Dakshina Kannada
ದಕ್ಷಿಣ ಕನ್ನಡದಲ್ಲಿ ‘ಟೋಲ್’ ಅನ್ಯಾಯ: ಮತ್ತೆ ವಸೂಲಿಗೆ ಸಿದ್ದವಾಗುವ 3 ಟೋಲ್ ಗೇಟ್ ? ನಿಯಮ ಗಾಳಿಗೆ ತೂರಿ ಜನಸಾಮಾನ್ಯರ ಸುಲಿಗೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ನಿಯಮಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗಿವೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು “60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಟೋಲ್ ಪ್ಲಾಜಾ ಇರಬೇಕು” ಎಂದು ಸಂಸತ್ತಿನಲ್ಲಿ ಘೋಷಿಸಿದ್ದರೂ, ದಕ್ಷಿಣ ಕನ್ನಡದಲ್ಲಿ ಮಾತ್ರ ಪರಿಸ್ಥಿತಿ ತದ್ವಿರುದ್ಧವಾಗಿದೆ. ಈಗಾಗಲೇ ಇರುವ 3 ಟೋಲ್‌ಗಳ ನಡುವೆಯೇ ಹೊಸದಾಗಿ 3 ಟೋಲ್ ಗೇಟ್ ನಿರ್ಮಿಸುವ ಸರ್ಕಾರದ ನಿರ್ಧಾರ ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.
60 ಕಿ.ಮೀ ವ್ಯಾಪ್ತಿ.. 6 ಟೋಲ್ ಗೇಟ್ : ಹಗಲು ದರೋಡೆಯ ಎಚ್ಚರಿಕೆ!
ಪ್ರಸ್ತುತ ಜಿಲ್ಲೆಯಲ್ಲಿ 3 ಟೋಲ್ ಪ್ಲಾಜಾಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಹೊಸ ಪ್ರಸ್ತಾವನೆಯಂತೆ ಇನ್ನೂ 3 ಟೋಲ್‌ಗಳು ಸೇರ್ಪಡೆಯಾದರೆ ಜಿಲ್ಲೆಯ ಒಟ್ಟು ಟೋಲ್‌ಗಳ ಸಂಖ್ಯೆ 6ಕ್ಕೆ ಏರಲಿದೆ. ಹೋರಾಟಗಾರ ಮುನೀರ್ ಕಾಟಿಪಳ್ಳ ಅವರ ಪ್ರಕಾರ, ಇದು ಕೇವಲ ನಿಯಮ ಉಲ್ಲಂಘನೆಯಲ್ಲ, ಜಿಲ್ಲೆಯ ವ್ಯಾಪಾರ ಮತ್ತು ಕೈಗಾರಿಕಾ ಕ್ಷೇತ್ರದ ಮೇಲೆ ನಡೆಸುತ್ತಿರುವ ಗಂಭೀರ ಪ್ರಹಾರವಾಗಿದೆ. ಹೊಸದಾಗಿ ಪ್ರಸ್ತಾಪಿಸಲಾಗಿರುವ ಟೋಲ್ ಪ್ಲಾಜಾಗಳು ಅಂತರದ ನಿಯಮವನ್ನು ಸಂಪೂರ್ಣವಾಗಿ ಗಾಳಿಗೆ ತೂರಿವೆ.

ಗಂಜಿಮಠ (NH 169): ಮಂಗಳೂರು-ಮೂಡುಬಿದಿರೆ ಹೆದ್ದಾರಿಯ ಸೂರಲ್ಪಾಡಿ ಬಳಿ ನಿರ್ಮಾಣವಾಗುತ್ತಿರುವ ಈ ಟೋಲ್, ಮಂಗಳೂರಿನಿಂದ ಕೇವಲ 17 ಕಿ.ಮೀ ದೂರದಲ್ಲಿದೆ. ಇದು ಅಸ್ತಿತ್ವದಲ್ಲಿರುವ ಇತರ ಟೋಲ್‌ಗಳಿಂದ ಕೇವಲ 30 ಕಿ.ಮೀ ಅಂತರದಲ್ಲಿದೆ.
