Mangaluru
ಮಂಗಳೂರು: ‘ಧಕ್ಕೆ ನಾಸೀರ್’ ಸಾವು ಕೊಲೆ ಪ್ರಕರಣವಾಗಿ ದಾಖಲು; ಉರ್ವಾ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ತನಿಖೆ
ಮಂಗಳೂರು: ನಗರದ ಮೀನುಗಾರಿಕಾ ಧಕ್ಕೆಯ ಬಳಿ ನಾಸೀರ್ ಅಲಿಯಾಸ್ ‘ಧಕ್ಕೆ ನಾಸೀರ್’ ಮೃತದೇಹ ಪತ್ತೆಯಾದ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಅವರು ಮಾಹಿತಿ ನೀಡಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ಘಟನೆಯ ವಿವರ: ಮೃತ ನಾಸೀರ್ ಮೇಲೆ ಈ ಹಿಂದೆ ಹಲವಾರು ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ. ಧಕ್ಕೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಪಕ್ಕದ ನದಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ (South) ಪೊಲೀಸ್ ಠಾಣೆಯಲ್ಲಿ ಕೊಲೆ (Section 103 BNS/302 IPC) ಪ್ರಕರಣ ದಾಖಲಾಗಿದೆ.
ಪ್ರಸ್ತುತ ಉರ್ವಾ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಈ ಪ್ರಕರಣದ ತನಿಖಾ ಉಸ್ತುವಾರಿಯನ್ನು (In-charge) ವಹಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಶಂಕಿತರ ವಿಡಿಯೋಗಳು ಲಭ್ಯವಾಗಿವೆ. ಅಲ್ಲದೆ, ಉತ್ತರ ಕರ್ನಾಟಕ ಮೂಲದ ಕೆಲವು ವ್ಯಕ್ತಿಗಳು ಮೊಬೈಲ್ ಕಾಣೆಯಾದ ಬಗ್ಗೆ ವಿಚಾರಿಸುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಪೊಲೀಸರು ಆ ಆಯಾಮದಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ.
ಕಮಿಷನರ್ ಹೇಳಿಕೆ: ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕಮಿಷನರ್ ಅವರು, ಶಂಕಿತರ ಬಗ್ಗೆ ಮಾಹಿತಿ ಲಭ್ಯವಿದ್ದರೂ ತನಿಖೆ ಪೂರ್ಣಗೊಂಡ ನಂತರವಷ್ಟೇ ನಿಖರವಾದ ಕಾರಣಗಳು ತಿಳಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಹತ್ತು ದಿನಗಳಲ್ಲಿ ಮಂಗಳೂರಿನಲ್ಲಿ ನಡೆದ ಎರಡನೇ ಕೊಲೆ ಪ್ರಕರಣ ಇದಾಗಿದ್ದು, ಸಾರ್ವಜನಿಕರಲ್ಲಿ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. ಉರ್ವಾ ಪೊಲೀಸರು ಶಂಕಿತರ ಪತ್ತೆಗಾಗಿ ಬಲೆ ಬೀಸಿದ್ದಾರೆ.
INCIDENT
ಗುರುಪುರ ಸೇತುವೆಯಿಂದ ನದಿಗೆ ಹಾರಿದ ಯುವಕ: ಕಜೆಪದವಿನ ಕೌಶಿಕ್ ನಾಪತ್ತೆ
ಮಂಗಳೂರು: ಗುರುಪುರ ಸೇತುವೆಯಿಂದ ಯುವಕನೊಬ್ಬ ನದಿಗೆ ಹಾರಿದ ಆಘಾತಕಾರಿ ಘಟನೆ ಬುಧವಾರ ಸಂಜೆ ನಡೆದಿದೆ. ನದಿಗೆ ಹಾರಿದ ಯುವಕನನ್ನು ಕಜೆಪದವು ನಿವಾಸಿ ಕೌಶಿಕ್ ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ಕೌಶಿಕ್ ತನ್ನ ಡಿಯೋ ಸ್ಕೂಟರ್‌ನಲ್ಲಿ ಗುರುಪುರ ಸೇತುವೆ ಬಳಿ ಬಂದಿದ್ದಾರೆ. ಸೇತುವೆಯ ಮೇಲೆ ವಾಹನ ನಿಲ್ಲಿಸಿದ ಅವರು, ಏಕಾಏಕಿ ನದಿಗೆ ಹಾರಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಸ್ಥಳದಲ್ಲಿ ಜಮಾಯಿಸಿದ್ದಾರೆ.

