F.I.R.
ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಪ್ರಕರಣ ದಾಖಲು; ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಮಂಗಳೂರು ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಸಮಾರಂಭಕ್ಕೆ ಬಂದ ವಾಹನಗಳ ಅವ್ಯವಸ್ಥಿತ ಪಾರ್ಕಿಂಗ್‌ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಎರಡು ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ಆಯೋಜಕರ ಮೇಲೆ ಬಜಪೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಘಟನೆಯ ವಿವರ: ದಿನಾಂಕ 12-04-2026ರಂದು ಮಧ್ಯಾಹ್ನ 12:00 ರಿಂದ 2:00 ಗಂಟೆಯ ನಡುವೆ ಗಂಜಿಮಠದ ‘ರಾಯಲ್ ಪ್ಯಾಲೇಸ್’ ಮತ್ತು’ಒಂಡೆಲಾ ಹಾಲ್‘ನಲ್ಲಿ ಮದುವೆ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಮಾರಂಭಕ್ಕೆ ಆಗಮಿಸಿದ ನೂರಾರು ವಾಹನಗಳಿಗೆ ಕಲ್ಯಾಣ ಮಂಟಪದ ಆವರಣದಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡದ ಕಾರಣ, ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಸಾಲು ಸಾಲಾಗಿ ನಿಲ್ಲಿಸಲಾಗಿತ್ತು.
ಸಾರ್ವಜನಿಕರಿಗೆ ತೊಂದರೆ: ಹೆದ್ದಾರಿಯಲ್ಲೇ ವಾಹನಗಳನ್ನು ನಿಲ್ಲಿಸಿದ್ದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಮತ್ತು ತುರ್ತು ವಾಹನಗಳಿಗೆ ತೀವ್ರ ತೊಂದರೆಯಾಗಿದ್ದು, ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿತ್ತು.
ಪೊಲೀಸ್ ಕ್ರಮ: ನಿಯಮ ಮೀರಿ ವಾಹನ ಪಾರ್ಕಿಂಗ್‌ಗೆ ಅವಕಾಶ ನೀಡಿದ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಜಪೆ ಪೊಲೀಸರು ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ದಾಖಲಾದ ಪ್ರಕರಣ: ಬಜಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 73/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 285, 292 ಮತ್ತು ಐ.ಎಂ.ವಿ ಆಕ್ಟ್ (IMV Act) ಕಲಂ 122 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ತನಿಖೆ ಪ್ರಗತಿಯಲ್ಲಿದೆ.
ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವ ಇಂತಹ ಬೇಜವಾಬ್ದಾರಿ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸರು ಈ ಮೂಲಕ ಎಚ್ಚರಿಸಿದ್ದಾರೆ.


arrest
ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.
ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.
ದಾಳಿಯ ವಿವರ:
ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.
ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಶಪಡಿಸಿಕೊಂಡ ಸೊತ್ತುಗಳು:
ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.
ಪ್ರಕರಣ ದಾಖಲು:
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Bantawala
ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
Bantawala
ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