ವಳಾಲು (NH 75): ಬ್ರಹ್ಮರಕೂಟ್ಲು ಟೋಲ್‌ನಿಂದ ಕೇವಲ 35 ಕಿ.ಮೀ ಅಂತರದ ಉಪ್ಪಿನಂಗಡಿ ಸಮೀಪದ ವಳಾಲು ಎಂಬಲ್ಲಿ ಹೊಸ ಟೋಲ್ ಸಂಗ್ರಹಕ್ಕೆ ಸಿದ್ಧವಾಗಿ ನಿಂತಿದೆ.

ಪಣಪಿಲ: ಕಾರ್ಕಳ ರಸ್ತೆಯ ಪಣಪಿಲ ಎಂಬಲ್ಲಿಯೂ ಮತ್ತೊಂದು ಟೋಲ್ ಸ್ಥಾಪನೆಯ ಪ್ರಸ್ತಾವನೆಯಿದೆ.
ಬ್ರಹ್ಮರಕೂಟ್ಲು: ಅವಧಿ ಮುಗಿದರೂ ನಿಲ್ಲದ ವಸೂಲಿ
ಇನ್ನು ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ ಗೇಟ್ ವಿಚಾರದಲ್ಲಿ ಸಾರ್ವಜನಿಕರ ಆಕ್ರೋಶ ಮುಗಿಲು ಮುಟ್ಟಿದೆ. ಕಳೆದ 23 ವರ್ಷಗಳಿಂದ ಇಲ್ಲಿ ಹಣ ಸಂಗ್ರಹಿಸಲಾಗುತ್ತಿದ್ದರೂ, ತುರ್ತು ವಾಹನಗಳಿಗಾಗಿ ಪ್ರತ್ಯೇಕ ಲೇನ್ ಅಥವಾ ಆಂಬ್ಯುಲೆನ್ಸ್ ಸಂಚಾರಕ್ಕೆ ಸರಿಯಾದ ವ್ಯವಸ್ಥೆ ಇಲ್ಲದೆ ನಿತ್ಯ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ರಸ್ತೆಯನ್ನು ಎತ್ತರಿಸಿದ ಕಾರಣಕ್ಕೆ ಟೋಲ್ ವಸೂಲಿ ಮಾಡುವುದು ಕಾನೂನುಬಾಹಿರ ಎಂದು ಸ್ಥಳೀಯರು ಆರೋಪಿಸಿದ್ದು, ರಸ್ತೆಗಾಗಿ ಜಮೀನು ನೀಡಿದವರಿಗೂ ರಿಯಾಯಿತಿ ನೀಡದೆ ದಂಡ ವಸೂಲಿ ಮಾಡುತ್ತಿರುವುದು ದರೋಡೆಯಂತಿದೆ ಎಂದು ಹೋರಾಟಗಾರರು ದೂರಿದ್ದಾರೆ.

ಅವಧಿ ಮುಗಿದಿದ್ದರೂ ನವೀಕರಣದ ಹೆಸರಲ್ಲಿ ಹಣ ಪೀಕುತ್ತಿರುವ ಈ ಅವೈಜ್ಞಾನಿಕ ಟೋಲ್ ಪ್ಲಾಜಾಗಳು ಜಿಲ್ಲೆಯ ವ್ಯಾಪಾರ ಮತ್ತು ಕೈಗಾರಿಕಾ ರಂಗದ ಮೇಲೆ ತೀವ್ರ ಪೆಟ್ಟು ನೀಡುತ್ತಿವೆ. ಈ ಅನ್ಯಾಯದ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈಗ ಬೃಹತ್ ಪ್ರತಿಭಟನೆಗೆ ಸಜ್ಜಾಗುತ್ತಿದೆ.