ಸ್ಥಳದಲ್ಲಿ ಸಿಕ್ಕ ಪುರಾವೆಗಳು:
ಸಾರ್ವಜನಿಕರು ಸೇತುವೆಯ ಮೇಲಿದ್ದ ಸ್ಕೂಟರ್ ಅನ್ನು ಪರಿಶೀಲಿಸಿದಾಗ, ಒಂದು ಮೊಬೈಲ್ ಫೋನ್, ಸ್ವಲ್ಪ ನಗದು ಮತ್ತು ವೈದ್ಯರು ನೀಡಿದ ಔಷಧಿ ಚೀಟಿ (Prescription) ಅದರ ಸೀಟಿನ ಅಡಿಯಲ್ಲಿ ಪತ್ತೆಯಾಗಿವೆ: ಔಷಧಿ ಚೀಟಿಯಲ್ಲಿ “ಕೌಶಿಕ್, ಕಜೆಪದವು” ಎಂಬ ಹೆಸರಿರುವುದು ಕಂಡುಬಂದಿದ್ದು, ಇದರ ಆಧಾರದ ಮೇಲೆ ಯುವಕನ ಗುರುತು ಪತ್ತೆಹಚ್ಚಲಾಗಿದೆ.
ಪೊಲೀಸ್ ತನಿಖೆ ಮತ್ತು ಶೋಧ ಕಾರ್ಯ:
ಮಾಹಿತಿ ತಿಳಿಯುತ್ತಿದ್ದಂತೆ ಬಜ್ಪೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಸ್ಥಳೀಯ ಈಜುಗಾರರು ಮತ್ತು ರಕ್ಷಣಾ ತಂಡದ ನೆರವಿನೊಂದಿಗೆ ನದಿಯಲ್ಲಿ ಯುವಕನಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಲಾಗಿದೆ. ಕೌಶಿಕ್ ಅವರು ಈ ನಿರ್ಧಾರ ತೆಗೆದುಕೊಳ್ಳಲು ನಿಖರವಾದ ಕಾರಣವೇನೆಂದು ಇನ್ನು ತಿಳಿದುಬಂದಿಲ್ಲ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.
crime
9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಕೊಣಾಜೆ ಪೊಲೀಸರಿಂದ ಆರೋಪಿಯ ಬಂಧನ
ಮಂಗಳೂರು: ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಡ್ಯಾರ್ ನಿವಾಸಿ, 33 ವರ್ಷದ ಆಶೀಶ್ ಪೂಜಾರಿ ಬಂಧಿತ ಆರೋಪಿ. ಈತ ಬಿಜೈನಲ್ಲಿರುವ ಎಂ.ಎಸ್.ಸಿ (MSC) ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ದಿನಾಂಕ 18-03-2026 ರಂದು ದಾಖಲಾದ ದೂರಿನ ಪ್ರಕಾರ, ಆರೋಪಿಯು 9 ವರ್ಷದ ಬಾಲಕನಿಗೆ ಹಣ ಮತ್ತು ತಿಂಡಿ ನೀಡುವುದಾಗಿ ನಂಬಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕೃತ್ಯಗಳಲ್ಲಿ ತೊಡಗುವಂತೆ ಪ್ರೇರೇಪಿಸಿರುವುದು ತನಿಖೆಯ ವೇಳೆ ದೃಢಪಟ್ಟಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Mangaluru
ಎಸ್ ಎಲ್ ವಿ ಬುಕ್ ಹೌಸ್ ಗೆ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್“; ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್” ವಿಭಾಗದಲ್ಲಿ ಪ್ರಶಸ್ತಿ ; ಮಂಗಳೂರಿನಲ್ಲಿ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ ; ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ್ ದಾಸ್ ನೇರ್ಲಾಜೆ
ಪುಸ್ತಕ ಮಾರಾಟ ಮಳಿಗೆಯಲ್ಲಿ ರಾಜ್ಯದ್ಯಂತ ಹೆಸರುವಾಸಿಯಾದ SLV ಬುಕ್ ಹೌಸ್‌ಗೆ ಟೈಮ್ಸ್ ಬಿಸಿನೆಸ್ ಆವಾರ್ಡ್ ಲಭಿಸಿದೆ. .ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳು ಮತ್ತು ಉದ್ಯಮಿಗಳನ್ನು ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರ ನೀಡುವ ಕಾರ್ಯಕ್ರಮವನ್ನು ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿತ್ತು. SLV ಸಂಸ್ಥೆಯ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ್ ದಾಸ್ ನೇರ್ಲಾಜೆಯವರ ಎಸ್‌ಎಲ್‌ವಿ ಬುಕ್ ಹೌಸ್ ಸಂಸ್ಥೆಗೆ ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ 2026 ಕಾರ್ಯಕ್ರಮದಲ್ಲಿ “ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್” ವಿಭಾಗದಲ್ಲಿ ಪ್ರಶಸ್ತಿ ಲಭಿಸಿತು.

ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ 2026 ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪುಸ್ತಕ ಮಾರಾಟ ಮಳಿಗೆಯಲ್ಲಿ ರಾಜ್ಯದ್ಯಂತ ಹೆಸರುವಾಸಿಯಾದ SLV ಬುಕ್ ಹೌಸ್‌ಗೆ ಟೈಮ್ಸ್ ಬಿಸಿನೆಸ್ ಎವಾರ್ಡ್ ನೀಡಿ ಗೌರವಿಸಲಾಯಿತು.ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳು ಮತ್ತು ಉದ್ಯಮಿಗಳನ್ನು ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರ ನೀಡಲಾಯಿತು.
ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿಗಳನ್ನು ಪ್ರದಾನಿಸಿದರು.
ಎಸ್‌ಎಲ್‌ವಿ ಬುಕ್ ಹೌಸ್ ಸಂಸ್ಥೆಗೆ “ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್” ವಿಭಾಗದಲ್ಲಿ ಪ್ರಶಸ್ತಿ ಲಭಿಸಿತು. ಸಂಸ್ಥೆಯ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ದಿವಾಕರ್ ದಾಸ್ ನೇರ್ಲಾಜೆಯವರು ಮತ್ತು ಎಸ್ ಎಲ್ ವಿ ಬುಕ್ ಹೌಸ್ ನ ಪ್ರಧಾನ ವ್ಯವಸ್ಥಾಪಕರಾದ ರಾಜಾ ಅಂಚನ್ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಚಂದ್ರಕಾಂತ್ ಬೆಂಗಳೂರು, ರಾಮ್ ದಾಸ್ ಶೆಟ್ಟಿ ವಿಟ್ಲ, ಯೋಗೀಶ್ ನೇರ್ಲಾಜೆ, ಅಮಿತ್ ಮೈಸೂರು ಉಪಸ್ಥಿತರಿದ್ದರು.
ಪ್ರಶಸ್ತಿ ಸ್ವೀಕರಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ದಿವಾಕರ್ ದಾಸ್ ರವರು ಈ ಪ್ರಶಸ್ತಿಯನ್ನು ನಾವು ಗ್ರಾಹಕರಿಗೆ ನೀಡಿದ ಉತ್ತಮ ಸೇವೆಯಿಂದ ಈ ಪ್ರಶಸ್ತಿ ಲಭಿಸಿದೆ. ಹಾಗಾಗಿ ಈ ಪ್ರಶಸ್ತಿಯನ್ನು ನಮ್ಮ ಗ್ರಾಹಕರಿಗೆ ಮತ್ತು ಗ್ರಾಹಕಾರೊಂದಿಗೆ ವಿಶೇಷ ಸೇವೆಯನ್ನು ನೀಡಿದ ನಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೂ ಈ ಪ್ರಶಸ್ತಿಯನ್ನು ಅರ್ಪಿಸುತ್ತಿದ್ದೇನೆ ಎಂದರು.
ರಾಜ್ಯಾದ್ಯಂತ ಪುಸ್ತಕ ಮಾರಾಟ ಮಳಿಗೆಯಲ್ಲಿ ಹೆಸರುವಾಸಿಯಾದ SLV ಬುಕ್ ಹೌಸ್ ಬೆಂಗಳೂರು, ಮೈಸೂರು, ಚಾಮರಾಜನಗರ, ಪುತ್ತೂರು, ಮೂಡಬಿದ್ರೆ, ಮಂಗಳೂರಿನ ಬಿಜೈ, ಮೇರಿಹಿಲ್, ಮಾರ್ನೆಮಿ ಕಟ್ಟೆ, ಕೊಡಿಯಾಲ್ ಬೈಲ್ ನಲ್ಲಿ ಕಾರ್ಯಾಚರಿಸುತ್ತಿರುತ್ತಿದ್ದು , ಇದೀಗ ಕೊಡಗಿನ ಕುಶಾಲನಗರದಲ್ಲಿ ಕೆಲವೇ ದಿನಗಳಲ್ಲಿ ಹೊಸ ಶಾಖೆ ಶುಭಾರಂಭಗೊಳ್ಳಲಿದೆ.
-
crime2 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 week agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
