, ಕಲಂ: 189(2), 191(2), 352, 351(2), 109(1), 118(1), 115(2) r/w 190 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣ 2: ಕಬ್ಬಿಣದ ರಾಡ್‌ನಿಂದ ಹಲ್ಲೆ – ಪ್ರತಿ ದೂರು
ಸದ್ರಿ ಘಟನೆಗೆ ಸಂಬಂಧಿಸಿದಂತೆ, ಉಳ್ಳಾಲ ಸಜಿಪ ಪಡು ನಿವಾಸಿ ಅಬ್ದುಲ್ ಗಫೂರ್ (48) ಎಂಬವರು ನೀಡಿದ ಪ್ರತಿದೂರಿನಂತೆ, ಆರೋಪಿಗಳಾದ ಯಾಕೂಬ್, ಶಫೀಕ್, ಇಸಾಕ್,ಸಫ್ವಾನ್, ಅಶ್ರಫ್ ಸಾಹೇಬ್ ಎಂಬವರುಗಳು ಸಜಿಪ ಪಡು ಗ್ರಾಮದ ತಲೆಮೊಗರು ಮಸೀದಿ ಬಳಿ ಪಿರ್ಯಾದಿದಾರರನ್ನು ತಡೆದು ನಿಲ್ಲಿಸಿ ಅವ್ಯಾಚವಾಗಿ ಬೈದು, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿರವರು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದಿರುವುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 47/2026, ಕಲಂ: 126(2), 189(2), 191(2), 118(1), 115(2), 352, 351(2) ಜೊತೆಗೆ 190 BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣ 3: ತಲವಾರು ದಾಳಿ ಯತ್ನ ಹಾಗೂ ಮಹಿಳೆಯರಿಗೆ ಬೆದರಿಕೆ
ಮುಂದುವರಿದಂತೆ, ಉಳ್ಳಾಲ ಸಜಿಪ ಪಡು ನಿವಾಸಿ ಶೌಕತ್ ಆಲಿ (40) ಎಂಬವರು ನೀಡಿದ ದೂರಿನಂತೆ, ಸದ್ರಿಯವರು ದಿನಾಂಕ:22/03/2026 ರಂದು ಬೆಳಿಗ್ಗೆ, ಸಜೀಪಪಡು ಗ್ರಾಮದ ತಲೆಮೊಗರು ಮಸೀದಿ ಬಳಿಯ ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದಾಗ, ಪ್ರಕರಣದ ಆರೋಪಿಗಳಾದ ದಾವೂದ್ , ಜುಬೈರ್, ಸೈದುದ್ದೀನ್, ನವಾಜ್, ಗಫೂರ್ , ಶರೀಪ್, ಆಶಿಕ್ ರವರುಗಳು ಪಿರ್ಯಾದಿದಾರರ ಅಂಗಡಿಗೆ ಬಂದು, ಮಸೀದಿ ವಿಚಾರದಲ್ಲಿ ತಕರಾರು ತೆಗೆದು ಪಿರ್ಯಾದಿದಾರರ ಸಂಬಂಧಿ ರಬಿಯತ್ ರವರಿಗೆ ಹಲ್ಲೆ ನಡೆಸಿರುತ್ತಾರೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಸಫಾನಾ, ನಿಜಾಲ್ , ಇಸಾಕ್, ಆಶ್ರಫ್ ಎಂಬವರಿಗೂ ಹಾಗೂ ಪಿರ್ಯಾದಿರವರಿಗೂ ಅವ್ಯಾಚವಾಗಿ ಬೈದು ತಲವಾರಿನಿಂದ ಹಲ್ಲೆ ಯತ್ನಿಸಿರುತ್ತಾರೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಪಿರ್ಯಾದಿದಾರರ ಸಂಬಂಧಿ ಆಯಿಷಾ ಎಂಬವರಿಗೆ ಆರೋಪಿಗಳು ಜೀವಬೆದರಿಕೆ ಒಡ್ಡಿರುತ್ತಾರೆ ಎಂಬುದಾಗಿ ಣಿಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 48/2026, ಕಲಂ: 189(2), 191(2), 191(3), 115(2), 118(1), 74, 352, 351(2), 329(3), 109 ಜೊತೆಗೆ 190 ಬಿಎನ್ಎಸ್ ಮತ್ತು ಕಲಂ: 21 (1)(ಎ) Arms Act ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಇತ್ತಂಡಗಳ ಪೈಕಿ ಗಾಯಾಳುಗಳು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾರಿಗೂ ಪ್ರಾಣಾಪಾಯ ಆಗುವಂತಹ ಗಾಯಗಳಾಗಿರುವುದಿಲ್ಲ. ಸದ್ರಿ ಗಾಯಾಳುಗಳು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.ಬಂಟ್ವಾಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.
accident
ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಅಪಘಾತಕ್ಕೀಡಾದ ಮಹಿಳೆ. ಇವರು ತನ್ನ ಮಗಳು ದೀಪ್ತಿ ಅವರೊಂದಿಗೆ ಸಜಿಪಮುನ್ನೂರಿನ ಗುಳಿಗಜ್ಜನ ಕಟ್ಟೆಗೆ ಕಾಣಿಕೆ ಹಾಕಲು ಬಂದಿದ್ದರು. ಕಾಣಿಕೆ ಮುಗಿಸಿ ವಾಪಸ್ಸಾಗುವಾಗ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮಹಿಳೆಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಡಿಕ್ಕಿಯ ರಭಸಕ್ಕೆ ಭಾರತಿ ಅವರು ಗಾಳಿಯಲ್ಲಿ ಹಾರಿ ರಸ್ತೆಯ ಬದಿಗೆ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
award
ಮಂಗಳೂರು ವಿಶ್ವವಿದ್ಯಾಲಯ: ಸುಶ್ಮಿತ ಸಿ.ಎಚ್. ಅವರಿಗೆ ಅನ್ವಯಿಕ ಸಸ್ಯಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪ್ರದಾನ
ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಶ್ಮಿತ ಸಿ.ಎಚ್. ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.

ಅವರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್ ಜಿ. ಅವರ ಮಾರ್ಗದರ್ಶನದಲ್ಲಿ “Antidiabetic activities of Syzygium hemisphericum (Wight) Alston and Syzygium kanarense (Talbot) Raizada” (ಸಿಜಿಜಿಯಂ ಹೆಮಿಸ್ಫೆರಿಕಂ ಮತ್ತು ಸಿಜಿಜಿಯಂ ಕೆನರೆನ್ಸ್ ಸಸ್ಯಗಳ ಮಧುಮೇಹ ವಿರೋಧಿ ಚಟುವಟಿಕೆಗಳು) ಎಂಬ ವಿಷಯದ ಬಗ್ಗೆ ಸಂಶೋಧನೆ ನಡೆಸಿದ್ದರು.

2025ರ ಅಕ್ಟೋಬರ್‌ನಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಇವರಿಗೆ, 2026ರ ಮಾರ್ಚ್ 28ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ 44ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ಅಧಿಕೃತವಾಗಿ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಲಾಯಿತು.
ಡಾ. ಸುಶ್ಮಿತ ಅವರು ಪ್ರಸಿದ್ಧ ಯಕ್ಷಗಾನ ಭಾಗವತರಾದ ಶ್ರೀ ಕಣಿಯೂರು ಸೂರ್ಯನಾರಾಯಣ ಭಟ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲದ ಉದ್ಯೋಗಿ ಶ್ರೀಮತಿ ಆಶಾಪಾರ್ವತಿ ದಂಪತಿಯ ಪುತ್ರಿ. ಇವರು ಯುವ ಉದ್ಯಮಿ ಶ್ರೀ ಕೃಷ್ಣ ವಿಕಾಸ್ ಅವರ ಪತ್ನಿಯಾಗಿದ್ದಾರೆ.

ತಮ್ಮ ಈ ಶೈಕ್ಷಣಿಕ ಸಾಧನೆಗೆ ಬೆನ್ನೆಲುಬಾಗಿ ನಿಂತ ತಂದೆ-ತಾಯಿ, ಸಹೋದರಿ ಹಾಗೂ ಪತಿಯವರ ನಿರಂತರ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಡಾ. ಸುಶ್ಮಿತ ಅವರು ಈ ಸಂದರ್ಭದಲ್ಲಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದಲ್ಲೇ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Bantawala
ಘನತ್ಯಾಜ್ಯ ವಿಲೇವಾರಿಯಲ್ಲಿ ಗೋಲ್ಮಾಲ್..ಸ್ಮಶಾನದಂತಾದ ವಿಟ್ಲದ ಘನತ್ಯಾಜ್ಯ ಘಟಕ..ಬೆಂಕಿ ಇಟ್ಟು ಸುಡುವ ಮೂಲಕ ಜನರ ಆರೋಗ್ಯದಲ್ಲಿ ಚೆಲ್ಲಾಟ..ಸಾಮಾಜಿಕ ಹೋರಾಟಗಾರನಿಂದ ಪೊಲೀಸ್ ಠಾಣೆಗೆ ದೂರು..
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ಘನತ್ಯಾಜ್ಯ ವಿಲೇವಾರಿ ಮಾಡಬೇಕಾಗಿದ್ದ ಜವಾಬ್ದಾರಿಯುತ ಅಧಿಕಾರಿ, ಸಿಬ್ಬಂದಿಗಳು ತ್ಯಾಜ್ಯಗಳ ರಾಶಿಗೆ ಘಟಕದ ಆವರಣದಲ್ಲೇ ಬೆಂಕಿಹಾಕಿ ಸುಡುವ ಮೂಲಕ ಜನರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ.