ಜಿಲ್ಲೆಯ ಪ್ರಸ್ತುತ ಟೋಲ್ ಸ್ಥಿತಿ:
ಈಗಾಗಲೇ ನಿಯಮ ಮೀರಿ ಬ್ರಹ್ಮರಕೂಟ್ಲು NH 75 (ಮಂಗಳೂರು-ಬೆಂಗಳೂರು) ತಲಪಾಡಿ NH 66 (ಕೇರಳ ಗಡಿ) ಮತ್ತು ಹೆಜಮಾಡಿ NH 66 (ಉಡುಪಿ ಗಡಿ) ಚಾಲ್ತಿಯಲ್ಲಿದೆ. ಗಂಜಿಮಠ NH 169 (ಮಂಗಳೂರು-ಕಾರ್ಕಳ) ಪ್ರಸ್ತಾವಿತ/ನಿರ್ಮಾಣ ವಳಾಲುNH 75 (ಉಪ್ಪಿನಂಗಡಿ ಬಳಿ) ಮತ್ತು ಪಣಪಿಲNH 169 ಪ್ರಸ್ತಾವಿತ ನಿರ್ಮಾಣದಲ್ಲಿದೆ. ಹೋರಾಟದ ಹಾದಿಯಲ್ಲಿ ಸಾರ್ವಜನಿಕರು ಈಗಾಗಲೇ ಸುರತ್ಕಲ್ ಟೋಲ್ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದ ‘ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ’ ಈಗ ಮತ್ತೆ ಸಕ್ರಿಯವಾಗಿದೆ. ಕೇಂದ್ರ ಸರ್ಕಾರದ 60 ಕಿ.ಮೀ ನಿಯಮವನ್ನು ಪಾಲಿಸದಿದ್ದರೆ ಮತ್ತು ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಟೋಲ್‌ಗಳನ್ನು ಮುಚ್ಚದಿದ್ದರೆ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.ಜಿಲ್ಲೆಯ ಆರ್ಥಿಕತೆಯ ಮೇಲೆ ಹೊರೆಯಾಗಲಿರುವ ಈ “ಟೋಲ್ ಸಂಸ್ಕೃತಿ”ಗೆ ಬ್ರೇಕ್ ಬೀಳುವುದೇ ಅಥವಾ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದನ್ನು ಮುಂದುವರಿಸುವುದೇ ಎಂದು ಕಾದು ನೋಡಬೇಕಿದೆ.
arrest
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!
ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಾರ್ಯಾಚರಣೆಯ ವಿವರ:
ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ದೂರುದಾರರಿಗೆ ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಒಟ್ಟು ₹25,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಪೈಕಿ ಈಗಾಗಲೇ ₹15,000 ಹಣವನ್ನು ಮುಂಗಡವಾಗಿ ಪಡೆದುಕೊಂಡಿದ್ದ ಇನ್ಸ್‌ಪೆಕ್ಟರ್, ಬಳಿಕ ಹೆಚ್ಚುವರಿಯಾಗಿ ಮತ್ತೊಮ್ಮೆ ₹5,000 ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಇದರಿಂದ ಬೇಸತ್ತ ಫಿರ್ಯಾದುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಅನ್ವಯ ಸೆಪ್ಟೆಂಬರ್ 21ರ ಸಂಜೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ದೂರುದಾರರಿಂದ ₹5,000 ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.
ಹಿನ್ನೆಲೆ ಮತ್ತು ಹಳೆಯ ಆರೋಪಗಳು:
ಈ ಹಿಂದೆ ಉಳ್ಳಾಲ ಠಾಣೆಯಲ್ಲಿದ್ದಾಗಲೂ ಬಾಲಕೃಷ್ಣ ಅವರ ಮೇಲೆ ಭ್ರಷ್ಟಾಚಾರದ ಸಾಲು ಸಾಲು ಆರೋಪಗಳು ಕೇಳಿಬಂದಿದ್ದವು:
ಕಳ್ಳತನ ಪ್ರಕರಣದಲ್ಲಿ ಲಂಚ: ಉಳ್ಳಾಲದ ಮನೆಯೊಂದರಲ್ಲಿ ₹15 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಪ್ರಕರಣದಲ್ಲಿ ಮಾರಾಟ ಮಾಡಿದ್ದ ಚಿನ್ನಾಭರಣ ವಶಪಡಿಸಿಕೊಳ್ಳುವಾಗಲೂ ಲಂಚ ಪಡೆದ ಆರೋಪವಿತ್ತು.
