Connect with us

Mangaluru

ಮಂಗಳೂರು: ಪ್ರೇಯಸಿ ದೂರವಾದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆ; ಯುವತಿಯ ವಿರುದ್ಧ ಪ್ರಚೋದನೆಯ ಆರೋಪ

Published

on

ಮಂಗಳೂರು: ಪ್ರೀತಿಸಿದ ಯುವತಿ ತನ್ನಿಂದ ದೂರವಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಶೆಡ್ಡೆಯ ಎದುರುಪದವು ಎಂಬಲ್ಲಿ ನಡೆದಿದೆ.

ಮೂಡುಶೆಡ್ಡೆ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22) ಮೃತಪಟ್ಟ ಯುವಕ. ಆಶಿಕ್ ಕಾಲೇಜಿನಲ್ಲಿ ತನ್ನ ಸಹಪಾಠಿಯಾಗಿದ್ದ ಉಳ್ಳಾಲ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಪದವಿ ಶಿಕ್ಷಣ ಮುಗಿದ ನಂತರ ಆಶಿಕ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಈ ಯುವತಿ ಆಶಿಕ್‌ನಿಂದ ದೂರವಾಗಲು ಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದ್ದು, ತೀವ್ರವಾಗಿ ಮನನೊಂದ ಆಶಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಶಿಕ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯುವತಿಗೆ ವಿಡಿಯೋ ಕರೆ ಮಾಡಿದ್ದು, ಮೊಬೈಲ್ ಚಾಟಿಂಗ್ ಕೂಡ ನಡೆಸಿದ್ದಾರೆ. ಈ ಚಾಟಿಂಗ್ ವೇಳೆ ಯುವತಿಯು ಆಶಿಕ್ ಜೊತೆಗೆ ಅಶ್ಲೀಲವಾಗಿ ಮಾತನಾಡಿದ್ದಲ್ಲದೆ, “ಸಾಯುವಂತೆ” ಪ್ರಚೋದನೆ ನೀಡಿದ್ದಾರೆ ಎಂದು ಆಶಿಕ್ ಮನೆಯವರು ಗಂಭೀರವಾಗಿ ಆರೋಪಿಸಿದ್ದಾರೆ. ಯುವತಿಯ ಮಾತುಗಳಿಂದ ಮನನೊಂದು ಆಶಿಕ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಸದ್ಯ ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಮಂಗಳೂರಿನಲ್ಲಿ ಫಿಲ್ಮಿ ದರೋಡೆ: ಬಸ್ ಇಳಿದ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿ ₹1.15 ಕೋಟಿ ದರೋಡೆ!

Published

on

ಮಂಗಳೂರು, ಅ.29: ಶಿವಮೊಗ್ಗದಿಂದ ಮಂಗಳೂರಿಗೆ ತರಲಾಗುತ್ತಿದ್ದ ₹1.15 ಕೋಟಿ ನಗದು ಹಣವನ್ನು ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಇಳಿದ ಕೂಡಲೇ ವ್ಯಕ್ತಿಯನ್ನು ಅಪಹರಿಸಿ ನಗರದಾದ್ಯಂತ ಸುತ್ತಾಡಿಸಿ ಹಣ ಕಿತ್ತುಕೊಂಡು ಕಾವೂರಿನ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಶಿವಮೊಗ್ಗ ಗಾಂಧಿ ಬಜಾರ್ ನಿವಾಸಿ ನಾಗರಾಜ್ ಎಂಬುವರ ಕೆಲಸದಾಳು ಸತ್ಯನಾರಾಯಣ ಅವರು ಅ.23ರಂದು 2 ಬ್ಯಾಗ್‌ಗಳಲ್ಲಿ ₹1 ಕೋಟಿ 15 ಲಕ್ಷ ಹಣವನ್ನು ಮಂಗಳೂರಿಗೆ ತರಲು ದಾವಣಗೆರೆಯಿಂದ ಹೊರಟಿದ್ದರು. ಅ.27ರ ರಾತ್ರಿ ದಾವಣಗೆರೆಯಿಂದ ಬಸ್ ಹತ್ತಿದ್ದ ಅವರು, ಅ.28ರ ಬೆಳಿಗ್ಗೆ 6 ಗಂಟೆಗೆ ಲಾಲ್‌ಬಾಗ್ ಬಳಿ ಬಸ್ ಇಳಿದಿದ್ದಾರೆ.

ಈ ವೇಳೆ ಕಪ್ಪು ಕಾರಿನಲ್ಲಿ ಮುಖಕ್ಕೆ ಮಫ್ಲರ್ ಕಟ್ಟಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸತ್ಯನಾರಾಯಣ ಅವರನ್ನು ಬಲವಂತವಾಗಿ ಕಾರಿನಲ್ಲಿ ಎಳೆದು ಅಪಹರಿಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಮಂಗಳೂರು ನಗರದಾದ್ಯಂತ ಕಾರಿನಲ್ಲಿ ಸುತ್ತಾಡಿಸಿ, ಅವರ ಬಳಿ ಇದ್ದ 2 ಬ್ಯಾಗ್ ಹಣ ಮತ್ತು 2 ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ.

