Connect with us

accident

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ದುರಂತ: ಬಸ್-ಲಾರಿ ಡಿಕ್ಕಿ, 12 ಪ್ರಯಾಣಿಕರು ಸಜೀವ ದಹ

Published

on

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಾಪುರಂ ಸಮೀಪದ ರಾಯವರಂನಲ್ಲಿ ಗುರುವಾರ (ಮಾರ್ಚ್ 26, 2026) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 10 ರಿಂದ 12 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಈ ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಇಷ್ಟೊಂದು ದೊಡ್ಡ ಪ್ರಮಾಣದ ಸಾವು-ನೋವಿಗೆ ಕಾರಣವಾಗಿದೆ.

ತೆಲಂಗಾಣದ ಜಗಿತಾಲದಿಂದ ನೆಲ್ಲೂರು ಜಿಲ್ಲೆಯ ವಿನಜಮೂರಿಗೆ ತೆರಳುತ್ತಿದ್ದ ‘ಹರಿಕೃಷ್ಣ ಟ್ರಾವೆಲ್ಸ್’ಗೆ ಸೇರಿದ ಖಾಸಗಿ ಬಸ್, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಸುಕಿನ ಜಾವ ಸಂಭವಿಸಿದ ಈ ಅಪಘಾತದ ತಕ್ಷಣವೇ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರು ಹೊರಬರಲಾಗದೆ ಬೆಂಕಿಗೆ ಆಹುತಿಯಾಗಿದ್ದಾರೆ.

ಘಟನೆಯಲ್ಲಿ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಶಬ್ದ ಕೇಳಿ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಮತ್ತೆ ಮರುಕಳಿಸಿದ ಕರಾಳ ನೆನಪು:

ಕಳೆದ ಅಕ್ಟೋಬರ್ ತಿಂಗಳಲ್ಲಿ ಕರ್ನೂಲ್ ಬಳಿ ನಡೆದಿದ್ದ ಭೀಕರ ಬಸ್ ದುರಂತದ ನೆನಪು ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಅತಿದೊಡ್ಡ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಅಪಘಾತದ ತನಿಖೆಗೆ ಆದೇಶಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ

Published

on

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.

ಅದೃಷ್ಟವಶಾತ್ ಬಚಾವ್

ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.

ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ

ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




Continue Reading

accident

ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ

Published

on

ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಹಾಸನ ಮೂಲದ ಪ್ರಯಾಣಿಕರು: ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.




Continue Reading

accident

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

Trending

Copyright © 2025 Deevatige

error: Content is protected !!