ಪ್ರಕರಣ ಮುಚ್ಚಿಹಾಕಲು ದಂಧೆ:
ಬೆಳ್ತಂಗಡಿ ಮೂಲದ ಯುವಕನೊಬ್ಬನ ತಾಯಿಯಿಂದ ಪ್ರಕರಣ ಮುಚ್ಚಿಹಾಕಲು ₹3 ಲಕ್ಷ ರೂಪಾಯಿ ಪೀಕಿಸಿದ್ದಲ್ಲದೆ, ಮಗನ ಚಿನ್ನಾಭರಣ ಎಗರಿಸಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಂದಿನ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾಗ, ಇಲಾಖಾ ವಿಚಾರಣೆ ವೇಳೆ ದೂರುದಾರ ಮಹಿಳೆಗೆ ₹4.5 ಲಕ್ಷ ರೂಪಾಯಿ ನೀಡಿ ಕೇಸ್ ಹಿಂಪಡೆಯುವಂತೆ ಮಾಡಿದ್ದರೆನ್ನಲಾಗಿದೆ.
ವರ್ಗಾವಣೆ ನಾಟಕ: ಉಳ್ಳಾಲದ ಮರಳು ದಂಧೆಕೋರರ ಸಾಲಿಗೆ ಸಿಲುಕಿ ವರ್ಗಾವಣೆಯಾಗಿದ್ದ ಇವರು, ಬಳಿಕ ಪಾಂಡೇಶ್ವರ ಮಹಿಳಾ ಠಾಣೆಗೆ ಸೇರಿ, ಪ್ರಸ್ತುತ ಬಜ್ಜೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮುಖ್ಯಮಂತ್ರಿ ಪದಕದ ವಿವಾದ.! ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇತರೆ ತಂಡಗಳು ಶ್ರಮವಹಿಸಿ ಆರೋಪಿಗಳನ್ನು ಬಂಧಿಸಿದ್ದರೂ, ಅದರ ನೆಪದಲ್ಲಿ ಅಂದಿನ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರ ಹೆಸರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಭಾರೀ ಸುದ್ದಿಯಾಗಿತ್ತು.
award
ಮುಂಬೈನಲ್ಲಿ ಸಾರ್ವಜನಿಕ ಸೇವೆ ಮತ್ತು ಫಿಟ್ನೆಸ್ ಸಾಧನೆಯ ಹೈರಾಕ್ಸ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಯಶಸ್ಸು
ಮುಂಬೈ: ಆಡಳಿತದ ಬಿಡುವಿಲ್ಲದ ಜವಾಬ್ದಾರಿಗಳ ನಡುವೆಯೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಜಾಗತಿಕ ಮಟ್ಟದ ಪ್ರತಿಷ್ಠಿತ ‘ಹೈರಾಕ್ಸ್’ (HYROX) ಫಿಟ್ನೆಸ್ ರೇಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಾದರಿಯಾಗಿದ್ದಾರೆ.
ಮುಂಬೈನ ಎನ್‌ಇಎಸ್‌ಸಿಒ (NESCO) ಹಾಲ್‌ನಲ್ಲಿ ಆಯೋಜನೆಗೊಂಡಿದ್ದ ಈ ಕಠಿಣ ಸ್ಪರ್ಧೆಯಲ್ಲಿ ದೇಶ-ವಿದೇಶಗಳ ಸಾವಿರಾರು ಫಿಟ್ನೆಸ್ ಉತ್ಸಾಹಿಗಳು ಭಾಗವಹಿಸಿದ್ದರು. ಈ ಸಾಹಸಮಯ ರೇಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಂಗಳೂರಿನ ಖ್ಯಾತ ಫಿಟ್ನೆಸ್ ತರಬೇತುದಾರ ಹಾಗೂ ಪವರ್‌ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ ಕೂಡ ಸಾಥ್ ನೀಡಿ ಯಶಸ್ಸು ಸಾಧಿಸಿದ್ದಾರೆ.
ಏನಿದು ಹೈರಾಕ್ಸ್ (HYROX)?