ನಂತರ ಬೆಳಿಗ್ಗೆ 8 ಗಂಟೆಗೆ ಕಾವೂರು ಬಸ್ ನಿಲ್ದಾಣದ ಬಳಿಯ ಗುಡ್ಡದ ಮೇಲೆ ಅವರನ್ನು ತಳ್ಳಿ, “ಪೊಲೀಸರಿಗೆ ಹೇಳಿದರೆ ಕೊಲೆ ಮಾಡುತ್ತೇವೆ” ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

ಈ ಸಂಬಂಧ ಮಂಗಳೂರು ಪೊಲೀಸರು ಬಿಎನ್‌ಎಸ್ ಕಾಯ್ದೆಯಡಿ ಅಪಹರಣ, ದರೋಡೆ ಮತ್ತು ಜೀವ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದು, ಕಪ್ಪು ಕಾರು ಮತ್ತು ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಈ ದೊಡ್ಡ ಮೊತ್ತದ ಹಣದ ಸಾಗಾಟದ ಮಾಹಿತಿ ದರೋಡೆಕೋರರಿಗೆ ಮೊದಲೇ ಹೇಗೆ ಗೊತ್ತಾಯಿತು ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

accident

ಮಂಗಳೂರು: ಮುಲ್ಕಿ ಕೊಲ್ನಾಡು ಬಳಿ ಶಾಲಾ ಬಸ್‌ಗೆ ಟೂರಿಸ್ಟ್ ಮಿನಿ ಬಸ್ ಡಿಕ್ಕಿ – ಚಾಲಕ, 13 ವಿದ್ಯಾರ್ಥಿಗಳಿಗೆ ಗಾಯ

Published

on

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೊಲ್ನಾಡು ಸುಂದರ ರಾಮ್ ಶೆಟ್ಟಿ ಕನ್ವೆನ್ಷನ್ ಹಾಲ್ ಮುಂಭಾಗ ರಾಯನ್ ಇಂಟರ್‌ನ್ಯಾಷನಲ್ ಶಾಲೆಯ ಬಸ್‌ಗೆ ಖಾಸಗಿ ಟೂರಿಸ್ಟ್ ಮಿನಿ ಬಸ್ಸೊಂದು ಹಿಂಭಾಗದಿಂದ ಡಿಕ್ಕ ಹೊಡೆದ ಪರಿಣಾಮ ಶಾಲಾ ಬಸ್ ಚಾಲಕ ಹಾಗೂ 13 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಘಟನೆಯ ವಿವರ:

ಅಕ್ಟೋಬರ್ 23, 2026ರ ಶುಕ್ರವಾರ ಸಂಜೆ ಸುಮಾರು 3:40 ಗಂಟೆಯ ವೇಳೆಗೆ ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಶಾಲೆಯ ಬಸ್ (ಒಟ್ಟು 16 ಮಕ್ಕಳಿದ್ದರು) ಮಂಗಳೂರು ನಗರದ ಮುಲ್ಕಿ ಕೊಲ್ನಾಡು ಸುಂದರರಾಮ್ ಶೆಟ್ಟಿ ಸಭಾಂಗಣದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಮಕ್ಕಳನ್ನು ಇಳಿಸುತ್ತಿತ್ತು. ಈ ಸಂದರ್ಭದಲ್ಲಿ ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಅತಿಯಾದ ವೇಗ, ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಬಂದ ಬೆಂಗಳೂರು ಮೂಲದ SRS ಟೂರಿಸ್ಟ್ ಮಿನಿ ಬಸ್ (ನೋಂದಣಿ ಸಂಖ್ಯೆ: KA-01-AR-1655) ಶಾಲಾ ಬಸ್ಸಿನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಶಾಲಾ ಬಸ್ಸು ಸಮೀಪದ ಚರಂಡಿಗೆ ಬಿದ್ದಿದೆ. ಅಪಘಾತದಲ್ಲಿ ಶಾಲಾ ಬಸ್ಸಿನಲ್ಲಿದ್ದ 13 ವಿದ್ಯಾರ್ಥಿಗಳು ಹಾಗೂ ಬಸ್ ಚಾಲಕ ದೇವದಾಸ್ ಎಂಬವರಿಗೆ ಸಾಮಾನ್ಯ ಗಾಯಗಳಾಗಿವೆ.