ವಿಟ್ಲದ ಬೊಬ್ಬೆಕೇರಿ ಎಂಬಲ್ಲಿ ಕಳೆದ ಮೂರು ತಿಂಗಳಿಂದ ಘನತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಸಾಮಾಜಿಕ ಹೋರಾಟಗಾರ ಧನಂಜಯ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್ ಸೇರಿದಂತೆ ಇತರ ಘನತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಾಗಿತ್ತು. ಅದಕ್ಕಾಗಿಯೇ ಅಂಗಡಿ ಮಾಲಿಕರಿಂದ, ಜನ ಸಾಮಾನ್ಯರಿಂದ ಹಣ ವಸೂಲಿ ಕೂಡಾ ಮಾಡುತ್ತಿದ್ದಾರೆ. ಆದರೆ ಮೂಟೆ ಮೂಟೆ ಘನತ್ಯಾಜ್ಯಗಳನ್ನು ವ್ಯವಸ್ಥಿತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಆವರಣದಲ್ಲೇ ಸ್ಮಶಾನದಲ್ಲಿ ಹೆಣಗಳನ್ನು ಸುಡುವ ರೀತಿಯಲ್ಲಿ ಸುಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಿಂದ ಏಳುತ್ತಿರುವ ವಿಷಕಾರಿ ಹೊಗೆಯು ಪರಿಸರಕ್ಕೆ, ಪರಿಸರ ನಿವಾಸಿಗಳ ಆರೋಗ್ಯಕ್ಕೆ ಹಾನಿ ಮಾಡುವುದಲ್ಲದೇ, ಸುಮಾರು 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ವೈಜ್ಞಾನಿಕವಾಗಿ ಸಂಶೋಧನೆಯಲ್ಲಿ ಸಾಬೀತಾಗಿದೆ.

ಈ ಅಕ್ರಮ ಚಟುವಟಿಕೆಯು ಪರಿಸರ ಸಂರಕ್ಷಣಾ ಕಾಯ್ದೆ 1986 (Environment Protection Act 1986), ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ 1981 (Air Pollution Act 1981) ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 2016 ರ (Plastic Waste Management Rules 2016) ನೇರ ಉಲ್ಲಂಘನೆಯಾಗಿದೆ. ಸರ್ಕಾರದ ಅನುದಾನವನ್ನು ಘನತ್ಯಾಜ್ಯ ವಿಲೇವಾರಿಗೆ ಬಳಸದೆ ದುರ್ಬಳಕೆ ಮಾಡಲಾಗುತ್ತಿದೆ ಪಟ್ಟಣ ಪಂಚಾಯತಿನಲ್ಲಿ ಪ್ಲಾಸ್ಟಿಕ್ ವಿಲೇವಾರಿಗೆ ಸಾಕಷ್ಟು ಅನುದಾನ ಮೀಸಲಿಟ್ಟಿದ್ದರೂ ಅದನ್ನು ಸರಿಯಾಗಿ ಬಳಕೆ ಮಾಡದೆ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಆರೋಗ್ಯಾಧಿಕಾರಿ, ಸುಪರ್‌ವೈಸರ್ ಮತ್ತು ಕೌನ್ಸಿಲರ್ ಇವರೆಲ್ಲರೂ ಸೇರಿ ಸರಕಾರದಿಂದ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡು ಪ್ಲಾಸ್ಟಿಕನ್ನು ಸುಟ್ಟು ಶಿಕ್ಷಾರ್ಹ ಅಪರಾಧವನ್ನೆಸಗುತ್ತಿದ್ದಾರೆ ಎಂದು ದೂರುದಾರರು ಗಂಭೀರವಾಗಿ ಆರೋಪಿಸಿದ್ದಾರೆ.
ಈ ಅಕ್ರಮ ಹಾಗೂ ಅವೈಜ್ಞಾನಿಕ ವಿಲೇವಾರಿಯು ಪರಿಸರ ಸಂರಕ್ಷಣಾ ಕಾಯ್ದೆ ಹಾಗೂ ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆಗಳ ನೇರ ಉಲ್ಲಂಘನೆಯಾಗಿದೆ. ಸರ್ಕಾರದ ಅನುದಾನವನ್ನು ಸರಿಯಾಗಿ ಬಳಸದೆ ಗೋಲ್ಮಾಲ್ ನಡೆಸುವ ಮೂಲಕ ಸ್ಪಷ್ಟವಾಗಿ ದುರ್ಬಳಕೆ ಮಾಡಲಾಗುತ್ತಿದೆ ಮತ್ತು ಈ ಬಗ್ಗೆ ಪ್ರಶ್ನಿಸಿದರೆ ಸಂಬಂಧಿಸಿದ ಅಧಿಕಾರಿ ಚೇತನ್ ಎಂಬವರು ಬೇಜವಾಬ್ದಾರಿ ಹಾಗೂ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ದೂರುದಾರರು ವಿವರಿಸಿದ್ದಾರೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸರ್ಕಾರದ ಹಣವನ್ನು ಲೂಟಿ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಸದ್ಯ ವಿಟ್ಲ ಪೊಲೀಸರು ಈ ದೂರಿನ ಕುರಿತು ಎನ್‌ಸಿಆರ್ (NCR) ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