ವಿಶ್ವದ ಅತಿದೊಡ್ಡ ಫಿಟ್ನೆಸ್ ರೇಸ್ ಎಂದು ಖ್ಯಾತಿ ಪಡೆದಿರುವ ಹೈರಾಕ್ಸ್, ಅತ್ಯಂತ ಕಠಿಣ ಹಾಗೂ ಸವಾಲಿನ ಸ್ಪರ್ಧೆಯಾಗಿದೆ. ಇದು ಒಟ್ಟು 8 ಕಿ.ಮೀ. ಓಟ ಮತ್ತು 8 ವಿವಿಧ ಫಂಕ್ಷನಲ್ ವರ್ಕೌಟ್ ಸ್ಟೇಷನ್‌ಗಳನ್ನು ಒಳಗೊಂಡಿರುತ್ತದೆ.
ಈ ಸವಾಲಿನಲ್ಲಿ ಸ್ಪರ್ಧಾಳುಗಳು ಸ್ಕೀ ಎರ್ಗ್ (SkiErg), ಸ್ಲೆಡ್ ಪುಶ್, ಸ್ಲೆಡ್ ಪುಲ್, ಬರ್ಪಿ ಬ್ರಾಡ್ ಜಂಪ್, ರೋಯಿಂಗ್, ಫಾರ್ಮರ್ಸ್ ಕ್ಯಾರಿ, ಸ್ಯಾಂಡ್‌ಬ್ಯಾಗ್ ಲುಂಜಸ್ ಮತ್ತು ವಾಲ್ ಬಾಲ್‌ನಂತಹ ಕಠಿಣ ಹಂತಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಂಡಿರುವ ಈ ರೇಸ್, 2025ರ ಮೇ ತಿಂಗಳಲ್ಲಿ ಮುಂಬೈ ಮೂಲಕ ಭಾರತಕ್ಕೆ ಪಾದಾರ್ಪಣೆ ಮಾಡಿತ್ತು.
ಆಡಳಿತದ ಜೊತೆ ಫಿಟ್ನೆಸ್‌ಗೆ ಒತ್ತು
2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾದ ದರ್ಶನ್ ಎಚ್.ವಿ. ಅವರು 2025ರ ಜೂನ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯ 134ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ದೈನಂದಿನ ಕಚೇರಿ ಕೆಲಸಗಳು, ಸಾರ್ವಜನಿಕ ಸಮಸ್ಯೆಗಳ ನಿವಾರಣೆ ಹಾಗೂ ಆಡಳಿತಾತ್ಮಕ ಬಿಡುವಿಲ್ಲದ ಒತ್ತಡದ ನಡುವೆಯೂ ಫಿಟ್ನೆಸ್ ಕಾಯ್ದುಕೊಂಡಿರುವ ಇವರ ಹೈರಾಕ್ಸ್ ಸಾಧನೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.
ಇವರೊಂದಿಗೆ ಹೆಜ್ಜೆಹಾಕಿದ ಪ್ರದೀಪ್ ಕುಮಾರ್ ಆಚಾರ್ಯ ಅವರು ಮಂಗಳೂರಿನ ಹೆಸರಾಂತ ಪವರ್‌ಲಿಫ್ಟರ್ ಆಗಿದ್ದು, ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದವರು. ಪ್ರಸ್ತುತ ಮಂಗಳೂರಿನಲ್ಲಿ ನೂರಾರು ಯುವಕರಿಗೆ ಫಿಟ್ನೆಸ್ ತರಬೇತುದಾರರಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ.
ಜಿಲ್ಲಾ ಆಡಳಿತದ ಚುಕ್ಕಾಣಿ ಹಿಡಿದು ಆರೋಗ್ಯಕರ ಬದುಕಿಗೆ ಮುಂಚೂಣಿಯಲ್ಲಿ ನಿಂತಿರುವ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರ ಈ ಸಾಧನೆ, ದಕ್ಷಿಣ ಕನ್ನಡ ಜಿಲ್ಲೆಯ ಯುವಜನತೆಗೆ ಫಿಟ್ನೆಸ್ ಮತ್ತು ಶಿಸ್ತಿನ ಬಗ್ಗೆ ದೊಡ್ಡ ಮಟ್ಟದ ಪ್ರೇರಣೆ ನೀಡಿದೆ
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