ಆಸ್ಪತ್ರೆಗೆ ದಾಖಲು:

ಗಾಯಗೊಂಡ 13 ವಿದ್ಯಾರ್ಥಿಗಳು ಹಾಗೂ ಚಾಲಕ ದೇವದಾಸ್ ಅವರನ್ನು ತಕ್ಷಣವೇ ಮುಕ್ಕದ ಶ್ರೀನಿವಾಸ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸ್ ತನಿಖೆ:

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ (ಸಂಚಾರ) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟೂರಿಸ್ಟ್ ಮಿನಿ ಬಸ್ ಚಾಲಕ ದೇವರಾಜ್ ಎಂಬಾತನ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 248/2026, ಕಲಂ 281, 125(ಎ) ಬಿ.ಎನ್.ಎಸ್. (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Entertainment

ದೈಗೋಳಿ ಶ್ರೀ ಸಾಯಿನಿಕೇತನ ಸೇವಾಶ್ರಮದಲ್ಲಿ ಅನ್ನದಾನ: ಡಾ. ಮಂಜುನಾಥ ಭಂಡಾರಿ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

Published

on

ಗ್ರಾಮ ಸ್ವರಾಜ್ ಟ್ರಸ್ಟ್ ಮಂಗಳೂರು (ರಿ.) ವತಿಯಿಂದ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಶಾಸಕ ಡಾ. ಮಂಜುನಾಥ ಭಂಡಾರಿ ಅವರ ಹುಟ್ಟುಹಬ್ಬವನ್ನು ದೈಗೋಳಿಯ ಶ್ರೀ ಸಾಯಿನಿಕೇತನ ಸೇವಾಶ್ರಮದಲ್ಲಿ ವಿಶೇಷ ಅನ್ನದಾನ ಸೇವೆ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸುಸಂದರ್ಭದಲ್ಲಿ ಖುದ್ದಾಗಿ ಉಪಸ್ಥಿತರಿದ್ದ ಡಾ. ಮಂಜುನಾಥ ಭಂಡಾರಿಯವರು ಆಶ್ರಮದ ಸಮಾಜಮುಖಿ ಹಾಗೂ ಮಾನವೀಯ ಕಾರ್ಯಚಟುವಟಿಕೆಗಳಿಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ, ತಮ್ಮ ವೈಯಕ್ತಿಕ ನೆಲೆಯಲ್ಲಿ ₹50,000 ಪ್ರೋತ್ಸಾಹಕ ದೇಣಿಗೆಯನ್ನು ಹಸ್ತಾಂತರಿಸಿದ ಅವರು, ಮುಂಬರುವ ದಿನಗಳಲ್ಲಿಯೂ ಆಶ್ರಮದ ಪ್ರತಿಯೊಂದು ಸತ್ಕಾರ್ಯಗಳಿಗೆ ಅಗತ್ಯವಿರುವ ಸಕಲ ಬೆಂಬಲ ಹಾಗೂ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಈ ಮಂಗಳಕರ ಕಾರ್ಯಕ್ರಮದಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ) ಮಂಗಳೂರು ಅಧ್ಯಕ್ಷರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಟ್ರಸ್ಟ್‌ನ ಕೋಶಾಧಿಕಾರಿ ಹಾಗೂ ಮಾಜಿ ಕಾರ್ಪರೇಟರ್ ಪ್ರವೀಣ್ ಚಂದ್ರ ಆಳ್ವ, ಮಂಗಳೂರು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಂಬಳಿ, ಮಾಜಿ ಮೇಯರ್ ಮಹಾಬಲ ಮಾರ್ಲ ಹಾಗೂ ಟ್ರಸ್ಟ್ ಕಾರ್ಯದರ್ಶಿ ಲಾರೆನ್ಸ್ ಡಿ ಸೋಜಾ, ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ಮಾಜಿ ನಾಯಕರಾದ ಅನಿಲ್ ಕುಮಾರ್ ಪ್ರಮುಖವಾಗಿ ಭಾಗವಹಿಸಿದ್ದರು. ಇವರೊಂದಿಗೆ ಪವಿತ್ರ ಪೂಂಜ ಕೊಡಂಗೆ, ಹಿರಿಯ ಪತ್ರಕರ್ತ ವಿ. ಟಿ. ಪ್ರಸಾದ್, ಮಂಗಳೂರಿನ ಸುನಿಲ್ ಪೂಜಾರಿ ಹಾಗೂ ರಾಕೇಶ್ ದೇವಾಡಿಗ, ಕುಂದಾಪುರದ ಇಚ್ಚಿತ್ ಶೆಟ್ಟಿ, ಉಡುಪಿಯ ರವಿ ಶೆಟ್ಟಿ ಸೇರಿದಂತೆ ಹಲವು ಪ್ರಮುಖ ಮುಖಂಡರು, ಆಶ್ರಮದ ಪದಾಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶ್ರೀ ಸಾಯಿ ನಿಕೇತನ ಸೇವಾಶ್ರಮದ ಡಾ. ಉದಯಕುಮಾರ್-ಡಾ. ಶಾರದಮ್ಮ ದಂಪತಿ ಮಂಜುನಾಥ ಭಂಡಾರಿಯವರ ಮುಂದಿನ ರಾಜಕೀಯ ಜೀವನ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!